ಮಂಡ್ಯ: ಪಕ್ಷ ಸೂಚಿಸಿದರೆ ನಾಗಮಂಗಲ ಕ್ಷೇತ್ರದಿಂದಲೇ ವಿಧಾನಸಭೆಗೆ ಸ್ಪರ್ಧೆ ಮಾಡುವುದಾಗಿ, ಜೆಡಿಎಸ್ ತೊರೆದು ಇತ್ತೀಚಿಗಷ್ಟೇ ಬಿಜೆಪಿ ಸೇರ್ಪಡೆಯಾದ ಮಾಜಿ ಐಆರ್‌ಎಸ್ ಅಧಿಕಾರಿ ಡಾ. ಲಕ್ಷ್ಮಿ ಅಶ್ವಿನ್ ಗೌಡ ಗುರುವಾರ ಹೇಳಿಕೆ ನೀಡಿದ್ದಾರೆ.
ನಾಗಮಂಗಲದಲ್ಲಿ ದಕ್ಷಿಣ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮೈ.ವಿ. ರವಿಶಂಕರ್ ಪರ ಮತಯಾಚನೆಯಲ್ಲಿ ಪಾಲ್ಗೊಂಡ ಲಕ್ಷ್ಮಿ, ಗೌಡ, ಜೆಡಿಎಸ್ ಬಗ್ಗೆ ಮಾತನಾಡುವುದಕ್ಕಿಂತ ಈಗ ನಾನಿರುವ ಪಕ್ಷಕ್ಕೆ ನನ್ನ ಕೊಡುಗೆ ನೀಡಲು ಗಮನಹರಿಸಿದ್ದೇನೆ. ಬಿಜೆಪಿಗೆ ಸಾಮಾನ್ಯ ಕಾರ್ಯಕರ್ತೆಯಾಗಿ ಸೇರಿದ್ದೇನೆ. ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಪಕ್ಷದ ಸಂಘಟನೆಗೆ ಹೆಚ್ಚು ತೊಡಗಿಸಿಕೊಂಡಿದ್ದೇನೆ. ಸದ್ಯಕ್ಕೆ ನಾನು ಯಾವುದೇ ಕ್ಷೇತ್ರ ಆಯ್ಕೆ ಮಾಡಿಕೊಂಡಿಲ್ಲ. ಪಕ್ಷ ನೀಡಿರುವ ಜವಾಬ್ದಾರಿ ನಿಭಾಯಿಸುತ್ತಿದ್ದೇನೆ. ಯಾವುದೇ ಆಕಾಂಕ್ಷೆ, ಷರತ್ತಿನೊಂದಿಗೆ ಬಿಜೆಪಿ ಸೇರಿಲ್ಲ. ಸಾಮಾನ್ಯ ಕಾರ್ಯಕರ್ತಳಾಗಿ ಪಕ್ಷ ಸಂಘಟನೆಗೆ ಶ್ರಮಿಸುವೆ ಎಂದರು. ಮತ್ತು ಪಕ್ಷಕ್ಕಾಗಿ ದುಡಿಯುವ ಪ್ರಾಮಾಣಿಕ ಕಾರ್ಯಕರ್ತರನ್ನು ಗುರುತಿಸುವ ಪಕ್ಷ ಬಿಜೆಪಿ ಮಾತ್ರ ಎಂದರು.
ಇದನ್ನೂ ಓದಿ | JDSಗೆ ಟಕ್ಕರ್ ನೀಡಲು ಮುಂದಾದ ಲಕ್ಷ್ಮೀ ಅಶ್ವಿನ್‌ಗೌಡ: ಇಂದು BJP ಸೇರ್ಪಡೆ
ಕಳೆದ ಲೋಕಸಭೆ ಚುನಾವಣೆ ವೇಳೆ ಮಂಡ್ಯ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಆಸಕ್ತಿ ಹೊಂದಿದ್ದರು. ಜೆಡಿಎಸ್‌ನಿಂದ ಟಿಕೆಟ್ ಸಿಗಬಹುದು ಎಂಬ ನಿರೀಕ್ಷೆಯಲ್ಲೆ, ಇನ್ನೂ ಅನೇಕ ವರ್ಷಗಳ ಸೇವೆಯಿದ್ದರೂ ನಿವೃತ್ತಿ ಪಡೆದು ಬಂದಿದ್ದರು. ಈ ಹಿಂದೆ ಜೆಡಿಎಸ್ ಪರ ಪ್ರಬಲವಾಗಿ ಪ್ರಚಾರ ಕೈಗೊಂಡು ಎರಡು ಬಾರಿಯೂ ಟಿಕೆಟ್ ಸಿಗದೆ ನಿರಾಸೆಗೊಳಗಾಗಿದ್ದರು. ಮಂಡ್ಯ ಲೋಕಸಭೆ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಅವರಿಗೆ ಟಿಕೆಟ್ ನೀಡಲಾಯಿತು.
ಇದನ್ನೂ ಓದಿ | ಜೆಡಿಎಸ್ ಪಕ್ಷವು ಬಿಜೆಪಿಯ ಬಿ ಟೀಂ ಅಲ್ಲ ಎಂದ ಎಚ್.ಡಿ. ಕುಮಾರಸ್ವಾಮಿ