ಮಂಡ್ಯ: ಪ್ರಜಾದ್ವನಿ ಯಾತ್ರೆ ವೇಳೆ ಕಲಾವಿದರ ಮೇಲೆ 500 ರೂ. ನೋಟಿನ ಕಂತೆ ಎಸೆದ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಸಂಕಷ್ಟ ಎದುರಾಗಿದ್ದು, ಎಫ್‌ಐಆರ್ ದಾಖಲಾಗಿದೆ.
ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಡಿಕೆಶಿ ಮೇಲೆ ಮಂಡ್ಯದ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ. ಐಪಿಸಿ ಸೆಕ್ಷನ್ 171(e) ಆರ್‌ಪಿ ಆಕ್ಟ್ ಪ್ರಕಾರ ಎಫ್‌ಐಆರ್ ದಾಖಲು ಮಾಡಲಾಗಿದೆ.
ಮಾರ್ಚ್ 28ರಂದು ಶ್ರೀರಂಗಪಟ್ಟಣ ಕ್ಷೇತ್ರ ವ್ಯಾಪ್ತಿಯಲ್ಲಿ ಡಿಕೆಶಿ ಪ್ರಜಾಧ್ವನಿ ಯಾತ್ರೆ ಕೈಗೊಂಡಿದ್ದರು. ಯಾತ್ರೆ ಶ್ರೀರಂಗಪಟ್ಟಣ ತಾಲೂಕಿನ ಬೇವಿನಹಳ್ಳಿ ಗ್ರಾಮದ ಬಳಿ ಬರುತ್ತಿದ್ದಂತೆ ಕಲಾವಿದರಿಗೆ ಹಣ ನೀಡುವ ಭರದಲ್ಲಿ 500 ರೂ. ನೋಟುಗಳನ್ನು ಡಿಕೆಶಿ ಎಸೆದಿದ್ದರು. ಕಲಾವಿದರಿಗೆ ಹಣ ನೀಡಿದ ಆರೋಪದ ಮೇಲೆ ಶ್ರೀರಂಗಪಟ್ಟಣ ವಿಧಾನಸಭಾ ವ್ಯಾಪ್ತಿಯ ಸೆಕ್ಟರ್ ಆಫೀಸರ್ ದೂರು ನೀಡಿದ್ದರು. ಸದ್ಯ ಪ್ರಕರಣದಲ್ಲಿ ಎ1 ಆರೋಪಿಯಾಗಿ ಡಿಕೆಶಿ ಹೆಸರು ದಾಖಲಿಸಲಾಗಿದೆ.
ಇದನ್ನೂ ಓದಿ: Karnataka Election 2023: ರಾಜ್ಯಾದ್ಯಂತ 6 ದಿನದಲ್ಲಿ ನಗದು ಸೇರಿ 47 ಕೋಟಿ ರೂ. ಮೌಲ್ಯದ ವಸ್ತುಗಳು ಜಪ್ತಿ