Site icon Vistara News

Hassan accident: ಸಿಎಂ ಬಸವರಾಜ ಬೊಮ್ಮಾಯಿ ಕಂಬನಿ, ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

hasana accident

ಮಂಡ್ಯ (ಕೆ.ಆರ್.ಪೇಟೆ): ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ೯ ಮಂದಿ ಮೃತಪಟ್ಟ ಘಟನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಜತೆಗೆ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ.ಗಳ ಪರಿಹಾರ ನೀಡಲಾಗುವುದೆಂದು ಘೋಷಿಸಿದರು.

ಕೆ.ಆರ್‌. ಪೇಟೆ ತಾಲೂಕಿನ ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲೆಂದು ಅಂಬಿಗ್ರಾಮ ಹೆಲಿಪ್ಯಾಡ್ ಗೆ ಬಂದಿಳಿದ ವೇಳೆ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಮಳೆ:ದೀರ್ಘಕಾಲಿಕ ಹಾಗೂ ತುರ್ತು ಕಾಮಗಾರಿಗಳಿಗೆ ಅನುದಾನ
ರಾಜ್ಯದಲ್ಲಿ ಮತ್ತೆ ಮಳೆಯಾಗುತ್ತಿದ್ದು, ದೀರ್ಘಕಾಲಿಕ ಶಾಶ್ವತ ಕಾಮಗಾರಿಗಳು ಮತ್ತು ತುರ್ತು ಕಾಮಗಾರಿಗಳನ್ನು ಕೂಡಲೇ ಕೈಗೊಳ್ಳಲು ಅಗತ್ಯ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಳೆಗೆ ಸಂಬಂಧಿಸಿದಂತೆ ಈಗಾಗಲೇ ಸರ್ಕಾರ ಕ್ರಮ ಕೈಗೊಂಡಿದೆ. ನಿರಂತರವಾಗಿ ಕೆಲಸವಾಗುವಂತೆ ಜಿಲ್ಲಾಧಿಕಾರಿ ಗಳೊಂದಿಗೆ ನಡೆದ ವೀಡಿಯೋ ಸಂವಾದದಲ್ಲಿ ಸೂಚನೆಗಳನ್ನು ನೀಡಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಹತ್ತು ಹಲವಾರು ಕೆರೆಗಳು ತುಂಬಿ ತೊಂದರೆಯಾಗಿದೆ. ತಕ್ಷಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ. ತಿಳಿಸಲಾಗಿದೆ. ಮೂಲಭೂತ ಸೌಕರ್ಯಕ್ಕೆ 600 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ದೀರ್ಘಕಾಲಿಕ ಪರಿಹಾರಕ್ಕೆ ಅಗತ್ಯವಿರುವ ಅನುದಾನವನ್ನೂ ಬಿಡುಗಡೆ ಮಾಡಲಾಗುವುದು ಎಂದರು.

ನಾಳೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಭೆ ನಡೆಯಲಿದ್ದು, ಅಲ್ಲಿ ಈ ವಿಚಾರವನ್ನು ವ್ಯಾಪಕವಾಗಿ ಚರ್ಚಿಸಿ ಪರಿಹಾರ ಸೂಚಿಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ | Hassan Accident | ಹಾಸನದಲ್ಲಿ 9 ಮಂದಿಯನ್ನು ಬಲಿ ತೆಗೆದುಕೊಂಡ ಭೀಕರ ಸರಣಿ ಅಪಘಾತ ಸಂಭವಿಸಿದ್ದು ಹೇಗೆ?

Exit mobile version