Dr. CN Manjunath : ಲೋಕಸಭೆ ಸ್ಪರ್ಧೆಗೆ ನಿರ್ಧಾರ ಮಾಡಿಲ್ಲ, ಆಲೋಚನೆಯಲ್ಲಿದ್ದೇನೆ ಎಂದ ಡಾ. ಮಂಜುನಾಥ್‌ - Vistara News

ಮಂಡ್ಯ

Dr. CN Manjunath : ಲೋಕಸಭೆ ಸ್ಪರ್ಧೆಗೆ ನಿರ್ಧಾರ ಮಾಡಿಲ್ಲ, ಆಲೋಚನೆಯಲ್ಲಿದ್ದೇನೆ ಎಂದ ಡಾ. ಮಂಜುನಾಥ್‌

Dr. CN Manjunath : ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಒತ್ತಡವಿದೆ. ಆದರೆ, ನಾನು ಇನ್ನೂ ನಿರ್ಧಾರ ಮಾಡಿಲ್ಲ ಎಂದು ಡಾ. ಸಿ.ಎನ್‌. ಮಂಜುನಾಥ್‌ ಹೇಳಿದ್ದಾರೆ. ತಾನು ಅದರ ಬಗ್ಗೆ ಆಲೋಚನೆಯಲ್ಲಿರುವ ಸುಳಿವು ನೀಡಿದ್ದಾರೆ.

VISTARANEWS.COM


on

Dr CN Manjunath Jayadeva
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಡ್ಯ: ಜಯದೇವ ಹೃದ್ರೋಗ ಆಸ್ಪತ್ರೆಯನ್ನು (Jayadeva Heart Hospital) ದೇಶದ ನಂಬರ್‌ ಸಂಸ್ಥೆಯಾಗಿ ರೂಪಿಸಿದ ಕೀರ್ತಿಯೊಂದಿಗೆ ನಿವೃತ್ತರಾಗಿರುವ ಡಾ. ಸಿ.ಎನ್‌. ಮಂಜುನಾಥ್‌ (Dr. CN Manjunath) ಅವರು ಲೋಕಸಭಾ ಚುನಾವಣೆಯಲ್ಲಿ (Parliament Elections 2024) ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಜೋರಾಗಿ ಹರಡುತ್ತಿದೆ. ಅವರು ಜೆಡಿಎಸ್‌-ಬಿಜೆಪಿ ಮೈತ್ರಿ ಕೂಟದ (BJP-JDS Coaliton) ಹುರಿಯಾಳಾಗಿ ಬೆಂಗಳೂರು ಗ್ರಾಮಾಂತರದಿಂದ ಸ್ಪರ್ಧಿಸುತ್ತಾರಂತೆ, ಮಂಡ್ಯದಿಂದ ಕಣಕ್ಕಿಳಿಯುತ್ತಾರಂತೆ ಎಂಬ ಸುದ್ದಿಗೆ ಇದೀಗ ಸ್ವತಃ ಅವರೇ ಸ್ಪಷ್ಟನೆ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧಾರ ಮಾಡಿಲ್ಲ, ಆಲೋಚನೆಯಲ್ಲಿ ಇದ್ದೇನೆ ಎಂದು ಅವರು ಹೇಳಿದ್ದಾರೆ.

ಮಂಡ್ಯದಲ್ಲಿ ನಡೆದ ಶ್ರೀ ಬಾಲಗಂಗಾಧರ ನಾಥ ಸ್ವಾಮೀಜಿಗಳ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ಬಳಿಕ ಮಾಧ್ಯಮಗಳ ಜತೆ ಮಾತನಾಡಿ, ಜನರು ನನ್ನ ಲೋಕಸಭಾ ಚುನಾವಣೆ ಸ್ಪರ್ಧೆ ಬಗ್ಗೆ ಮಾತಾಡುತ್ತಾ ಇದ್ದಾರೆ. ನಾನು ಇನ್ನೂ ಅದರ ಬಗ್ಗೆ ತೀರ್ಮಾನ ಮಾಡಿಲ್ಲ. ರಾಜಕೀಯಕ್ಕೆ ಬರಬೇಕಾ, ಲೋಕಸಭೆಗೆ ನಿಲ್ಲಬೇಕಾ ಎಂದು ನಿರ್ಧಾರ ಮಾಡಿಲ್ಲ ಎಂದು ಹೇಳಿದರು.

ʻʻಹಲವು ಕಡೆ ಜನರು ಒತ್ತಡ ಹಾಕುತ್ತಾ ಇದ್ದಾರೆ. ರಾಜ್ಯ ಮಟ್ಟದಲ್ಲಿ ಹೃದ್ರೋಗ ಚಿಕಿತ್ಸಾ ಕೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದ್ದೀರಾ. ಇದೇ ರೀತಿ ರಾಷ್ಟ್ರ ಮಟ್ಟದಲ್ಲೂ ಈ ರೀತಿಯ ಸುಧಾರಣೆ ಯಾಕೆ ತರಬಾರದು ಎಂದು ಹೇಳ್ತಾ ಇದ್ದಾರೆ. ಆದರೆ, ನಾನು ಇನ್ನೂ ನಿರ್ಧಾರ ಮಾಡಿಲ್ಲ. ಮುಂದೆ ಸ್ಪರ್ಧೆಯ ಬಗ್ಗೆ ತೀರ್ಮಾನ ಮಾಡಿದ್ರೆ ಹೇಳ್ತೀನಿʼʼ ಎಂದು ಅವರು ಹೇಳಿದರು.

