Hanuman Flag: ರಾಜಕೀಯ ತಿರುವು ಪಡೆದ ಕೆರಗೋಡು ಹನುಮ ಧ್ವಜ; ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಬಿಜೆಪಿ ನಾಯಕರು - Vistara News

ಮಂಡ್ಯ

Hanuman Flag: ರಾಜಕೀಯ ತಿರುವು ಪಡೆದ ಕೆರಗೋಡು ಹನುಮ ಧ್ವಜ; ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಬಿಜೆಪಿ ನಾಯಕರು

Hanuman Flag : ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಸ್ಮರಣಾರ್ಥವಾಗಿ ಕೆರಗೋಡಲ್ಲಿ ಹನುಮ ಧ್ವಜವನ್ನು ಹಾರಿಸಲಾಗಿತ್ತು. ಇದೀಗ ಇದು ರಾಜಕೀಯ ತಿರುವು ಪಡೆದುಕೊಂಡಿದ್ದು, ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರು ಹರಿಹಾಯ್ದಿದ್ದಾರೆ.

VISTARANEWS.COM


on

Keragodu Hanuman flag takes a political turn BJP leaders take a dig at Congress
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಮಂಡ್ಯ: ಒಂದು ಕಡೆ ಹನುಮ ಧ್ವಜ ಹಾರಾಟದ ವಿಚಾರಕ್ಕೆ (Hanuman Flag) ಸಂಬಂಧಿಸಿದಂತೆ ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹಿಂದೂಪರ ಸಂಘಟನೆಗಳ ಪ್ರತಿಭಟನೆ ಮುಂದುವರಿದಿದೆ. ಮತ್ತೊಂದು ಕಡೆ ಇದೇ ವಿಚಾರವು ರಾಜಕೀಯ ತಿರುವು ಪಡೆದುಕೊಂಡಿದ್ದು, ಪರ-ವಿರೋಧಗಳು ಶುರುವಾಗಿವೆ.

ತಾಲೂಕು ಪಂಚಾಯತ್​ ವಿರೋಧ ಕೆಲವರು ತಿರುಗಿ ಬಿದ್ದಿದ್ದು, ಪ್ರಾಣ ಬೇಕಾದರೂ ಬಿಟ್ಟೆವು, ಧ್ವಜ ಇಳಿಸಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದು ಕುಳಿತರು. ತಾಲೂಕು ಪಂಚಾಯತ್​ ಅಧಿಕಾರಿಗಳ ವಿರುದ್ಧ ಪ್ರತಿಭಟನೆಗಳು ನಡಿಯಿತು. ತೀವ್ರ ವಿರೋಧದ ನಡುವೆಯೂ ಅಧಿಕಾರಿಗಳು ಪೊಲೀಸರ ಭದ್ರತೆಯೊಂದಿಗೆ ಸ್ತಂಭದಿಂದ ಹನುಮ ಧ್ವಜವನ್ನು ಇಳಿಸಿದರು. ಇದರಿಂದ ಸಿಟ್ಟಿಗೆದ್ದ ಪ್ರತಿಭಟನಾಕಾರರು ರಸ್ತೆಯಲ್ಲೆ ಅಡುಗೆ ತಯಾರಿಸಲು ಮುಂದಾದರು. ಈ ವೇಳೆ ಅಡುಗೆ ಮಾಡುವುದನ್ನು ತಡೆದ ಪೊಲೀಸರು, ಪ್ರತಿಭಟನಾಕಾರರ ನಡುವೆ ಹಗ್ಗಜಗ್ಗಾಟ ನಡೆಯಿತು.

ಸ್ಥಳೀಯ ಯುವಕರ ದಾರಿ ತಪ್ಪಿಸಲಾಗುತ್ತಿದೆ- ಸಚಿವ ಚಲುವರಾಯಸ್ವಾಮಿ

ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಈ ವಿಚಾರದಲ್ಲಿ ರಾಜಕೀಯ ನಡೆಯುತ್ತಿರುವುದು ನಿಜ. ಆದರೆ ಹನುಮ ಧ್ವಜ ವಿಚಾರಕ್ಕೆ ಯಾರು ರಾಜಕಾರಣ ಬೆರಸುತ್ತಿದ್ದಾರೋ ತಿಳಿದಿಲ್ಲ. ಪಂಚಾಯ್ತಿ ವ್ಯಾಪ್ತಿಯಲ್ಲಿ ರಾಷ್ಟ್ರ ಧ್ವಜವನ್ನು ಹಾರಿಸಬಹುದು. ಅದನ್ನು ಹೊರತು ಪಡಿಸಿ ಸರ್ಕಾರಿ ಜಾಗದಲ್ಲಿ ಬೇರೆ ಧ್ವಜವನ್ನು ಹಾರಿಸುವಂತಿಲ್ಲ. ತ್ರಿವರ್ಣ ಧ್ವಜಕ್ಕೆ ಅನುಮತಿ ಪಡೆದು ಬೇರೆ ಧ್ವಜ ಹಾರಿಸುವುದು ತಪ್ಪು. ನಾಳೆ ದಿನ ಡಿಸಿ ಕಚೇರಿ ಮುಂದೆ ಹಾರಿಸುತ್ತಿವಿ ಅಂದಾಗ ಅವಕಾಶ ಕೊಡಲು ಆಗುತ್ತಾ? ಒಂದು ಕಡೆ ಅವಕಾಶ ಕೊಟ್ಟರೆ ಎಲ್ಲಾ ಕಡೆ ಕೇಳುತ್ತಾರೆ ಎಂದರು.

ಸ್ಥಳೀಯ ಯುವಕರು ಒಳ್ಳೆಯವರೇ, ಆದರೆ ಅವರನ್ನು ದಾರಿ ತಪ್ಪಿಸಲಾಗುತ್ತಿದೆ. ಅಗತ್ಯ ಇದ್ದರೆ ಎಲ್ಲರ ಜತೆ ಕೂತು ಮಾತನಾಡುತ್ತೇನೆ. ಮತ್ತೊಂದು ಕಡೆ ಹನುಮಾನ್ ಧ್ವಜ ಕಟ್ಟಲು ಅವಕಾಶ ಮಾಡಿಕೊಡುತ್ತೇವೆ. ನಾನು ರಾಮನ ಭಕ್ತ, ನಮ್ಮ ಮನೆ ದೇವರು ವಿಷ್ಣು, ನಾವು ಯಾವುದೇ ಧ್ವಜದ ವಿರೋಧಿಗಳಲ್ಲ. ಪಂಚಾಯ್ತಿಯಲ್ಲಿ ಇದಕ್ಕೆ ಅನುಮೋದನೆ ನೀಡಿದರೆ ತಪ್ಪಾಗುತ್ತದೆ. ಇದರಲ್ಲಿ ನಾವಾಗಲಿ, ಸ್ಥಳೀಯ ಶಾಸಕರಾಗಲಿ ರಾಜಕೀಯ ಮಾಡುತ್ತಿಲ್ಲ. ಸಂವಿಧಾನ ವಿರುದ್ಧ ಆಗಿರುವುದರಿಂದ ತೆರವು ಮಾಡಲಾಗಿದೆ ಎಂದರು.

ಇದನ್ನೂ ಓದಿ: Mann Ki Baat: ರಾಮಮಂದಿರದಿಂದ ಭಾರತದಲ್ಲಿ ಏಕತೆ; ಮನ್‌ ಕೀ ಬಾತ್‌ನಲ್ಲಿ ಮೋದಿ ಭಾವುಕ

ks eshwrappa Keragodu Hanuman flag takes a political turn BJP leaders take a dig at Congress

