man leaves home and reaches kukke subrahmanya to avoid domestic violence Domestic violence : ಮಕ್ಕಳ ಟಾರ್ಚರ್‌ ಸಹಿಸಲಾರದೆ ದೇವರನ್ನು ಹುಡುಕಿ ಬಂದ ವೃದ್ಧ ಅಪ್ಪ - Vistara News

ಕರ್ನಾಟಕ

Domestic violence : ಮಕ್ಕಳ ಟಾರ್ಚರ್‌ ಸಹಿಸಲಾರದೆ ದೇವರನ್ನು ಹುಡುಕಿ ಬಂದ ವೃದ್ಧ ಅಪ್ಪ

Domestic violence: ಮನೆಯಲ್ಲಿ ಎದುರಾದ ನೋವಿನ ವಾತಾವರಣವನ್ನು ಸಹಿಸಲಾಗದೆ ವ್ಯಕ್ತಿಯೊಬ್ಬರು ಬೆಂಗಳೂರನ್ನು ಬಿಟ್ಟು ಸುಬ್ರಹ್ಮಣ್ಯಕ್ಕೆ ಬಂದಿದ್ದಾರೆ. ಅವರ ಬದುಕಿನ ನೋವಿನ ಕಥೆ ಇಲ್ಲಿದೆ.

VISTARANEWS.COM


on

Bhaktavatsala at subrahmanya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪ್ರಕಾಶ್​ ಕಡಬ ವಿಸ್ತಾರ ನ್ಯೂಸ್‌ ಸುಬ್ರಹ್ಮಣ್ಯ (ದಕ್ಷಿಣ ಕನ್ನಡ)

ವಯಸ್ಸಿನ ಕಾರಣ ಆ ದೇಹದಲ್ಲಿ ನಡೆಯುವ ಶಕ್ತಿ ಉಡುಗಿ ಹೋಗಿದೆಯಾದರೂ ಮನಸಿಗಾದ ನೋವು (Domestic violence) ಅವರನ್ನು ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯದ (Bangalore to subrahmanya) ವರೆಗೂ ಕರೆತಂದಿದೆ. ನೋಡಲು ಅನುಕೂಲಸ್ಥರಂತೆ ಕಾಣುತ್ತಿರುವ ಇವರು ಕಳೆದ ಎಂಟು ದಿನದಿಂದ ಕುಕ್ಕೆ ಸುಬ್ರಹ್ಮಣ್ಯ (Kukke subrahmanya) ದೇವರ ಸನ್ನಿಧಿಯಲ್ಲಿ ಅದೇನೋ ಪ್ರಾರ್ಥನೆ ಮಾಡಿ ಅಲ್ಲೇ ಪ್ರಸಾದ ಸೇವಿಸಿ ಎಲ್ಲೋ ಮೂಲೆಯಲ್ಲಿ ಮಲಗುತ್ತಿದ್ದರು. ಸಾಮಾನ್ಯವಾಗಿ ಬರೋ ಭಕ್ತರು ಒಂದೆರಡು ದಿನ ಇರುತ್ತಾರಾದರೂ ಇವರ್ಯಾಕೆ ಇಷ್ಟೊಂದು ದಿನದಿಂದ ಇಲ್ಲೇ ಇದ್ದಾರೆ ಎಂದು ಸ್ಥಳೀಯರು ಗಮನಿಸಿ ಪೊಲೀಸರ ಗಮನಕ್ಕೆ ತಂದರು. ಆವಾಗಲೇ ಈ ವೃದ್ಧ ಜೀವ ಸುಬ್ರಹ್ಮಣ್ಯಕ್ಕೆ ಬಂದ ಕಥೆ ಬಿಚ್ಚಿಕೊಂಡಿದ್ದು.

1965ರಿಂದ 1969ರ ವರೆಗೆ ಭಾರತೀಯ ಭೂ ಸೇನೆಯಲ್ಲಿ ಸೇವೆ ಸಲ್ಲಿಸಿದ್ದ ಇವರ ಹೆಸರು ಭಕ್ತವತ್ಸಲ. 81 ವರ್ಷ ವಯಸ್ಸಿನ ಇವರು ಮೂಲತಃ ಬೆಂಗಳೂರಿನವರು. ಕಳೆದ ಎಂಟು ದಿನಗಳಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆವರಣವನ್ನೇ ಮನೆ ಮಾಡಿಕೊಂಡಿದ್ದಾರೆ. ಇದಕ್ಕೆ ಕಾರಣವಾಗಿದ್ದು ಎಲ್ಲರೂ ಇದ್ದೂ ಎಲ್ಲವನ್ನೂ ಕಳೆದುಕೊಂಡಿದ್ದು ಅನ್ನೋದು ಭಕ್ತವತ್ಸಲ ಅವರ ನೋವಿನ ಮಾತುಗಳು.

ಬೆಂಗಳೂರಿನ ಕತ್ರಿಗುಪ್ಪೆಯಲ್ಲಿ ಸ್ವಂತ ಮನೆ ಇದೆ. ಮನೆಯಲ್ಲಿ ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳ ಜೊತೆ ಸಂತಸದ ಜೀವನ ಕಳೆದಿದ್ದರು ಅವರು. ಆದರೆ ಕಳೆದ ವರ್ಷ ಇವರ ಪತ್ನಿ ಇಹಲೋಕ ತ್ಯಜಿಸಿದ ಬಳಿಕ ಮಕ್ಕಳು ಆಸ್ತಿಯನ್ನು ತಮ್ಮ ಹೆಸರಿಗೆ ಬರೆಸಿಕೊಂಡಿದ್ದಾರೆ.

ಹಾಗೆ ಆಸ್ತಿ ಬರೆಸಿಕೊಂಡ ಮೇಲೆ ಮದುವೆಯಾಗಿರುವ ಮಕ್ಕಳು ತಂದೆಯನ್ನೇ ಹೊರ ಹಾಕಿದ್ದಾರೆ. ಅದರಲ್ಲೂ ಎರಡನೇ ಮಗನ ಹೆಂಡತಿ ಟಾರ್ಚರ್ ತಡೆಯೋದಿಕ್ಕೆ ಆಗದೆ ಮನೆ ಬಿಟ್ಟು ಬಂದಿದ್ದೇನೆ ಅಂತಿದ್ದಾರೆ ಭಕ್ತವತ್ಸಲ. ಒಬ್ಬ ಮಗ ಪೌರೋಹಿತ್ಯ ಮಾಡಿಕೊಂಡಿದ್ದಾನೆ ಹಾಗೂ ಎರಡನೇ ಮಗ ಡ್ರೈವರ್ ಕೆಲಸ ಮಾಡ್ತಾ ಇದ್ದಾನಂತೆ. ಆದ್ರೆ ತಂದೆಯ ಆಸ್ತಿಯ ಪಾಲು ಪಡೆದ ಮೇಲೆ ಇಬ್ಬರಿಗೂ ತಂದೆ ಬೇಡವಾಗಿದ್ದಾರೆ.

