Mandya Municipal Council Election: ಜೆಡಿಎಸ್‌-ಬಿಜೆಪಿ ಮೈತ್ರಿ ಪಾಲಾದ ಮಂಡ್ಯ ನಗರಸಭೆ ಗದ್ದುಗೆ; ಅಧ್ಯಕ್ಷರಾಗಿ ನಾಗೇಶ್ ಆಯ್ಕೆ - Vistara News

ಮಂಡ್ಯ

Mandya Municipal Council Election: ಜೆಡಿಎಸ್‌-ಬಿಜೆಪಿ ಮೈತ್ರಿ ಪಾಲಾದ ಮಂಡ್ಯ ನಗರಸಭೆ ಗದ್ದುಗೆ; ಅಧ್ಯಕ್ಷರಾಗಿ ನಾಗೇಶ್ ಆಯ್ಕೆ

ತೀವ್ರ ಕುತೂಹಲ ಮೂಡಿಸಿದ್ದ ಮಂಡ್ಯ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ (Mandya Municipal Council Election) ಮಂಡ್ಯ ನಗರಸಭೆ ಗದ್ದುಗೆ ಜೆಡಿಎಸ್‌-ಬಿಜೆಪಿ ಮೈತ್ರಿ ಪಾಲಾಗಿದ್ದು, ಎರಡನೇ ಅವಧಿಗೆ ಅಧ್ಯಕ್ಷರಾಗಿ ನಾಗೇಶ್, ಉಪಾಧ್ಯಕ್ಷರಾಗಿ ಅರುಣ್ ಕುಮಾರ್ ಆಯ್ಕೆಯಾಗಿದ್ದಾರೆ.

VISTARANEWS.COM


on

Mandya Municipal Council Election
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಡ್ಯ: ತೀವ್ರ ಕುತೂಹಲ ಮೂಡಿಸಿದ್ದ ಮಂಡ್ಯ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ (Mandya Municipal Council Election) ಮಂಡ್ಯ ನಗರಸಭೆ ಗದ್ದುಗೆ ಜೆಡಿಎಸ್‌-ಬಿಜೆಪಿ ಮೈತ್ರಿ ಪಾಲಾಗಿದೆ.

ಇಂದು ನಡೆದ ಮಂಡ್ಯ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನದ ಚುನಾವಣೆಯಲ್ಲಿ ಎರಡನೇ ಅವಧಿಗೆ ಅಧ್ಯಕ್ಷರಾಗಿ ನಾಗೇಶ್, ಉಪಾಧ್ಯಕ್ಷರಾಗಿ ಅರುಣ್ ಕುಮಾರ್ ಆಯ್ಕೆಯಾದರು. ಅಧಿಕಾರ ಹಿಡಿಯಲು ಎರಡು ಪಕ್ಷದವರಿಂದ ತಂತ್ರ-ಪ್ರತಿತಂತ್ರ ರೂಪಿಸಲಾಗಿತ್ತು.

ಇದನ್ನೂ ಓದಿ: Mandya Municipal Council Election: ಮಂಡ್ಯ ನಗರಸಭೆ ಚುನಾವಣೆ ವೇಳೆ ಹೈಡ್ರಾಮಾ; ಕುಮಾರಸ್ವಾಮಿ ಎದುರೇ ಕಾಂಗ್ರೆಸ್-ಜೆಡಿಎಸ್ ಜಟಾಪಟಿ

ಕಾಂಗ್ರೆಸ್ಸಿಗೆ ಸೆಡ್ಡು ಹೊಡೆದ ಸಂಸದ ಹಾಗೂ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ, ರಿವರ್ಸ್ ಆಪರೇಷನ್ ಮಾಡಿ ಕಾಂಗ್ರೆಸ್ಸಿನ ಓರ್ವ ಸದಸ್ಯನನ್ನು ತಮ್ಮ ಹಿಡಿತಕ್ಕೆ ತೆಗೆದುಕೊಂಡು ಮಂಡ್ಯ ನಗರಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.

