ಮಂಡ್ಯ: ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ಇಂದು ನಡೆಯಲಿದೆ.
ಸಂಕೀರ್ತನಾ ಯಾತ್ರೆಗೆ ಪಟ್ಟಣ ಕೇಸರಿಮಯವಾಗಿದೆ.
ಜತೆಗೆ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಪಟ್ಟಣದ ಜಾಮೀಯಾ ಮಸೀದಿ ಸುತ್ತಮುತ್ತ ಬ್ಯಾರಿಕೇಡ್ ಅಳವಡಿಸಿ, ಹೆಚ್ಚಿನ ಬಿಗಿ ಭದ್ರತೆ ಒದಗಿಸಲಾಗಿದೆ.
ಸಾವಿರಾರು ಹನುಮ ಮಾಲಾಧಾರಿಗಳಿಂದ ಸಂಕೀರ್ತನಾ ಯಾತ್ರೆ ನಡೆಯಲಿದೆ. ನಿಮಿಷಾಂಭ ದೇವಾಲಯದ ಬಳಿಯಿಂದ ಮೂಡಲ ಬಾಗಿಲು ಆಂಜನೇಯನ ದೇವಸ್ಥಾನದ ವರೆಗೆ ಮೆರವಣಿಗೆ ನಡೆಯಲಿದೆ. ಹಿಂದೂ ಜಾಗರಣ ವೇದಿಕೆಯಿಂದ ಬೃಹತ್ ಸಂಕೀರ್ತನಾ ಯಾತ್ರೆಯನ್ನು ಆಯೋಜಿಸಲಾಗಿದೆ.
1500 ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಮಂಡ್ಯ ಎಸ್ಪಿ ಯತೀಶ್ ನೇತೃತ್ವದಲ್ಲಿ ಪೊಲೀಸ್ ಕಣ್ಗಾವಲು ಹಾಕಲಾಗಿದೆ. 7 ಮಂದಿ ಡಿವೈಎಸ್ಪಿ, 15 ಮಂದಿ ಸಿಪಿಐ, 9 ಡಿಎಆರ್ ಹಾಗೂ ಕೆಎಸ್ಆರ್ ಪಿ 6 ತುಕಡಿಗಳನ್ನು ನಿಯೋಜಿಸಲಾಗಿದೆ. ಮೆರವಣಿಗೆ ಬಳಿಕ ಶ್ರೀರಂಗ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ.