Murder Case: ರೀಲ್ಸ್ ಸುಂದರಿಗೆ ಕಂಟಕವಾಯ್ತು ಮೊಬೈಲ್ ಗೀಳು; ಗಂಡನಿಂದ ಕೊಲೆ, ಹೆಣ ಸಾಗಿಸಿದ ತಂದೆ! - Vistara News

ಕ್ರೈಂ

Murder Case: ರೀಲ್ಸ್ ಸುಂದರಿಗೆ ಕಂಟಕವಾಯ್ತು ಮೊಬೈಲ್ ಗೀಳು; ಗಂಡನಿಂದ ಕೊಲೆ, ಹೆಣ ಸಾಗಿಸಿದ ತಂದೆ!

ಅತಿಯಾದ ಫೋನ್ ಬಳಕೆಯಿಂದಾಗಿ ದಂಪತಿ ಮಧ್ಯೆ ಪದೇ ಪದೆ ಜಗಳವಾಗುತ್ತಿತ್ತು. ಈಕೆ ಪರಪುರುಷನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಶಂಕೆಯಿಂದ ನರಳುತ್ತಿದ್ದ ಶ್ರೀನಾಥ್ ಇದರಿಂದ ಜಗಳ ತೆಗೆಯುತ್ತಿದ್ದ.

VISTARANEWS.COM


on

murder case mandya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಡ್ಯ: ಸದಾ ರೀಲ್ಸ್‌ ಮಾಡುತ್ತಿದ್ದ ಸುಂದರಿಯೊಬ್ಬಳಿಗೆ ಮೊಬೈಲ್ ಗೀಳೇ (mobile addiction) ಕಂಟಕವಾಗಿದೆ. ರೀಲ್ಸ್ (reels) ಮಾಡುವ ಜೊತೆಗೆ ಸ್ನೇಹಿತರೊಂದಿಗೆ ಚಾಟಿಂಗ್ (chatting) ಹುಚ್ಚು ಬೆಳೆಸಿಕೊಂಡಿದ್ದ ಮಡದಿಯ ಬಗ್ಗೆ ಕ್ರುದ್ಧನಾದ ಗಂಡ, ಆಕೆಯನ್ನು ಕೊಂದು (murder case) ನದಿಗೆಸೆದಿದ್ದಾನೆ. ಆಕೆಯ ಸ್ವಂತ ತಂದೆ ಆಕೆಯ ಹೆಣ ಸಾಗಿಸಲು ಅಳಿಯನಿಗೆ ನೆರವಾಗಿದ್ದಾನೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಮಂಡ್ಯಕೊಪ್ಪಲು ಗ್ರಾಮದಲ್ಲಿ ಘಟನೆ ನಡೆದಿದೆ. ಪೂಜಾ (26) ಗಂಡನಿಂದಲೇ ಕೊಲೆಯಾದ (husband kills wife) ಮಹಿಳೆ. ಶ್ರೀನಾಥ್ (33) ವೇಲ್‌ನಿಂದ ಪತ್ನಿಯ ಕುತ್ತಿಗೆ ಬಿಗಿದು ಕೊಂದಿರುವ ಪಾತಕಿ. 9 ವರ್ಷದ ಹಿಂದೆ ಇವರಿಬ್ಬರೂ ಪ್ರೀತಿಸಿ ಮದುವೆಯಾಗಿದ್ದರು. ಆರಂಭದಲ್ಲಿ ಅನ್ಯೋನ್ಯವಾಗಿ ಬದುಕುತ್ತಿದ್ದ ಈ ದಂಪತಿಗೆ ಒಂದು ಹೆಣ್ಣು ಮಗುವೂ ಇದೆ.