ಜೆಡಿಎಸ್‌-ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

ಮಂಡ್ಯ ನಗರಸಭೆ ಗದ್ದುಗೆ ಜೆಡಿಎಸ್‌-ಬಿಜೆಪಿ ಮೈತ್ರಿ ಪಾಲಾಗುತ್ತಿದ್ದಂತೆ ಜೆಡಿಎಸ್‌-ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ‌ ಸಂಭ್ರಮಿಸಿದರು. ಈ ವೇಳೆ ಸಂಸದ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಜೈಕಾರ ಕೂಗಿ ಹರ್ಷ ವ್ಯಕ್ತಪಡಿಸಿದರು.

ಗೆಲುವಿನ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ, ವಾಮಮಾರ್ಗದಲ್ಲಿ ಅಧಿಕಾರ ಹಿಡಿದರು ಎಂಬ ಶಾಸಕ ಗಣಿಗ ರವಿ ಹೇಳಿಕೆಗೆ ತಿರುಗೇಟು ನೀಡಿದರು. ಶಾಸಕರ ಪ್ರಕಾರ ವಾಮಮಾರ್ಗದ ಅರ್ಥವೇನು? ಮತದಾನದ ವೇಳೆಯೂ ಕಣ್ಸನ್ನೇ, ಕೈಸನ್ನೇ ಮೂಲಕವೂ ಹಣದ ಆಮಿಷ ಒಡ್ಡಿದ್ದಾರೆ. ನನ್ನ ಜೀವನದಲ್ಲಿ ಮೊದಲ ಬಾರಿ ಸ್ಥಳೀಯ ಸಂಸ್ಥೆ ಚುನಾವಣೆಗೆ ಮತಹಾಕಲು ಬಂದಿದ್ದೇನೆ. ಕಳೆದ 20 ದಿನಗಳಿಂದ ನಡೆದ ರಾಜಕೀಯ ಬೆಳವಣಿಗೆ ಗಮನಿಸಿ ನಾನು ಬರಬೇಕಾಯ್ತು. ಕ್ಯಾಬಿನೆಟ್ ಸಭೆ ಬಿಟ್ಟು ಪ್ರಧಾನಮಂತ್ರಿ ಅನುಮತಿ ಪಡೆದು ಮತದಾನದಲ್ಲಿ ಭಾಗವಹಿಸಿದೆ. ಚುನಾವಣೆ ಸೋಲಿನ ಭಯದಲ್ಲಿ ಚುನಾವಣೆ ಮುಂದೂಡುವುದರಲ್ಲಿ ಕಾಂಗ್ರೆಸ್ ಎಕ್ಸ್‌ಪರ್ಟ್, ಶಾಂತಿಯುತವಾಗಿ ಚುನಾವಣೆ ನಡೆಯಲು ಅಧಿಕಾರಿಗಳು ಸಹಕರಿಸಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಹಿಂದಿನ ಅಧ್ಯಕ್ಷರು ವ್ಯಾಪಾರ ಶುರು ಮಾಡಿದ್ದರು. ನಮ್ಮ‌ ಪಕ್ಷದಿಂದ ಗೆದ್ದು ಯಾವ ರೀತಿ ನಡೆದುಕೊಂಡರು ಗೊತ್ತಿದೆ. ಮಹದೇವು ನಿಷ್ಠಾವಂತ ಜೆಡಿಎಸ್ ಸದಸ್ಯರು, ಪಕ್ಷ ಮುಖ್ಯ ಎಂದು ಉಪಾಧ್ಯಕ್ಷಕ್ಕೆ ಸ್ಪರ್ಧಿಸಲಿಲ್ಲ. ಕಾಂಗ್ರೆಸ್ ಕುಟುಂಬ ಸದಸ್ಯರ ಬ್ಲಾಕ್ ಮೇಲ್ ಮಾಡಿದ್ದರು. ಅದಕ್ಕಾಗಿ ಸದಸ್ಯರನ್ನ, ಕುಟುಂಬಸ್ಥರನ್ನು ಇಟ್ಟುಕೊಂಡು ಚುನಾವಣೆ ಮಾಡಲು ಮುಂದಾಗಿದ್ದರು. ಮಹದೇವು ತೆಗೆದುಕೊಂಡ ನಿರ್ಧಾರ ಪಕ್ಷನಿಷ್ಠೆ ತೋರಿದೆ, ಅವರ ಮನೆಗೆ ತೆರಳಿ ಕೃತಜ್ಞತೆ ತಿಳಿಸುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ: Karnataka Weather : ಮತ್ತೆ ಭಾರಿ ಮಳೆ ಮುನ್ಸೂಚನೆ; ಏಳು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಈ ಕುರಿತು ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿ, ರಾಜಕೀಯ ಅಂದರೆ ಆಮಿಷ ಎಲ್ಲಾ ಸಹಜ. ಅಂತಿಮವಾಗಿ ನಂಬರ್ ಎನ್ನೋದು ಮುಖ್ಯ. ನಾವು ಆ ನಂಬರ್‌ ಅನ್ನು ಮುಟ್ಟಿದ್ದೇವೆ. ಮುಂದಿನ ದಿನಗಳಲ್ಲಿ ಇತರೆ ಚುನಾವಣೆಗಳಲ್ಲಿ ಎನ್‌ಡಿಎ ಗೆಲ್ಲುತ್ತೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಬೆಂಗಳೂರಿನಲ್ಲಿ ಘಳಿಗೆವೊಂದು ವಾತಾವರಣ; ಕರಾವಳಿಗೆ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

