ಮಂಡ್ಯ: ಕಬ್ಬಿನ ಬೆಲೆ ಏರಿಕೆ ಒತ್ತಾಯಿಸಿ ರೈತರು ನಡೆಸುತ್ತಿರುವ ಹೋರಾಟ 43ನೇ ದಿನಕ್ಕೆ ಕಾಲಿಟ್ಟರೂ ಸ್ಪಂದಿಸದ ಸರ್ಕಾರದ ನಡೆಯನ್ನು ಖಂಡಿಸಿ ಇಂದು ಮಂಡ್ಯ ಬಂದ್ ನಡೆಯಲಿದೆ.
ಟನ್ ಕಬ್ಬಿಗೆ 4500 ರೂ., ಹಾಲು ಲೀಟರ್‌ಗೆ 40 ರೂ. ನಿಗದಿಪಡಿಸುವಂತೆ ಒತ್ತಾಯಿಸಿ ರೈತರು ಆಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ 43 ದಿನಗಳಿಂದ ಧರಣಿ ನಡೆಸಲಾಗುತ್ತಿದೆ. ತಮ್ಮ ಬೇಡಿಕೆಗೆ ಯಾವುದೇ ಮನ್ನಣೆ ಕೊಡದ ಸರ್ಕಾರದ ನಡೆ ಖಂಡಿಸಿ ಮಂಡ್ಯ ನಗರ ಬಂದ್‌ಗೆ ರೈತರು ಕರೆ ಕೊಟ್ಟಿದ್ದಾರೆ.
ರೈತರ ಇಂದಿನ ಹೋರಾಟಕ್ಕೆ ಕನ್ನಡಪರ ಸಂಘಟನೆಗಳು, ಪ್ರಗತಿಪರ ಸಂಘಟನೆಗಳು ಬೆಂಬಲ ನೀಡಿವೆ. ಬೆಳಗ್ಗೆ 6ರಿಂದ ಮಧ್ಯಾಹ್ನ 2 ಗಂಟೆ ವರೆಗೆ ಮಂಡ್ಯ ನಗರ ಬಂದ್ ಮಾಡಲಿದ್ದು, ಮಂಡ್ಯದ ಸಿಲ್ವರ್ ಜ್ಯೂಬಿಲಿ ಪಾರ್ಕ್‌ನಿಂದ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಬಳಿಯ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಸೇರಿ ಪ್ರತಿಭಟನೆ ನಡೆಸಲಿದ್ದಾರೆ. ಬಂದ್ ಹಿನ್ನೆಲೆಯಲ್ಲಿ ಬಸ್ಸುಗಳ ಸಂಚಾರದಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ. ಶಾಲಾ ಕಾಲೇಜುಗಳಿಗೂ ರಜೆ ಇಲ್ಲ.
ಇದನ್ನೂ ಓದಿ | Farmer Protest | ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಕಾಣೆಯಾಗಿದ್ದಾರೆ; ಹುಡುಕಿ ಕೊಡಿ ಎಂದ ರೈತ ಸಂಘ!