Site icon Vistara News

ಸಿದ್ದರಾಮಯ್ಯ ವಿರುದ್ಧ ಚುನಾವಣಾ ನೀತಿ ಸಂಹಿತೆ ದೂರು ದಾಖಲು

ಚುನಾವಣಾ ನೀತಿ ಸಂಹಿತೆ

ಮಂಡ್ಯ: ಮಂಡ್ಯದಲ್ಲಿ ಈಗ ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಯುದ್ಧ ನಡೆಯುತ್ತಿದೆ. ಈ ಹಿಂದೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್‌. ಅಶ್ವತ್ಥನಾರಾಯಣ ವಿರುದ್ಧ  ಚುನಾವಣಾಧಿಕಾರಿಗೆ ಮಂಡ್ಯ ಜಿಲ್ಲಾ ಕಾಂಗ್ರೆಸ್ ದೂರು ದಾಖಲಿಸಿತ್ತು. ಇದೀಗ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ.ನಾ. ಸುರೇಶರಿಂದ ವಿಧಾನಸಭೆ ಪ್ರತಿಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಚುನಾವಣಾ ನೀತಿ ಸಂಹಿತೆ ದೂರು ದಾಖಲು ಮಾಡಲಾಗಿದೆ.

ಪದವೀಧರರ ಕ್ಷೇತ್ರದ ಚುನಾವಣಾಧಿಕಾರಿಗೆ ದೂರು ಸಲ್ಲಿಕೆ ಮಾಡಿದ್ದು, ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್, ಪಕ್ಷದ ಮುಖಂಡ ದೂರಿನ ಪ್ರತಿಯನ್ನು ಸುದ್ದಿಗೋಷ್ಠಿಯಲ್ಲಿ ಬಿಡುಗಡೆಗೊಳಿಸಿದ್ದಾರೆ. ದೂರಿನ ಮೇರೆಗೆ ಪ್ರಕರಣ ದಾಖಲಿಸಲು ಮೀನಾಮೇಷ ಎಣಿಸುತ್ತಿರುವ ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ | ಸಚಿವ ಅಶ್ವತ್ಥ್ ನಾರಾಯಣ್‌ರಿಂದ ನೀತಿ ಸಂಹಿತೆ ಉಲ್ಲಂಘನೆ: ಮಂಡ್ಯ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಿದ ಜಿ.ಪಂ ಸಿಇಒ

ಮೇ 12ರಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಮೇ 24ರಂದು ಮಂಡ್ಯಕ್ಕೆ ಸರ್ಕಾರಿ ಕಾರಿನಲ್ಲಿ ಬಂದು, ಚಂದ್ರದರ್ಶನ ಕಲ್ಯಾಣ ಮಂಟಪದಲ್ಲಿ ನಡೆದಿದ್ದ ಕಾಂಗ್ರೆಸ್‌ ಪ್ರಚಾರ ಸಭೆಸಭೆಯಲ್ಲಿ ಸಿದ್ದರಾಮಯ್ಯ ಭಾಗಿಯಾಗಿದ್ದರು. KA 01 GA-7002  ಸರ್ಕಾರಿ ವಾಹನಗಳನ್ನು ಬಳಸಿ ದುರುಪಯೋಗ ಮಾಡಿದ್ದಾರೆ . ಈ ಕುರಿತು ಕ್ರಮ ಕೈಗಒಳ್ಳಬೇಕೆಂದು ದೂರಿನಲ್ಲಿ ಆಗ್ರಹಿಸಿದರು.

ಈ ಹಿಂದೆ ಮೇ 16ರಂದು ಮಂಡ್ಯದ ಮಿಮ್ಸ್ ಮಹಿಳಾ ಸರ್ಕಾರಿ ಕಾಲೇಜಿಗೆ ಸಚಿವ ಡಾ. ಅಶ್ವತ್ಥನಾರಾಯಣ ಭೇಟಿ ಕೊಟ್ಟಿದ್ದರು. ಈ ಕುರಿತು ಚುನಾವಣಾ ಆಯೋಗಕ್ಕೆ ಸಚಿವರ ವಿರುದ್ಧ ಮಂಡ್ಯ ಜಿಲ್ಲಾ ಕಾಂಗ್ರೆಸ್ ವತಿಯಿಂದ ದೂರು ದಾಖಲಿಸಲಾಗಿತ್ತು. ಖಾಸಗಿ ಕಾಲೇಜು ಆಡಳಿತ ಮಂಡಳಿ ಸಭೆ ಆಯೋಜನೆ ಮಾಡಿತ್ತು, ಆದರೆ ಸಚಿವರಿಂದ ಆಡಳಿತ ದುರುಪಯೋಗವಾಗಿದೆ. ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂಬ ಆರೋಪ ಕೇಳಿಬಂದಿತ್ತು.

ಉನ್ನತ ಶಿಕ್ಷಣ ಸಚಿವರಾದ ಡಾ. ಅಶ್ವತ್ಥನಾರಾಯಣ ಅವರ ಕಚೇರಿಯಿಂದ ಮೇ 5ರಂದು ಹೊರಡಿಸಲಾದ ತಾತ್ಕಾಲಿಕ ಪ್ರವಾಸ ಕಾರ್ಯಕ್ರಮ ಪಟ್ಟಿಯಲ್ಲಿ ಚುನಾವಣೆ ಸಂಬಂಧಿತ ಕಾರ್ಯಕ್ರಮಗಳನ್ನು ಸೇರ್ಪಡೆ ಮಾಡಿರುವುದು ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಚುನಾವಣೆ ಪ್ರಚಾರ ಮಾಡಿರುವುದು ತಿಳಿದು ಬಂದಿತ್ತು.

ಇದನ್ನೂ ಓದಿ | ಸಚಿವ ಅಶ್ವತ್ಥನಾರಾಯಣ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು, ನೋಟಿಸ್‌

Exit mobile version