ಧ್ವಜ ಹಾರಾಟಕ್ಕೆ ಶಾಸಕರ ವಿರೋಧ; ಕೆ.ಎಸ್‌ ಈಶ್ವರಪ್ಪ ಕಿಡಿ

ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ. ಮಂಡ್ಯದಲ್ಲಿ ಗ್ರಾಮ ಪಂಚಾಯತಿಯಿಂದ ಅನುಮತಿ‌ ಪಡೆದು ಯುವಕರು ಹನುಮ ಧ್ವಜವನ್ನು ಹಾರಿಸಿದ್ದಾರೆ. ಧ್ವಜಸ್ತಂಭದಲ್ಲಿ ಹನುಮ ಧ್ವಜ ಹಾರಿಸಿರುವುದಕ್ಕೆ ಅಲ್ಲಿನ ಶಾಸಕರು ವಿರೋಧ ಮಾಡಿದ್ದಾರೆ. ಭಕ್ತಿಯಿಂದ ಮಾಡಿರುವ ಹನುಮ ಧ್ವಜ ತೆಗೆಯಲು ಮುಂದಾಗಿರುವುದಕ್ಕೆ ಅಲ್ಲಿನ ಜನರು, ಶಾಸಕರಿಗೆ ಹಾಗೂ ಸರ್ಕಾರಕ್ಕೆ ಇಡೀ ಶಾಪ ಹಾಕಿದ್ದಾರೆ. ಸಿಎಂ ಸಿದ್ದರಾಮಯ್ಯ ಯಾವಾಗಲೂ ತಾವು ರಾಮ ಹಾಗೂ ಹನುಮನ ಭಕ್ತ, ರಾಮ, ಹನುಮ ಬಿಜೆಪಿ ಸ್ವತ್ತು ಅಲ್ಲ ಎನ್ನುತ್ತಾರೆ. ಆದರೆ ಮಂಡ್ಯದಲ್ಲಿ ನಡೆಯುತ್ತಿರುವ ಈ ಗಲಾಟೆಯಿಂದ ಯಾರು ಯಾವ ಭಕ್ತರು ಎಂಬುದು ತೋರಿಸುತ್ತಿದೆ ಎಂದು ಕಿಡಿಕಾರಿದರು.

ಕಾಂಗ್ರೆಸ್‌ ಸರ್ಕಾರದ ಗೂಂಡಾ ವರ್ತನೆ- ಬಿ.ವೈ ವಿಜಯೇಂದ್ರ

ಹನುಮ ಧ್ವಜ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ರಾಯಚೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕಿಡಿಕಾರಿದ್ದಾರೆ. ಮಂಡ್ಯದ ಕೆರೆಗೋಡು ಗ್ರಾಮದಲ್ಲಿ ಗ್ರಾ.ಪಂ ನಿರ್ಣಯ ಮಾಡಿ‌, ನೂರಾರು ಅಡಿ ಹನುಮನ ಧ್ವಜ ಹಾಕಿದ್ದಾರೆ. ಆದರೆ ರಾಜ್ಯ ಸರ್ಕಾರ ಗೂಂಡಾ ವರ್ತನೆ ತೋರುತ್ತಿದೆ. ದಬ್ಬಾಳಿಕೆ ಮಾಡಿ ಪೊಲೀಸರ ಮೂಲಕ ಧ್ವಜ ಇಳಿಸುವ ಕೆಲಸ ಮಾಡುತ್ತಿದೆ. ಅಧಿಕಾರದ ದರ್ಪ ಏರಿದೆ. ಸಿಎಂ, ಗೃಹ ಸಚಿವರೇ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸುವ ಕೆಲಸ ನಿಮ್ಮ ಸರ್ಕಾರವೇ ಮಾಡುತ್ತಿದೆ. ಗ್ರಾ.ಪಂ ನಿರ್ಣಯ ಸಹಿಸಲು ಆಗದೇ ಕಾನೂನು ಸುವ್ಯವಸ್ಥೆ ಹಾಳು ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: Bengaluru News : ಮಲಗಿದ್ದ ನಾಯಿ ಮೇಲೆ ಕಾರು ಹತ್ತಿಸಿದ; ಚಕ್ರಕ್ಕೆ ಸಿಕ್ಕಿ ನರಳಾಡಿ ಸತ್ತ ಶ್ವಾನ

