ನಾಗಮಂಗಲ: ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ (Congress Government) ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದ್ದು, (Lok Sabha Election 2024) ಪಕ್ಷದ ಪ್ರಣಾಳಿಕೆಯಲ್ಲಿನ ಎಲ್ಲಾ ಭರವಸೆಗಳನ್ನು ಕಾಂಗ್ರೆಸ್ ಸರ್ಕಾರವು ಈಡೇರಿಸಲಿದೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ತಿಳಿಸಿದರು.
ನಾಗಮಂಗಲ ತಾಲೂಕಿನ ತುಪ್ಪದಮಡ ಗ್ರಾಮದಲ್ಲಿ ಎಐಸಿಸಿ ಘೋಷಣೆ ಮಾಡಿರುವ ಗ್ಯಾರಂಟಿ ಕಾರ್ಡ್‌ಗಳನ್ನು ಸಚಿವ ಚಲುವರಾಯಸ್ವಾಮಿ ಅವರೊಂದಿಗೆ ವಿತರಣೆ ಮಾಡಿ, ಬಳಿಕ ಅವರು ಮಾತನಾಡಿದರು.
ಇದನ್ನೂ ಓದಿ: FD interest rate: ಬಜಾಜ್ ಫೈನಾನ್ಸ್ ಹೆಚ್ಚಿನ ಅವಧಿಯ ಸ್ಥಿರ ಠೇವಣಿ ಬಡ್ಡಿ ದರಗಳಲ್ಲಿ ಏರಿಕೆ
ಪಂಚಗ್ಯಾರಂಟಿಗಳು ಜನತೆಯ ಕೈ ಹಿಡಿದಿವೆ. ಮಹಿಳೆಯರ ಸಬಲೀಕರಣ, ಯುವಕರಿಗೆ ಉದ್ಯೋಗ, ಮೀಸಲಾತಿ, ಸಾಮಾಜಿಕ ನ್ಯಾಯವನ್ನು ನ್ಯಾಯ ಪತ್ರ ಒಳಗೊಂಡಿದೆ. ಕೆಲವು ಮಹಿಳೆಯರಿಗೆ ಸಾಂಕೇತಿಕವಾಗಿ ಗ್ಯಾರಂಟಿ ಕಾರ್ಡ್‌ಗಳನ್ನು ವಿತರಣೆ ಮಾಡಲಾಗಿದೆ. ನಮ್ಮ ಕಾರ್ಯಕರ್ತರು ಮನೆಮನೆಗೆ ಗ್ಯಾರಂಟಿ ಕಾರ್ಡ್‌ಗಳನ್ನು ತಲುಪಿಸಲಿದ್ದು ಜನ ನಮ್ಮ ಕೈ ಹಿಡಿಯಲಿದ್ದಾರೆ ಎಂದರು.
ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಮಾತನಾಡಿ, ದಕ್ಷಿಣದಲ್ಲಿ 100 ಕ್ಕೂ ಹೆಚ್ಚು ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದ್ದು ಕೇಂದ್ರದಲ್ಲಿ ನೂರಕ್ಕೆ ನೂರರಷ್ಟು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಅಲ್ಲೂ ಕೂಡ ಗ್ಯಾರಂಟಿ ಜಾರಿ ಮಾಡುತ್ತೇವೆ. ಜನರು ಗ್ಯಾರಂಟಿಗಳನ್ನು ಜಾರಿಗೆ ತಂದವರ ಪರವಾಗಿ ನಿಲ್ಲಬೇಕು ಎಂದರು.
ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆ
ನಾಗಮಂಗಲ ತಾಲೂಕು ತುಪ್ಪದಮಡ ಗ್ರಾಮಪಂಚಾಯಿತಿಯಲ್ಲಿ ಜೆಡಿಎಸ್‌ನ ಹಲವು ಕಾರ್ಯಕರ್ತರು ಕಾಂಗ್ರೆಸ್‌ಗೆ ಸೇರ್ಪಡೆಯಾದರು.
ಬೆಟ್ಟೇಗೌಡ, ಸೂರಿ, ರವಿ, ಪ್ರತಾಪ್ ಮತ್ತು ಸಂಗಡಿಗರು, ಪ್ರದೀಪ್, ಉಮೇಶ್, ಸೋಮಣ್ಣ, ದೊಡ್ಡನಗೌಡರು, ಚಿಕ್ಕಣ್ಣ, ಜಯರಾಮ್, ನಾಗರಾಜ್, ಶಿಕಾರಿಪುರ ಗ್ರಾಮದ ಮುಖಂಡರು ಸೇರಿದಂತೆ ಹಲವು ಜೆಡಿಎಸ್ ಕಾರ್ಯಕರ್ತರಿಗೆ ಸಚಿವ ಚಲುವರಾಯಸ್ವಾಮಿ, ಅಭ್ಯರ್ಥಿ ವೆಂಕಟರಮಣೇಗೌಡ ಅವರು ಶಾಲು ಹಾಕಿ, ಪಕ್ಷಕ್ಕೆ ಬರಮಾಡಿಕೊಂಡರು.
ಇದನ್ನೂ ಓದಿ: IPL 2024 Points Table: ರಾಜಸ್ಥಾನ್ಗೆ ಮೊದಲ ಸೋಲು; ಅಂಕಪಟ್ಟಿಯಲ್ಲಿ ಪ್ರಮುಖ ಬದಲಾವಣೆ
ಈ ವೇಳೆ ಕಾಂಗ್ರೆಸ್ ಮುಖಂಡರಾದ ಪ್ರಸನ್ನ, ಕೃಷ್ಣಪ್ಪ, ಲಕ್ಷ್ಮಿಕಾಂತ್, ಎಚ್.ಡಿ.ಪ್ರಸನ್ನ, ರಮೇಶ್, ಸಾವಿತ್ರಮ್ಮ, ದೇವರಾಜ್, ಕುಮಾರ್, ಪುಟ್ಟಸ್ವಾಮಿ, ನಾಗರಾಜ್, ಗೋವಿಂದ್ ಸೇರಿದಂತೆ ನಾನಾ ಮುಖಂಡರು ಉಪಸ್ಥಿತರಿದ್ದರು.