ಈಚೆಗೆ ಕೆಲವು ವರ್ಷಗಳಿಂದ ಪೂಜಾ ಟಿಕ್‌ಟಾಕ್ ಗೀಳು ಬೆಳೆಸಿಕೊಂಡಿದ್ದರು. ರೀಲ್ಸ್ ಮಾಡುವ ಜೊತೆಗೆ ಹೆಚ್ಚೆಚ್ಚು ಫೋನ್ ಬಳಸುತ್ತಿದ್ದರು. ಅತಿಯಾದ ಫೋನ್ ಬಳಕೆಯಿಂದಾಗಿ ದಂಪತಿ ಮಧ್ಯೆ ಪದೇ ಪದೆ ಜಗಳವಾಗುತ್ತಿತ್ತು. ಈಕೆ ಪರಪುರುಷನೊಂದಿಗೆ ಅನೈತಿಕ ಸಂಬಂಧ (illicit relationship) ಹೊಂದಿದ್ದಾಳೆ ಎಂಬ ಶಂಕೆಯಿಂದ ನರಳುತ್ತಿದ್ದ ಶ್ರೀನಾಥ್ ಇದರಿಂದ ಜಗಳ ತೆಗೆಯುತ್ತಿದ್ದ.

ಸೋಮವಾರ ಶ್ರೀನಾಥ್‌ ಸಿಟ್ಟು ನೆತ್ತಿಗೇರಿ ವೇಲ್‌ನಿಂದ ಪೂಜಾಳ ಕೊರಳು ಬಿಗಿದು ಕೊಲೆ ಮಾಡಿದ್ದಾನೆ. ಕೊಲೆಗೈದ ಬಳಿಕ ಮಾವ ಶೇಖರ್‌ಗೆ ಕರೆ ಮಾಡಿದ್ದ. ಮಗಳ ಕೊಲೆ ತಿಳಿದರೂ ಪೊಲೀಸರಿಗೆ ಹೇಳದೆ ಅಳಿಯನಿಗೆ ಶೇಖರ ಸಾಥ್ ನೀಡಿದ್ದ. ಅಳಿಯ-ಮಾವ ಸೇರಿಕೊಂಡು ಮನೆಯಿಂದ ಬೈಕಿನಲ್ಲಿ ಶವ ಸಾಗಿಸಿದ್ದರು. ಬಳಿಕ ಮೃತದೇಹಕ್ಕೆ ಭಾರವಾದ ಕಲ್ಲು ಕಟ್ಟಿ ನದಿಗೆಸೆದಿದ್ದರು.

ಕೊಲೆ ಆರೋಪಿ ಶ್ರೀನಾಥ್‌, ಮಾವ ಶೇಖರ್

ಮಗಳ ಶವವನ್ನು ನದಿಗೆಸೆದು ತಂದೆ ಶೇಖರ್ ಎಂದಿನಂತೆ ಹೋಟೆಲ್ ಕೆಲಸದಲ್ಲಿ ತೊಡಗಿದ್ದ. ಮೂರು ದಿನ ಬಳಿಕ ನಿಮಿಷಾಂಭ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ತೆರಳಿದ್ದ ಶ್ರೀನಾಥ್ ದೇವರ ದರ್ಶನದ ಬಳಿಕ ಪೊಲೀಸರಿಗೆ ಕರೆ ಮಾಡಿ ಕೊಲೆ ವಿಷಯ ತಿಳಿಸಿ ಶರಣಾಗಿದ್ದ. ಶವ ಸಾಗಿಸಲು ಸಾಥ್ ನೀಡಿದ ಮಾವನ ಬಗ್ಗೆಯೂ ಪೊಲೀಸರಿಗೆ ಮಾಹಿತಿ ನೀಡಿದ್ದ. ಸದ್ಯ ಅರಕೆರೆ ಪೊಲೀಸರು ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Dog power : ಬೆವರ ವಾಸನೆ ಬೆನ್ನುಹತ್ತಿ 8 ಕಿ.ಮೀ. ದೂರ ಕ್ರಮಿಸಿ ಕೊಲೆಗಾರನನ್ನು ಹಿಡಿದ ಸೂಪರ್‌ಸ್ಟಾರಿಣಿ ತಾರಾ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Dengue Cases: ರಾಜ್ಯದಲ್ಲಿ ಸೋಮವಾರ 197 ಡೆಂಗ್ಯೂ ಕೇಸ್‌ಗಳು ಪತ್ತೆ, ಒಬ್ಬರ ಸಾವು

Dengue Cases: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 892 ಮಂದಿಗೆ ಟೆಸ್ಟ್‌ ನಡೆಸಿದ್ದು, ಈ ಪೈಕಿ 197 ಮಂದಿಗೆ ಡೆಂಗ್ಯೂ ದೃಢಪಟ್ಟಿದೆ.

