ಮದ್ದೂರು: ಮಂಡ್ಯ ಜಿಲ್ಲೆಯಲ್ಲಿ ಕೈಗೊಳ್ಳುವ ಅಭಿವೃದ್ಧಿ ಕಾರ್ಯಗಳು ಇತರೆ ಲೋಕಸಭಾ ಕ್ಷೇತ್ರಗಳಿಗೆ ಮಾದರಿಯಾಗಬೇಕು. ಜಿಲ್ಲೆಯನ್ನು (Mandya News) ಮಾದರಿ ಕ್ಷೇತ್ರವನ್ನಾಗಿ ಮಾಡುವುದೇ ನನ್ನ ಗುರಿ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಹೇಳಿದರು.
ಮದ್ದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೋಡ್ ಶೋ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಜಿಲ್ಲೆ ಪ್ರಾಕೃತಿಕವಾಗಿ, ರಾಜಕೀಯವಾಗಿ ಸಾಕಷ್ಟು ಹೆಸರುವಾಸಿ. ಜಿಲ್ಲೆಯಲ್ಲಿ ಕೃಷಿಯೇ ಜೀವಾಳ. ಈ ಭಾಗದ ರೈತರ ಕಲ್ಯಾಣಕ್ಕೆ ಕಂಕಣಬದ್ಧನಾಗಿದ್ದೇನೆ. ಜಿಲ್ಲೆಯಲ್ಲಿ ಸಾಕಷ್ಟು ಪ್ರವಾಸಿತಾಣಗಳಿದ್ದು ಅವುಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿಪಡಿಸಿ ಸ್ಥಳೀಯವಾಗಿ ಉದ್ಯೋಗ ಸೃಷ್ಟಿಸಿಕೊಡಬೇಕೆಂಬ ಕನಸು ಹೊಂದಿದ್ದೇನೆ ಎಂದು ಹೇಳಿದರು.
ಇದನ್ನೂ ಓದಿ: Vande Bharat Express: ಚೆನ್ನೈ-ಬೆಂಗಳೂರು-ಮೈಸೂರು: ಹೀಗಿದೆ ನೋಡಿ ವಂದೇ ಭಾರತ್ ರೈಲಿನ ವೇಳಾಪಟ್ಟಿ
ಕಾಂಗ್ರೆಸ್ ಪಕ್ಷ ಬಡವರ ದೀನ ದಲಿತರ ಪರ. ಎಲ್ಲಾ ವರ್ಗದವರನ್ನು ಒಟ್ಟಿಗೆ ಕೊಂಡೊಯ್ಯುವ ಪಕ್ಷ. ಉದ್ಯೋಗ ಸೃಷ್ಟಿ, ಸಾಮಾಜಿಕ ನ್ಯಾಯ, ಆರೋಗ್ಯ ಸೇವೆ ಸೇರಿದಂತೆ ರಾಷ್ಟ್ರದ ಜನತೆಯ ಕಲ್ಯಾಣ ಬಯಸಿ 25 ಭರವಸೆಗಳನ್ನು ಒಳಗೊಂಡ ಪ್ರಣಾಳಿಕೆಯನ್ನು ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದೆ. ಮತದಾರರು ಪ್ರಜ್ಞಾವಂತರಿದ್ದಾರೆ. ಕಾಂಗ್ರೆಸ್‌ನ ಜನಪರ ಕಾರ್ಯಕ್ರಮಗಳಿಗೆ ಮನ್ನಣೆ ನೀಡಲಿದ್ದು, ನನ್ನನ್ನು ಆಶೀರ್ವದಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ: Maldives : ಮುನಿಸಿನ ನಡುವೆಯೂ ಮಾಲ್ಡೀವ್ಸ್ಗೆ ಸರಕುಗಳ ರಫ್ತು ಪ್ರಮಾಣ ಹೆಚ್ಚಿಸಿದ ಭಾರತ!
ಮದ್ದೂರು ತಾಲೂಕಿನಲ್ಲಿ ರೋಡ್ ಶೋ
ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಮದ್ದೂರು ವಿಧಾನಸಭಾ ಕ್ಷೇತ್ರದಾದ್ಯಂತ ಮತಪ್ರಚಾರ ನಡೆಸಿದರು. ಗೊಲ್ಲರದೊಡ್ಡಿಯ ಜುಂಜಪ್ಪ ದೇವರಿಗೆ ಪೂಜೆ ಸಲ್ಲಿಸಿ ಚುನಾವಣಾ ಪ್ರಚಾರ ಆರಂಭಿಸಿದರು. ಮಲ್ಲನಕುಪ್ಪೆ, ಹೂತಗೆರೆ, ಕೆಸ್ತೂರು, ಆತಗೂರು, ಕದಲೂರು, ಹೆಮ್ಮನಹಳ್ಳಿ, ನಿಡಘಟ್ಟ, ಆಲೂರು, ಹೊನ್ನಲಗೆರೆ, ಬೆಳ್ಳೂರು, ಕೊಳಗೆರೆ, ಗೆಜ್ಜಲಗೆರೆ, ವಳಗೆರಹಳ್ಳಿ, ಹೊಸಕೆರೆ, ನಿಲುವಾಗಿಲು, ಬೆಸಗರಹಳ್ಳಿ, ಚಾಮನಹಳ್ಳಿ ಸೇರಿದಂತೆ ಮದ್ದೂರು ತಾಲೂಕಿನಾದ್ಯಂತ ಮತಯಾಚಿಸಿದರು.
ಇದನ್ನೂ ಓದಿ: Voter awareness: ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾದ ಮತದಾನ ಜಾಗೃತಿ; ಕೂಲಿ ಕಾರ್ಮಿಕರಿಗೆ, ವಿದ್ಯಾರ್ಥಿಗಳಿಗೆ ಮತದಾನದ ಪಾಠ
ಮದ್ದೂರು ಶಾಸಕ ಉದಯ್, ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ, ಶಿವಲಿಂಗೇಗೌಡ, ಕೆಪಿಸಿಸಿ ವಕ್ತಾರ ತೈಲೂರು ಸತ್ಯಾನಂದ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಚಿದಂಬರಂ ಸೇರಿದಂತೆ ಹಲವು ಮುಖಂಡರು, ಕಾರ್ಯಕರ್ತರು ಇದ್ದರು.