karnataka Weather Forecast : ಇಂದು ರಾಜಧಾನಿ ಬೆಂಗಳೂರಿನಲ್ಲಿ ಘಳಿಗೆಗೊಂದು ವಾತಾವರಣ ಇರಲಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯದ ಕರಾವಳಿ ಸುತ್ತಮುತ್ತ ಗುಡುಗು ಸಹಿತ ಭಾರೀ ಮಳೆಯಾಗುವ (Karnataka Weather Forecast) ಸಾಧ್ಯತೆ ಇದೆ. ಮಲೆನಾಡಿನಲ್ಲಿ ಸಾಧಾರಣ ಮಳೆಯಾದರೆ (Rain News) ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಕೋಲಾರ-ಬೆಳಗಾವಿಯಲ್ಲಿ ಮಳೆ ಅಬ್ಬರ

ದಕ್ಷಿಣ ಒಳನಾಡಿನ‌ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗಲಿದೆ.

ಬೆಳಗಾವಿಯಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಾದ ಧಾರವಾಡ, ಬಾಗಲಕೋಟೆ, ಬೀದರ್‌, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Weather : ನಿರಂತರ ಮಳೆಗೆ ಮನೆ ಗೋಡೆ ಕುಸಿತ; ಮಹಿಳೆ ಆಸ್ಪತ್ರೆ ಪಾಲು

ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ

ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕೆಲವೊಮ್ಮೆ ಬಿಸಿಲಿನ ಜತೆಗೆ ಮೋಡ ಕವಿದ ವಾತಾವರಣ ಇರಲಿದೆ.

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ವಿಪರೀತ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಕೊಡಗು, ಕೋಲಾರ, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ನಿರಂತರ ಮಳೆಗೆ ಮನೆ ಗೋಡೆ ಕುಸಿತ; ಮಹಿಳೆ ಆಸ್ಪತ್ರೆ ಪಾಲು

Karnataka Weather Forecast : ಉತ್ತರಕನ್ನಡದಲ್ಲಿ ಸುರಿದ ಮಳೆಗೆ ಮನೆ ಗೋಡೆ ಕುಸಿದು ಮಹಿಳೆಯೊಬ್ಬರು ಗಂಭೀರ ಗಾಯಗೊಂಡಿದ್ದಾರೆ. ಘಟ್ಟಪ್ರದೇಶದಲ್ಲಿ ಮಳೆ ಅಬ್ಬರಕ್ಕೆ ಜಮಖಂಡಿ-ಮೀರಜ್ ರಾಜ್ಯ ಹೆದ್ದಾರಿ ಬಂದ್ ಆಗಿದೆ. ದಾವಣಗೆರೆಯಲ್ಲಿ ತುಂಗಾ ನಾಲೆ ಒಡೆದು ಸಾವಿರಾರು ಎಕರೆ ಬೆಳೆ ನಾಶವಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಕರಾವಳಿಯ ಉತ್ತರಕನ್ನಡದಲ್ಲಿ ನಿರಂತರ ಮಳೆಯಿಂದಾಗಿ (Karnataka Weather Forecast) ಮನೆ ಗೋಡೆ ಕುಸಿದು ಬಿದ್ದು ಮಹಿಳೆಯೊಬ್ಬರು (Rain News) ಗಂಭೀರಗೊಂಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದ ಹೊನ್ನಿಕೊಪ್ಪದಲ್ಲಿ ಘಟನೆ ನಡೆದಿದೆ. ಅಟೆಲ್ ಸಾಬ್ ಅತ್ತಾರ್ ಎಂಬುವವರಿಗೆ ಸೇರಿದ ಮನೆ ಇದಾಗಿದೆ. ಪಕ್ಕದ ಮನೆಯ ಸಾತವ್ವ ಭೀಮಣ್ಣ(50) ಎಂಬುವವರಿಗೆ ಗಾಯವಾಗಿದೆ. ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ‌ರವಾನೆ ಮಾಡಲಾಗಿದೆ. ಸ್ಥಳಕ್ಕೆ ಕಂದಾಯ ಹಾಗೂ ಪೊಲೀಸ್‌ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ.

ಜಮಖಂಡಿ-ಮೀರಜ್ ರಾಜ್ಯ ಹೆದ್ದಾರಿ ಬಂದ್

ಚಿಕ್ಕೋಡಿ: ಮಹಾರಾಷ್ಟ್ರ ಹಾಗೂ ಘಟ್ಟ ಪ್ರದೇಶದಲ್ಲಿ ಮಳೆ ಅಬ್ಬರ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ ಅಡ್ಡಲಾಗಿದ್ದ ಜಮಖಂಡಿ-ಮೀರಜ್ ರಾಜ್ಯ ಹೆದ್ದಾರಿ ಬಂದ್ ಆಗಿದೆ. ಎರಡನೇ ಬಾರಿಗೆ ಕುಡಚಿ ಉಗಾರಖುರ್ದ್ ಮಧ್ಯದ ಸಂಪರ್ಕ ಕಲ್ಪಿಸುವ ಸೇತುವೆ ಮುಳುಗಡೆಯಾಗಿದೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿ ಸೇತುವೆ ಇದಾಗಿದೆ. ಕರ್ನಾಟಕ ಮತ್ತು ಮಹಾರಾಷ್ಟ್ರದ ಸಂಪರ್ಕ ಕೊಂಡಿಯಾಗಿರೋ ಸೇತುವೆಯಲ್ಲಿ ನಿತ್ಯ ನೂರಾರು ಬಸ್ ಹಾಗೂ ವಾಹನಗಳು ಓಡಾಡುವ ಪ್ರಮುಖ ರಾಜ್ಯ ಹೆದ್ದಾರಿ ಇದಾಗಿದೆ. ಬಾಗಲಕೋಟೆ, ಜಮಖಂಡಿಯಿಂದ ಮಹಾರಾಷ್ಟ್ರಕ್ಕೆ ಸಂಪರ್ಕಿಸಲಿದೆ. ಕುಡಚಿ ಠಾಣಾ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಸೇತುವೆಗೆ ಬ್ಯಾರಿಕೇಡ್‌ ಅಳವಡಿಸಿದ್ದಾರೆ.

ಯಲ್ಲಮ್ಮ ದೇವಸ್ಥಾನ ಜಲಾವೃತ

ಮಹಾರಾಷ್ಟ್ರದ ಪುಣೆಯಲ್ಲಿ ಭಾರಿ ‌ಮಳೆಯಿಂದಾಗಿ ಮಹಾರಾಷ್ಟ್ರದ ಮೀರ್ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗುತ್ತಿದೆ. ಕಲಬುರಗಿಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದ ಯಲ್ಲಮ್ಮ ದೇವಸ್ಥಾನ ಜಲಾವೃತಗೊಂಡಿದೆ. ಸೊನ್ನ ಬ್ಯಾರೆಜ್‌ನಿಂದ ಭೀಮಾನದಿಗೆ 1 ಲಕ್ಷ 20 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗಿದೆ.

ಇತ್ತ ಮಹಾರಾಷ್ಟ್ರದ ಮಹಾಮಳೆಗೆ ಭೀಮಾನದಿಗೆ ನೀರಿನ ಒಳಹರಿವು ಹೆಚ್ಚಳಗೊಂಡಿದೆ. ಭೀಮಾ ನದಿ ಒಡಲು ಅಪಾಯದ ಮಟ್ಟ ಮೀರಿ ಉಕ್ಕಿಹರಿಯುತ್ತಿದೆ. ಭೀಮಾನದಿಗೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸಣಗಿ ಬ್ಯಾರೇಜ್‌ನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ. ಹೀಗಾಗಿ ಭೀಮಾ ನದಿ ತೀರದ ದೇಗುಲಗಳು ಜಲಾವೃತಗೊಂಡಿದೆ. ವಿರಾಂಜನೇಯ ಹಾಗೂ ಕಂಗಳೇಶ್ವರ ಎರಡು ದೇವಾಲಯಗಳು ಮುಳುಗಡೆಯಾಗಿದೆ. ಇತ್ತ ನದಿ ತೀರಕ್ಕೆ ತೆರಳದಂತೆ ಎಚ್ಚರಿಕೆ ನೀಡಿದರೂ ಜಿಲ್ಲಾಡಳಿತದ ಆದೇಶಕ್ಕೆ ಡೋಂಟ್ ಕೇರ್ ಎನ್ನುತ್ತಿದ್ದಾರೆ. ಬ್ಯಾರೇಜ್ ಮುಂಭಾಗದ ಭೀಮಾ ನದಿ ತೀರದಲ್ಲಿಯೇ ಮೀನು ಹಿಡಿಯುವ ಹುಚ್ಚು ಸಾಹಸ ಮಾಡುತ್ತಿದ್ದಾರೆ.

ದಾವಣಗೆರೆಯಲ್ಲಿ ತುಂಗಾ ನಾಲೆ ಒಡೆದು ಸಾವಿರಾರು ಎಕರೆ ಬೆಳೆ ನಾಶ

ದಾವಣಗೆರೆಯಲ್ಲಿ ತುಂಗಾ ನಾಲೆ ಒಡೆದು ಸಾವಿರಾರು ಎಕರೆ ಬೆಳೆ ನಾಶವಾಗಿದೆ. ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೆ ಲಕ್ಷಾಂತರ ಮೌಲ್ಯದ ಬೆಳೆ ನೀರು ಪಾಲಾಗಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ಕಳೆದುಕೊಂಡ ರೈತರು ಆತಂಕದಲ್ಲಿದ್ದಾರೆ. ನ್ಯಾಮತಿ ತಾಲೂಕಿನ ಬಸವನಹಳ್ಳಿಯಲ್ಲಿನ ತುಂಗಾ ಕಾಲುವೆ ಒಡೆದ ಪರಿಣಾಮ ಬೆಳೆಗಳು ಜಲಾವೃತಗೊಂಡಿದೆ. ತುಂಗಾ ಮೇಲ್ದಂಡೆ ನಾಲೆ ಒಡೆದು ಸಾವಿರಾರು ಎಕರೆ ಜಮೀನು ಜಲಾವೃತ ಪರಿಣಾಮ ರೈತರಲ್ಲಿ ಆತಂಕ ಹೆಚ್ಚಿದೆ. ಮಣ್ಣು ಸಮೇತ ಜಮೀನುಗಳಿಗೆ ಕಾಲುವೆ ನೀರು ನುಗ್ಗಿ, ಅಡಿಕೆ, ತೆಂಗು, ಭತ್ತ, ಹತ್ತಿ ಸೇರಿದಂತೆ ಅನೇಕ ತರಕಾರಿ ಬೆಳೆ ಕಳೆದುಕೊಂಡಿದ್ದಾರೆ.

ಕರಾವಳಿಗೆ ಭಾರಿ ಮಳೆ ಎಚ್ಚರಿಕೆ

ಆಗಸ್ಟ್‌ 29ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಬೆಳಗಾವಿ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆ ಮತ್ತು ನಿರಂತರ ಗಾಳಿಯ ವೇಗ 30-40 ಕಿ.ಮೀ ಸಂಭವಿಸುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆಯಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಲಘುವಾಗಿ ಮಧ್ಯಮ ಮಳೆ ಮತ್ತು ನಿರಂತರ ಗಾಳಿಯ ವೇಗ (30-40 kmph) ಬರುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 20 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Mandya Municipal Council Election: ಮಂಡ್ಯ ನಗರಸಭೆ ಚುನಾವಣೆ ವೇಳೆ ಹೈಡ್ರಾಮಾ; ಕುಮಾರಸ್ವಾಮಿ ಎದುರೇ ಕಾಂಗ್ರೆಸ್-ಜೆಡಿಎಸ್ ಜಟಾಪಟಿ

ಮಂಡ್ಯ ನಗರಸಭಾ ಚುನಾವಣೆ (Mandya Municipal Council Election) ವೇಳೆ ಭಾರಿ ಹೈಡ್ರಾಮಾ ನಡೆದಿದೆ. ಸಂಸದ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಎದುರಲ್ಲೇ ಮಾತಿನ ಚಕಮಕಿ ನಡೆದಿದೆ. ನಗರಸಭೆ ಅಧಿಕಾರಕ್ಕೆ ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ.

VISTARANEWS.COM


on

Mandya Municipal Council election
Koo

ಮಂಡ್ಯ: ಮಂಡ್ಯ ನಗರಸಭಾ ಚುನಾವಣೆ (Mandya Municipal Council Election) ವೇಳೆ ಭಾರಿ ಹೈಡ್ರಾಮಾ ನಡೆದಿದೆ. ಸಂಸದ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಎದುರಲ್ಲೇ ಮಾತಿನ ಚಕಮಕಿ ನಡೆದಿದೆ. ನಗರಸಭೆ ಅಧಿಕಾರಕ್ಕೆ ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ.

ಇದನ್ನೂ ಓದಿ: Karnataka Weather : ಮತ್ತೆ ಭಾರಿ ಮಳೆ ಮುನ್ಸೂಚನೆ; ಏಳು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಸಚಿವ ಎಚ್.ಡಿ. ಕುಮಾರಸ್ವಾಮಿ ಆಗಮಿಸುತ್ತಿದ್ದಂತೆ ನಗರಸಭೆ ಹೊರಾವರಣದಲ್ಲಿ ಹೈಡ್ರಾಮಾ ನಡೆಯಿತು. ಈ ವೇಳೆ ಪೊಲೀಸರು ಎಚ್.ಡಿ. ಕುಮಾರಸ್ವಾಮಿ ಅವರ ವಾಹನಕ್ಕೆ ಮಾತ್ರ ಒಳಗಡೆಗೆ ಅವಕಾಶ ಕಲ್ಪಿಸಲಾಯಿತು. ಇತ್ತ ಸದಸ್ಯರು ಆಗಮಿಸಿದ ಟಿಟಿ ವಾಹನಕ್ಕೆ ತಡೆ ಹಿಡಿಯಲಾಯಿತು.‌ ಕಾಂಗ್ರೆಸ್‌ ಸದಸ್ಯರ ವಾಹನವನ್ನೂ ಒಳಗಡೆ ಬಿಡದೆ ತಡೆದಿದ್ದಾರೆ. ಇತ್ತ ಜೆಡಿಎಸ್‌ನ ಸದಸ್ಯರ ವಾಹನವನ್ನೂ ಒಳ ಬಿಡದಂತೆ ವಾಹನ ತಡೆದು ಆಕ್ರೋಶ ಹೊರಹಾಕಿದ್ದರು. ಸದಸ್ಯರು ಕೆಳಗೆ ಇಳಿಯದಂತೆ ವಾಹನ ತಡೆಯಲು ಮುಂದಾದರು. ಈ ವೇಳೆ ಎರಡೂ ಪಕ್ಷದ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಬಳಿಕ ಕುಮಾರಸ್ವಾಮಿ ಬಂದು ವಾಹನ ಬಿಡಿಸುವಲ್ಲಿ ಯಶಸ್ವಿಯಾದರು.

ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಹಾಗೂ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಗಳು

ಇಂದು ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಚುನಾವಣೆ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ ಪಕ್ಷದಿಂದ ಎಚ್.ಎಸ್. ಮಂಜು ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಜಾಕಿರ್ ಪಾಷಾ ಮತ್ತು ಜೆಡಿಎಸ್-ಬಿಜೆಪಿ ಮೈತ್ರಿ ಕಡೆಯಿಂದ ಅಧ್ಯಕ್ಷ ಸ್ಥಾನಕ್ಕೆ ನಾಗೇಶ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಅರುಣ್ ಅವರು ಚುನಾವಣಾಧಿಕಾರಿ ಎಸಿ ಶಿವಮೂರ್ತಿ ಅವರಿಗೆ ನಾಮಪತ್ರ ಸಲ್ಲಿಸಿದರು.

ಇದನ್ನೂ ಓದಿ: Accident case: ಭೀಕರ ರಸ್ತೆ ಅಪಘಾತ: ಮಹಿಳೆ ಸಾವು, ಐವರು ಗಂಭೀರ

35 ಸದಸ್ಯರ ಬಲ ಹೊಂದಿರುವ ಮಂಡ್ಯ ನಗರಸಭೆ

ಎಂಪಿ 1, ಶಾಸಕ 1 ಸೇರಿ 37 ಜನರಿಗೆ ಮತದಾನದ ಹಕ್ಕು.
ಒಟ್ಟು ಜೆಡಿಎಸ್‌ 18 ಸದಸ್ಯರು.
ಒಟ್ಟು ಬಿಜೆಪಿಯ 2 ಸದಸ್ಯರು.
ಒಟ್ಟು ಕಾಂಗ್ರೆಸ್‌ನ 10 ಸದಸ್ಯರು.
ಒಟ್ಟು ಪಕ್ಷೇತರ 5 ಸದಸ್ಯರು.

Continue Reading

ಮಳೆ

Karnataka Weather : ಮತ್ತೆ ಭಾರಿ ಮಳೆ ಮುನ್ಸೂಚನೆ; ಏಳು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

Karnataka Weather Forecast : ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಏಳು ಜಿಲ್ಲೆಗಳಿಗೆ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ (Karnataka Weather Forecast) ಸಾಧ್ಯತೆ ಇದೆ. ಮಲೆನಾಡು ಸುತ್ತಮುತ್ತ ಚದುರಿದಂತೆ ಸಾಧಾರಣ ಮಳೆಯಾದರೆ ಒಳನಾಡಿನದಲ್ಲಿ ಹಗುರದಿಂದ ಮಳೆಯಾಗುವ ಸಾಧ್ಯತೆ ಇದೆ (Rain News) ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ‌ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗಲಿದೆ.

ಇನ್ನೂ ಉತ್ತರ ಒಳನಾಡಿನ ಬೆಳಗಾವಿ ಮತ್ತು ಧಾರವಾಡ ಸೇರಿದಂತೆ ಬಾಗಲಕೋಟೆ, ಬೀದರ್‌, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಧ್ಯಮ ಮಳೆಯಾಗಲಿದೆ.

ಇದನ್ನೂ ಓದಿ: Karnataka Weather : ಕಾಫಿನಾಡಲ್ಲಿ ಗಾಳಿ-ಮಳೆ ಅಬ್ಬರಕ್ಕೆ ಪ್ರತ್ಯೇಕ ಅಪಘಾತ; ಮಕ್ಕಳು ಸೇರಿ 7 ಮಂದಿ ಪಾರು

ಆರೆಂಜ್‌ ಆಲರ್ಟ್‌ ಘೋಷಣೆ

ಭಾರಿ ಮಳೆ ಹಿನ್ನೆಲೆಯಲ್ಲಿ ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಬೆಳಗಾವಿ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಹೀಗಾಗಿ ಯೆಲ್ಲೋ ಅಲರ್ಟ್‌ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Hair Combing
ಆರೋಗ್ಯ3 hours ago

Hair Combing: ಕೂದಲು ಬಾಚುವ ಅಭ್ಯಾಸವಿಲ್ಲವೇ? ಹಾಗಾದರೆ ಇದನ್ನೊಮ್ಮೆ ಓದಿ!

dhavala dharini column Hanuman's setubandha to meet Sugriva in ramayana by narayana yaji
ಅಂಕಣ3 hours ago

ಧವಳ ಧಾರಿಣಿ ಅಂಕಣ: ಸುಗ್ರೀವನ ಭೇಟಿಗೆ ಹನುಮಂತನ ಸೇತುಬಂಧ ಹೇಗಿತ್ತು?

karnataka weather Forecast
ಮಳೆ4 hours ago

Karnataka Weather : ಬೆಂಗಳೂರಿನಲ್ಲಿ ಘಳಿಗೆವೊಂದು ವಾತಾವರಣ; ಕರಾವಳಿಗೆ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ5 hours ago

Dina Bhavishya: ಈ ದಿನ ಆತ್ಮೀಯರೊಂದಿಗೆ ಕಾಲ ಕಳೆಯುವಿರಿ; ಆದ್ರೆ ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ

Murder Case
ಬೆಂಗಳೂರು13 hours ago

Murder Case: ಶೀಲ ಶಂಕೆ; ಪತ್ನಿಯನ್ನು ಕುರ್ಚಿಗೆ ಕಟ್ಟಿಹಾಕಿ ಚಿತ್ರಹಿಂಸೆ ಕೊಟ್ಟು ಭೀಕರ ಹತ್ಯೆ

Actor Darshan
ಬೆಂಗಳೂರು14 hours ago

Actor Darshan: ಪವಿತ್ರಾಗೌಡ ಜಾಮೀನು ಅರ್ಜಿಯ ಭವಿಷ್ಯ ಆ.31ಕ್ಕೆ ನಿರ್ಧಾರ

Fashion Trend
ಫ್ಯಾಷನ್15 hours ago

Fashion Trend: ಕಟೌಟ್‌ ಪ್ಯಾಂಟ್‌ ಸೂಟ್‌; ಗ್ಲಾಮರಸ್‌ ಯುವತಿಯರ ಲೇಟೆಸ್ಟ್ ಆಯ್ಕೆ!

Stray Dogs Attack
ಕ್ರೈಂ15 hours ago

Stray Dogs Attack: ಬೆಂಗಳೂರಿನಲ್ಲಿ ಬೀದಿ ನಾಯಿಗಳ ದಾಳಿಗೆ ಬಲಿಯಾದ ನಿವೃತ್ತ ಶಿಕ್ಷಕಿ

R Ashok
ಬೆಂಗಳೂರು15 hours ago

R Ashok: ರಾಜ್ಯ ಸರ್ಕಾರದಿಂದ ದ್ವೇಷ ರಾಜಕಾರಣ; ನ್ಯಾಯಕ್ಕಾಗಿ ಹೋರಾಟ ಮುಂದುವರಿಯಲಿದೆ ಎಂದ ಆರ್‌. ಅಶೋಕ್‌

karnataka weather Forecast
ಮಳೆ15 hours ago

Karnataka Weather : ನಿರಂತರ ಮಳೆಗೆ ಮನೆ ಗೋಡೆ ಕುಸಿತ; ಮಹಿಳೆ ಆಸ್ಪತ್ರೆ ಪಾಲು

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

ಮಳೆ5 days ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ4 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

ಟ್ರೆಂಡಿಂಗ್‌