VISTARANEWS.COM


on

Dengue Cases
Koo

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 197 ಡೆಂಗ್ಯೂ ಕೇಸ್‌ಗಳು (Dengue Cases) ಪತ್ತೆಯಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 303ಕ್ಕೇರಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲೇ 95 ಮಂದಿಗೆ ಸೋಮವಾರ ಸೋಂಕು ತಗುಲಿದೆ. ಸೋಂಕಿತರ ಪೈಕಿ 46 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ 24 ಗಂಟೆಯಲ್ಲಿ 892 ಮಂದಿಗೆ ಟೆಸ್ಟ್‌ ನಡೆಸಿದ್ದು, ಈ ಪೈಕಿ 197 ಮಂದಿಗೆ ಡೆಂಗ್ಯೂ ದೃಢಪಟ್ಟಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 95, ಬೆಂಗಳೂರು ನಗರ 4, ಶಿವಮೊಗ್ಗ 16, ವಿಜಯಪುರ, ಬಾಗಲಕೋಟೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ 3, ಕಲಬುರಗಿ 15, ಕೊಪ್ಪಳ 1, ಚಾಮರಾಜನಗರ 6, ಮಂಡ್ಯ 33, ಉಡುಪಿ 1, ಚಿಕ್ಕಮಗಳೂರು ಜಿಲ್ಲೆಯಲ್ಲಿ 17 ಮಂದಿಗೆ ಸೋಂಕು ತಗುಲಿದೆ. 197 ಮಂದಿಯಲ್ಲಿ 0-1 ವರ್ಷದೊಳಗಿನವರಲ್ಲಿ 1 ಮಗುವಿಗೆ, 1 ರಿಂದ 18 ವರ್ಷಗೊಳಗಿನ 63 ಮಂದಿಗೆ ಸೋಂಕು ತಗುಲಿದೆ.

ಇನ್ನು ರಾಜ್ಯದಲ್ಲಿ ಜನವರಿಯಿಂದ ಈವರೆಗೆ ಒಟ್ಟು 7362 ಮಂದಿ ಡೆಂಗ್ಯೂ ಪೀಡಿತರಾಗಿದ್ದು, 7 ಮಂದಿ ಮೃತಪಟ್ಟಿದ್ದಾರೆ. ಸಾವಿನ ಪ್ರಮಾಣ 0.09 ಇದೆ.

ಕಲುಷಿತ ನೀರು ಪೂರೈಕೆಯಾದ್ರೆ ಅಧಿಕಾರಿಗಳೇ ಹೊಣೆ; 15 ದಿನಕ್ಕೊಮ್ಮೆ ಕ್ವಾಲಿಟಿ ಟೆಸ್ಟ್ ಮಾಡಿ ಎಂದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ (Dengue Cases) ಏರಿಕೆ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಲಾರ್ವಾ ಸಮೀಕ್ಷೆ, ಸೊಳ್ಳೆ ನಿಯಂತ್ರಣದ ಜತೆಗೆ ಮನೆಮನೆಗೆ ತೆರಳಿ ಆರೋಗ್ಯ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ. ಈ ನಡುವೆ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಿರುವ ಸಿಎಂ ಸಿದ್ದರಾಮಯ್ಯ ಅವರು, ಜನರಿಗೆ ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರಿಕೆ ವಹಿಸಬೇಕು. ಪ್ರತಿ 15 ದಿನಗಳಿಗೊಮ್ಮೆ ನೀರಿನ ಮೂಲಗಳಲ್ಲಿ ಕಡ್ಡಾಯವಾಗಿ ಗುಣಮಟ್ಟ ಪರೀಕ್ಷೆ ನಡೆಸಬೇಕು ಎಂದು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ | Uttara Kannada News: ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ, 12 ಕಾಳಜಿ ಕೇಂದ್ರಗಳಲ್ಲಿ 437 ಜನರಿಗೆ ಆಸರೆ

ಕಲುಷಿತ ನೀರಿನಿಂದ ಯಾವುದೇ ತೊಂದರೆ ಉಂಟಾದರೆ ಸಂಬಂಧಪಟ್ಟ ಅಧಿಕಾರಿಯನ್ನು ನೇರ ಜವಾಬ್ದಾರಿ ಮಾಡಲಾಗುವುದು. ತುಕ್ಕು ಹಿಡಿದ ಹಳೆಯ ಪೈಪ್‌ ಬದಲಾವಣೆ ಮಾಡಬೇಕು. ಪ್ರತಿ 15 ದಿನಗಳಿಗೊಮ್ಮೆ ನೀರಿನ ಮೂಲದಲ್ಲಿ ಹಾಗೂ ವಿತರಣಾ ಬಿಂದುವಿನಲ್ಲಿನ ನೀರಿನ ಗುಣಮಟ್ಟವನ್ನು ಪ್ರಯೋಗಾಲಯದಲ್ಲಿ ಕಡ್ಡಾಯವಾಗಿ ಪರೀಕ್ಷೆ ಮಾಡಬೇಕು. ನೀರಿನ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾದ ಕಡೆಗಳಲ್ಲಿ ಹೊಸ ಮೂಲದಿಂದ ನೀರು ಪೂರೈಕೆ ಮಾಡಬೇಕು ಎಂದು ತಿಳಿಸಿದ್ದಾರೆ.

ಎಲ್ಲಾ ಜಿಲ್ಲೆಗಳಲ್ಲಿ ಆದಷ್ಟು ಬೇಗನೆ ಘನ ತ್ಯಾಜ್ಯ ವಿಲೇವಾರಿ ಘಟಕಗಳನ್ನು ಆರಂಭಿಸಬೇಕು. ಇನ್ನೂ 55 ಕಡೆಗಳಲ್ಲಿ ಘನತ್ಯಾಜ್ಯ ಘಟಕಗಳ ನಿರ್ಮಾಣ ಪ್ರಕ್ರಿಯೆ ನಡೆಯುತ್ತಿದ್ದು, ಆದಷ್ಟು ಬೇಗನೆ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಳಿಸಬೇಕು. ತ್ಯಾಜ್ಯ ನೀರು ಶುದ್ಧೀಕರಣ ಘಟಕ ಕಾರ್ಯಾರಂಭಿಸುವ ಮೂಲಕ ಕೊಳಚೆ ನೀರು ನೇರವಾಗಿ ಕೆರೆಗಳಿಗೆ ಸೇರುವುದನ್ನು ತಪ್ಪಿಸಬೇಕು. ಮೈಸೂರಿನ ದಳವಾಯಿ ಕೆರೆಗೆ ಕೊಳಚೆ ನೀರು ಸೇರುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಹೇಳಿದ್ದಾರೆ.

Continue Reading

ಪ್ರಮುಖ ಸುದ್ದಿ

Self Harming: ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಆತ್ಮಹತ್ಯೆ; ಕಾರಿನಲ್ಲೇ ವಿಷ ಸೇವನೆ

Self Harming: ಮಾಜಿ ಸಚಿವ ಬಿ.ಸಿ. ಪಾಟೀಲ್ ಪುತ್ರಿಯ ಪತಿ ಪ್ರತಾಪ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು‌ ಬಂದಿಲ್ಲ.

VISTARANEWS.COM


on

Self Harming
Koo

ದಾವಣಗೆರೆ: ಬಿಜೆಪಿ ಮಾಜಿ ಸಚಿವ ಬಿ.ಸಿ. ಪಾಟೀಲ್ ಅವರ ಅಳಿಯ ಪ್ರತಾಪ್ ಕುಮಾರ್ ಕೆ.ಜಿ. (41) ವಿಷ ಸೇವಿಸಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ಸೋಮವಾರ ರಸ್ತೆ ಬದಿ ಕಾರು ನಿಲ್ಲಿಸಿ ವಿಷ ಸೇವನೆ ಮಾಡಿದ್ದ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಪ್ರತಾಪ್ ಕುಮಾರ್ (Pratap Kumar K.G) ಮೃತಪಟ್ಟಿದ್ದಾರೆ.

ಮಾಜಿ ಸಚಿವ ಬಿ.ಸಿ. ಪಾಟೀಲ್‌ರ ಮೊದಲ ಪುತ್ರಿ ಸೌಮ್ಯಾ ಅವರ ಪತಿ ಪ್ರತಾಪ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು‌ ಬಂದಿಲ್ಲ. ಅವರು ಹಲವು ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಶವಗಾರದಲ್ಲಿ ಮೃತದೇಹವಿದ್ದು, ಅಲ್ಲಿಗೆ ಕುಟುಂಬಸ್ಥರು, ಸಂಬಂಧಿಕರು ತೆರಳುತ್ತಿದ್ದಾರೆ.

ಮೆಗ್ಗಾನ್‌ ಅಸ್ಪತ್ರೆಗೆ ಆಗಮಿಸಿರುವ ಮಾಜಿ ಸಚಿವ ಬಿ.ಸಿ.ಪಾಟೀಲ್‌ ಅವರು ಪೊಲೀಸರಿಂದ ಮಾಹಿತಿ ಪಡೆದು, ಕಾರಿನಲ್ಲಿ ಕುಳಿತು ದುಃಖಿಸುತ್ತಿರುವುದು ಕಂಡುಬಂದಿದೆ.

ಶಿವಮೊಗ್ಗದಲ್ಲಿ ಬಿ.ಸಿ.ಪಾಟೀಲ್ ಮಾತನಾಡಿ, ಪ್ರತಾಪ್ ಕಾಣೆಯಾದ ವಿಚಾರ ತಿಳಿದು ದಾವಣಗೆರೆ, ಶಿವಮೊಗ್ಗ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೆ. ನಂತರ ಹೊನ್ನಾಳಿ-ಮಲೆಬೆನ್ನೂರು ರೋಡ್‌ನಲ್ಲಿ ವಿಷ ಸೇವಿಸಿದ್ದಾರೆ ಎಂದು ತಿಳಿಯಿತು. ಮೊದಲು ದಾವಣಗೆರೆಗೆ ಶಿಫ್ಟ್ ಮಾಡಲು ಹೇಳಿದ್ದೆವು, ನಂತರ ಶಿವಮೊಗ್ಗ ಹತ್ತಿರ ಅಂತ ಇಲ್ಲಿನ ಆಸ್ಪತ್ರೆಗೆ ಸೇರಿಸಲಾಗಿದೆ. ಶಿಕಾರಿಪುರ ಹತ್ತಿರ ಬಂದಾಗ ಜೀವ ಹೋಗಿದೆ ಎಂದು ತಿಳಿಸಿದರು.

ಮಕ್ಕಳ ವಿಚಾರದಲ್ಲಿ ಅವರಿಗೆ ಕೊರಗಿತ್ತು, ಡಿ ಅಡಿಕ್ಷನ್ ಸೆಂಟರ್‌ನಲ್ಲಿ ಎರಡು ತಿಂಗಳು ಇದ್ದರು. ಅಲ್ಲಿ ಸರಿ ಹೋಗಿದ್ದರು. ರಾಜಕೀಯ ಸೇರಿ ನಮ್ಮ ವ್ಯವಹಾರಗಳನ್ನೆಲ್ಲ ಅವರೇ ನೋಡಿಕೊಳ್ಳುತ್ತಿದ್ದರು. ಮದುವೆ ಆಗಿ 16 ವರ್ಷ ಆಗಿತ್ತು, ಬೆಳಗ್ಗೆ ಜೊತೆಯಲ್ಲಿ ತಿಂಡಿ ಮಾಡಿದ್ದೆವು. ಈಗ ಇಂತಹ ಘಟನೆ ನಡೆದಿದೆ. ನಾಳೆ ಕತ್ತಲಗೆರೆ ಗ್ರಾಮದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಹೇಳಿದರು.

ನವೋದಯ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು

ಚಿತ್ರದುರ್ಗ: ನವೋದಯ ಶಾಲೆಯಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಹಿರಿಯೂರು ತಾಲೂಕಿನ ಉಡುವಳ್ಳಿಯಲ್ಲಿ ನಡೆದಿದೆ. 8ನೇ ತರಗತಿ ವಿದ್ಯಾರ್ಥಿ ಪ್ರೇಮ್ ಸಾಗರ್ (13) ನೇಣಿಗೆ ಶರಣಾದ ವಿದ್ಯಾರ್ಥಿ.

ಹೊಳಲ್ಕೆರೆ ತಾಲೂಕಿನ ಕೆಂಗುಂಟೆ ