Tiger Attack: ಮೈಸೂರಲ್ಲಿ ಚಿರತೆ ದಾಳಿಗೆ ಬಾಲಕ ಮೃತ್ಯು ಬೆನ್ನಲ್ಲೇ ಹುಲಿ ದಾಳಿಗೆ ಯುವಕ ಬಲಿ; ಒಂದೇ ದಿನದ ಅಂತರದಲ್ಲಿ 2 ಸಾವು Vistara News

ಕರ್ನಾಟಕ

Tiger Attack: ಮೈಸೂರಲ್ಲಿ ಚಿರತೆ ದಾಳಿಗೆ ಬಾಲಕ ಮೃತ್ಯು ಬೆನ್ನಲ್ಲೇ ಹುಲಿ ದಾಳಿಗೆ ಯುವಕ ಬಲಿ; ಒಂದೇ ದಿನದ ಅಂತರದಲ್ಲಿ 2 ಸಾವು

Tiger Attack: ಮೈಸೂರು ಜಿಲ್ಲೆಯಲ್ಲಿ ವನ್ಯಜೀವಿಗಳ ಹಾವಳಿ ಮಿತಿಮೀರಿದೆ. ಶನಿವಾರವಷ್ಟೇ ತಿ.ನರಸೀಪುರ ತಾಲೂಕಿನಲ್ಲಿ ಚಿರತೆ ದಾಳಿಗೆ ಬಾಲಕನೊಬ್ಬ ಮೃತಪಟ್ಟಿದ್ದ. ಇದೀಗ ನಾಗರಹೊಳೆ ಸಮೀಪದ ಬಳ್ಳೆ ಹಾಡಿಯಲ್ಲಿ ಹುಲಿದಾಳಿಗೆ ಯುವಕನೊಬ್ಬ ಬಲಿಯಾಗಿದ್ದಾನೆ.

VISTARANEWS.COM


on

Man killed in tiger attack in Mysuru after boy dies in leopard attack
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ಶನಿವಾರ (ಜ. ೨೧) ರಾತ್ರಿಯಷ್ಟೇ ಚಿರತೆ ದಾಳಿಗೆ ತಿ.ನರಸೀಪುರ ತಾಲೂಕಿನ ಹೊರಳಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಯಿಂದ (leopard attack) 11 ವರ್ಷದ ಬಾಲಕನೊಬ್ಬ ಬಲಿಯಾಗಿದ್ದ. ಇದರ ಬೆನ್ನಲ್ಲೇ ಹುಲಿ ದಾಳಿಗೆ (Tiger Attack) ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ (Nagarahole National Park) ಬಳ್ಳೆ ಹಾಡಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಕಾಡು ಪ್ರಾಣಿ ದಾಳಿಗೆ ಒಂದೇ ದಿನದ ಅಂತರದಲ್ಲಿ ಮತ್ತೊಂದು ಜೀವ ಬಲಿಯಾದಂತೆ ಆಗಿದೆ. ಮಂಜು ಅಲಿಯಾಸ್ ಬೆಟ್ಟದ ಹುಲಿ (18) ಮೃತ ದುರ್ದೈವಿ. ಇವರು ಸೌಧೆ ತರಲು ಹೋಗಿದ್ದಾಗ ಹುಲಿಯೊಂದು ದಾಳಿ ಮಾಡಿದ್ದು, ಮೃತಪಟ್ಟಿದ್ದಾರೆ.

ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಬಳ್ಳೆ ಹಾಡಿಯಲ್ಲಿ ಅವಘಡ ಸಂಭವಿಸಿದ್ದು, ಸೌಧೆ ಸಂಗ್ರಹಿಸಲು ಒಂದು ಗುಂಪು ಕಾಡಿನತ್ತ ಹೊರಟಿತ್ತು. ಈ ವೇಳೆ ಹುಲಿಯೊಂದು ಏಕಾಏಕಿ ದಾಳಿ ಮಾಡಿದೆ. ಇದರಿಂದ ಎಲ್ಲರೂ ಗಾಬರಿಗೊಂಡು ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಆಗ ಹುಲಿಯು ಮಂಜುವಿನ ಮೇಲೆ ಎಗರಿದೆ. ನೇರವಾಗಿ ತನ್ನ ಪಂಜಿನ ಮೂಲಕ ಮಂಜುವಿನ ತಲೆಗೆ ಹೊಡೆದಿದ್ದು, ಅವರ ತಲೆ ಸೀಳಿಬಂದಿದೆ. ಇತರರು ಅಲ್ಲಿಂದ ಓಡಿ ಪಾರಾಗಿದ್ದಾರೆ.

ಇದನ್ನೂ ಓದಿ: Kantara Movie: ಹಿಂದಿಯಲ್ಲಿ ನೂರು ದಿನಗಳನ್ನು ಪೂರೈಸಿದ ʻಕಾಂತಾರʼ

ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆ ಶವಾಗಾರಕ್ಕೆ ಮಂಜು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳಾಂತರಿಸಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಅಂತರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶನಿವಾರ ಚಿರತೆ ದಾಳಿಗೆ ಬಾಲಕ ಸಾವು

ಚಿರತೆ ದಾಳಿಗೆ ಬಲಿಯಾಗಿರುವ ೧೧ ವರ್ಷದ ಜಯಂತ್

ಹೊರಳಹಳ್ಳಿ ಗ್ರಾಮದಲ್ಲಿ ಶನಿವಾರ ತಡರಾತ್ರಿ ಚಿರತೆಯೊಂದು ದಾಳಿ ನಡೆಸಿದ್ದು, ೧೧ ವರ್ಷದ ಜಯಂತ್‌ನನ್ನು ಎಳೆದುಕೊಂಡು ಹೋಗಿತ್ತು. ಜಯಂತ್ ಶವಕ್ಕಾಗಿ ಗ್ರಾಮಸ್ಥರು ರಾತ್ರಿಯಿಡಿ ಹುಡುಕಾಟ ನಡೆಸಿದ್ದರು. ಭಾನುವಾರ ಬೆಳಗ್ಗೆ ಜಯಂತ್‌ ಮೃತದೇಹ ಪತ್ತೆಯಾಗಿದೆ. ಬಾಲಕನ ರುಂಡವನ್ನು ಚಿರತೆ ಹೊತ್ತೊಯ್ದಿತ್ತು. ಇದು ಎಲ್ಲರನ್ನೂ ಆತಂಕಕ್ಕೆ ದೂಡಿತ್ತು. ಅರಣ್ಯ ಇಲಾಖೆ ಅಧಿಕಾರಿಗಳು, ಶಾಸಕರು, ಜಿಲ್ಲಾಧಿಕಾರಿಗಳು ಹೊರಳಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: leopard attack: ಚಿರತೆ ದಾಳಿಯಿಂದ ಇನ್ನು ಒಂದೇ ಸಾವಾದರೂ ನಿನ್ನನ್ನು ಕೊಲ್ಲುವೆ; ಅರಣ್ಯ ಸಂರಕ್ಷಣಾಧಿಕಾರಿಗೆ ಮೃತ ಬಾಲಕನ ಅಜ್ಜನಿಂದ ವಾರ್ನಿಂಗ್‌