ʻʻನಾನು ಈಗಲೂ ಆಲೋಚನೆಯಲ್ಲಿಯೇ ಇದ್ದೇನೆ. ಲೋಕಸಭೆ ಪ್ರವೇಶ ಕೇವಲ ರಾಜಕೀಯ ಮೂಲಕವೇ ಅಲ್ಲ. ಲೋಕಸಭೆನೇ ಬೇರೆ ರಾಜಕೀಯವೇ ಬೇರೆ ಎನ್ನುವುದು ನನ್ನ ಅರ್ಥ. ಸದ್ಯ ಆಲೋಚನೆಯಲ್ಲಿ ಇದ್ದೇನೆ. ಮುಂದೆ ಈ ಬಗ್ಗೆ ಸ್ಪಷ್ಟ ನಿಲುವು ಹೇಳ್ತೀನಿʼʼ ಎಂದು ಅವರು ನುಡಿದರು.

ʻʻಆರೋಗ್ಯ ಕ್ಷೇತ್ರದಲ್ಲಿ ಜನಸೇವೆ ಮಾಡಿದ್ದೀರಿ ರಾಷ್ಟ್ರ ಮಟ್ಟದಲ್ಲಿ ಜನಸೇವೆಗೆ ಅವಕಾಶವಿದೆ ಹೋಗಿ ಎನ್ನುತ್ತಿದ್ದಾರೆ. ಒಂದು ಜಿಲ್ಲೆಗೆ ಹೋದಾಗ ಆ ಜಿಲ್ಲೆಯವರು ಹೇಳ್ತಾರೆ. ನಾಳೆ ಮೈಸೂರಿಗೆ‌ ಹೋಗ್ತಾ ಇದೀನಿ. ಹೋದಲ್ಲಿ ಎಲ್ಲಾ ಅಲ್ಲಿ ನಿಲ್ಲುತ್ತೀರಾ ಅಂತಾರೆ ಜನರು. ನಾನು ರಾಜಕೀಯ ಕ್ಷೇತ್ರಕ್ಕೆ ಹೋಗಬೇಕಾ ಬೇಡ್ವಾ ಎನ್ನೋ ನಿರ್ಧಾರವೇ ಮಾಡಿಲ್ಲʼʼ ಎಂದು ಡಾ. ಮಂಜುನಾಥ್‌ ನುಡಿದರು.

ಇದನ್ನೂ ಓದಿ : CM Siddaramaiah : ಎಲ್ಲ ಸರ್ಕಾರಿ ಆಸ್ಪತ್ರೆಗಳು ಜಯದೇವದಂತೆ ಇರಲು ಯಾಕೆ ಸಾಧ್ಯವಿಲ್ಲ: ಸಿಎಂ ಪ್ರಶ್ನೆ

ಜಯದೇವ ಸಂಸ್ಥೆ ಬಗ್ಗೆ ತನಿಖೆ ಯಾಕೆ ಎಂಬ ಬಗ್ಗೆ ಗೊತ್ತಿಲ್ಲ

ಜಯದೇವ ಸಂಸ್ಥೆಯ ಬೇರೆ ಆಸ್ಪತ್ರೆಗಳಲ್ಲಿ ನಡೆದ ಕಾಮಗಾರಿಗಳ ಬಗ್ಗೆ ಸರ್ಕಾರದಿಂದ ತನಿಖೆಗೆ ಚಿಂತನೆ ನಡೆದಿದೆ ಎಂಬ ಸುದ್ದಿಗಳ ಬಗ್ಗೆ ಗಮನ ಸೆಳೆದಾಗ ಪ್ರತಿಕ್ರಿಯೆ ನೀಡಿದ ಮಂಜುನಾಥ್‌ ಅವರು, ಯಾವ ಕಾರಣಕ್ಕೆ ತನಿಖೆ ಮಾಡಬೇಕು ಎಂದುಕೊಂಡಿದ್ದಾರೋ ಗೊತ್ತಿಲ್ಲ ಎಂದರು.

ʻʻಜಯದೇವ ಸಂಸ್ಥೆಯನ್ನು ಇಡೀ ರಾಷ್ಟ್ರದಲ್ಲಿ ಮಾದರಿ ಸಂಸ್ಥೆಯಾಗಿ ಅಭಿವೃದ್ಧಿಗೊಳಿಸಿದ್ದೇವೆ. ಈ ಸರ್ಕಾರ ಹಾಗೂ ಹಿಂದಿನ ಸರ್ಕಾರ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈಗ ಯಾವ ಕಾರಣಕ್ಕೆ ತನಿಖೆ ಮಾಡಬೇಕು ಅಂದುಕೊಂಡಿದ್ದಾರೋ ಗೊತ್ತಿಲ್ಲʼʼ ಎಂದು ಹೇಳಿದರು.

ʻʻಕೇಂದ್ರ ಆರೋಗ್ಯ ಸ್ಥಾಯಿ ಸಮಿತಿ ನಮ್ಮ ಕೆಲಸ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದೆ. ಕಾರ್ಯವೈಖರಿ, ನಿರ್ವಹಣೆ ನೋಡಿ ಇದರ ಮಾಲೀಕರು ಯಾರು ಎಂದು ಕೇಳಿದ್ದರು. ನಿಜವೆಂದರೆ, ಸರ್ಕಾರಕ್ಕೆ ಇದು ಸಾಧನೆಯ ಶೋಕೇಸ್‌ ಸಂಸ್ಥೆಯಾಗಿದೆ. ಜಯದೇವ ರೀತಿ ಸರ್ಕಾರಿ ಸಂಸ್ಥೆಗಳನ್ನು ಯಾಕೆ ಅಭಿವೃದ್ಧಿ ಮಾಡಬಾರದು ಎಂದು ಸರ್ಕಾರವೇ ಕೇಳಿದೆʼʼ ಎಂದು ನೆನಪಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಂಡ್ಯ

Star Chandru: ಕೆ.ಆರ್.ನಗರ ತಾಲೂಕಿನ ವಿವಿಧೆಡೆ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್ ಚಂದ್ರು ಭರ್ಜರಿ ಪ್ರಚಾರ

Star Chandru: ಮಂಡ್ಯ ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಮಾರಗೌಡನಹಳ್ಳಿ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರು ಪೂಜೆ ಸಲ್ಲಿಸುವ ಮೂಲಕ ಚುನಾವಣಾ ಪ್ರಚಾರ ಆರಂಭಿಸಿದರು.

VISTARANEWS.COM


on

Star Chandru
Koo

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರು ಕೆ.ಆರ್.ನಗರ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ರೋಡ್ ಶೋ ಮೂಲಕ ಭರ್ಜರಿ ಪ್ರಚಾರ ನಡೆಸಿದರು. ಪ್ರಚಾರ ಆರಂಭಕ್ಕೂ ಮುನ್ನ ಮಾರಗೌಡನಹಳ್ಳಿ ಶ್ರೀ ಬಸವೇಶ್ವರ ದೇವಸ್ಥಾಕ್ಕೆ ತೆರಳಿ ಪೂಜೆ ಸಲ್ಲಿಸಿ ಚುನಾವಣಾ ಪ್ರಚಾರ ಆರಂಭಿಸಿದರು.

ಸ್ಟಾರ್ ಚಂದ್ರುಗೆ ಅತಿಹೆಚ್ಚು ಲೀಡ್ ಕೊಟ್ಟು ಗೆಲ್ಲಿಸಿ: ಶಾಸಕ ರವಿಶಂಕರ್

ಸಾಮಾನ್ಯನಾದ ನನ್ನನ್ನು ಗೆಲ್ಲಿಸಿದಂತೆ ನಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರನ್ನು ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸುವ ಮೂಲಕ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರ ಕೈಬಲಪಡಿಸಬೇಕು ಎಂದು ಶಾಸಕ ರವಿಶಂಕರ್ ಮತದಾರರಲ್ಲಿ ಮನವಿ ಮಾಡಿದರು.

ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರೊಟ್ಟಿಗೆ ಕೆ.ಆರ್.ನಗರ ಕ್ಷೇತ್ರದಲ್ಲಿ ಪ್ರಚಾರದ ವೇಳೆ ಮಾತನಾಡಿ, ಮುಂದಿನ ದಿನಗಳಲ್ಲಿ ಗ್ರಾಮಗಳ ರಸ್ತೆ ಅಭಿವೃದ್ಧಿ, ಸಮುದಾಯ ಭವನಗಳ ನಿರ್ಮಾಣ ಮಾಡುವುದರ ಜೊತೆಗೆ ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.

ಸ್ಟಾರ್ ಚಂದ್ರು ಅವರು ಸಂಸದರಾಗಿ ಆಯ್ಕೆಯಾದರೆ ರಾಜ್ಯ ಸರ್ಕಾರದ, ನಮ್ಮ ಜೊತೆಗೂಡಿ ಕೆಲಸ ಮಾಡಲಿದ್ದಾರೆ. ಸರ್ಕಾರದ ಅನುದಾನದ ಜೊತೆಗೆ ಕೈಯಿಂದ ಹಣ ಹಾಕಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲಿದ್ದಾರೆ. ಸಾವಿರಾರು ಜನರಿಗೆ ಉದ್ಯೋಗ ನೀಡಿರುವ ಅವರು ಕ್ಷೇತ್ರದ ನಿರುದ್ಯೋಗಿಗಳಿಗೂ ಉದ್ಯೋಗ ಕಲ್ಪಿಸಲಿದ್ದಾರೆ ಎಂದು ಹೇಳಿದರು.

ಈ ವೇಳೆ ಕಾಂಗ್ರೆಸ್ ವಕ್ತಾರೆ ಭವ್ಯ ನರಸಿಂಹಮೂರ್ತಿ, ಜಿಪಂ ಮಾಜಿ ಸದಸ್ಯರಾದ ಸಿ.ಪಿ.ರಮೇಶ್‌ ಸೇರಿದಂತೆ ಸ್ಥಳೀಯ ಮುಖಂಡರು ಕಾರ್ಯಕರ್ತರು ಇದ್ದರು.

ಇದನ್ನೂ ಓದಿ | Lok Sabha Election 2024: ದೇಶಕ್ಕೆ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರ: ಈ. ತುಕಾರಾಂ

ಸೌಮ್ಯಾರೆಡ್ಡಿ ಪರ ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ಭರ್ಜರಿ ಪ್ರಚಾರ

Lok Sabha Election

ಬೆಂಗಳೂರು: ನಗರದ ಹೊರವಲಯದ ಬೊಮ್ಮನಹಳ್ಳಿಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿ ಪರ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರು ಭರ್ಜರಿ ಪ್ರಚಾರ ನಡೆಸಿದರು. ಹೊಂಗಸಂದ್ರ ವಾರ್ಡ್ ವ್ಯಾಪ್ತಿಯಲ್ಲಿ ಹೆಚ್ಚು ತೆಲುಗು ಭಾಷಿಕರು ವಾಸವಾಗಿರುವ ಹಿನ್ನೆಲೆಯಲ್ಲಿ ರೇವಂತ್ ರೆಡ್ಡಿ ಪ್ರಚಾರ ಮಾಡಿದರು.

ತೆಲುಗು ಭಾಷಿಕರು ಮತ್ತು ರೆಡ್ಡಿ ಮತ ಸೆಳೆಯಲು ರೇವಂತ್ ರೆಡ್ಡಿ ಅಖಾಡಕ್ಕೆ ಇಳಿದಿದ್ದು, ಅವರಿಗೆ ರೆಡ್ಡಿಗೆ ಸಚಿವ ರಾಮಲಿಂಗಾರೆಡ್ಡಿ, ಅಭ್ಯರ್ಥಿ ಸೌಮ್ಯಾರೆಡ್ಡಿ, ಶಿವಾಜಿನಗರ ಶಾಸಕ ರಿಜ್ವಾನ್ ಹರ್ಷದ್, ಕಾಂಗ್ರೆಸ್ ಮುಖಂಡ ಉಮಾಪತಿ ಶ್ರೀನಿವಾಸ್ ಗೌಡ ಸಾಥ್ ನೀಡಿದರು.

ಪ್ರಚಾರದ ವೇಳೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಮಾತನಾಡಿ, ಬೆಂಗಳೂರು ದಕ್ಷಿಣದಲ್ಲಿ ಸೌಮ್ಯಾರೆಡ್ಡಿ ಗೆಲ್ಲಿಸಲು ಕಾಂಗ್ರೆಸ್ ಹೈಕಮಾಂಡ್ ನನ್ನನ್ನು ಕಳುಹಿಸಿದೆ. ಇಲ್ಲಿ ಇಷ್ಟೊಂದು ತೆಲುಗು ಭಾಷಿಕರು ಇದ್ದಾರೆ ಎಂದು ನನಗೆ ಗೊತ್ತಿಲ್ಲ. ಆಂಧ್ರಪ್ರದೇಶದದಿಂದ ಬಂದು ಇಲ್ಲಿ ಜೀವನ ನಡೆಸುತ್ತಿರುವ ನಿಮಗೆ ಅಭಿನಂದನೆ. ಬೆಂಗಳೂರು ಮಹಾನಗರದಲ್ಲಿ ನೀವು ಲಕ್ಷಾಂತರ ಮಂದಿ ನೆಮ್ಮದಿಯಾಗಿ ಜೀವಿಸಲು, ರಾಜೀವ್ ಗಾಂಧಿ ಅವರು ಮಾಡಿದ ಕಂಪ್ಯೂಟರ್ ಕ್ರಾಂತಿ ಕಾರಣ. ಹಾಗಾಗಿ ಇಲ್ಲಿಗೆ ಬಂದು ಉದ್ಯೋಗ ಮಾಡುತ್ತಿದ್ದೀರಾ ಎಂದರು.

ನನ್ನನ್ನು ಜೈಲಿಗೆ ಕಳುಹಿಸಿದರು, ಆದ್ರೆ ತೆಲಂಗಾಣ ಜನ ನನ್ನ ಸಿಎಂ ಮಾಡಿದ್ರು. ಕರ್ನಾಟಕದಲ್ಲಿ ಕೂಡ ಡಿಕೆಶಿಯನ್ನು ಜೈಲಿಗೆ ಕಳುಹಿಸಿದ್ರು, ಕರ್ನಾಟಕ ಜನರು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿದ್ರು. ಲೋಕಸಭಾ ಚುನಾವಣೆಯಲ್ಲಿ 400 ಸೀಟ್ ಗೆಲುತ್ತೇನೆ ಅಂತ ಮೋದಿ ಹೇಳ್ತಾರೆ. ಆದ್ರೆ ಕರ್ನಾಟಕದಲ್ಲಿ ದೇವೇಗೌಡ, ಆಂಧ್ರಪ್ರದೇಶದಲ್ಲಿ ಚಂದ್ರಬಾಬು ನಾಯ್ಡು, ಮಹಾರಾಷ್ಟ್ರದಲ್ಲಿ ಅಜಿತ್ ಪವಾರ್ ಕಾಲು ಹಿಡಿಯೋದು ಯಾಕೆ? ಕರ್ನಾಟಕ ಮತ್ತು ತೆಲಂಗಾಣದಲ್ಲಿ 70 ಮಂದಿ ಗೆಲ್ಲಿಸಿ ಕಳುಹಿಸಿದರೆ ಕೇವಲ ಇಬ್ಬರಿಗೆ ಮಾತ್ರ ಸಚಿವ ಸ್ಥಾನ. ಗುಜರಾತ್‌ನಲ್ಲಿ ಏಳು, ಉತ್ತರಪ್ರದೇಶಕ್ಕೆ ಹನ್ನೆರಡು ಮಂತ್ರಿ ಸ್ಥಾನ ನೀಡಿದ್ದಾರೆ. ದಕ್ಷಿಣ ರಾಜ್ಯಗಳ ಸಮಸ್ಯೆ ಬಗ್ಗೆ ಮೋದಿ ಸರ್ಕಾರಕ್ಕೆ ತಾತ್ಸಾರ ಮನೋಭಾವ ಇದೆ ಎಂದು ಕಿಡಿಕಾರಿದರು.

ಇದನ್ನೂ ಓದಿ | Modi in Karnataka: ಪ್ರಧಾನಿ ಮೋದಿ ತೆರಳುವಾಗ ಚೆಂಬು ಪ್ರದರ್ಶನ; ನಲಪಾಡ್‌ ಸೇರಿ ಹಲವರು ವಶಕ್ಕೆ

Continue Reading

ಮಳೆ

Karnataka Weather : ಸಿಡಿಲಿಗೆ ಎತ್ತು ಸಾವು, ಬಿರುಗಾಳಿಗೆ ನೆಲಕಚ್ಚಿದ ಬೆಳೆಗಳು; ಏ.24ರವರೆಗೆ ಮಳೆ ಅಬ್ಬರ

Rain News : ಸಿಡಿಲಿಗೆ ಜನ-ಜಾನುವಾರಗಳು ಪ್ರಾಣ ಕಳೆದುಕೊಳ್ಳುತ್ತಿದ್ದು, ಬಿರುಗಾಳಿ ಸಹಿತ ಸುರಿದ ಮಳೆಗೆ ಅಪಾರ ಪ್ರಮಾಣದ ಬೆಳೆಗಳು ನೆಲಕಚ್ಚಿವೆ. ರಾಜ್ಯಾದ್ಯಂತ ಮುಂದಿನ 48 ಗಂಟೆಯಲ್ಲಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast Rain Effected
Koo

ಬೆಂಗಳೂರು: ರಾಜ್ಯದಲ್ಲಿ ಮಳೆ (Rain News) ಅನಾಹುತ (Karnataka Weather Forecast) ಮುಂದುವರಿದಿದ್ದು, ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನ ಬೇಲೂರ ಗ್ರಾಮದಲ್ಲಿ ಸಿಡಿಲು ಬಡಿದು ಎತ್ತು ಮೃತಪಟ್ಟಿದೆ. ರೈತ ಅಣ್ಣೆಪ್ಪ ಕಾಶಪ್ಪ ಯೆರಂಡಗೆ ಅವರಿಗೆ ಸೇರಿದ ಎತ್ತು ಸಿಡಿಲಿಗೆ ಬಲಿಯಾಗಿದೆ. ಸುದ್ದಿ ತಿಳಿದ ಹುಲಸೂರ ಠಾಣೆ ಪಿಎಸ್ಐ ನಾಗೇಂದ್ರ ನೇತೃತ್ವದ ಪೊಲೀಸರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಈ ಕುರಿತು ಹುಲಸೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಹಾದ್ರಿಪುರ ಗ್ರಾಮದಲ್ಲಿ ಬಿರುಗಾಳಿ ಸಹಿತ ಸುರಿದ ಮಳೆಗೆ ಬೆಳೆಗಳು ನೆಲಕಚ್ಚಿದವು. ಬಾಳೆ, ಹೀರೆಗಿಡ, ಅಡಿಕೆ ಬೆಳೆಗಳು ನೆಲಕ್ಕೆ ಉರುಳಿವೆ. ಶನಿವಾರ ಸಂಜೆ ಏಕಾಏಕಿ ಸುರಿದ ಮಳೆಗೆ ಗೊನೆ ಬಿಟ್ಟಿದ್ದ ಬಾಳೆ ಗಿಡಗಳು ಮುರಿದು ಹೋಗಿವೆ.

8 ಎಕರೆ ಜಮೀನಿನಲ್ಲಿ ಬೆಳೆದಿದ್ದ ಬೆಳೆ ಇನ್ನೊಂದು ತಿಂಗಳಲ್ಲಿ ಕಟಾವು ಮಾಡಬೇಕಿತ್ತು. ಆದರೆ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂದು ರೈತರ ಅಳಲು ತೋಡಿಕೊಂಡಿದ್ದಾರೆ. ಗ್ರಾಮದ ಸುಧಾಕರ್, ನಂಜೇಗೌಡ, ಮಂಜುನಾಥ, ಜಯರಾಮಯ್ಯ, ದೇವರಾಜಪ್ಪ, ಎಂಬ ರೈತರಿಗೆ ಸೇರಿದ ಬಾಳೆ ಗಿಡಗಳು ಸಂಪೂರ್ಣ ಹಾಳಾಗಿವೆ. ಚನ್ನರಾಯಪ್ಪ ಎಂಬ ರೈತನಿಗೆ ಸೇರಿದ ಒಂದು ಎಕರೆ ಹೀರೆಗಿಡ ನಾಶವಾಗಿದೆ.

ಹಾಸನದಲ್ಲೂ ಶನಿವಾರ ರಾತ್ರಿ ಗಾಳಿಯೊಂದಿಗೆ ಸುರಿದ ಧಾರಾಕಾರ ಮಳೆಗೆ ಅಪಾರ ಪ್ರಮಾಣದ ಹಾನಿಯಾಗಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಲ್ಮಿಡಿ ಗ್ರಾಮದಲ್ಲಿ ಫಸಲಿಗೆ ಬಂದಿದ್ದ ಅಡಿಕೆ ಗಿಡಗಳು ನಾಶವಾಗಿದ್ದವು. ರವೀಶ್ ಎಂಬುವವರಿಗೆ ಸೇರಿದ ಎರಡುವರೆ ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಅಡಿಕೆ ಗಿಡಗಳು, ಬಿರುಗಾಳಿ ಸಹಿತ ಸುರಿದ ಮಳೆಗೆ 350ಕ್ಕೂ ಹೆಚ್ಚು ಗಿಡಗಳು ನೆಲಕಚ್ಚಿವೆ. ಸುಮಾರು ಮೂರರಿಂದ ನಾಲ್ಕು‌ ಲಕ್ಷ ರೂ ಹಾನಿಯಾಗಿದೆ. ಫಸಲಿಗೆ ಬಂದಿದ್ದ ಅಡಿಕೆ ಗಿಡಗಳನ್ನು ಕಳೆದುಕೊಂಡು ರೈತ ರವೀಶ್ ಕಂಗಾಲಾಗಿದ್ದರು. ಸ್ಥಳಕ್ಕೆ ತಹಸೀಲ್ದಾರ್ ಮಮತಾ ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Kids Summer Travel Fashion: ಬೇಸಿಗೆಯಲ್ಲಿ ಹೀಗಿರಲಿ ಚಿಣ್ಣರ ಟ್ರಾವೆಲ್‌ ಫ್ಯಾಷನ್‌

ರಾಜ್ಯದಲ್ಲಿ ಶನಿವಾರದಂದು ಕರಾವಳಿ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಭಾರಿ ಮಳೆಯು ಖಜೂರಿ 9 ಸೆಂ.ಮೀ, ಗದಗ 7 ಸೆಂ.ಮೀ ಮಳೆಯಾಗಿದೆ. ಕುಕನೂರು5, ಶಿಗ್ಗಾಂವ 5, ಸವಣೂರು 4, ಕಲಬುರಗಿ, ಶಿರಹಟ್ಟಿ, ಕುಂದಗೋಳದಲ್ಲಿ 3 ಸೆಂ.ಮೀ ಮಳೆಯಾಗಿದೆ. ಅಫಜಲಪುರ ಎಚ್‌ಎಂಎಸ್, ಆಳಂದ, ಕಲಘಟಗಿಯಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಗೋಕರ್ಣ, ಕಿರವತ್ತಿ, ಕಾರವಾರ ವೀಕ್ಷಣಾಲಯ, ಹುಬ್ಬಳ್ಳಿ, ಯಲಬುರ್ಗಾ, ಮುಂಡರಗಿ 1 ಸೆಂ.ಮೀ ಮಳೆಯಾಗಿದೆ. ಅತೀ ಗರಿಷ್ಠ ಉಷ್ಣಾಂಶ 37.4 ಡಿ.ಸೆ ಕಲಬುರಗಿಯಲ್ಲಿ ದಾಖಲಾಗಿದೆ.

ಮುಂದಿನ 24 ಗಂಟೆಯಲ್ಲಿ ಮಳೆ ಮುನ್ಸೂಚನೆ

ಏ.22ರಂದು ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಕೊಪ್ಪಳ, ಬಾಗಲಕೋಟೆ, ಗದಗನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ ಸೇರಿ ದಕ್ಷಿಣಒಳನಾಡಿನ ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಇನ್ನು ರಾಜಧಾನಿ ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶ 36 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ತಾಪಮಾನದ ಮುನ್ಸೂಚನೆ

ಏಪ್ರಿಲ್ 22 ರಿಂದ 25ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯಾದ್ಯಂತ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.

ಬಿರುಗಾಳಿ ಸಹಿತ ಮಳೆ ಸಾಧ್ಯತೆ

ಏಪ್ರಿಲ್‌ 22ರಂದು ಒಂದು ಅಥವಾ ಎರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದ್ದು, ಮುಂದಿನ 5 ದಿನಗಳಲ್ಲಿ ಗರಿಷ್ಟ ಉಷ್ಣಾಂಶದಲ್ಲಿ ಕ್ರಮೇಣ 2-3 ಡಿ.ಸೆ ಏರಿಕೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಾಜ್ಯದಲ್ಲಿ ಗುಡುಗು, ಸಿಡಿಲಿನ ಜತೆಗೆ ಗಾಳಿ ಮಿಶ್ರಿತ ಮಳೆ ಎಚ್ಚರಿಕೆ

Rain News : ರಾಜ್ಯದ ಹಲವೆಡೆ ಗುಡುಗು, ಸಿಡಿಲಿನ ಮಳೆಯಾಗುತ್ತಿದ್ದು, ಇನ್ನೊಂದು ವಾರ ಮುಂದುವರಿಯಲಿದೆ. ಉತ್ತರ ಕರ್ನಾಟಕದಲ್ಲಿ ವ್ಯಾಪಕ ಮಳೆಯಾದರೆ, ದಕ್ಷಿಣ ಒಳನಾಡಲ್ಲಿ ಸಾಧಾರಣವಾಗಿರಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ಮುಂದಿನ 48 ಗಂಟೆಯಲ್ಲಿ ಬಿರುಗಾಳಿ ಸಹಿತ ಮಳೆಯಾಗುವ (Rain News) ನಿರೀಕ್ಷೆ ಇದೆ. ಗುಡುಗು, ಸಿಡಿಲಿನ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಒಳನಾಡಿನ ಕಲಬುರಗಿ, ವಿಜಯಪುರ ಸೇರಿ ಮಲೆನಾಡಿನ ಚಿಕ್ಕಮಗಳೂರು, ಕೊಡಗಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬೀದರ್, ಕೊಪ್ಪಳ, ಯಾದಗಿರಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳದ ಕೆಲವೆಡೆ ಲಘು ಮಳೆಯಾಗುವ ಸಾಧ್ಯತೆ ಇದೆ. ಹಾಗೆ ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಹಾಸನ, ಮೈಸೂರು, ಮಂಡ್ಯ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಮಧ್ಯಮ ಮಳೆಯಾಗಲಿದೆ. ರಾಜ್ಯದ ಉಳಿದೆಡೆ ಒಣಹವೆ ಇರುವ ಸಾಧ್ಯತೆ ಇದೆ.

ಇದನ್ನೂ ಓದಿ: Modi in Karnataka: ಟ್ಯಾಕ್ಸ್ ಸಿಟಿ ಬೆಂಗಳೂರನ್ನು ಟ್ಯಾಂಕರ್ ಸಿಟಿ ಮಾಡಿದ ಸರ್ಕಾರ, ಹೆಣ್ಣು ಮಕ್ಕಳ ಮೇಲೂ ಹಲ್ಲೆ: ಮೋದಿ ವಾಗ್ದಾಳಿ

ಬಿರುಗಾಳಿ ಜತಗೆ ಗುಡುಗು ಮುನ್ನೆಚ್ಚರಿಕೆ

ಭಾನುವಾರದಂದು ಕರಾವಳಿಯ ಪ್ರತ್ಯೇಕ ಸ್ಥಳಗಳಲ್ಲಿ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಮಿಂಚು ಸಹಿತ ಗುಡುಗು ಮಳೆಯಾಗಲಿದೆ. ಇತ್ತ ಉತ್ತರ ಒಳನಾಡಿನಲ್ಲಿ 50-60 ಕಿ.ಮೀ ವೇಗದಲ್ಲಿ ಗಾಳಿ ಮಿಶ್ರಿತ ಮಳೆ ಇರಲಿದೆ. ದಕ್ಷಿಣ ಒಳನಾಡಿನಲ್ಲೂ ಗಾಳಿ ವೇಗವು 30-40 ಕಿ.ಮೀ ಇರಲಿದೆ.

ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ರಾತ್ರಿ ವೇಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಗರಿಷ್ಠ ಉಷ್ಣಾಂಶ 34 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ತಾಪಮಾನದ ಮುನ್ಸೂಚನೆ

ಮಳೆ ಮುನ್ಸೂಚನೆ ನಡುವೆಯೂ ತಾಪಮಾನ ಹೆಚ್ಚಾಗುವ ಸಾಧ್ಯತೆ ಇದೆ. ರಾಜ್ಯಾದ್ಯಂತ ಗರಿಷ್ಠ ತಾಪಮಾನವು 2-3 ಡಿ.ಸೆ ಹೆಚ್ಚಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಂಡ್ಯ

Lok Sabha Election 2024: ನನ್ನನ್ನು ಗೆಲ್ಲಿಸಿ, ಕಾಂಗ್ರೆಸ್‌ಗೆ ಶಕ್ತಿ ತುಂಬಿ: ವೆಂಕಟರಮಣೇಗೌಡ ಮನವಿ

Lok Sabha Election 2024: ಕೆ.ಆರ್.ನಗರದಲ್ಲಿ ನಡೆದ ಪ್ರಜಾಧ್ವನಿ-2 ಲೋಕಸಭಾ ಚುನಾವಣಾ ಪ್ರಚಾರ ಸಭಾ ಕಾರ್ಯಕ್ರಮದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು), ಕಾಂಗ್ರೆಸ್‌ಗೆ ಮತ ನೀಡಿ, ತಮ್ಮನ್ನು ಗೆಲ್ಲಿಸುವಂತೆ ಮನವಿ ಮಾಡಿದರು.

VISTARANEWS.COM


on

Prajadhwani 2 Lok Sabha election campaign meeting at KR Nagar
Koo

ಕೆ.ಆರ್.ನಗರ: ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ (Congress) ಮತ ನೀಡಿ, ನನ್ನನ್ನು ಗೆಲ್ಲಿಸಿ ಕಾಂಗ್ರೆಸ್‌ಗೆ ಶಕ್ತಿ ತುಂಬಿ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಮನವಿ (Lok Sabha Election 2024) ಮಾಡಿದರು.

ಕೆ.ಆರ್.ನಗರದಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ-2 ಲೋಕಸಭಾ ಚುನಾವಣಾ ಪ್ರಚಾರ ಸಭಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ‌.ಕೆ. ಶಿವಕುಮಾರ್ ಅವರೊಂದಿಗೆ ಭಾಗವಹಿಸಿ ಅವರು ಮಾತನಾಡಿದರು.

ಇದನ್ನೂ ಓದಿ: Money Guide: ಕುಟುಂಬಕ್ಕಾಗಿ ಆರೋಗ್ಯ ವಿಮೆ; ಖರೀದಿ ಮುನ್ನ ತಿಳಿದಿರಲಿ ಕೆಲವು ವಿಚಾರ

ನಾನು ಇದೇ ಲೋಕಸಭಾ ಕ್ಷೇತ್ರದ ನಾಗಮಂಗಲ ತಾಲೂಕು ಕನ್ನಘಟ್ಟ ಗ್ರಾಮದ ರೈತನ ಮಗ. ಜನಸೇವೆ ಮಾಡುವ ಉದ್ದೇಶದಿಂದ ರಾಜಕೀಯಕ್ಕೆ ಬಂದಿದ್ದೇನೆ, ರಾಜಕಾರಣದಿಂದ ಒಂದು ರೂಪಾಯಿ ಹಣ ಮಾಡಲ್ಲ ಎಂದು ತಿಳಿಸಿದರು.

ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಅವರ ಸಹಕಾರದಿಂದ, ಕೆ.ಆರ್.ನಗರದ ಅಭಿವೃದ್ಧಿಗೆ ಶಾಸಕ ರವಿಶಂಕರ್ ಜತೆಗೆ ನಾನು ಕೂಡ ಪ್ರಾಮಾಣಿಕವಾಗಿ ದುಡಿಯುತ್ತೇನೆ ಎಂದು ಅವರು ಹೇಳಿದರು.

ಇದನ್ನೂ ಓದಿ: Apricot Benefits: ನಿಮಗೆ ಇಂತಹ ಸಮಸ್ಯೆಗಳಿವೆಯೇ?: ಹಾಗಾದರೆ ನಿತ್ಯವೂ ಆಪ್ರಿಕಾಟ್‌ ತಿನ್ನಿ!

ಸಭೆಯಲ್ಲಿ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಶಾಸಕ ರವಿಶಂಕರ್, ಕೆಪಿಸಿಸಿ ಕಾರ್ಯಕಾರಿಣಿ ಸಮಿತಿ ಸದಸ್ಯ ದೊಡ್ಡಸ್ವಾಮೇಗೌಡ ಸೇರಿದಂತೆ ಹಲವು ಮುಖಂಡರು, ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.

Continue Reading
Advertisement
Viral News
ವೈರಲ್ ನ್ಯೂಸ್9 mins ago

Viral News: ಚಲಿಸುತ್ತಿರುವ ಕಾರಿನ ಬಾಗಿಲಿನಲ್ಲಿ ನೇತಾಡುವ ಯುವಕ; ಶಾಕಿಂಗ್‌ ವಿಡಿಯೊ ನೋಡಿ

Sportsmanship
ಕ್ರೀಡೆ27 mins ago

Sportsmanship : ಭಾರತದವರನ್ನೇ ಸೋಲಿಸಿ ತ್ರಿವರ್ಣ ಧ್ವಜವನ್ನೂ ಎತ್ತಿ ಹಿಡಿದ ಪಾಕ್ ಕರಾಟೆ ಪಟು!

DK Suresh
ಬೆಂಗಳೂರು50 mins ago

DK Suresh: ಬೆಲೆ ಏರಿಕೆ, ಜಿಎಸ್‌ಟಿ ಹೊರೆಯೇ ಮೋದಿ ಗ್ಯಾರಂಟಿ: ಡಿ.ಕೆ. ಸುರೇಶ್

soil
ಕೃಷಿ56 mins ago

ವಿಸ್ತಾರ ಗ್ರಾಮ ದನಿ: ಅಡಿಕೆ ರೋಗಗಳ ನಿವಾರಣೆಗೆ ‘ಕೃಷಿ ಸುಣ್ಣ’ ರಾಮಬಾಣ!

Narendra modi
ದೇಶ1 hour ago

Narendra Modi : ಹೆಚ್ಚು ಮಕ್ಕಳಿದ್ದವರಿಗೆ ಕಾಂಗ್ರೆಸ್​ನಿಂದ ಸಂಪತ್ತು ವಿತರಣೆ; ಮೋದಿ ಹೇಳಿಕೆಗೆ ಕೈ ಪಕ್ಷದ ಆಕ್ಷೇಪ

Bulldozer Justice
ದೇಶ2 hours ago

Bulldozer Justice Video: ಅತ್ಯಾಚಾರ ಎಸಗಿ ಕ್ರೂರಹಿಂಸೆ; ಆರೋಪಿ ಅಯಾನ್‌ ಪಠಾಣ್‌ ಮನೆ ಧ್ವಂಸಗೊಳಿಸಿದ ಬುಲ್ಡೋಜರ್‌!

ಕರ್ನಾಟಕ2 hours ago

Lok Sabha Election 2024: ಭ್ರಷ್ಟಾಚಾರ ನಿರ್ಮೂಲನೆಗೆ ಮೋದಿ ಸರ್ಕಾರ ಪಣ: ಸಚಿವ ಪ್ರಲ್ಹಾದ್‌ ಜೋಶಿ

Car Crash
ಕ್ರೀಡೆ2 hours ago

Car Accident : ರೇಸ್ ವೇಳೆ ಪ್ರೇಕ್ಷಕರ ಮೇಲೆ ಹರಿದ ಕಾರು; 7 ಮಂದಿ ಸಾವು; ವಿಡಿಯೊ ಇದೆ

Yuva Rajkumar
ಸಿನಿಮಾ3 hours ago

Yuva Rajkumar: ಯುವ ಅಭಿಮಾನಿಗಳಿಗೆ ನಿರಾಸೆ; ಹುಟ್ಟುಹಬ್ಬ ಆಚರಣೆಗೆ ಬ್ರೇಕ್‌

Lok Sabha Election 2024 Bengaluru Rural Lok Sabha constituency is the most sensitive Election Commission deploys paramilitary forces
Lok Sabha Election 20243 hours ago

Lok Sabha Election 2024: ಬೆಂಗಳೂರು ಗ್ರಾಮಾಂತರ ಕ್ಷೇತ್ರವೀಗ ಅತಿ ಸೂಕ್ಷ್ಮ; ಅರೆ ಸೇನಾ ಪಡೆ ನಿಯೋಜಿಸಿದ ಚುನಾವಣಾ ಆಯೋಗ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ18 hours ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ1 day ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20241 day ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20241 day ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

Rain News
ಮಳೆ1 day ago

Rain News : ಸಿಡಿಲಿಗೆ ವ್ಯಕ್ತಿ ಸೇರಿ ಜಾನುವಾರುಗಳು ಮೃತ್ಯು; ವ್ಯಾಪಕ ಮಳೆಗೆ ಜನರು ಕಂಗಾಲು

Neha Murder Case
ಹುಬ್ಬಳ್ಳಿ1 day ago

Neha Murder Case : ನನ್ನ ಮಗನಿಗೆ ಶಿಕ್ಷೆ ಆಗಲಿ; ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ2 days ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ3 days ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ5 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

ಟ್ರೆಂಡಿಂಗ್‌