ಮನೆಗೆ ಹೋಗೋದಿಲ್ಲ ಸತ್ರೆ ಇಲ್ಲೇ ಸಾಯ್ತೆನೆ…

ಎಂಟು ದಿನಗಳಿಂದ ಸುಬ್ರಹ್ಮಣ್ಯ ದೇವಸ್ಥಾನದ ಅಕ್ಕಪಕ್ಕದಲ್ಲೇ ಇದ್ದ ಭಕ್ತವತ್ಸಲ ಅವರನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಹೀಗಾಗಿ ಸ್ಥಳಕ್ಕೆ ಬಂದ ಠಾಣಾಧಿಕಾರಿ ಮಂಜುನಾಥ್ ಹಾಗೂ ಸ್ಥಳೀಯ ಸಾಮಾಜಿಕ ಟ್ರಸ್ಟ್​ನ ರವಿ ಕಕ್ಕೆ ಪದವು ಭಕ್ತವತ್ಸಲ ಅವರಿಗೆ ರಕ್ಷಣೆ ಒದಗಿಸಿದ್ದಾರೆ. ಅವರನ್ನು ಟ್ರಸ್ಟ್​ ಕಚೇರಿಗೆ ಕರೆದೊಯ್ದು ಸಾಂತ್ವನ ಹೇಳಿ ಬಳಿಕ ವಿಚಾರಿಸಿದಾಗ ಎಲ್ಲಾ ಕಥೆಯನ್ನು ಭಕ್ತವತ್ಸಲ ಹೇಳಿಕೊಂಡಿದ್ದಾರೆ.

ಮನೆಯಲ್ಲಿ ಮಕ್ಕಳು ಎಲ್ಲದಕ್ಕೂ ವಿರೋಧ ಮಾಡ್ತಾರೆ.. ಅವರು ಹೇಳಿದಂತೆ ಕೇಳದೇ ಇದ್ದರೆ ನನಗೆ ತೊಂದರೆ ಮಾಡ್ತಾರೆ ಅಂತ ದೂರಿದ್ದಾರೆ. ಇನ್ನು ಮಕ್ಕಳಿಗೆ ಫೋನ್​ ಮಾಡಿ ವಿಚಾರಿಸಿದ್ರೆ ಅವರಿಗೆ ತಂದೆ ಎಲ್ಲಿ ಹೋಗಿದ್ದಾರೆ ಅನ್ನೋದೇ ಗೊತ್ತಿಲ್ಲ. ತಂದೆ ಕಾಣೆಯಾಗಿದ್ದಾರೆ ಅನ್ನೋ ಬಗ್ಗೆ ಒಂದು ದೂರು ಕೂಡಾ ದಾಖಲಿಸಿಲ್ಲ!

ಮಕ್ಕಳ ಬಳಿ ಕಳುಹಿಸಿ ಕೊಡ್ತೇವೆ ಅಂತ ಹೇಳಿದರೆ ಭಕ್ತವತ್ಸಲ ಅವರು ಒಪ್ಪುವುದಿಲ್ಲ. ಸತ್ತರೆ ಇಲ್ಲೇ ಸಾಯೋದು ಮನೆಗಂತೂ ವಾಪಾಸ್ ಹೋಗೋದಿಲ್ಲ ಅಂತ ಹಟ ಹಿಡಿದು ಕುಳಿತಿದ್ದಾರೆ.

Bhaktavatsala from Bangalore is being taken to police station in Kukke subrahmanya
ಭಕ್ತವತ್ಸಲ ಅವರನ್ನು ಪೊಲೀಸ್‌ ಠಾಣೆಗೆ ಕರೆದೊಯ್ಯುತ್ತಿರುವುದು

ಸಮಾಜ ಸೇವಕ ರವಿ ಆಶ್ರಯದಲ್ಲಿ ಭಕ್ತವತ್ಸಲ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಮಾಜ ಸೇವಾ ಟ್ರಸ್ಟ್​ ನಡೆಸುತ್ತಿರುವ ರವಿ ಕಕ್ಕೆ ಪದವರು ಎಂಬವರ ಬಳಿ ಭಕ್ತವತ್ಸಲ ಈಗ ಸುರಕ್ಷಿತವಾಗಿದ್ದಾರೆ. ಹಾಗಂತ ಅವರನ್ನು ಹೆಚ್ಚು ದಿನ ಇಟ್ಟುಕೊಳ್ಳೋದು ಕೂಡಾ ಇವರಿಗೆ ಕಷ್ಟದ ಕೆಲಸ. ಹೀಗಾಗಿ ಭಕ್ತವತ್ಸಲ ಅವರಿಗೆ ತಿಳಿಸದೇ ಅವರ ಇಬ್ಬರೂ ಮಕ್ಕಳನ್ನು ಸುಬ್ರಹ್ಮಣ್ಯಕ್ಕೆ ಕರೆಯಿಸಿದ್ದಾರೆ. ಮಕ್ಕಳಿಗೆ ಒಂದಷ್ಟು ಬುದ್ಧಿ ಹೇಳಿ ಭಕ್ತ ವತ್ಸಲ ಅವರನ್ನು ಕಳುಹಿಸಿಕೊಡಲು ತೀರ್ಮಾನಿಸಿದ್ದಾರೆ.

ಈಗಾಗಲೆ ಮಕ್ಕಳಿಗೆ ಕರೆ ಮಾಡಿದ್ದು ಮಕ್ಕಳೂ ತಂದೆಯನ್ನು ಕರೆದುಕೊಂಡು ಹೋಗಲು ಸುಬ್ರಹ್ಮಣ್ಯಕ್ಕೆ ಬರ್ತಾ ಇದ್ದಾರೆ. ವಯಸ್ಸಾಗಿರೋ ಭಕ್ತವತ್ಸಲ ಅವರಿಗೆ ನಿಜವಾಗಿಯೂ ಮಕ್ಕಳು ಕಷ್ಟ ನೀಡಿದ್ದಾರಾ ಅಥವಾ ವಯಸ್ಸಿನ ಕಾರಣದಿಂದ ಮಕ್ಕಳು ಹೇಳುವ ಕೆಲವೊಂದು ವಿಚಾರಗಳು ಅವರಿಗೆ ಕಷ್ಟವಾಗಿ ಕಂಡಿದೆಯಾ? ಇದೆಲ್ಲದಕ್ಕೂ ಮಕ್ಕಳು ಬಂದ ಬಳಿಕ ಉತ್ತರ ಸಿಗಬೇಕಷ್ಟೆ.

ಆದರೆ ಎಂಟು ದಿನದಿಂದ ತಂದೆ ಕಾಣಿಸುತ್ತಿಲ್ಲ ಅಂದಾಗಲೂ ಪೊಲೀಸರಿಗೆ ದೂರು ನೀಡದ ಮಕ್ಕಳ ನಡೆ ಅನುಮಾನ ಹುಟ್ಟಿಸಿದೆ. ಏನೇ ಆಗಲಿ ಈ ವಯಸ್ಸಿನಲ್ಲಿ ದೇವರೇ ದಿಕ್ಕು ಎಂದು ಬಂದ ಭಕ್ತವತ್ಸಲ ಅವರಿಗೆ ದೇವರೇ ದಾರಿ ಕಾಣಿಸಿರಬೇಕು. ಸಾವಿರಾರು ಜನ ಬರೋ ಜಾಗದಲ್ಲಿ ಯಾರೂ ಯಾರನ್ನೂ ಗಮನಿಸೋದಿಲ್ಲ ಅಂತಹದ್ರಲ್ಲಿ ಯಾr ಇವರನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ ಕಾರಣ ಸದ್ಯ ಮತ್ತೆ ಮನೆ ಸೇರುವಂತಾಗಿದೆ.

ಇದನ್ನೂ ಓದಿ: Electricity bill: ಒಂದು ಹೊತ್ತಿನ ಊಟಕ್ಕೂ ಪರದಾಡುವ ಅಜ್ಜಿ ಮನೆಗೆ ಬಂತು ಒಂದು ಲಕ್ಷ ಕರೆಂಟ್‌ ಬಿಲ್!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

DK Shivakumar: ಕುತೂಹಲ ಕೆರಳಿಸಿದ ಡಿಕೆಶಿ- ಉಪರಾಷ್ಟ್ರಪತಿ ಭೇಟಿ; ʼಬಿಜೆಪಿಗೆ ಸೇರ್ತೀರಾʼ ಎಂದ ನೆಟ್ಟಿಗರು!

DK Shivakumar: ಪಕ್ಷದ ವಿಧಾನ ಪರಿಷತ್‌ ಅಭ್ಯರ್ಥಿ ಆಯ್ಕೆ ಮಾಡುವ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಸರಣಿ ಸಭೆಗಳನ್ನು ನಡೆಸಲು ದಿಲ್ಲಿಗೆ ಆಗಮಿಸಿದ್ದಾರೆ. ಇಂದು ಮುಂಜಾನೆ ಉಪರಾಷ್ಟ್ರಪತಿಗಳಿಂದ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಬ್ರೇಕ್ ಫಾಸ್ಟ್‌ಗೆ ಆಹ್ವಾನ ಬಂದಿತ್ತು.

VISTARANEWS.COM


on

dk shivakumar jagdeep dhankar
Koo

ಹೊಸದಿಲ್ಲಿ: ದೆಹಲಿ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DCM DK Shivakumar) ಅವರು ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ (Vice President Jagdeep Dhankar) ಅವರನ್ನು ಕರ್ನಾಟಕ ಭವನದಲ್ಲಿ ಮಂಗಳವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಈ ಭೇಟಿ ಇದೀಗ ಕುತೂಹಲ ಕೆರಳಿಸಿದೆ.

ಇಂದು ಮುಂಜಾನೆ ಉಪರಾಷ್ಟ್ರಪತಿಗಳಿಂದ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಬ್ರೇಕ್ ಫಾಸ್ಟ್‌ಗೆ ಆಹ್ವಾನ ಬಂದಿತ್ತು. ಉಪರಾಷ್ಟ್ರಪತಿಗಳನ್ನು ಭೇಟಿಯಾದ ಚಿತ್ರವನ್ನು ನಂತರ ಫೇಸ್‌ಬುಕ್‌ನಲ್ಲಿ ಹಂಚಿಕೊಂಡ ಡಿಕೆಶಿ, “ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಶ್ರೀ ಜಗದೀಪ್‌ ಧನಕರ್‌ ಅವರನ್ನು ಇಂದು ರಾಜಭವನದಲ್ಲಿ ಸೌಹಾರ್ದಯುತವಾಗಿ ಭೇಟಿಯಾದೆ. ಈ ವೇಳೆ ಪ್ರಾದೇಶಿಕ ಹಾಗೂ ರಾಷ್ಟ್ರೀಯ ವಿಚಾರಗಳ ಕುರಿತು ಪರಸ್ಪರ ಚರ್ಚಿಸಿದೆವು” ಎಂದು ಬರೆದುಕೊಂಡಿದ್ದಾರೆ.

ಇದಕ್ಕೆ ನೆಟ್ಟಿಗರಿಂದ ವಿಧವಿಧವಾದ ಪ್ರತಿಕ್ರಿಯೆಗಳು ಕಂಡುಬಂದವು. “ಶುಭವಾಗಲಿ ನಿಮಗೆ. ಆದಷ್ಟೂ ಶೀಘ್ರ ಬಿಜೆಪಿಗೆ ನೀವು ಬರುವಂತಾಗಲಿ. ನಂತರ, ರಾಜ್ಯದ ಮುಖ್ಯಮಂತ್ರಿ ಆಗಲಿ ಎಂದು ಆಶಿಸುತ್ತೇನೆ” ಎಂದು ಒಬ್ಬರು ಕಾಮೆಂಟ್‌ ಮಾಡಿದ್ದಾರೆ. “ಇದೆಲ್ಲ ಬೇಡ ನಮಗೆ ಸಿಎಂ ಆಗಬೇಕು” ಎಂದು ಮತ್ತೊಬ್ಬರು ಬರೆದಿದ್ದಾರೆ.

ಪಕ್ಷದ ವಿಧಾನ ಪರಿಷತ್‌ ಅಭ್ಯರ್ಥಿ ಆಯ್ಕೆ ಮಾಡುವ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಸರಣಿ ಸಭೆಗಳನ್ನು ನಡೆಸಲು ದಿಲ್ಲಿಗೆ ಆಗಮಿಸಿದ್ದಾರೆ. ದೆಹಲಿಗೆ ಬರುತ್ತಿದ್ದಂತೆ ರಣದೀಪ್‌ ಸುರ್ಜೆವಾಲಾ ಜೊತೆಗೆ ಸಭೆ ನಡೆಸಿದ್ದು, ಬಳಿಕ ಕರ್ನಾಟಕ ಭವನದಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸಿದರು. ರಾತ್ರಿ 10 ಗಂಟೆಗೆ ಕೆ.ಸಿ ವೇಣುಗೋಪಾಲ್ ಜೊತೆ ಸಭೆ ನಡೆಸಿ ಸಿಎಂ ಹಾಗೂ ಡಿಸಿಎಂ ನಾಳೆ ಬೆಳಿಗ್ಗೆ ಖರ್ಗೆ ಜೊತೆಗೆ ಅಂತಿಮ ಸಭೆ ನಡೆಸಲಿದ್ದಾರೆ. ನಿರೀಕ್ಷೆಗೂ ಮೀರಿ ಆಕಾಂಕ್ಷಿಗಳ ಹೆಸರು ಪಟ್ಟಿಯಲ್ಲಿರುವುದರಿಂದ ಅಭ್ಯರ್ಥಿ ಆಯ್ಕೆ ಸಂಬಂಧ ಕಗ್ಗಂಟು ಬಗೆಹರಿಯದಾಗಿದೆ.

ಕೆಲವು ದಿನಗಳ ಹಿಂದೆ ಒಕ್ಕಲಿಗರ ಸಭೆಯಲ್ಲಿ ಮಾತನಾಡುತ್ತ ಡಿಕೆಶಿ, ತಾವು ಮುಂದಿನ ಸಿಎಂ (Next CM) ಆಗುವ ಬಗ್ಗೆ ಸುಳಿವನ್ನು ನೀಡಿದ್ದರು. “ಏನು ಆಗಬೇಕೆಂದಿದೆಯೋ ಅದು ದೆಹಲಿಯಲ್ಲಿ ತೀರ್ಮಾನ ಆಗಿದೆ. ಅಲ್ಲದೆ, ಸ್ವಲ್ಪ ದಿನ ಕಾಯಿರಿ” ಎಂದು ಹೇಳಿದ್ದರು. ಆ ಮೂಲಕ ಕೆಲವೇ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಬದಲಾವಣೆ ಆಗಲಿದೆ ಎಂಬ ಸುಳಿವನ್ನು ನೀಡಿದ್ದಾರೆ.

ಇದನ್ನೂ ಓದಿ: ವಿಧಾನ ಪರಿಷತ್‌ ಚುನಾವಣೆ: ಖರ್ಗೆ, ಸಿದ್ದು, ಡಿಕೆಶಿ ಆಪ್ತರಿಗೆ ಸ್ಥಾನ ಕೊಡಿಸಲು 2+2+2+1=7 ಫಾರ್ಮುಲಾ; ಏನಿದು?

Continue Reading

ಕ್ರೈಂ

Assault Case: ಬೆಳ್ಳೂರು ಹಿಂದೂ ಯುವಕನ ಮೇಲೆ ಹಲ್ಲೆ; ದೂರು ಸ್ವೀಕರಿಸದ ಪಿಎಸ್‌ಐ ಸಸ್ಪೆಂಡ್‌

Assault Case: ಬೆಳ್ಳೂರು ಗ್ರಾಮಸ್ಥರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟಿಸಿದ್ದರು. ಕಡೆಗೆ ಪ್ರಕರಣದ ಗಂಭೀರತೆ ಅರಿತು ಪೊಲೀಸರು ದೂರು ಪಡೆದಿದ್ದರು. ಘಟನೆ ಸಂಬಂಧ 3 ಪ್ರತ್ಯೇಕ ದೂರು ದಾಖಲಾಗಿತ್ತು. ಈ ಹಿಂದೆ ದೂರು ಸ್ವೀಕರಿಸದ ಪಿಎಸ್‌ಐ ವಿರುದ್ಧವೂ ಕಂಪ್ಲೆಂಟ್ ದಾಖಲಾಗಿದೆ. ದೂರಿನ ಬೆನ್ನಲ್ಲೇ ಪಿಎಸ್‌ಐ ಅಮಾನತು ಮಾಡಿ ಎಸ್‌ಪಿ ಯತೀಶ್ ಆದೇಶ ನೀಡಿದ್ದಾರೆ.

VISTARANEWS.COM


on

belluru assault case
Koo

ಮಂಡ್ಯ: ಮಂಡ್ಯ ಜಿಲ್ಲೆಯ (Mandya news) ಬೆಳ್ಳೂರು (Belluru Assault case) ಪಟ್ಟಣದಲ್ಲಿ ಹಿಂದೂ ಯುವಕನ (Hindu youth) ಮೇಲೆ ಅನ್ಯ ಕೋಮಿನ ಪುಂಡರು ಹಲ್ಲೆ ನಡೆಸಿದ ಪ್ರಕರಣದಲ್ಲಿ ದೂರು ಸ್ವೀಕರಿಸಲು ನಿರಾಕರಿಸಿದ್ದ ಪಿಎಸ್‌ಐ ಅನ್ನು ಅಮಾನತು (Suspend) ಮಾಡಲಾಗಿದೆ. ಕರ್ತವ್ಯ ಲೋಪ ಕಾರಣ ನೀಡಿ ಬೆಳ್ಳೂರು ಠಾಣೆ ಪಿಎಸ್‌ಐ ಬಸವರಾಜ ಚಿಂಚೋಳಿ ಅವರನ್ನು ಅಮಾನತು ಮಾಡಿ ಮಂಡ್ಯ ಎಸ್‌ಪಿ ಎನ್. ಯತೀಶ್ ಆದೇಶ ಹೊರಡಿಸಿದ್ದಾರೆ.

ಬೆಳ್ಳೂರು ಗ್ರಾಮಸ್ಥರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟಿಸಿದ್ದರು. ಕಡೆಗೆ ಪ್ರಕರಣದ ಗಂಭೀರತೆ ಅರಿತು ಪೊಲೀಸರು ದೂರು ಪಡೆದಿದ್ದರು. ಘಟನೆ ಸಂಬಂಧ 3 ಪ್ರತ್ಯೇಕ ದೂರು ದಾಖಲಾಗಿತ್ತು. ಈ ಹಿಂದೆ ದೂರು ಸ್ವೀಕರಿಸದ ಪಿಎಸ್‌ಐ ವಿರುದ್ಧವೂ ಕಂಪ್ಲೆಂಟ್ ದಾಖಲಾಗಿದೆ. ದೂರಿನ ಬೆನ್ನಲ್ಲೇ ಪಿಎಸ್‌ಐ ಅಮಾನತು ಮಾಡಿ ಎಸ್‌ಪಿ ಯತೀಶ್ ಆದೇಶ ನೀಡಿದ್ದಾರೆ.

ಹಲ್ಲೆ ಪ್ರಕರಣ ಸಂಬಂಧ 11ಕ್ಕೂ ಹೆಚ್ಚು ಆರೋಪಿಗಳ ಮೇಲೆ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಅಭಿಲಾಷ್ ತಂದೆ ರಾಮು ನೀಡಿದ ದೂರಿನ ಅನ್ವಯ ಎಫ್‌ಐಆರ್‌ ದಾಖಲಾಗಿದೆ. ನವೀದ್, ಸೂಫಿಯಾನ್, ಇಮ್ರಾನ್, ಸಮೀರ್, ಮುದಾಸೀರ್ ಸೇರಿ 11ಕ್ಕೂ ಹೆಚ್ಚು ಮಂದಿ ಮೇಲೆ ಎಫ್.ಐ.ಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 341, 307, 504, 506 ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಏನಿದು ಪ್ರಕರಣ?

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರಿನಲ್ಲಿ ಸೋಮವಾರ (ಮೇ 27) ಸಂಜೆ ಅಭಿಲಾಷ್​ ಎಂಬ ಯುವಕನ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿದ್ದರು. ಅತಿ ವೇಗದಲ್ಲಿ ಕಾರು ಚಾಲನೆ ಮಾಡಿದ್ದನ್ನು ಪ್ರಶ್ನಿಸಿದ್ದ ಅಭಿಲಾಷ್​ ಮೇಲೆ ಮುಸ್ಲಿಂ ಯುವಕರ ಗುಂಪೊಂದು ಹಲ್ಲೆ ಮಾಡಿತ್ತು. ಘಟನೆ ಬಳಿಕ ಬೆಳ್ಳೂರು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಗಂಭೀರವಾಗಿ ಪೆಟ್ಟು ತಿಂದಿರುವ ಅಭಿಲಾಷ್​ ಅವರನ್ನು ಬೆಳ್ಳೂರಿನ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕಳೆದ ಶುಕ್ರವಾರ ಮುಸ್ಲಿಂ ಯುವಕರ ಗುಂಪು ಬೆಳ್ಳೂರಿನ ಸಂತೆ ಬೀದಿಯಲ್ಲಿ ಅತಿ ವೇಗದಲ್ಲಿ ಪಟ್ಟಣದೊಳಗೆ ಕಾರು ಓಡಿಸಿಕೊಂಡು ಹೋಗಿದೆ. ಅಪಾಯಕಾರಿ ರೀತಿಯಲ್ಲಿ ವಾಹನ ಓಡಿಸಿದ್ದನ್ನು ಹಲ್ಲೆಗೆ ಒಳಗಾಗಿರುವ ಅಭಿಲಾಷ್ ಹಾಗೂ ಅವರ ಜತೆಗಾರ ನಾಗೇಶ್​ ಎಂಬುವರು ಪ್ರಶ್ನಿಸಿದ್ದರು. ಮಿತಿ ಮೀರಿದ ವೇಗದಲ್ಲಿ ಕಾರು ಓಡಿಸದಂತೆ ಆ ಗುಂಪಿಗೆ ಬುದ್ಧಿವಾದ ಹೇಳಿದ್ದರು. ಈ ವೇಳೆ ಸಣ್ಣ ಮಟ್ಟಿನ ಮಾತಿನ ಚಕಮಕಿ ನಡೆದಿತ್ತು. ಅದೇ ದ್ವೇಷವನ್ನು ಇಟ್ಟುಕೊಂಡಿದ್ದ ಮುಸ್ಲಿಂ ಯುವಕರ ಗುಂಪಿ ಇನ್ನಷ್ಟು ದೊಡ್ಡ ಗುಂಪನ್ನು ಕಟ್ಟಿಕೊಂಡು ಬಂದು ಸೋಮವಾರ ಸಂಜೆ ಹಲ್ಲೆ ಮಾಡಿದ್ದರು.

ದೊಡ್ಡ ಗುಂಪು ಹಲ್ಲೆ ಮಾಡಿದ್ದ ಅಭಿಲಾಷ್​ ಅವರಿಗೆ ಗಂಭೀರ ಗಾಯಗಳಾಗಿವೆ ಎಂದು ಅವರ ಆಪ್ತರು ಹೇಳಿದ್ದಾರೆ. ತಕ್ಷಣ ಸ್ಥಳೀಯರು ಅವರನ್ನು ಏಮ್ಸ್​ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಸುದ್ದಿಯಾದ ಬಳಿಕ ಬೆಳ್ಳೂರು ಪಟ್ಟಣದಲ್ಲಿ ಆತಂಕ ಮನೆ ಮಾಡಿತ್ತು. ಗಲಾಟೆ ಸಂಭವಿಸುವ ಸಾಧ್ಯತೆಗಳನ್ನು ಮನಗಂಡಿರುವ ಪೊಲೀಸರು ಬೆಳ್ಳೂರು ಪಟ್ಟಣ ಹಾಗೂ ಬಿಜಿಎಸ್ ಆಸ್ಪತ್ರೆಗೆ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಿದ್ದಾರೆ.

ಇದನ್ನೂ ಓದಿ | Physical Abuse: 7ನೇ ಕ್ಲಾಸ್‌ ಹುಡುಗಿ 3 ತಿಂಗಳ ಗರ್ಭಿಣಿ! ಅತ್ಯಾಚಾರವೆಸಗಿದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಅರೆಸ್ಟ್‌

Continue Reading

ಕ್ರೈಂ

Love Jihad: ನಾಪತ್ತೆಯಾದ ಹಿಂದೂ ಯುವತಿ ಮುಸ್ಲಿಂ ಯುವಕನ ಮದುವೆಯಾಗಿ ಪತ್ತೆ; ಮುಸ್ಲಿಂ ಲೀಗ್‌ ನಾಯಕನ ಕುಮ್ಮಕ್ಕು?

Love Jihad: ಕಾಸರಗೋಡಿನಲ್ಲಿ ಖಾಸಗಿ ಸಂಸ್ಥೆಯೊಂದರ ಶಿಕ್ಷಕಿಯಾಗಿದ್ದ ಯುವತಿ ನೇಹಾ, ಮುಸ್ಲಿಂ ಯುವಕ ಮಿರ್ಶಾದ್ ಎಂಬಾತನ ಜೊತೆ ತೆರಳಿದ್ದಳು. ಸದ್ಯ ಪೊಲೀಸರ ಮುಂದೆ ಪ್ರತ್ಯಕ್ಷಳಾಗಿರುವ ಈಕೆಯನ್ನು ಪೊಲೀಸರು ಕಾಸರಗೋಡು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಸ್ವಇಚ್ಛೆಯಿಂದ ಯುವಕನ ಜೊತೆ ತೆರಳಿದ್ದೇನೆ ಎಂದು ಆಕೆ ಹೇಳಿದ್ದಾಳೆ.

VISTARANEWS.COM


on

love jihad kasaragod 2
Koo

ಮಂಗಳೂರು: ಕರ್ನಾಟಕ ಗಡಿನಾಡು ಕಾಸರಗೋಡಿನಲ್ಲಿ (Kasaragod) ಮತ್ತೆ ಲವ್ ಜಿಹಾದ್ (Love Jihad) ಸದ್ದು ಮಾಡುತ್ತಿದೆ. ಮಂಗಳೂರು ಗಡಿ ಪ್ರದೇಶವಾದ ಕಾಸರಗೋಡಿನಲ್ಲಿ ಹಿಂದೂ ಯುವತಿಯನ್ನು (Hindu woman) ಮುಸ್ಲಿಂ ಯುವಕ (Muslim man) ಸದ್ದಿಲ್ಲದೆ ಮದುವೆ (Marriage) ಆಗಿದ್ದು, ಮುಸ್ಲಿಂ ಲೀಗ್ (Muslim league) ನಾಯಕನೊಬ್ಬ ಈ ಪ್ರಕರಣದಲ್ಲಿ ಬೆಂಬಲ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.

ಕಾಸರಗೋಡಿನ ಬದಿಯಡ್ಕದಲ್ಲಿ ʼಲವ್‌ ಜಿಹಾದ್ʼ (love jihad) ಎನ್ನಲಾಗಿರುವ ಪ್ರಕರಣ ಬೆಳಕಿಗೆ ಬಂದಿದ್ದು, ವಿಹಿಂಪ (Vishwa Hindu Parishad) ಸೇರಿ ಹಿಂದೂ ಪರ ಸಂಘಟನೆಗಳು ರೊಚ್ಚಿಗೆದ್ದಿವೆ. ನಾಪತ್ತೆಯಾಗಿದ್ದ ಯುವತಿ ಅನ್ಯಮತೀಯ ಯುವಕನ ಜೊತೆ ಠಾಣೆಗೆ ಹಾಜರಾಗಿದ್ದು, ತಮಗೆ ಮದುವೆಯಾಗಿದೆ ಎಂದು ತಿಳಿಸಿದ್ದಾಳೆ.

