ಮಂಡ್ಯ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ವಿರುದ್ಧ ಮಂಡ್ಯ ಜಿಲ್ಲಾ ಪಂಚಾಯಿತಿಯಿಂದ ನೋಟಿಸ್ ಜಾರಿಯಾಗಿದೆ. ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಮೇ 16ರಂದು ಮಂಡ್ಯದ ಮಿಮ್ಸ್ ಮಹಿಳಾ ಸರ್ಕಾರಿ ಕಾಲೇಜಿಗೆ ಸಚಿವ ಡಾ. ಅಶ್ವತ್ಥನಾರಾಯಣ ಭೇಟಿ ಕೊಟ್ಟಿದ್ದರು.
ಈ ಕುರಿತು ಚುನಾವಣಾ ಆಯೋಗಕ್ಕೆ ಸಚಿವರ ವಿರುದ್ಧ ಮಂಡ್ಯ ಜಿಲ್ಲಾ ಕಾಂಗ್ರೆಸ್ ವತಿಯಿಂದ ದೂರು ದಾಖಲಿಸಲಾಗಿತ್ತು. ಖಾಸಗಿ ಕಾಲೇಜು ಆಡಳಿತ ಮಂಡಳಿ ಸಭೆ ಆಯೋಜನೆ ಮಾಡಿತ್ತು, ಆದರೆ ಸಚಿವರಿಂದ ಆಡಳಿತ ದುರುಪಯೋಗವಾಗಿದೆ. ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಯಲ್ಲಿ ಉನ್ನತ ಶಿಕ್ಷಣ ಸಚಿವರಿಗೆ ನೋಟಿಸ್ ನೀಡಲಾಗಿದೆ. ಸ್ಪಷ್ಟನೆ ನೀಡುವಂತೆ ಜಿಲ್ಲಾ ಪಂಚಾಯತ್ ಹೇಳಿದೆ.
ಇದನ್ನೂ ಓದಿ | ಮಾಜಿ ಸಚಿವ ರಾಯರಡ್ಡಿ ಆರೋಪ ದುಸ್ಸಾಹಸ ಮಾಡುವುದು ಬೇಡ ಎಂದ ಸಚಿವ ಅಶ್ವತ್ಥನಾರಾಯಣ
ಉನ್ನತ ಶಿಕ್ಷಣ ಸಚಿವರಾದ ಡಾ. ಅಶ್ವತ್ಥನಾರಾಯಣ ಅವರ ಕಚೇರಿಯಿಂದ ಮೇ 5ರಂದು ಹೊರಡಿಸಲಾದ ತಾತ್ಕಾಲಿಕ ಪ್ರವಾಸ ಕಾರ್ಯಕ್ರಮ ಪಟ್ಟಿಯಲ್ಲಿ ಚುನಾವಣೆ ಸಂಬಂಧಿತ ಕಾರ್ಯಕ್ರಮಗಳನ್ನು ಸೇರ್ಪಡೆ ಮಾಡಿರುವುದು ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಚುನಾವಣೆ ಪ್ರಚಾರ ಮಾಡಿರುವುದು ತಿಳಿದು ಬಂದಿದೆ. ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಆರೋಪಿಸಲಾಗಿದೆ.
ಪ್ರಾಂಶುಪಾಲರು, ಉಪನ್ಯಾಸಕರು, ಕಾಲೇಜು ಆಡಳಿತ ಮಂಡಳಿಗೆ ಸಚಿವರು ಆಮಿಷ ಒಡ್ಡಿದ್ದಾರೆ. ಕಾಲೇಜು ಆಡಳಿತ ಮಂಡಳಿ ವಿರುದ್ಧವೂ ಕ್ರಮ ಕೈಗೊಳ್ಳಬೇಕೆಂದು ಚುನಾವಣೆ ಅಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿಗಳನ್ನು ಆಗ್ರಹಿಸಲಾಗಿದೆ.
ಇದನ್ನೂ ಓದಿ| ಇಂಗ್ಲೆಂಡಿನ ದಂಡಿ ವಿವಿಗೆ ಸಚಿವ ಅಶ್ವತ್ಥನಾರಾಯಣ ಭೇಟಿ