ಮಂಡ್ಯ: ಕಾವೇರಿ ನೀರಿನ ಉಳಿವಿಗಾಗಿ ಸೆಪ್ಟೆಂಬರ್ 26ರಂದು (ಮಂಗಳವಾರ) ಕರೆ ನೀಡಲಾಗಿರುವ ಬೆಂಗಳೂರು ಬಂದ್‌ಗೆ (Bangalore bandh on September 26) ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಸ್ಯಾಂಡಲ್‌ವುಡ್ ಕಲಾವಿದರೂ ಕೂಡ ರೈತರಿಗೆ ಬೆಂಬಲ ನೀಡುತ್ತಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan Thoogudeepa) ಕೂಡ ರೈತರ ಬೆಂಬಲಕ್ಕೆ ನಿಂತಿದ್ದರು. ಈ ವೇಳೆ ಕನ್ನಡ ಸಿನಿಮಾ ಕಲಾವಿದರು ಅದಕ್ಕೆ ಬರಲಿಲ್ಲ, ಇದಕ್ಕೆ ಬರಲಿಲ್ಲ ಎಂದು ಹೇಳುತ್ತೀರಲ್ಲ ಕರ್ನಾಟಕದಲ್ಲಿ ತಮಿಳು ಸಿನಿಮಾವೊಂದು 36 ಕೋಟಿ ರೂ. ಕಲೆಕ್ಷನ್ ಮಾಡಿದೆ ಎಂದು ತಮಿಳು ನಟರು ಹಾಗೂ ಅವರ ಸಿನಿಮಾಗಳ ಬಗ್ಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದರು. ಇದೀಗ ನಟ ದರ್ಶನ್ ಅವರ ಬೇಜಾವಬ್ದಾರಿತನದ ಹೇಳಿಕೆ ವಿರುದ್ಧ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಆಕ್ರೋಶ ಹೊರ ಹಾಕಿದೆ.
ನಟ ದರ್ಶನ್ ವಿರುದ್ಧ ಭುಗಿಲೆದ್ದ ಆಕ್ರೋಶ
ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಹೋರಾಟ ನಡೆಸಿದೆ. ಕಾವೇರಿ ವಿಚಾರವಾಗಿ ನಟ ದರ್ಶನ್ ಬೇಜವಾಬ್ದಾರಿತನದ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ʻʻನಟ ದರ್ಶನ್ ಅವರು ಕೂಡಲೇ ರೈತರಲ್ಲಿ ಕ್ಷಮೆ ಕೇಳಬೇಕು. ನಾವು ಒಂದು ತಿಂಗಳಿನಿಂದ ಹೋರಾಟ ಮಾಡುತ್ತಿದ್ದೇವೆ. ನಮ್ಮ ಹೋರಾಟಕ್ಕೆ ದರ್ಶನ್ ಬಂದರೆ ಬಲ ಸಿಗುತ್ತದೆ ಎಂದು ಭಾವಿಸಿದ್ದೇವು. ಅದಕ್ಕಾಗಿಯೇ ನಾವು ಆಹ್ವಾನಿಸಿದ್ದೇವು. ಕಾವೇರಿ ಕೊಳ್ಳದ ಜಿಲ್ಲೆಯವರಾಗಿ ಹೋರಾಟಗಾರರ ಬಗ್ಗೆ ಕೇವಲವಾಗಿ ಮಾತನಾಡಬಾರದು. ಜವಾಬ್ದಾರಿಯುತ ನಟನಾಗಿ ಹೋರಾಟಕ್ಕೆ ದನಿಗೂಡಿಸಿಬೇಕಿತ್ತುʼʼ ಎಂದು ರೈತರು ದರ್ಶನ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕುತ್ತಿದ್ದಾರೆ.
ಇದನ್ನೂ ಓದಿ: Darshan Thoogudeepa: ತಮಿಳು ಸಿನಿಮಾ ಯಾಕೆ ನೋಡಿದ್ರಿ? ಕಾವೇರಿ ವಿಚಾರದಲ್ಲಿ ದರ್ಶನ್ ಕೆಂಡ
ಚಾಲೆಂಜಿಂಗ್ ಸ್ಟಾರ್ @dasadarshan BOSS
— DBoss Cult (@ItzDBOSSCult) September 25, 2023
with @nagaraj_rachaiya Anna 🥰❤️#DBoss𓃰 #D56 #Kaatera #Darshanthoogudeepa #ChallengingStarDarshan pic.twitter.com/4maJ32Ny3l
ದರ್ಶನ್ ಹೇಳಿದ್ದೇನು?
ಕಾವೇರಿ ಗಲಾಟೆ ಆರಂಭ ಆಗುತ್ತಿದ್ದಂತೆ ಸ್ಯಾಂಡಲ್‌ವುಡ್ ನಟರ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಈ ಬಗ್ಗೆ ಕನ್ನಡ ಚಿತ್ರರಂಗದ ತಾರೆಗಳು ಧ್ವನಿ ಎತ್ತುತ್ತಿಲ್ಲ ಎಂಬಂತಹ ಮಾತುಗಳು ಕೇಳಿ ಬಂದಿದ್ದವು. ಈ ಬಗ್ಗೆ ನಟ ದರ್ಶನ್ ಖಾರವಾಗಿಯೇ ಮಾತನಾಡಿದ್ದರು. ʻʻಕರ್ನಾಟಕದಲ್ಲಿ ತಮಿಳು ಸಿನಿಮಾವೊಂದು 36 ಕೋಟಿ ರೂ. ಕಲೆಕ್ಷನ್ ಮಾಡಿದೆ. ದರ್ಶನ್, ಶಿವಣ್ಣ, ಸುದೀಪ್, ಯಶ್ ಮಾತ್ರ ನಿಮಗೆ ಕಾಣುತ್ತಾರಾ? ಅವರು ಯಾರೂ ಕಾಣಿಸೋದಿಲ್ಲವೇ?ʼʼ ಎಂದು ಕನ್ನಡ ಕಲಾವಿದರ ಬಗ್ಗೆ ಟೀಕೆ ಮಾಡಿದವರಿಗೆ ದರ್ಶನ್ ತಿರುಗೇಟು ನೀಡಿದ್ದರು.
ದರ್ಶನ್ ವಿಡಿಯೊದಲ್ಲಿ ʻʻನೋಡಿ ಸ್ವಾಮಿ ಮೊನ್ನೆ ಮೊನ್ನೆಯಷ್ಟೇ ಒಂದು ತಮಿಳು ಸಿನಿಮಾ ರಿಲೀಸ್ ಆಯ್ತು. ಒಬ್ಬ ವಿತರಕ 6 ಕೋಟಿಗೆ ಸಿನಿಮಾ ತಗೊಂಡ. 35, 36 ಕೋಟಿ ರೂ. ಮಾಡಿದ. ಆ ಸಿನಿಮಾವನ್ನು ಇಲ್ಲಿ ತಮಿಳಿನವರು ನೋಡಿದ್ರಾ ಸ್ವಾಮಿ? ಎಲ್ಲೋ ಇದ್ದು ಏನೋ ಮಾಡಿದವರಿಗೆ ನೂರಾರು ಕೋಟಿ ಕೊಡ್ತೀರಾ? ಯಾಕೆ ನೀವು ಕನ್ನಡ ಸಿನಿಮಾಗೆ ಕೊಡಲ್ಲ?.” ಎಂದು ಪ್ರಶ್ನೆ ಮಾಡಿದ್ದರು. ನೀವು ಕನ್ನಡ ಸಿನಿಮಾ ನೋಡೋದಿಲ್ಲ, ನಾವೇಕೆ ಬೆಂಬಲ ನೀಡಬೇಕು ಎಂಬರ್ಥದಲ್ಲಿ ಮಾತನಾಡಿದ್ದರು.