ಶಿರಸಿ: ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ವಿಚಾರಣೆಗೊಳಪಟ್ಟಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ (Sirsi News) ಸಿದ್ದಾಪುರ ತಾಲೂಕಿನ ನೆಲೆಮಾವು ಗ್ರಾಮದ ಗಣಪತಿ ಭಟ್ ಮೃತರು.
ಇತ್ತೀಚೆಗೆ ರಾಜ್ಯದಾದ್ಯಂತ ಸದ್ದು ಮಾಡಿದ್ದ ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಸಿದ್ದಾಪುರ ತಾಲೂಕಿನ ನೆಲೆಮಾವು ಸೇವಾ ಸಹಕಾರಿ ಸಂಘದ ಅಧ್ಯಕ್ಷ ಗಣಪತಿ ಭಟ್ ಅವರನ್ನು ವಿಚಾರಣೆಗೆ ಕರೆದೊಯ್ಯಲಾಗಿತ್ತು. ವಿಚಾರಣೆ ಬಳಿಕ ಮತ್ತೆ ಸಿದ್ದಾಪುರಕ್ಕೆ ಆಗಮಿಸಿದ್ದರು. ಶುಕ್ರವಾರ ಇವರು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸಿದ್ದಾಪುರ ಪೊಲೀಸರು ಸ್ಥಳ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ | Murder Case: ದೈವದ ಮುಂದೆ ಪಾಂಗಾಳ ಉದ್ಯಮಿ ಶರತ್ ಶೆಟ್ಟಿ ಕೊಲೆ ಕೇಸ್; ಪಾತಾಳದಲ್ಲಿ ಅಡಗಿದ್ದರೂ ಬಿಡಲ್ಲವೆಂದು ಅಭಯ
ಕಚೇರಿಯಲ್ಲೇ ನೇಣು ಬಿಗಿದುಕೊಂಡು ನೌಕರ ಆತ್ಮಹತ್ಯೆ
ಕಾರವಾರ: ಕಚೇರಿಯಲ್ಲೇ ನೌಕರರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ನಗರದ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಕಚೇರಿಯಲ್ಲಿ ಘಟನೆ ನಡೆದಿದ್ದು, ಸತೀಶ ನಾಯ್ಕ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ.
ಮೃತರು ನಗರದ ಕೇಶವ ನಾಯ್ಕ ವಾಡಾದ ನಿವಾಸಿಯಾಗಿದ್ದು, ಕಚೇರಿಯಲ್ಲಿ ಹೊರ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಶುಕ್ರವಾರ ಬೆಳಗ್ಗೆ ಎಂದಿನಂತೆ ಕಚೇರಿಗೆ ಬಂದವರು ಅಲ್ಲಿದ್ದ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ | Viral News : ಸುಳ್ಳು ಅತ್ಯಾಚಾರ ಆರೋಪ ಹೊರಿಸಿ ಹಣ ವಸೂಲಿ ಮಾಡಿದ ಮಹಿಳೆ!
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಈ ಬಗ್ಗೆ ಕಾರವಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.
ಕೈಗೆ ಬ್ಲೇಡ್‌ನಿಂದ ಕೊಯ್ದುಕೊಂಡ ಸಿದ್ದರಾಮಯ್ಯ ಅಭಿಮಾನಿ
ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಾದಾಮಿಯಿಂದಲೇ ಸ್ಪರ್ದಿಸಬೇಕು ಎಂದು ಒತ್ತಾಯಿಸಿ ಅಭಿಮಾನಿಯೊಬ್ಬ ಬ್ಲೇಡ್‌ನಿಂದ ಕೈಗೆ ಕೊಯ್ದುಕೊಂಡಿರುವುದು ಕಾರ್ಯಕ್ರಮವೊದಂದರಲ್ಲಿ ನಡೆದಿದೆ. ಸಿದ್ದರಾಮಯ್ಯ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆ ಮುಂದೆ ಅಭಿಮಾನಿ ಬ್ಲೇಡ್‌ನಿಂದ ಕೊಯ್ದುಕೊಂಡಿದ್ದಾನೆ.
ತಮಿನಾಳ ಗ್ರಾಮದ ಬಸವರಾಜ ಚಂದಪ್ಪ ಬಸರಿ ಎಂಬಾತ ಗಾಯಾಳುವಾಗಿದ್ದಾನೆ. ಸಿದ್ದರಾಮಯ್ಯ ಭಾಷಣದ ವೇಳೆ ಕೈ ಮೇಲೆ ಮೂರು ಕಡೆ ಅಭಿಮಾನಿ ಕೊಯ್ದುಕೊಂಡಿದ್ದಾನೆ. ಈ ವೇಳೆ ಪೊಲೀಸರು ಧಾವಿಸಿ ಅತನನ್ನು ಬಾದಾಮಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ವೈದ್ಯರು ಗಾಯಾಳು ಕೈಗೆ ಹೊಲಿಗೆ ಹಾಕಿ ಕಳುಹಿಸಿದ್ದಾರೆ.
ಬಾದಾಮಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತನಾಡುವಾಗ, ಜನರು ಬಾದಾಮಿಯಿಂದಲೇ ಸಿದ್ದರಾಮಯ್ಯ ಸ್ಪರ್ಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಈ ವೇಳೆ ಅಭಿಮಾನಿ ಬಸವರಾಜ ಚಂದಪ್ಪ ಬಸರಿ ಕೈ ಕೊಯ್ದುಕೊಂಡಿದ್ದಾನೆ.