ಕಾಸರಗೋಡಿನಲ್ಲಿ ಖಾಸಗಿ ಸಂಸ್ಥೆಯೊಂದರ ಶಿಕ್ಷಕಿಯಾಗಿದ್ದ ಯುವತಿ ನೇಹಾ, ಮುಸ್ಲಿಂ ಯುವಕ ಮಿರ್ಶಾದ್ ಎಂಬಾತನ ಜೊತೆ ತೆರಳಿದ್ದಳು. ಸದ್ಯ ಪೊಲೀಸರ ಮುಂದೆ ಪ್ರತ್ಯಕ್ಷಳಾಗಿರುವ ಈಕೆಯನ್ನು ಪೊಲೀಸರು ಕಾಸರಗೋಡು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಸ್ವಇಚ್ಛೆಯಿಂದ ಯುವಕನ ಜೊತೆ ತೆರಳಿದ್ದೇನೆ ಎಂದು ಆಕೆ ಹೇಳಿದ್ದಾಳೆ.

love jihad kasaragod 2

ಆದರೆ ಈ ʼಲವ್ ಜಿಹಾದ್ʼ ಹಿಂದೆ ಕೇರಳದ ಮುಸ್ಲಿಂ ಲೀಗ್ ನೇತಾರನ ಷಡ್ಯಂತ್ರವಿದೆ; ಮುಸ್ಲಿಂ ಲೀಗ್ ನೇತಾರನೊಬ್ಬ ಷಡ್ಯಂತ್ರ ರೂಪಿಸಿ ಪ್ರೇಮಾಂಕುರವಾಗುವಂತೆ ಮಾಡಿದ್ದಾನೆ. ಆ ನೆಪದಲ್ಲಿ ಹಿಂದೂ ಯುವತಿಯನ್ನು ಇಸ್ಲಾಂಗೆ ಮತಾಂತರಿಸಲು ಭಾರೀ ಸಂಚು ರೂಪಿಸಿದ್ದಾನೆ ಎಂದು ವಿಶ್ವ ಹಿಂದೂ ಪರಿಷತ್ ಆರೋಪಿಸಿದೆ.

ನೇಹಾಳ ತಂದೆಯ ದೂರಿನಂತೆ ಬದಿಯಡ್ಕ ಪೊಲೀಸರು ನಾಪತ್ತೆ ಕೇಸು ದಾಖಲಿಸಿದ್ದರು. ದೂರಿನಲ್ಲಿ, ಪೋಷಕರು ಯುವತಿಯ ಅಪಹರಣದ ಅನುಮಾನ ವ್ಯಕ್ತಪಡಿಸಿದ್ದರು. ಮೇ.23ರಂದು ಮನೆಯಿಂದ ಹೊರಟ ನೇಹಾ ದಿಢೀರ್ ನಾಪತ್ತೆಯಾಗಿದ್ದಳು. ಆ ಬಳಿಕ ಬದಿಯಡ್ಕ ರಿಜಿಸ್ಟ್ರಾರ್ ಕಚೇರಿ ಬೋರ್ಡ್‌ನಲ್ಲಿ ಇಬ್ಬರ ಭಾವಚಿತ್ರಗಳ ಸಹಿತ ನೋಟೀಸ್ ಪತ್ತೆಯಾಗಿದೆ. ರಿಜಿಸ್ಟ್ರಾರ್ ಕಚೇರಿಯಲ್ಲಿ ಮದುವೆಯಾಗಿದ್ದ ನೇಹಾ ಮತ್ತು ಮಿರ್ಶಾದ್, ಮದುವೆಯಾಗಿ ಮೇ.27ರಂದು ಬದಿಯಡ್ಕ ಠಾಣೆಗೆ ಹಾಜರಾಗಿದ್ದರು.

ಕಾಸರಗೋಡು ಜಿಲ್ಲೆಯಲ್ಲಿ ಮತ್ತೆ ಲವ್ ಜಿಹಾದ್ ಸಕ್ರಿಯವಾಗಿದೆ. ಆರ್ಥಿಕವಾಗಿ ಹಿಂದುಳಿದ ಹಿಂದೂ ಯುವತಿಯರನ್ನು ಆಡಂಬರದ ಬದುಕಿನ ಆಮಿಷ ತೋರಿಸಿ ಲವ್ ಜಿಹಾದ್‌ನ ಜಾಲಕ್ಕೆ ಸಿಲುಕಿಸಲಾಗುತ್ತಿದೆ. ಹಿಂದೂ ಯುವತಿಯರ ಲವ್ ಜಿಹಾದ್, ಮತಾಂತರಕ್ಕೆ ಮುಸ್ಲಿಂ ಲೀಗ್ ಕುಮ್ಮಕ್ಕು ನೀಡುತ್ತಿದೆ. ಲವ್ ಜಿಹಾದ್‌ಗೆ ಬದಿಯಡ್ಕ ಪೊಲೀಸರು ಸಹ ಸಾಥ್ ನೀಡುತ್ತಿದ್ದಾರೆ ಎಂದು ವಿಎಹಿಂಪ, ಭಜರಂಗದಳ ಹಾಗೂ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿವೆ.

ಇದನ್ನೂ ಓದಿ: ‌Love Jihad: ಲವ್‌ ಜಿಹಾದ್‌ಗೆ ಮತ್ತೊಂದು ಬಲಿ? ಹೋಟೆಲ್ ರೂಮ್ ನಲ್ಲಿ ಹಿಂದೂ ಯುವತಿ ಶವ ಪತ್ತೆ; ಮುಸ್ಲಿಂ ಯುವಕ ಎಸ್ಕೇಪ್‌

Continue Reading

ಪ್ರಮುಖ ಸುದ್ದಿ

Prajwal Revanna Case: ಏರ್‌ಪೋರ್ಟ್‌ನಲ್ಲೇ ಎಸ್‌ಐಟಿ ಠಿಕಾಣಿ, ನಾಳೆ ಮಧ್ಯರಾತ್ರಿಯೇ ಪ್ರಜ್ವಲ್‌ ರೇವಣ್ಣ ವಶಕ್ಕೆ

Prajwal Revanna Case: ಶುಕ್ರವಾರ ಬೆಳಗ್ಗೆ 10.30ಕ್ಕೆ ಎಸ್‌ಐಟಿ ಮುಂದೆ ಬರುವುದಾಗಿ ಪ್ರಜ್ವಲ್ ವಿಡಿಯೋದಲ್ಲಿ ಹೇಳಿಕೆ ನೀಡಿದ್ದಾರೆ. ಆದರೆ ಅಷ್ಟರವರೆಗೂ ಕಾಯಲು ಎಸ್‌ಐಟಿ ಸಿದ್ದವಾಗಿಲ್ಲ. ಯಾಕೆಂದರೆ ಬರುವುದಾಗಿ ತಿಳಿಸಿ ಪ್ರಜ್ವಲ್‌ ದೇಶದೊಳಗೇ ತಲೆ ಮರೆಸಿಕೊಳ್ಳಬಹುದು ಎಂಬ ಆತಂಕವೂ ಇದೆ.

VISTARANEWS.COM


on

Prajwal Revanna case
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ (Hassan MP ‌Prajwal Revanna Case) ಭಾರತಕ್ಕೆ ಬರುತ್ತಿದ್ದಂತೆ ವಶಕ್ಕೆ ಪಡೆಯಲು ಸಿದ್ಧತೆ ನಡೆಸಿಕೊಂಡಿರುವ ಎಸ್‌ಐಟಿ (SIT) ತಂಡ, ಏರ್‌ಪೋರ್ಟ್‌ನಲ್ಲಿಯೇ (Kempegowda International Airport – KIA) ಸದ್ಯ ಠಿಕಾಣಿ ಹಾಕಿದೆ.

ಶುಕ್ರವಾರ ಬೆಳಗ್ಗೆ 10.30ಕ್ಕೆ ಎಸ್‌ಐಟಿ ಮುಂದೆ ಬರುವುದಾಗಿ ಪ್ರಜ್ವಲ್ ವಿಡಿಯೋದಲ್ಲಿ ಹೇಳಿಕೆ ನೀಡಿದ್ದಾರೆ. ಆದರೆ ಅಷ್ಟರವರೆಗೂ ಕಾಯಲು ಎಸ್‌ಐಟಿ ಸಿದ್ದವಾಗಿಲ್ಲ. ಯಾಕೆಂದರೆ ಬರುವುದಾಗಿ ತಿಳಿಸಿ ಪ್ರಜ್ವಲ್‌ ದೇಶದೊಳಗೇ ತಲೆ ಮರೆಸಿಕೊಳ್ಳಬಹುದು ಎಂಬ ಆತಂಕವೂ ಇದೆ. ಹೀಗಾಗಿ ಅದಕ್ಕೂ ಮುನ್ನವೇ, ಅಂದರೆ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಲೇ ಆರೆಸ್ಟ್‌ ಮಾಡಲು ಎಸ್‌ಐಟಿ ಸಜ್ಜಾಗಿದೆ.

ನಾಳೆ ರಾತ್ರಿ 12.35ಕ್ಕೆ ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್-2ಗೆ ಜರ್ಮನಿಯಿಂದ ಬರಲಿರುವ ಲುಫ್ತಾನ್ಸಾ ವಿಮಾನದಲ್ಲಿ ಪ್ರಜ್ವಲ್‌ ಲ್ಯಾಂಡ್ ಆಗಲಿದ್ದಾರೆ ಎಂದು ಗೊತ್ತಾಗಿದೆ. ವಿಮಾನದಿಂದ ಇಳಿದ ಬಳಿಕ ಪ್ರಜ್ವಲ್‌ ಇಮಿಗ್ರೇಷನ್‌‌‌‌‌ ಡೆಸ್ಕ್‌‌ಗೆ ಬರಬೇಕು. ಪಾಸ್‌ಪೋರ್ಟ್‌ಗೆ ಸ್ಟಾಂಪ್‌‌‌ ಹಾಕಿಸಬೇಕು. ಈಗ ಲುಕೌಟ್‌ ನೋಟೀಸ್‌ ಇರುವುದರಿಂದ ಇಮಿಗ್ರೇಶನ್‌ ಅಧಿಕಾರಿಗಳು ಪ್ರಜ್ವಲ್‌ ಅವರನ್ನು ವಶಕ್ಕೆ ಪಡೆಯಲಿದ್ದಾರೆ. ಏರ್‌‌ಪೋರ್ಟ್‌ ಅಧಿಕಾರಿಗಳಿಂದ SITಗೆ ಪ್ರಜ್ವಲ್ ಹಸ್ತಾಂತರ ನಡೆಯಲಿದೆ.

ಲುಫ್ತಾನ್ಸಾ ಏರ್‌ಲೈನ್ಸ್‌ನಲ್ಲಿ ಪ್ರಜ್ವಲ್‌ ಟಿಕೆಟ್ ಕಾಯ್ದಿರಿಸಿರುವುದರಿಂದ ಅಲರ್ಟ್ ಆಗಿರುವ ಎಸ್ಐಟಿ ತಂಡ, ಏರ್‌ಪೋರ್ಟ್‌ನಲ್ಲಿಯೇ ಠಿಕಾಣಿ ಹೂಡಿದೆ. ಎರಡು ಮೂರು ಬಾರಿ ಪ್ರಜ್ವಲ್‌ ಟಿಕೆಟ್ ಬುಕ್ ಮಾಡಿ‌ ಕೊನೆ ಗಳಿಗೆಯಲ್ಲಿ ಕ್ಯಾನ್ಸಲ್ ಮಾಡಿಕೊಂಡಿದ್ದರು. ಹಾಗಾಗಿ ಎಸ್ಐಟಿ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಏರ್ಪೋರ್ಟ್‌ನಲ್ಲಿ ಬೀಡು ಬಿಟ್ಟಿದ್ದಾರೆ. 31ರಂದು ಬರುದಾಗಿ ಹೇಳಿ ಒಂದು ದಿನ ಮುಂಚಿತವಾಗಿಯೇ ಬಂದ್ರೆ ಕಷ್ಟ ಎಂದು ಏರ್ಪೋರ್ಟ್‌ನಲ್ಲಿ ಎರಡೆರಡು ತಂಡಗಳು ಕಾಯುತ್ತಿವೆ.

ಬಂದ ಬಳಿಕ ಏನೇನು?

ಪ್ರಜ್ವಲ್ ರೇವಣ್ಣನನ್ನು ವಶಕ್ಕೆ ಪಡೆದ ಬಳಿಕ ಮೆಡಿಕಲ್ ಟೆಸ್ಟ್‌ ಮತ್ತಿತರ ಅಗತ್ಯ ವಿಧಿವಿಧಾನಗಳು ನಡೆಯಲಿವೆ. ನಂತರ ತನಿಖೆ ನಡೆಸಲು ಎಸ್ಐಟಿ ತಯಾರಿ ಮಾಡಿಕೊಳ್ಳುತ್ತಿದೆ. ಎರಡು ಕೋನಗಳಲ್ಲಿ ಪ್ರಜ್ವಲ್ ರೇವಣ್ಣರನ್ನು ವಿಚಾರಣೆ ಮಾಡಲು ಸಿದ್ಧತೆ ನಡೆಸಲಾಗಿದೆ. ತನಿಖೆ ವೇಳೆ ಪ್ರಜ್ವಲ್ ರೇವಣ್ಣ ಎರಡು ತರಹದ ಪ್ರತಿಕ್ರಿಯೆ ನೀಡುವ ಸಾಧ್ಯತೆಯಿದ್ದು, ತಪ್ಪು ಒಪ್ಪಿಕೊಳ್ಳಬಹುದು ಅಥವಾ ತಾನು ಮಾಡಿಯೇ ಇಲ್ಲ ಅನ್ನಬಹುದು. ಈ ಎರಡೂ ಆಯಾಮಗಳಲ್ಲೂ ಎಸ್‌ಐಟಿ ತನಿಖೆ ಮಾಡಬೇಕಿದೆ.

ಪ್ರಜ್ವಲ್ ರೇವಣ್ಣ ತಪ್ಪು ಒಪ್ಪಿಕೊಂಡರೆ ಎಸ್‌ಐಟಿ ಕೆಲಸ ಸರಾಗವಾಗಲಿದೆ. ಆರೋಪಿತನ ಹೇಳಿಕೆ ದಾಖಲಿಸಿಕೊಂಡು ಸ್ಥಳ ಮಹಜರು ಮಾಡಲಾಗುತ್ತದೆ. ಎಲ್ಲೆಲ್ಲಿ ಕೃತ್ಯ ಎಸಗಲಾಗಿದೆ ಎಂದು ಸಂತ್ರಸ್ತೆ ನೀಡಿರುವ ಹೇಳಿಕೆ ಆಧಾರದಲ್ಲಿ ಕರೆದೊಯ್ದು ಸ್ಥಳ ಮಹಜರು ಮಾಡುತ್ತಾರೆ. ಎಂಪಿ ಗೆಸ್ಟ್ ಹೌಸ್, ಹೊಳೆನರಸೀಪುರದ ಫಾರ್ಮ್ ಹೌಸ್ ಸೇರಿ ಹಲವೆಡೆ ಪರಿಶೀಲನೆ ನಡೆಸಲಿದ್ದಾರೆ.

ಪ್ರಜ್ವಲ್‌ ತಮ್ಮ ಮೇಲಿರುವ ಆರೋಪ ತಳ್ಳಿ ಹಾಕಿದರೆ ಸಂತ್ರಸ್ತೆ ಹೇಳಿಕೆ ಪ್ರಾಮುಖ್ಯತೆ ಪಡೆಯಲಿದೆ. ಆಕೆಯ ಹೇಳಿಕೆ ಆಧಾರದ ಮೇಲೆ ಚಾರ್ಜ್ ಶೀಟ್ ಸಲ್ಲಿಕೆ ನಡೆಯುತ್ತದೆ. ಈಗಾಗಲೇ ಸಂತ್ರಸ್ತೆ ಹೇಳಿಕೆ ದಾಖಲಿಸಿರುವ ಎಸ್ಐಟಿ, ಜೊತೆಗೆ ಸ್ಥಳ ಮಹಜರು ನಡೆಸಿ ಒಂದಷ್ಟು ಸಾಕ್ಷ್ಯಗಳನ್ನು ಕಲೆಹಾಕಿದೆ. ಇದರ ಜೊತೆಗೆ ಆರೋಪಿ ಹೇಳಿಕೆಯನ್ನೂ ದಾಖಲಿಸಿಕೊಂಡು ಚಾರ್ಜ್ ಶೀಟ್ ಸಲ್ಲಿಸಲಾಗುತ್ತದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಮನೆಯಿಂದ ಹಾಸಿಗೆ, ಹೊದಿಕೆ ಕೊಂಡೊಯ್ದ ಎಸ್‌ಐಟಿ; ಏನ್‌ ಸಿಗ್ತು?

Continue Reading
Advertisement
Viral News
ವೈರಲ್ ನ್ಯೂಸ್14 mins ago

Viral News: ರೈಲಿಯಲ್ಲಿ ಅಶ್ಲೀಲವಾಗಿ ಮೈ ಕುಣಿಸಿದ ಮಹಿಳೆ; ರೀಲ್ಸ್ ಮಾಡುವವರ ಕಾಟವಿಲ್ಲದ ಪ್ರಯಾಣ ಅಸಾಧ್ಯ ಎಂದ ನೆಟ್ಟಿಗರು

Rahul Gandhi
ದೇಶ16 mins ago

Rahul Gandhi: ನೋಡ ನೋಡ್ತಿದ್ದಂತೆ ತಲೆ ಮೇಲೆ ನೀರು ಸುರಿದುಕೊಂಡ ರಾಹುಲ್‌ ಗಾಂಧಿ! ವಿಡಿಯೋ ಇದೆ

dk shivakumar jagdeep dhankar
ಪ್ರಮುಖ ಸುದ್ದಿ19 mins ago

DK Shivakumar: ಕುತೂಹಲ ಕೆರಳಿಸಿದ ಡಿಕೆಶಿ- ಉಪರಾಷ್ಟ್ರಪತಿ ಭೇಟಿ; ʼಬಿಜೆಪಿಗೆ ಸೇರ್ತೀರಾʼ ಎಂದ ನೆಟ್ಟಿಗರು!

Pushpa 2 SOOSEKI Couple Song Lyrical Video out
ಟಾಲಿವುಡ್21 mins ago

Pushpa 2: ʼಪುಷ್ಪ 2ʼ ಸಿನಿಮಾದ ಎರಡನೇ ಹಾಡು ರಿಲೀಸ್‌: ಅಲ್ಲು ಜತೆ ಹೆಜ್ಜೆ ಹಾಕಿದ ರಶ್ಮಿಕಾ!

UPI Safety Tips
ವಾಣಿಜ್ಯ21 mins ago

UPI Safety Tips: ಈ ಟಿಪ್ಸ್ ಪಾಲಿಸಿ, ಮೊಬೈಲ್ ನಿಂದ ಹಣ ಪಾವತಿಸುವಾಗ ಆಗುವ ವಂಚನೆಯಿಂದ ಪಾರಾಗಿ

Shakhahaari Movie 1 cr minutes of streaming amazon prime
ಸ್ಯಾಂಡಲ್ ವುಡ್44 mins ago

Shakhahaari Movie: ಪ್ರೇಕ್ಷಕರನ್ನು ಆವರಿಸಿದ ‘ಶಾಖಾಹಾರಿ’: ಪರಭಾಷಿಕರಿಂದಲೂ ಚಿತ್ರಕ್ಕೆ ಮೆಚ್ಚುಗೆ!

Arvind Kejriwal
ದೇಶ44 mins ago

Arvind Kejriwal: ಜಾಮೀನು ಅವಧಿ ವಿಸ್ತರಣೆಗೆ ಕೋರಿ ಅರ್ಜಿ; ಸುಪ್ರೀಂನಲ್ಲಿ ಕೇಜ್ರಿವಾಲ್‌ಗೆ ಭಾರೀ ಹಿನ್ನಡೆ-ಮತ್ತೆ ಜೈಲು ಫಿಕ್ಸ್‌!

Crime News
ಕ್ರೈಂ1 hour ago

Crime News: ಶಾಕಿಂಗ್‌: ಕುಟುಂಬದ 7 ಮಂದಿಯನ್ನು ಕೊಚ್ಚಿ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ; ಕಾರಣ ನಿಗೂಢ

belluru assault case
ಕ್ರೈಂ1 hour ago

Assault Case: ಬೆಳ್ಳೂರು ಹಿಂದೂ ಯುವಕನ ಮೇಲೆ ಹಲ್ಲೆ; ದೂರು ಸ್ವೀಕರಿಸದ ಪಿಎಸ್‌ಐ ಸಸ್ಪೆಂಡ್‌

Shilpa Shetty Visiting Nanjundeshwara Temple
ಸಿನಿಮಾ1 hour ago

Shilpa Shetty: ಮೈಸೂರಿನ ನಂಜುಂಡೇಶ್ವರನ ಸನ್ನಿಧಿಯಲ್ಲಿ ನಟಿ ಶಿಲ್ಪಾ ಶೆಟ್ಟಿ ಧ್ಯಾನ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ17 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 day ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