ಏನಿದು ಹನುಮ ಧ್ವಜ ವಿವಾದ

ಅಯೋಧ್ಯೆಯಲ್ಲಿ ಬಾಲಕರಾಮನ ಪ್ರಾಣ ಪ್ರತಿಷ್ಠಾಪನೆ ಸ್ಮರಣಾರ್ಥವಾಗಿ ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಧ್ವಜಸ್ತಂಭವನ್ನು ಗ್ರಾಮಸ್ಥರು ನಿರ್ಮಿಸಿದ್ದರು. 108 ಅಡಿ ಸ್ತಂಭದಲ್ಲಿ ಕೇಸರಿ ಬಣ್ಣದ ಹನುಮ ಧ್ವಜವನ್ನು ಹಿಂದೂಪರ ಸಂಘಟನೆ ಕಾರ್ಯಕರ್ತರು ಹಾರಿಸಿದ್ದರು. ಧ್ವಜ ಹಾರಿಸಲು ಕೆಲವು ಷರತ್ತುಗಳನ್ನು ಗ್ರಾಮ ಪಂಚಾಯತ್ ವಿಧಿಸಿತ್ತು. ಅದರ ಪ್ರಕಾರ ಕಾರ್ಯಕ್ರಮ ಮುಗಿದ ಮೇಲೆ ಅದನ್ನು ಇಳಿಸಬೇಕಾಗಿತ್ತು.

ಆದರೆ, ಗ್ರಾಮಸ್ಥರು ಷರತ್ತಿನಂತೆ ಧ್ವಜ ಇಳಿಸಿರಲಿಲ್ಲ. ಬಳಿಕ ಕೆಲವರು ಧ್ವಜ ಇಳಿಸುವಂತೆ ದೂರು ನೀಡಿದ್ದರು. ತಾಲೂಕು ಆಡಳಿತದ ಸೂಚನೆಯಂತೆ ಧ್ವಜ ಇಳಿಸಲು ಮುಂದಾಗಿತ್ತು. ತಾಲೂಕು ಪಂಚಾಯತ್​ ಕಾರ್ಯನಿರ್ವಹಣಾಧಿಕಾರಿ ವೀಣಾ ನೇತೃತ್ವದಲ್ಲಿ ಧ್ವಜ ಇಳಿಸಲು ಮುಂದಾಗಲಾಗಿತ್ತು. ಈ ವೇಳೆ ಕೆರಳಿದ ಹಿಂದೂಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ಆರಂಭಿಸಿದ್ದರು.

ಸರ್ಕಾರಿ ಜಾಗದಲ್ಲಿ ಧ್ವಜಸ್ತಂಭ ನಿರ್ಮಾಣ ಮಾಡಲಾಗುತ್ತಿರುವ ಕಾರಣ ತೆರವು ಮಾಡಬೇಕು ಎಂದು ತಾ.ಪಂ ಅಧಿಕಾರಿ ವೀಣಾ ಅವರು ಹಿಂದೂಪರ ಸಂಘಟನೆ ಕಾರ್ಯಕರ್ತರ ಮನವೊಲಿಸಲು ಮುಂದಾಗಿದ್ದರು. ವೀಣಾ ಅವರ ಮಾತಿಗೆ ಸಿಟ್ಟಿಗೆದ್ದ ಗ್ರಾಮಸ್ಥರಿಂದ ಪ್ರತಿಭಟನೆ ಹೆಚ್ಚಿಸಿದ್ದರು. ಜೈ ಶ್ರೀರಾಮ್, ಜೈ ಹನುಮಾನ್ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರಾಣ ಬೇಕಾದರೂ ಬಿಡುವೆವು. ಧ್ವಜ ಇಳಿಸಲ್ಲ ಎಂದು ಪಟ್ಟು ಹಿಡಿದಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಪ್ರಮುಖ ಸುದ್ದಿ

Medical Negligence : ವಿಜಯನಗರದಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ 5 ವರ್ಷದ ಮಗು ಬಲಿ; ಕೆರೆಗೆ ಕಾಲು ಜಾರಿ ಬಿದ್ದು ಯುವತಿ ಸಾವು

Medical Negligence : ವಿಜಯನಗರದಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ 5 ವರ್ಷದ ಮಗು ಮೃತಪಟ್ಟರೆ, ಕೆರೆಗೆ ಕಾಲು ಜಾರಿ ಬಿದ್ದು ಯುವತಿಯೊಬ್ಬಳು ದಾರುಣವಾಗಿ ಮೃತಪಟ್ಟಿದ್ದಾಳೆ.

VISTARANEWS.COM


on

Medical negligence

ವಿಜಯನಗರ: ವೈದ್ಯರ ನಿರ್ಲಕ್ಷ್ಯಕ್ಕೆ ಐದು ವರ್ಷದ ಮಗು ಮೃತಪಟ್ಟಿರುವುದಾಗಿ (Medical Negligence) ಆರೋಪ ಕೇಳಿ ಬಂದಿದೆ. ಕುಶಾಲ್( 05) ಮೃತಪಟ್ಟವರು. ವಿಜಯನಗರದ ಹೊಸಪೇಟೆಯ ಸರ್ಕಾರಿ ನೂರು ಹಾಸಿಗೆ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ. ಹೊಸಪೇಟೆ ತಾಲೂಕಿನ ಕಮಲಾಪುರದ ಅಂಬೇಡ್ಕರ್ ನಗರದ ಶಾಂತಪ್ಪ, ಶಂಕ್ರಮ್ಮ ದಂಪತಿಯ ಮಗು ಕುಶಾಲ್‌ ಜ್ವರದಿಂದ ಬಳಲುತ್ತಿದ್ದ.

ಹೀಗಾಗಿ ಬೆಳಗ್ಗೆ 7 ಗಂಟೆಗೆ ಬಂದಾಗ ತುರ್ತು ಚಿಕಿತ್ಸಾ ವಾರ್ಡ್‌ನಲ್ಲಿ ವೈದ್ಯರು ಇರಲಿಲ್ಲ. ಜ್ವರ ಹೆಚ್ಚಿದೆ ಅಂತ ಖಾಸಗಿ ಆಸ್ಪತ್ರೆಗೆ ರೇಫರ್ ಮಾಡಿದ್ದರು. ಆ ಖಾಸಗಿ ಆಸ್ಪತ್ರೆಯಿಂದ ಮತ್ತೆ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದರು. 24 ರಂದು ಸರ್ಕಾರಿ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದು ಹೋಗಿದ್ದರು. ಮಗು ಚೆನ್ನಾಗಿದೆ ಅಂತ ಹೇಳಿ ವೈದ್ಯರು ಕಳಿಸಿದ್ದರು. ಸೋಮವಾರ ಬೆಳಗ್ಗೆ ಆಸ್ಪತ್ರೆಗೆ ಬರಲು ಜ್ವರ ಹೆಚ್ಚಿತ್ತು, ಬಂದಾಗ ತುರ್ತು ಚಿಕಿತ್ಸೆಗೆ ವೈದ್ಯರಿರಲಿಲ್ಲಾ ಅಂತ ಪೊಷಕರು ಆರೋಪಿಸಿದ್ದಾರೆ. ಆಸ್ಪತ್ರೆ ಆವರಣದಲ್ಲಿ ಮೃತ ಮಗುವಿನ ತಾಯಿ ಗೋಳಾಟ ಜೋರಾಗಿತ್ತು. ಬಡಾವಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೆರೆಗೆ ಕಾಲು ಜಾರಿ ಬಿದ್ದು ಯುವತಿ ಸಾವು

