Site icon Vistara News

Wife murdered | ಪತ್ನಿಯನ್ನು ಕೊಂದು ಗೋಣಿ ಚೀಲದಲ್ಲಿ ತುಂಬಿಸಿಟ್ಟು ಪರಾರಿಯಾದ ಗಂಡ!

sullia murder

ಸುಳ್ಯ: ಸುಳ್ಯ ಬೀರಮಂಗಲದ ಬಾಡಿಗೆ ಮನೆಯೊಂದರಲ್ಲಿ ಯುವತಿಯ ಮೃತದೇಹ ಗೋಣಿ ಚೀಲದಲ್ಲಿ ತುಂಬಿಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುಳ್ಯದ ಹೊಟೆಲೊಂದರಲ್ಲಿ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಲದ ಮೂಲದ ಇಮ್ರಾನ್ ಎಂಬಾತ ಕಳೆದ ಕೆಲವು ತಿಂಗಳಿನಿಂದ ಈ ಮನೆಯಲ್ಲಿ ವಾಸವಾಗಿದ್ದ. ಆತ ತನ್ನ ಪತ್ನಿಯನ್ನು ಕೊಂದು (wife murdered) ಗೋಣಿ ಚೀಲದಲ್ಲಿ ತುಂಬಿಸಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಇಮ್ರಾನ್ ಎರಡು ದಿನದ ಹಿಂದೆ ಊರಿಗೆ ತೆರಳುತ್ತೇನೆ ಎಂದು ಹೊಟೇಲ್ ನವರಲ್ಲಿ ಹೇಳಿ ಊರಿಗೆ ತೆರಳಿದ್ದ ಎಂದು ಹೇಳಲಾಗಿದೆ.

ಮಂಗಳವಾರ ಮನೆ ಸಮೀಪದ ರೂಮ್‌ನವರಿಗೆ ಏನೋ ಸಂಶಯ ಶುರುವಾಯಿತು. ಅವರು ಹೊಟೇಲ್ ಮಾಲೀಕರಿಗೆ ತಿಳಿಸಿ ಹೊಟೇಲ್ ಮಾಲಕರು ಪೊಲೀಸರಿಗೆ ವಿಷಯ ತಿಳಿಸಿದರು. ಪೊಲೀಸರು ಮಂಗಳವಾರ ಸಂಜೆ ಬಾಡಿಗೆ ಮನೆಗೆ ಬಂದು ಬಾಗಿಲು ಒಡೆದು ಪರಿಶೀಲಿಸಿದಾಗ ಮನೆಯೊಳಗೆ ಗೋಣಿ ಚೀಲದಲ್ಲಿ ತುಂಬಿಟ್ಟ ಮೃತದೇಹ ಪತ್ತೆಯಾಗಿದೆ.

ಸುಳ್ಯ ಪೋಲಿಸರು ಸ್ಥಳ ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ. ಡಿವೈಎಸ್‌ಪಿ ವೀರಯ್ಯ ಹಿರೇಮಠ್, ಸುಳ್ಯ ವೃತ್ತ ನಿರೀಕ್ಷಕ ನವೀನ್‌ಚಂದ್ರ ಜೋಗಿ, ಎಸ್ಐ ದಿಲೀಪ್ ಜಿ.ಆರ್ ಮತ್ತಿತರರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಬೆರಳಚ್ಚು ತಜ್ಞರು, ಫೊರೆನ್ಸಿಕ್ ತಜ್ಞರು ಸ್ಥಳಕ್ಕೆ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ. ಆರೋಪಿ ಇಮ್ರಾನ್‌ಗಾಗಿ ಪೊಲೀಸರು ಶೋಧ ಮಾಡಲಿದ್ದಾರೆ.

ಇದನ್ನೂ ಓದಿ | Murder Case | ಸ್ನೇಹಿತನನ್ನೇ ಕೊಲೆ ಮಾಡಿ, ಮೃತದೇಹದೊಂದಿಗೆ ಪೊಲೀಸ್‌ ಠಾಣೆಗೆ ಬಂದ!

Exit mobile version