ತಿ.ನರಸೀಪುರ ತಾಲೂಕಲ್ಲಿ ನವೆಂಬರ್‌ನಿಂದ ನಡೆದಿರುವ ದಾಳಿ

ತಿ.ನರಸೀಪುರ ತಾಲೂಕಿನ ಕಳೆದ ನವೆಂಬರ್‌ನಿಂದ ನಿರಂತರವಾಗಿ ಚಿರತೆ ದಾಳಿ ನಡೆದಿದ್ದು, ನಾಲ್ವರು ಬಲಿಯಾದಂತಾಗಿದೆ. ಈ ಹಿನ್ನೆಲೆಯಲ್ಲಿ ತಾಲೂಕಿನ ಜನತೆ ತೀವ್ರ ಆತಂಕ ಹಾಗೂ ಭಯದಲ್ಲಿದ್ದಾರೆ. ಮೃತಪಟ್ಟವರ ವಿವರ ಇಂತಿದೆ. ೨೦೨೨ ನವೆಂಬರ್‌ 1: ಉಕ್ಕಲಗೆರೆ ಮಂಜುನಾಥ್, ೨೦೨೨ ಡಿಸೆಂಬರ್‌ 2: ಎಸ್.ಕೆಬ್ಬೇಹುಂಡಿ ಮೇಘನಾ, ೨೦೨೩ ಜನವರಿ 20: ಕನ್ನಾಯಕನಹಳ್ಳಿ ಸಿದ್ದಮ್ಮ, ೨೦೨೩ ಜನವರಿ 22: ಹೊರಳಹಳ್ಳಿ ಜಯಂತ್ ದಾಳಿಯಲ್ಲಿ ಮೃತಪಟ್ಟಿದ್ದಾರೆ.

ಒಂಟಿ ಓಡಾಟ ಬೇಡ: ಅರಣ್ಯ ಇಲಾಖೆ ಪ್ರಕಟಣೆ

ತಿ.ನರಸೀಪುರ ತಾಲೂಕಿನಲ್ಲಿ ಚಿರತೆ ದಾಳಿಗೆ ನಾಲ್ಕನೇ ಬಲಿಯಾಗಿರುವ ಹಿನ್ನೆಲೆಯಲ್ಲಿ, ಅರಣ್ಯ ಇಲಾಖೆ ಪ್ರಕಟಣೆ ಹೊರಡಿಸಿದ್ದು, ಮಕ್ಕಳು, ಮಹಿಳೆಯರು, ವೃದ್ಧರು ಒಂಟಿಯಾಗಿ ಓಡಾಡಬಾರದು. ಸಂಜೆ 6 ಗಂಟೆಯೊಳಗೆ ಎಲ್ಲರೂ ಮನೆ ಸೇರಿಕೊಳ್ಳಬೇಕು. ಬಯಲು ಬಹಿರ್ದೆಸೆಗೆ ಹೋಗಬಾರದು. ಚಿರತೆಯ ಚಲನವಲನ ಕಂಡರೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ ಮುಟ್ಟಿಸಬೇಕು ಎಂದು ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.

ಗ್ರಾಮಸ್ಥರಿಂದ ಪ್ರತಿಭಟನೆ

ಹೊರಳಹಳ್ಳಿಯ ಗ್ರಾಮ ಹಾಗೂ ಸುತ್ತಮುತ್ತಲ ಗ್ರಾಮಸ್ಥರು ಚಿರತೆ ದಾಳಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಚಿರತೆಗಳ ದಾಳಿ ಹೆಚ್ಚಾಗುತ್ತಿದ್ದು, ಮನುಷ್ಯರು, ಸಾಕು ಪ್ರಾಣಿಗಳನ್ನು ಬಲಿ ಪಡೆಯುತ್ತಲೇ ಇವೆ. ನಮಗೆ ಮನೆಯಿಂದ ಹೊರಗೆ ಕಾಲಿಡಲೂ ಭಯದ ವಾತಾವರಣ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: SSLC Workshop | ಎಸ್ಸೆಸ್ಸೆಲ್ಸಿ ಪರೀಕ್ಷೆ ಎದುರಿಸುವುದು ಹೇಗೆ?: ವಿಸ್ತಾರ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

ಸೌಜನ್ಯಕ್ಕಾದರೂ ಉಸ್ತುವಾರಿ ಸಚಿವರು, ಅರಣ್ಯ ಇಲಾಖೆ ಸಚಿವರು ಭೇಟಿ ನೀಡಿಲ್ಲ. ಚಿರತೆ ದಾಳಿಯಿಂದ ದಿನನಿತ್ಯ ಸಾಯುತ್ತಿರುವ ಬಡ ಜೀವಗಳಿಗೆ ಬೆಲೆಯಿಲ್ಲವೇ ಎಂದೂ ಜನರು ಆಕ್ರೋಶ ಹೊರಹಾಕಿದ್ದಾರೆ. ತಾಲೂಕಿನ ಜನತೆ ನೆಮ್ಮದಿಯಿಂದ ಬದುಕುವ ವಾತಾವರಣವನ್ನು ಸೃಷ್ಟಿ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಚಿರತೆ ಸೆರೆ ಕಾರ್ಯಾಚರಣೆಯನ್ನು ಪ್ರಾರಂಭಿಸಬೇಕಿದೆ. ಇಲ್ಲದಿದ್ದರೆ ಜನತೆಯೇ ಅಧಿಕಾರಿಗಳು, ಸರ್ಕಾರ ಮತ್ತು ಆಡಳಿತದ ವಿರುದ್ಧ ತಿರುಗಿ ಬೀಳಲಿದ್ದಾರೆ ಎಂದು ಮಾಜಿ ತಾಪಂ ಸದಸ್ಯ ರಮೇಶ್ ಎಚ್ಚರಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

ತಮ್ಮ ಕಾರಿಗೆ ಡಿಕ್ಕಿ ಹೊಡೆದ ಬೈಕ್ ಸುಟ್ಟು ಹಾಕಿ ಎಂದ ಭವಾನಿ ರೇವಣ್ಣ! ವಿಡಿಯೊ ನೋಡಿ

ಅಪಘಾತ ನಡೆದಾಗ ಬೈಕ್‌ ಸವಾರನನ್ನು ಸಂತೈಸುವುದು ಬಿಟ್ಟು ಹಿಗ್ಗಾಮುಗ್ಗಾ ಬೈಯುವ ಮೂಲಕ ಮಾನವೀಯತೆ ಮರೆತ ಭವಾನಿ ರೇವಣ್ಣ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

VISTARANEWS.COM


on

Bhavani Revanna
Koo

ಮೈಸೂರು: ಕಾರಿಗೆ ಡಿಕ್ಕಿ ಹೊಡೆದ ಬೈಕ್ ಚಾಲಕನನ್ನು ಭವಾನಿ ರೇವಣ್ಣ (Bhavani Revanna) ತರಾಟೆಗೆ ತೆಗೆದುಕೊಂಡ ಘಟನೆ ಕೆ.ಆರ್.ನಗರ ತಾಲೂಕಿನ ಸಾಲಿಗ್ರಾಮದ ಹೊರವಲಯದಲ್ಲಿ ನಡೆದಿದೆ. ಅಪಘಾತ ನಡೆದಾಗ ಬೈಕ್‌ ಸವಾರನನ್ನು ಸಂತೈಸುವುದು ಬಿಟ್ಟು ಹಿಗ್ಗಾಮುಗ್ಗಾ ಬೈದಿರುವ ಭವಾನಿ ರೇವಣ್ಣ, ಬೈಕ್‌ ಸುಟ್ಟು ಹಾಕಿ ಎಂದು ಆಕ್ರೋಶ ಹೊರಹಾಕಿರುವುದು ಕಂಡುಬಂದಿದೆ. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಕೆ.ಆರ್.ನಗರ ತಾಲೂಕಿನ ಸಾಲಿಗ್ರಾಮದ ಹೊರವಲಯದಲ್ಲಿ ಅಪಘಾತ ನಡೆದಿದೆ. ಹಾಸನ – ಕೆ.ಆರ್.ನಗರ ರಸ್ತೆಯಲ್ಲಿ ಬರುತ್ತಿದ್ದಾಗ ಭವಾನಿ ರೇವಣ್ಣ ಕಾರಿಗೆ ಬೈಕ್‌ ಸವಾರರೊಬ್ಬರು ಡಿಕ್ಕಿ ಹೊಡೆದಿದ್ದಾರೆ. ಈ ವೇಳೆ ಅಕ್ಕಾ ಕಾರು ಸೈಡಿಗೆ ಹಾಕಿ ಅಂದಿದ್ದಕ್ಕೆ ಕಿಡಿಕಾರಿರುವ ಭವಾನಿ ರೇವಣ್ಣ, ನನ್ನ ಕಾರಿಗೆ ಡ್ಯಾಮೇಜ್‌ ಆಗಿದೆ. ರಿಪೇರಿ ಮಾಡಿಸೋಕೆ 50 ಲಕ್ಷ ರೂ. ಹಣ ಬೇಕು. ಯಾರಾದರೂ ನ್ಯಾಯ ಮಾತನಾಡುವವರು ಐವತ್ತು ಲಕ್ಷ ಹಣ ಕೊಟ್ಟು ಮಾತನಾಡಿ. ಒಂದೂವರೆ ಕೋಟಿ ರೂಪಾಯಿ ಗಾಡಿ ಇದು ಎಂದು ದರ್ಪ ತೋರಿದ್ದಾರೆ.

ಸಾಲಿಗ್ರಾಮ ಠಾಣೆಯ ಇನ್ಸ್‌ಪೆಕ್ಟರ್‌ನ ಕರೀರಿ, ತಗೊಂಡು ಹೋಗಿ ಇವನನ್ನು ಒಳಗೆ ಹಾಕಲಿ, ಸಾಯಂಗಿದ್ರೆ ಬಸ್ಸಿಗೆ ಸಿಕ್ಕಿ ಸಾಯಬೇಕಿತ್ತು. ಸಾಯೋಕೆ ನನ್ ಕಾರೇ ಬೇಕಿತ್ತಾ? ಅವನು ಸತ್ತೋಗ್ತಾನೆ ಅಂತ ಅವನ ಬಗ್ಗೆ ಯಾಕೆ ಯೋಚನೆ ಮಾಡ್ತೀಯಾ? ಒಂದೂವರೆ ಕೋಟಿ ರೂಪಾಯಿ ಕಾರು ಬಗ್ಗೆ ಯೋಚನೆ ಮಾಡು ಎಂದಿರುವ ಭವಾನಿ ರೇವಣ್ಣ, ಬೈಕ್ ಸವಾರನ‌ನ್ನು ನಿಲ್ಲಿಸಿ ಫೋಟೊ ಕ್ಲಿಕ್ಕಿಸಿಕೊಂಡಿದ್ದಾರೆ.

ಇದನ್ನೂ ಓದಿ | ಚಿಕ್ಕಮಗಳೂರು ಪೊಲೀಸ್-ವಕೀಲರ ಸಂಘರ್ಷ; ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ

ಅಪಘಾತದಲ್ಲಿ ಗಾಯಗೊಂಡವನನ್ನು ಸಂತೈಸುವುದು ಬಿಟ್ಟು ಹಿಗ್ಗಾಮುಗ್ಗಾ ಬೈಯುವ ಮೂಲಕ ಭವಾನಿ ರೇವಣ್ಣ ಮಾನವೀಯತೆ ಮರೆತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Drown in Sea: ಗೋಕರ್ಣ ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ನೀರುಪಾಲು

Drown in Sea: ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಗೋಕರ್ಣ ಕಡಲತೀರದಲ್ಲಿ ಮುಳುಗಿ ಇಬ್ಬರು ಪ್ರವಾಸಿಗರು ಮೃತಪಟ್ಟಿದ್ದಾರೆ.

VISTARANEWS.COM


on

drown in sea
Koo

ಕಾರವಾರ: ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ಪ್ರವಾಸಿಗರು ನೀರುಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಗೋಕರ್ಣ ಕಡಲತೀರದಲ್ಲಿ (Drown in Sea) ನಡೆದಿದೆ. ಇದೇ ವೇಳೆ ಗಂಭೀರಗೊಂಡ ಮತ್ತೊಬ್ಬ ಪ್ರವಾಸಿಗನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಲಬುರಗಿ ಮೂಲದ ಅಭಿಷೇಕ್, ಆಕಾಶ್ ಮೃತ ಪ್ರವಾಸಿಗರು. ಕಲಬುರಗಿಯಿಂದ ಐವರು ಸ್ನೇಹಿತರು ಪ್ರವಾಸಕ್ಕೆಂದು ಗೋಕರ್ಣಕ್ಕೆ ಆಗಮಿಸಿದ್ದರು. ಸಮುದ್ರದಲ್ಲಿ ಮೂವರು ಈಜಲು ತೆರಳಿದ್ದಾಗ ಅಲೆಗಳಿಗೆ ಸಿಲುಕಿ ಮುಳುಗಿದ್ದರು. ಈ ವೇಳೆ ಇಬ್ಬರು ಪ್ರವಾಸಿಗರು ಮೃತಪಟ್ಟಿದ್ದು, ಒಬ್ಬನನ್ನು ರಕ್ಷಣೆ ಮಾಡಲಾಗಿದೆ. ಗಂಭೀರಗೊಂಡ ಪ್ರವಾಸಿಗನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ | ಚಿಕ್ಕಮಗಳೂರು ಪೊಲೀಸ್-ವಕೀಲರ ಸಂಘರ್ಷ; ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ

ಮಹಿಳಾ ಸಬ್ ಇನ್‌ಸ್ಪೆಕ್ಟರ್‌ ಜತೆ ಅನುಚಿತವಾಗಿ ವರ್ತಿಸಿ ಹೋಟೆಲ್‌ ಮಾಲೀಕ ಬಂಧನ

ಬೆಂಗಳೂರು: ಮಹಿಳಾ ಸಬ್ ಇನ್‌ಸ್ಪೆಕ್ಟರ್‌ ಜತೆ ಅನುಚಿತ ವರ್ತನೆ ತೋರಿದ ಹೊಟೇಲ್ ಮಾಲೀಕನನ್ನು ಪೊಲೀಸರು ಬಂಧಿಸಿದ ಘಟನೆ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ. ತಡರಾತ್ರಿವರೆಗೂ ಹೋಟೆಲ್ ತೆಗೆದಿದ್ದ ಹಿನ್ನೆಲೆಯಲ್ಲಿ ಪ್ರಶ್ನಿಸಿದ ಕಾರಣ ಹೊಟೇಲ್ ಮಾಲೀಕ ಸಂಜೀವ್ ಗೌಡ ಎಂಬಾತ ಪಿಎಸ್‌ವೈ ಪ್ರತಿಮಾ ಜತೆ ಅನುಚಿತವಾಗಿ ವರ್ತಿಸಿದ್ದರು.

ಸುಳ್ಳು ಪ್ರಕರಣ ದಾಖಲಿಸಿ 50 ಸಾವಿರ ಲಂಚ ಕೇಳಿದ್ದಾರೆಂದು ಸುಳ್ಳು ಕೇಸ್‌ ಹಾಕುವುದಾಗಿ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಹೊಟೇಲ್ ಅಶ್ವ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. 24 ಗಂಟೆ ಹೊಟೇಲ್ ನಡೆಸಲು ಅನುಮತಿ ಇದೆ ಎಂದು ಮಾಲೀಕ ಹೇಳಿದ್ದ. ಅನುಮತಿ ಪತ್ರ ತೋರಿಸುವಂತೆ ಕೇಳಿದಾಗ, ಆರ್‌ಟಿಐ ಹಾಕಿಕೊಂಡು ನೋಡು ಎಂದು ಮಾಲೀಕ ದರ್ಪ ತೋರಿದ್ದಾರೆ. ಈ ಸಂಬಂಧ ಪಿಎಸ್‌ಐ ಪ್ರತಿಮಾ ದೂರು ದಾಖಲಿಸಿದ್ದರು. ದೂರಿನ ಅನ್ವಯ ಮಾಲೀಕ ಸಂಜೀವ್ ಗೌಡ ಸೇರಿ ಐವರನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.

ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಕುತೂಹಲಕರ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ:

Continue Reading

ಕರ್ನಾಟಕ

Assembly Elections 2023: ಬಿಜೆಪಿಗೆ ನಾಲ್ಕನೇ ಮೂರು ಬಹುಮತ, ಕಾಂಗ್ರೆಸ್‌ಗೆ ಒಂದೇ ಗ್ಯಾರಂಟಿ!

Assembly Elections 2023 : ಪಂಚ ರಾಜ್ಯ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳ ಫಲಿತಾಂಶ ಪ್ರಕಟವಾಗಿದ್ದು, ಮೂರರಲ್ಲಿ ಬಿಜೆಪಿ, ಒಂದರಲ್ಲಿ ಕಾಂಗ್ರೆಸ್‌ ಗೆದ್ದಿದೆ. ಇದು ನರೇಂದ್ರ ಮೋದಿ ವಿಜಯ ಎಂದು ಬಿಜೆಪಿ ವ್ಯಾಖ್ಯಾನಿಸಿದೆ.

VISTARANEWS.COM


on

BJP wins three states Congress one
Koo

ನವದೆಹಲಿ: 2024ರ ಲೋಕಸಭೆ ಚುನಾವಣೆಯ (Lok Sabha Election 2024) ಸೆಮಿಫೈನಲ್‌ ಎಂದೇ ವಿಶ್ಲೇಷಿಸಲಾಗಿದ್ದ ಪಂಚರಾಜ್ಯ ಚುನಾವಣೆಯಲ್ಲಿ (Assembly Elections 2023) ನಾಲ್ಕು ರಾಜ್ಯಗಳ ಫಲಿತಾಂಶ ಭಾನುವಾರ (ಡಿಸೆಂಬರ್‌ 3) ಹೊರಬಿದ್ದಿದ್ದು, ಭಾರತೀಯ ಜನತಾ ಪಕ್ಷ ಮೂರು ರಾಜ್ಯಗಳಲ್ಲಿ ನಿಚ್ಚಳ ಬಹುಮತದೊಂದಿಗೆ ಜಯಭೇರಿ ಬಾರಿಸಿದೆ. ಕಾಂಗ್ರೆಸ್‌ ಒಂದು ರಾಜ್ಯವನ್ನು ಗೆದ್ದುಕೊಂಡಿದೆ. ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢದಲ್ಲಿ ಬಿಜೆಪಿ ಗದ್ದುಗೆ ಏರಿದ್ದರೆ, ತೆಲಂಗಾಣದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೇರಿದೆ. ಮಿಜೋರಾಂ ವಿಧಾನಸಭಾ ಚುನಾವಣೆಯ ಮತ ಎಣಿಕೆ ಸೋಮವಾರ (ಡಿಸೆಂಬರ್‌ 4) ನಡೆಯಲಿದೆ.

ಬಿಜೆಪಿ ಮಧ್ಯ ಪ್ರದೇಶವನ್ನು ಉಳಿಸಿಕೊಂಡು ರಾಜಸ್ಥಾನ ಮತ್ತು ಛತ್ತೀಸ್‌ ಗಢವನ್ನು ಕಾಂಗ್ರೆಸ್‌ ಕೈಯಿಂದ ಕಸಿದುಕೊಂಡಿದೆ. ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್‌ ಅಲ್ಲಿ ಹೀನಾಯ ಸೋಲು ಕಂಡಿದೆ. ಇಲ್ಲಿ ಅಧಿಕಾರವನ್ನು ಬಿಟ್ಟುಕೊಂಡ ಕಾಂಗ್ರೆಸ್‌ ತೆಲಂಗಾಣದಲ್ಲಿ 10 ವರ್ಷಗಳ ಕೆ ಚಂದ್ರಶೇಖರ ರಾವ್‌ (ಭಾರತ ರಾಷ್ಟ್ರ ಸಮಿತಿ-ಬಿಆರ್‌ಎಸ್‌) ಪಾರುಪತ್ಯವನ್ನು ಕೊನೆಗಾಣಿಸಿದೆ.

ಗ್ಯಾರಂಟಿ Vs ನರೇಂದ್ರ ಮೋದಿ ವಿಜಯ

ಗ್ಯಾರಂಟಿ ಕದನ ಎಂದೇ ಗುರುತಿಸಲಾಗಿದ್ದ ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಇದೇ ಟಾರ್ಗೆಟ್‌ನೊಂದಿಗೆ ತೆಲಂಗಾಣವನ್ನು ಗೆದ್ದುಕೊಂಡಿದೆ. ಆದರೆ, ಮಧ್ಯ ಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ ಗಢದಲ್ಲಿ ಭರ್ಜರಿ ಬಹುಮತದೊಂದಿಗೆ ಗೆಲುವು ಸಾಧಿಸಿರುವ ಬಿಜೆಪಿ ಇದು ಪ್ರಧಾನಿ ನರೇಂದ್ರ ಮೋದಿ ವಿಜಯ ಎಂದು ಹೇಳಿಕೊಂಡಿದೆ. ಬಿಜೆಪಿ ಪಾಲಿಗೆ ನರೇಂದ್ರ ಮೋದಿಯೇ ಗ್ಯಾರಂಟಿ ಎಂದು ಆಗಲೇ ಪಕ್ಷ ಹೇಳಿಕೊಂಡಿತ್ತು.

ಅತ್ತ ಮೂರು ರಾಜ್ಯಗಳನ್ನು ಗೆದ್ದುಕೊಳ್ಳುವ ಮೂಲಕ ಉತ್ತರ ಭಾರತದಲ್ಲಿ ಬಿಜೆಪಿ ತನ್ನ ಪಾರಮ್ಯವನ್ನು ಇನ್ನಷ್ಟು ಗಟ್ಟಿಗೊಳಿಸಿದ್ದರೆ, ಕಾಂಗ್ರೆಸ್‌ ತೆಲಂಗಾಣದ ಗೆಲುವಿನ ಮೂಲಕ ದಕ್ಷಿಣ ಭಾರತದಲ್ಲಿ ತನ್ನ ಬಲವನ್ನು ಹೆಚ್ಚಿಸಿಕೊಂಡಿದೆ.

ಮೋದಿಗೆ ವಿಜಯ ಸಂದೇಶ ನೀಡಿದ ಚುನಾವಣೆ

ಕರ್ನಾಟಕದಲ್ಲಿ ನಡೆದ ಚುನಾವಣೆಯಲ್ಲಿ ಗ್ಯಾರಂಟಿಗಳ ಪ್ರಭಾವದಿಂದ ಕಾಂಗ್ರೆಸ್‌ ದೊಡ್ಡ ಗೆಲುವನ್ನು ಸಾಧಿಸಿದ ಬಳಿಕ ಗೊಂದಲದಲ್ಲಿ ಮುಳುಗಿದ್ದ ಬಿಜೆಪಿ ಮತ್ತು ನರೇಂದ್ರ ಮೋದಿ ಅವರಿಗೆ ಈ ಚುನಾವಣೆ ಫಲಿತಾಂಶ ಧೈರ್ಯವನ್ನು ತುಂಬಿದೆ. ಕಾಂಗ್ರೆಸ್‌ನ ಉಚಿತ ಯೋಜನೆಗಳನ್ನು ಮೆಟ್ಟಿ ನಿಲ್ಲಬಹುದು ಎಂಬ ಭರವಸೆಯನ್ನು ಈ ಚುನಾವಣೆ ನೀಡಿದೆ. ಬಿಜೆಪಿ ಕೂಡಾ ಕಾಂಗ್ರೆಸ್‌ನಂತೆಯೇ ಕೆಲವೊಂದು ಉಚಿತ ಯೋಜನೆಗಳನ್ನು ನೀಡಿದ್ದರೂ ಒಟ್ಟಾರೆ ಫಲಿತಾಂಶ ಗ್ಯಾರಂಟಿ ಯೋಜನೆಗಳ ಹಂಗನ್ನು ಮೀರಿ ನಿಂತಿತ್ತು. ಹೀಗಾಗಿ ಇದು ಬಿಜೆಪಿಯ 2024ರ ಲೋಕಸಭಾ ಚುನಾವಣಾ ಓಟಕ್ಕೆ ಎದುರಾಗಿದ್ದ ಆತಂಕವನ್ನು ದೂರ ಮಾಡಿದೆ. ಬಿಜೆಪಿ ಗೆದ್ದಿರುವ ಮೂರು ರಾಜ್ಯಗಳಲ್ಲೇ 65 ಸ್ಥಾನಗಳಿವೆ. ಇದು ಬಹುತೇಕ ಸಾರಾಸಗಟು ಪಕ್ಷಕ್ಕೆ ಬರುವ ಸಾಧ್ಯತೆಗಳು ಕಂಡುಬರುತ್ತಿವೆ.

ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ

ಕರ್ನಾಟಕದ ಬಳಿಕ ತೆಲಂಗಾಣದಲ್ಲೂ ಕಾಂಗ್ರೆಸ್‌ ಗೆಲುವು ಸಾಧಿಸುವ ಮೂಲಕ ದಕ್ಷಿಣ ಭಾರತದಲ್ಲಿ ಎರಡನೇ ರಾಜ್ಯದಲ್ಲಿ ಆಡಳಿತವನ್ನು ತೆಕ್ಕೆಗೆ ತೆಗೆದುಕೊಂಡಂತಾಗಿದೆ. ಚುನಾವಣೆ ಮುಗಿದ ಕೂಡಲೇ ಲಭ್ಯವಾಗಿದ್ದ ಮತಗಟ್ಟೆ ಸಮೀಕ್ಷೆಗಳ ಪ್ರಕಾರ ತೆಲಂಗಾಣದಲ್ಲಿ ಕಾಂಗ್ರೆಸ್‌ ಹಾಗೂ ಆಡಳಿತಾರೂಢ ಬಿಆರ್‌ಎಸ್‌ ಮಧ್ಯೆ ತೀವ್ರ ಪೈಪೋಟಿ ಇದೆ ಎಂದು ಮಾತ್ರ ತಿಳಿದುಬಂದಿತ್ತು. ಆದರೆ, ತೆಲುಗು ರಾಜ್ಯದಲ್ಲಿ ಕಾಂಗ್ರೆಸ್‌ ಸ್ಪಷ್ಟ ಬಹುಮತ ಪಡೆದಿದೆ.. ತೆಲಂಗಾಣದಲ್ಲಿ ಕಾಂಗ್ರೆಸ್‌ ಗೆಲುವಿನಲ್ಲಿ ಕರ್ನಾಟಕ ಮಾದರಿಯ ಉಚಿತ ಗ್ಯಾರಂಟಿ ಯೋಜನೆಗಳ ಭರವಸೆಯ ಪಾತ್ರವೂ ಇದೆ ಎಂಬುದನ್ನು ಅಲ್ಲಗಳೆಯುವಂತಿಲ್ಲ.

ಪಕ್ಷಗೆಲುವು
ಕಾಂಗ್ರೆಸ್‌64
ಬಿಆರ್‌ಎಸ್‌39
ಬಿಜೆಪಿ08
ಎಐಎಂಐಎಂ07
ಸಿಪಿಐ01
ಒಟ್ಟು119
ಮ್ಯಾಜಿಕ್‌ ನಂಬರ್60

ಮಧ್ಯಪ್ರದೇಶ ಮತ್ತೆ ಬಿಜೆಪಿ ಕೈವಶ

ಮಧ್ಯಪ್ರದೇಶದಲ್ಲಿ ಆಡಳಿತ ವಿರೋಧಿ ಅಲೆಯ ಮಧ್ಯೆಯೂ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಜಾರಿಗೆ ತಂದ ಯೋಜನೆಗಳು, ಅದರಲ್ಲೂ ಹೆಣ್ಣುಮಕ್ಕಳಿಗೆ ಮಾಸಿಕ 1,250 ರೂ. ನೀಡುವ ಲಾಡ್ಲಿ ಬೆಹನಾದಂತಹ ಯೋಜನೆಗಳು ಪಕ್ಷಕ್ಕೆ ಗೆಲುವು ತರುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿವೆ. ನರೇಂದ್ರ ಮೋದಿ ಅಲೆಯೂ ಇಲ್ಲಿ ಕೆಲಸ ಮಾಡಿದೆ ಎಂದು ಹೇಳಲಾಗುತ್ತದೆ. ಆದರೆ, ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಐದನೇ ಬಾರಿಗೆ ಸಿಎಂ ಆಗುತ್ತಾರಾ ಅಥವಾ ಹೊಸ ಮುಖಕ್ಕೆ ಬಿಜೆಪಿ ಮಣೆ ಹಾಕುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಪಕ್ಷಜಯ
ಬಿಜೆಪಿ164
ಕಾಂಗ್ರೆಸ್65
ಬಿಎಸ್‌ಪಿ0
ಇತರೆ1
ಒಟ್ಟು230
ಮ್ಯಾಜಿಕ್‌ ನಂಬರ್116

ರಾಜಸ್ಥಾನದಲ್ಲಿ ಕಮಲ ಪಡೆಯೇ ರಾಜ

ರಾಜಸ್ಥಾನದಲ್ಲಿ ಅಶೋಕ್‌ ಗೆಹ್ಲೋಟ್‌ ಅವರು ಮುಖ್ಯಮಂತ್ರಿಯಾಗಿ ಜನಪರ ಆಡಳಿತ ನೀಡಿದರೂ, ಹಲವು ಗ್ಯಾರಂಟಿಗಳನ್ನು ಜನರಿಗೆ ಕೊಟ್ಟರೂ, ಆಡಳಿತ ವಿರೋಧಿ ಅಲೆ ಹಾಗೂ ಆಂತರಿಕ ಕಚ್ಚಾಟದಿಂದಾಗಿ ಬಿಜೆಪಿ ಇಲ್ಲಿ ಭರ್ಜರಿ ಜಯ ಸಾಧಿಸಿದೆ. ಅಶೋಕ್‌ ಗೆಹ್ಲೋಟ್‌ ಹಾಗೂ ಸಚಿನ್‌ ಪೈಲಟ್‌ ಮುನಿಸು, ತಮ್ಮದೇ ಸರ್ಕಾರದ ವಿರುದ್ಧ ಪೈಲಟ್‌ ಆರೋಪಗಳು, ಬಿಜೆಪಿ ಪರವಾದ ಅಲೆಯಿಂದಾಗಿ ಕಾಂಗ್ರೆಸ್‌ಗೆ ಸೋಲುಂಟಾಗಿದೆ ಎಂದು ರಾಜಕೀಯ ಪಂಡಿತರು ವಿಶ್ಲೇಷಿಸಿದ್ದಾರೆ. ಇಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ವಸುಂಧರಾ ರಾಜೇ ಮತ್ತು ದಿಯಾ ಕುಮಾರಿ ನಡುವೆ ಸ್ಪರ್ಧೆ ಇದ್ದು, ಹೈಕಮಾಂಡ್‌ ಬೇರೆ ಯಾರನ್ನಾದರೂ ತಂದು ಕೂರಿಸುವ ಸಾಧ್ಯತೆಯೂ ಇದೆ.

ಪಕ್ಷಮುನ್ನಡೆ
ಬಿಜೆಪಿ115
ಕಾಂಗ್ರೆಸ್69
ಸ್ವತಂತ್ರ13
ಬಿಎಸ್‌ಪಿ02
ಇತರೆ00
ಒಟ್ಟು199
ಮ್ಯಾಜಿಕ್‌ ನಂಬರ್100

ಛತ್ತೀಸ್‌ಗಢದಲ್ಲಿ ಬಿಜೆಪಿ ಗೆಲುವು

ನಿರೀಕ್ಷೆಯೇ ಇಲ್ಲದ, ಮತಗಟ್ಟೆ ಸಮೀಕ್ಷೆಯ ಯಾವುದೇ ವರದಿಗಳು ಕೂಡ ಸುಳಿವು ನೀಡದೆಯೇ ಛತ್ತೀಸ್‌ಗಢದಲ್ಲಿ ಬಿಜೆಪಿಯು ಅಚ್ಚರಿಯ ರೀತಿಯಲ್ಲಿ ಗೆಲುವು ಸಾಧಿಸಿದೆ. ಮುಖ್ಯಮಂತ್ರಿ ಭೂಪೇಶ್‌ ಬಘೇಲ್‌ ಅವರ ಉತ್ತಮ ಆಡಳಿತ, ಕಾಂಗ್ರೆಸ್‌ ಉಚಿತ ಗ್ಯಾರಂಟಿಗಳ ಭರವಸೆಯ ಮಧ್ಯೆಯೂ ಬಿಜೆಪಿ ಸ್ಪಷ್ಟ ಬಹುಮತ ಸಾಧಿಸುತ್ತಿದೆ. ಇದು ಕಾಂಗ್ರೆಸ್‌ ಬಿಡಿ, ಬಿಜೆಪಿ ನಾಯಕರಿಗೇ ಅಚ್ಚರಿ ತರುವ ಫಲಿತಾಂಶ ಎನಿಸಿದೆ. ಬಿಜೆಪಿಯಿಂದ ಯಾರು ಸಿಎಂ ಆಗಲಿದ್ದಾರೆ ಎಂಬುದು ಸದ್ಯದ ಪ್ರಶ್ನೆಯಾಗಿದೆ.

ಪಕ್ಷಮುನ್ನಡೆ
ಬಿಜೆಪಿ54
ಕಾಂಗ್ರೆಸ್35
ಇತರ01
ಬಿಎಸ್‌ಪಿ00
ಸಿಪಿಐ00
ಒಟ್ಟು90
ಮ್ಯಾಜಿಕ್‌ ನಂಬರ್46

ಇದನ್ನೂ ಓದಿ: Ladli Behna: ಚೌಹಾಣ್‌ ‘ಗ್ಯಾರಂಟಿ’ಗೆ ಜೈ ಎಂದ ಮಧ್ಯಪ್ರದೇಶ ಜನ;‌ ಏನಿದು ಲಾಡ್ಲಿ ಬೆಹ್ನಾ?

ಮೂರು ರಾಜ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಬಿಜೆಪಿಯು 65 ಲೋಕಸಭೆ ಕ್ಷೇತ್ರಗಳ ಮೇಲೆ ಹಿಡಿತ ಸಾಧಿಸಿದೆ. ಮಧ್ಯಪ್ರದೇಶದಲ್ಲಿ 29 ಲೋಕಸಭೆ ಸ್ಥಾನಗಳು ಹಾಗೂ ರಾಜಸ್ಥಾನದಲ್ಲಿ 25 ಲೋಕಸಭೆ ಸ್ಥಾನಗಳು ಇವೆ. ಒಟ್ಟಾಗಿ 54 ಸ್ಥಾನಗಳಾಗುತ್ತವೆ. ಈ ಅಷ್ಟೂ ಸ್ಥಾನಗಳಲ್ಲಿ ಬಿಜೆಪಿ ಕ್ಲೀನ್‌ ಸ್ವೀಪ್‌ ಮಾಡುವ ಸಾಧ್ಯತೆ ಇದೆ. ಕಳೆದ ಸಲ ಲೋಕಸಭೆ ಚುನಾವಣೆ ನಡೆದಾಗ, ಈ ಎರಡೂ ರಾಜ್ಯಗಳಲ್ಲೂ ಬಿಜೆಪಿ ಅಧಿಕಾರದಲ್ಲಿ ಇರಲಿಲ್ಲ. ಆದರೂ ಇವೆರಡೂ ಕಡೆಗಳಲ್ಲಿ ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 54ರಲ್ಲಿ 53 ಸ್ಥಾನ ಗೆದ್ದಿತ್ತು. ಮಧ್ಯಪ್ರದೇಶದಲ್ಲಿ ಒಂದೇ ಒಂದು ಸ್ಥಾನವನ್ನು ಮಾತ್ರ ಕಾಂಗ್ರೆಸ್‌ಗೆ ಬಿಟ್ಟು 28 ಸೀಟ್‌ಗಳನ್ನು ಗೆದ್ದಿತ್ತು. ರಾಜಸ್ಥಾನದಲ್ಲಿ 25ರಲ್ಲಿ 24 ಸ್ಥಾನಗಳನ್ನು ಬಿಜೆಪಿ ಗೆದ್ದಿತ್ತು. ಉಳಿದ ಒಂದು ಸ್ಥಾನ ಕೂಡ ಬಿಜೆಪಿ ಮಿತ್ರ ಪಕ್ಷದ ಪಾಲಾಗಿತ್ತು. ಈ ಬಾರಿ ರಾಜ್ಯ ಸರ್ಕಾರವೂ ಬಿಜೆಪಿಯದೇ ಆದರೆ ಮತ್ತೊಮ್ಮೆ ಅಷ್ಟೂ ಸ್ಥಾನಗಳನ್ನು ಗೆದ್ದುಕೊಳ್ಳುವುದು ಸುಲಭವಾಗುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಕುತೂಹಲಕರ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ: https://vistaranews.com/tag/assembly-election-2023

Continue Reading

South Cinema

Yash 19: ಶೀಘ್ರದಲ್ಲೇ ʼಯಶ್ 19ʼ ಚಿತ್ರ ಅನೌನ್ಸ್; ಸುಳಿವು ಕೊಟ್ಟ ರಾಕಿ ಭಾಯ್

Yash 19: ಸಾಮಾಜಿಕ ಜಾಲತಾಣದ ಮೂಲಕ ರಾಕಿಂಗ್ ಸ್ಟಾರ್ ಯಶ್ ಅವರು ತಮ್ಮ ಮುಂದಿನ ಸಿನಿಮಾ ಬಗ್ಗೆ ಸುಳಿವು ಕೊಟ್ಟಿದ್ದಾರೆ.

VISTARANEWS.COM


on

Koo

ಬೆಂಗಳೂರು: ಕೆಜಿಎಫ್‌-2 ಸಿನಿಮಾ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಭರ್ಜರಿ ಯಶಸ್ಸು ಕಂಡ ಬಳಿಕ ರಾಕಿಂಗ್‌ ಸ್ಟಾರ್‌ ಯಶ್‌ ಅವರ ಮುಂದಿನ ಚಿತ್ರ ಯಾವಾಗ ತೆರೆಗೆ ಬರಲಿದೆ ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಶೀಘ್ರದಲ್ಲೇ ‘ಯಶ್ 19ʼ (Yash 19) ಸಿನಿಮಾ ಬಗ್ಗೆ ಘೋಷಣೆ ಆಗುವ ಸಾಧ್ಯತೆಯಿದ್ದು, ಈ ಬಗ್ಗೆ ನಟ ಯಶ್‌ ಅವರೇ ಸುಳಿವು ಬಿಟ್ಟುಕೊಟ್ಟಿದ್ದಾರೆ.

ಹೌದು, ಸಾಮಾಜಿಕ ಜಾಲತಾಣದ ಮೂಲಕ ರಾಕಿಂಗ್ ಸ್ಟಾರ್ ಯಶ್ ತಮ್ಮ ಮುಂದಿನ ಸಿನಿಮಾ ಬಗ್ಗೆ ಸುಳಿವು ಕೊಟ್ಟಿದ್ದಾರೆ. ಯಶ್ ಇನ್‌ಸ್ಟಾಗ್ರಾಂ ಡಿಪಿ ಬದಲಾಗಿದ್ದು, ಅದರಲ್ಲಿ ಲೋಡಿಂಗ್ ಎಂಬ ಬರಹವುಳ್ಳ ಫೋಟೊ ಹಾಕಿಕೊಂಡಿದ್ದಾರೆ. ಹೀಗಾಗಿ ಈ ತಿಂಗಳಲ್ಲೇ ಮುಂದಿನ ಸಿನಿಮಾವನ್ನು ರಾಕಿಭಾಯ್ ಘೋಷಿಸಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ | Bobby Deol: ʻಅನಿಮಲ್‌ʼ ಸಕ್ಸೆಸ್‌ ಹೊಗಳಿಕೆಗೆ ಕಣ್ಣೀರಿಟ್ಟ ನಟ ಬಾಬಿ ಡಿಯೋಲ್

2022ರ ಏಪ್ರಿಲ್‌ 14ರಂದು ರಾಕಿಂಗ್‌ ಸ್ಟಾರ್‌ ಯಶ್‌ (Yash 19) ನಟನೆ, ಪ್ರಶಾಂತ್‌ ನೀಲ್‌ ನಿರ್ದೇಶನದ ಕೆಜಿಎಫ್‌ 2 ಸಿನಿಮಾ ಬಿಡುಗಡೆಗೊಂಡಿತ್ತು. ಮೂರು ವರ್ಷಗಳ ಕಠಿಣ ಪರಿಶ್ರಮದಿಂದ ಸಿದ್ಧವಾಗಿದ್ದ ಸಿನಿಮಾ ರಾಜ್ಯದಲ್ಲಿ ಮಾತ್ರವಲ್ಲದೆ, ದೇಶ, ವಿದೇಶದಲ್ಲಿಯೂ ತೆರೆ ಕಂಡ ದೊಡ್ಡ ಮಟ್ಟದ ಯಶಸ್ಸನ್ನು ಗಳಿಸಿಕೊಂಡಿತು. ದಾಖಲೆಗಳನ್ನು ಬರೆದ ಆ ಸಿನಿಮಾ ಬಿಡುಗಡೆಗೊಂಡು ಒಂದೂವರೆ ವರ್ಷ ಕಳೆದಿದೆ. ಇದರ ಬೆನ್ನಲ್ಲೇ ಯಶ್‌ ಅವರ ಮುಂದಿನ ಸಿನಿಮಾ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

ನಿರ್ದೇಶಕರು ಯಾರು?

ಮಲಯಾಳಂ ನಟಿ-ಚಿತ್ರ ನಿರ್ದೇಶಕಿ ಗೀತು ಮೋಹನ್‌ದಾಸ್ ( Geetu Mohandas ) ಯಶ್‌ ಅವರ ಮುಂದಿನ ಸಿನಿಮಾವನ್ನು ನಿರ್ದೇಶಿಸಲಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ ನಟಿ ರಿಮಾ ಕಲ್ಲಿಂಗಲ್‌ (Rima Kallingal) ನಿರ್ದೇಶಕಿ ಗೀತು ಅವರಿಗೆ ಶುಭ ಹಾರೈಸಲು ಇತ್ತೀಚೆಗೆ ತಮ್ಮ ಇನ್‌ಸ್ಟಾ ಸ್ಟೋರಿಯಲ್ಲಿ ಪೋಸ್ಟ್‌ ಹಾಕಿಕೊಂಡಿದ್ದರು. ಈ ಮೂಲಕ ಗೀತು ಮೋಹನ್‌ದಾಸ್ ಅವರು ಯಶ್‌ ಅವರ ಮುಂಬರುವ ಸಿನಿಮಾದ ನಿರ್ದೇಶಕರು ಎಂಬ ಸುಳಿವು ನೀಡಿದ್ದರು.

ಯುವನ್ ಯುವತಿ’ (uvan Yuvathi) ಮತ್ತು `ಚಿತಿರೈ ಸೆವ್ವಾನಂ’ ( Chithirai Sevvaanam) ಚಿತ್ರಗಳಲ್ಲಿ ನಟಿಸಿ ತಮಿಳು ಚಿತ್ರರಂಗದ ಅಭಿಮಾನಿಗಳಲ್ಲಿ ಚಿರಪರಿಚಿತರಾಗಿರುವ ರಿಮಾ ಕಲ್ಲಿಂಗಲ್ ಅವರು ತಮ್ಮ ಇನ್‌ಸ್ಟಾ ಸ್ಟೋರಿಯಲ್ಲಿ ಯಶ್ 19ರ ಕುರಿತು ಪೋಸ್ಟ್ ಹಂಚಿಕೊಂಡಿದ್ದರು. ಅದರಲ್ಲಿ ಗೀತು ಮೋಹನ್‌ದಾಸ್ ಅವರನ್ನು ಟ್ಯಾಗ್‌ ಕೂಡ ಮಾಡಿದ್ದರು. ಪೋಸ್ಟ್‌ನಲ್ಲಿ ” ಬಹು ನಿರೀಕ್ಷಿತ ಯಶ್‌ 19 ಮೂವಿಯನ್ನು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕಿ ಮಲಯಾಳಂ ನಿರ್ದೇಶಕಿ ಗೀತು ಮೋಹನ್‌ದಾಸ್ ನಿರ್ದೇಶನ ಮಾಡಲಿದ್ದಾರೆ” ಎಂದು ಬರೆಯಲಾಗಿತ್ತು.

ಇದನ್ನೂ ಓದಿ | Sachin Tendulkar: ವಿಕ್ಕಿ ಕೌಶಲ್‌ ಸಿನಿಮಾ ಕಂಡು ʻಸೂಪರ್ ಇಂಪ್ರೆಸ್ಡ್ʼ ಆದ ಸಚಿನ್ ತೆಂಡೂಲ್ಕರ್‌!

ಇದೀಗ ಏಕಾಏಕಿ ಯಶ್‌ ಅವರ ಇನ್‌ಸ್ಟಾಗ್ರಾಂ ಪ್ರೊಫೈಲ್‌ ಚಿತ್ರ ಬದಲಾದ ಹಿನ್ನೆಲೆಯಲ್ಲಿ ಸೋಷಿಯಲ್ ಮೀಡಿಯಾದಲ್ಲಿಯೇ ʼಯಶ್ 19ʼ ಬಗ್ಗೆ ರಾಕಿಂಗ್‌ ಸ್ಟಾರ್‌ ಅಪ್‌ಡೇಟ್‌ ಕೊಡಲಿದ್ದಾರಾ ಎಂಬ ಕುತೂಹಲ ಮೂಡಿದೆ.

ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಕುತೂಹಲಕರ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ:

Continue Reading
Advertisement
Bhavani Revanna
ಕರ್ನಾಟಕ9 mins ago

ತಮ್ಮ ಕಾರಿಗೆ ಡಿಕ್ಕಿ ಹೊಡೆದ ಬೈಕ್ ಸುಟ್ಟು ಹಾಕಿ ಎಂದ ಭವಾನಿ ರೇವಣ್ಣ! ವಿಡಿಯೊ ನೋಡಿ

Bangalore bulls
ಕ್ರೀಡೆ17 mins ago

Pro Kabaddi : ತಲೈವಾಸ್​, ಗುಜರಾತ್​ ಜಯಂಟ್ಸ್​ಗೆ ಗೆಲುವು

indian cricket team
ಕ್ರಿಕೆಟ್34 mins ago

Ind vs Aus : ಭಾರತ ತಂಡಕ್ಕೆ ಕೊನೇ ಪಂದ್ಯದಲ್ಲೂ ಜಯ, 4-1 ಅಂತರದಿಂದ ಸರಣಿ ಕೈವಶ

this hat-trick has guaranteed the 2024 victory Says PM Narendra Modi
ದೇಶ2 hours ago

PM Narendra Modi: 3 ರಾಜ್ಯದ ಗೆಲುವು 2024ರ ಹ್ಯಾಟ್ರಿಕ್ ಜಯದ ಮುನ್ಸೂಚನೆ; ಮೋದಿ ಬಣ್ಣನೆ

drown in sea
ಉತ್ತರ ಕನ್ನಡ2 hours ago

Drown in Sea: ಗೋಕರ್ಣ ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ನೀರುಪಾಲು

BJP wins three states Congress one
ಕರ್ನಾಟಕ2 hours ago

Assembly Elections 2023: ಬಿಜೆಪಿಗೆ ನಾಲ್ಕನೇ ಮೂರು ಬಹುಮತ, ಕಾಂಗ್ರೆಸ್‌ಗೆ ಒಂದೇ ಗ್ಯಾರಂಟಿ!

Team India
ಕ್ರಿಕೆಟ್2 hours ago

IND vs SA : ಭಾರತದ ದಕ್ಷಿಣ ಆಫ್ರಿಕಾ ಪ್ರವಾಸ ಕುರಿತ ಪೂರ್ಣ ವಿವರ ಇಲ್ಲಿದೆ

Raman_Sao_Choudhary
ದೇಶ2 hours ago

Chhattisgarh Election Result: ಛತ್ತೀಸ್‌ಗಢ ಸಿಎಂ ರೇಸ್‌ನಲ್ಲಿ ಸಾವೊ, ಚೌಧರಿ, ರಮಣ್ ಸಿಂಗ್!

South Cinema2 hours ago

Yash 19: ಶೀಘ್ರದಲ್ಲೇ ʼಯಶ್ 19ʼ ಚಿತ್ರ ಅನೌನ್ಸ್; ಸುಳಿವು ಕೊಟ್ಟ ರಾಕಿ ಭಾಯ್

BJP win
ದೇಶ3 hours ago

Assembly Elections 2023 : ಗ್ಯಾರಂಟಿಗಳ ವಾರಂಟಿ ಮುಗೀತಾ? ಭರ್ಜರಿ ಆಫರ್‌ ಕೊಟ್ಟವರ ಕಥೆ ಏನಾಯ್ತು?

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Police call off protest FIR against lawyer who slapped police
ಕರ್ನಾಟಕ11 hours ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ18 hours ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ1 day ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ2 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ2 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ3 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ3 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ6 days ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

ಟ್ರೆಂಡಿಂಗ್‌