ಕೆರೆಗೆ ಕಾಲು ಜಾರಿ ಬಿದ್ದು ಯುವತಿ ಮೃತಪಟ್ಟಿದ್ದಾಳೆ. ಹಂಸ (19) ಮೃತ ದುರ್ದೈವಿ. ತುಮಕೂರು ತಾಲೂಕಿನ ಮೈದಾಳ ಕೆರೆಯಲ್ಲಿ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಶಿವರಾಂಪುರ ಗ್ರಾಮದ ಸೋಮನಾಥ್ ಅವರ ಪುತ್ರಿ ಹಂಸ ನಿನ್ನೆ ರಜೆ ಹಿನ್ನೆಲೆಯಲ್ಲಿ ಮಂದಾರಗಿರಿ ಬೆಟ್ಟಕ್ಕೆ ಬಂದಿದ್ದಳು. ಅಲ್ಲೆ ಸಮೀಪದಲ್ಲಿದ್ದ ಮೈದಾಳ ಕೆರೆ ಕೋಡಿ ನೋಡಲು ತೆರಳಿದ್ದಳು ಈ ವೇಳೆ ಕೆರೆ ಕೋಡಿ ನೋಡುವ ವೇಳೆ ಕಾಲು ಜಾರಿ ಬಿದ್ದಿದ್ದಾಳೆ. ಸ್ಥಳಕ್ಕೆ ಕ್ಯಾತಸಂದ್ರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು, ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಯುವತಿ ಮೃತದೇಹ ಹುಡುಕಾಟಕ್ಕೆ ಕಾರ್ಯಾಚರಣೆ ನಡೆಸಿದ್ದಾರೆ. ಕ್ಯಾತಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಸವಾರ ಸಾವು

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಕುಮಟಾ ರಾಷ್ಟ್ರೀಯ ಹೆದ್ದಾರಿ 766EEಯ ಹಾರೂಗಾರ ಬಳಿ ನಿಂತಿದ್ದ ಲಾರಿಗೆ ಬೈಕ್‌ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಮೃತ ಬೈಕ್ ಸವಾರ ಅಮ್ಮಿನಳ್ಳಿಯ ಅಡಳ್ಳಿ ಮೂಲದವರು ಎನ್ನಲಾಗಿದೆ. ಬೆಳಗಿನ ಜಾವ ಶಿರಸಿಯತ್ತ ತೆರಳುತ್ತಿದ್ದ ಬೈಕ್ ಸವಾರ, ರಸ್ತೆಯಂಚಿಗೆ ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಆಂಬ್ಯುಲೆನ್ಸ್ ತಲುಪುವ ವೇಳೆಗಾಗಲೇ ಸವಾರ ಮೃತಪಟ್ಟಿದ್ದಾರೆ. ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಡಿವೈಡರ್‌ಗೆ ಕೇರಳ ಬಸ್‌; ಚಾಲಕ ಸ್ಪಾಟ್‌ ಡೆತ್‌

ಚಾಲಕನ ನಿಯಂತ್ರಣ ತಪ್ಪಿ ಕೇರಳ ಬಸ್‌ವೊಂದು ರೋಡ್ ಡಿವೈಡರ್ ಡಿಕ್ಕಿ ಹೊಡೆದಿದೆ. ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಡ್ಯದ ಗೆಜ್ಜಲಗೆರೆ ಬಳಿಯ ಮೈ- ಬೆಂ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಕೇರಳ ಬಸ್‌ ಚಾಲಕ ಹಸೀಬ್ (48) ಸ್ಥಳದಲ್ಲೇ ಮೃತಪಟ್ಟವರು. ಚಾಲಕನ ಮೃತದೇಹ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮದ್ದೂರು ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಮಳೆ

Karnataka Weather : ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

Karnataka Weather : ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

karnataka Weather Forecast

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಉಳಿದಂತೆ ಉತ್ತರ ಕರ್ನಾಟಕದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾದರೆ, ಉಳಿದೆಡೆ ಶುಷ್ಕ ಹವಾಮಾನ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆಯ ಸಿಂಚನವಾಗಲಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಮಳೆ ಸಾಧಾರಣವಾಗಿರಲಿದ್ದು, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನ‌ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ.

Continue Reading

ಮಳೆ

Karnataka Rain : ಧಾರಾಕಾರ ಮಳೆಗೆ ಹೊಳೆಯಂತಾದ ಬೆಂಗಳೂರು; ಈ ರಸ್ತೆಯಲ್ಲಿ ಓಡಾಡುವ ಮುನ್ನ ಹುಷಾರ್‌!

Karnataka Rain : ಧಾರಾಕಾರ ಮಳೆಗೆ ರಾಜಧಾನಿ ಬೆಂಗಳೂರಿನ ಸುತ್ತಮುತ್ತಲ ಪ್ರದೇಶವು ಹೊಳೆಯಂತಾಗಿದೆ.

VISTARANEWS.COM


on

Karnataka Rain

ಬೆಂಗಳೂರು:ಸತತವಾಗಿ ಸುರಿಯುತ್ತಿರುವ ಮಳೆಗೆ ರಾಜಧಾನಿ ಬೆಂಗಳೂರು ಹೊಳೆಯಂತಾಗಿದೆ. ರಸ್ತೆಗಳೆಲ್ಲವೂ ಮಳೆ ನೀರಿನಿಂದ ಮುಳುಗಡೆಯಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನರು ಪರದಾಡುವಂತಾಗಿದೆ.

Karnataka Rain

ಧಾರಾಕಾರ ಮಳೆಗೆ ಸರ್ಜಾಪುರ- ದೊಮ್ಮಸಂದ್ರ ರಸ್ತೆ ಜಲಾವೃತಗೊಂಡಿದೆ. ಸಿಲ್ಕ್ ಬೋರ್ಡ್‌ನಿಂದ ಸರ್ಜಾಪುರಕ್ಕೆ ಸಂಪರ್ಕಿಸುವ ರಸ್ತೆಯು ಮುಳುಗಡೆಯಾಗಿದೆ. ದೊಮ್ಮಸಂದ್ರ ಸರ್ಕಲ್ ಬಳಿ ರಸ್ತೆಯು ಕೆರೆಯಂತಾಗಿದೆ. ಹಳ್ಳ-ಗುಂಡಿಗಳಿಂದ ಕೂಡಿರುವ ರಸ್ತೆಯಲ್ಲಿ ವಾಹನ ಸವಾರರು ಹೈರಾಣಾದರು.

karnataka Rain

ಬಿಟ್ಟು ಬಿಡದ ಮಳೆಗೆ ಬೆಂಗಳೂರಿನ ಕೆಆರ್‌ ಮಾರ್ಕೆಟ್‌ನಲ್ಲಿ ನಿಂತ ನೀರಿನಿಂದಾಗಿ ವ್ಯಾಪಾರಿಗಳ ಗೋಳು, ಇನ್ನೊಂದೆಡೆ ವಾಹನ ಸವಾರರ ಫಜೀತಿ ಹೇಳತಿರದು.

Karnataka Rain

ಬನ್ನೇರುಘಟ್ಟ ರಸ್ತೆಯ ವಿಜಯಶ್ರೀ ಲೇಔಟ್‌, ಹುಳಿಮಾವು ಮೆಟ್ರೋ ಸ್ಟೇಷನ್ ಬಳಿಯ ರಸ್ತೆಗಳು ಜಲಾವೃತಗೊಂಡಿದೆ.

Heavy rains lash Bengaluru

ಶೆಟ್ಟಿಹಳ್ಳಿ ವಾರ್ಡ್‌ನ ಚೌಡಪ್ಪ ಬಡಾವಣೆ, ಕಾವೇರಿ ಬಡಾವಣೆ, ಶ್ರೀದೇವಿ ಬಡಾವಣೆಯ ರಾಜಕಾಲುವೆ ನೀರು ತುಂಬಿದ್ದು, ರಸ್ತೆಗಳಿಗೆ ಹಾಗೂ ಮನೆಗಳಿಗೆ ನುಗ್ಗಿದೆ.

Karnataka rain

ಬೆಂಗಳೂರಿನ ಸಂಪಂಗಿರಾಮನಗರದ 3-4 ಕಿಲೋ ಮೀಟರ್ ಜಲಾವೃತಗೊಂಡಿದ್ದು, ಬಿಎಂಟಿಸಿ ಬಸ್‌ಗಳು ಅರ್ಧ ಮುಳುಗಡೆಯಾಗಿದ್ದವು.

Continue Reading

ಮಳೆ

Karnataka Rain :ಸತತ ಮಳೆಗೆ ಬೆಂಗಳೂರು ಥಂಡಾ; ಶಾಲೆಗಳಿಗೆ ಇಂದು ರಜೆ ಘೋಷಣೆ

Karnataka Rain : ಸತತ ಮಳೆ ಹಿನ್ನೆಲೆಯಲ್ಲಿ ಜನ-ಜೀವನ ಅಸ್ತವ್ಯಸ್ತವಾಗಿದೆ. ಬೆಂಗಳೂರಿನ ಶಾಲೆಗಳಿಗೆ ಇಂದು ಸೋಮವಾರ ರಜೆ ಘೋಷಣೆ ಮಾಡಲಾಗಿದೆ.

VISTARANEWS.COM


on

Karnataka Rain

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಾದ್ಯಂತ (Karnataka Rain) ನಿರಂತರವಾಗಿ ಮಳೆಯಾಗುತ್ತಿದ್ದು, ರಸ್ತೆಗಳು ಕೆರೆಯಂತಾಗಿ ಮಾರ್ಪಾಡಾಗಿದೆ. ಈ ನಿಟ್ಟಿನಲ್ಲಿ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ, ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ. ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ ಜಿ ಮೌಖಿಕವಾಗಿ ಆದೇಶಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ , ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ. ತುರ್ತು ನಿರ್ಧಾರವಾದ ಕಾರಣ ಮೌಖಿಕವಾಗಿ ಆದೇಶಿಸಿದ್ದು, ಅಧಿಕೃತ ಆದೇಶವನ್ನು ಹೊರಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದ್ದು, ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು. ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸುವುದು.

ಮುಂಜಾಗೃತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದೆ. ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸುವುದು. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು. ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Continue Reading
Advertisement
Latest12 hours ago

ಪತ್ನಿ, ಮಗನ ಪ್ರತ್ಯೇಕ ಭೇಟಿಗೆ ಅವಕಾಶ ಕೋರಿದ ದರ್ಶನ್‌

Latest13 hours ago

ದುಬಾರೆಯಲ್ಲಿ ಆನೆಗಳ ಕಾದಾಟದ ವೇಳೆ ಮಹಿಳೆ ಸಾವು

Latest16 hours ago

ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಭಾವುಕ ಪೋಸ್ಟ್‌

Latest17 hours ago

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಪ್ರದಗ್ರಹಣ

ಪ್ರಮುಖ ಸುದ್ದಿ2 days ago

ವಿಜಯ್‌ ಸಿಎಂ ಆಗಿದ್ದಕ್ಕೆ ನನಗೆ ಅಸೂಯೆ ಇಲ್ಲ – ರಜನೀಕಾಂತ್‌

Latest2 days ago

ಕೇರಳಂ ಮುಖ್ಯಮಂತ್ರಿಯಾಗಿ ನಾಳೆ ವಿ.ಡಿ. ಸತೀಶನ್ ಪ್ರಮಾಣವಚನ

Latest3 days ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest4 days ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest4 days ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest4 days ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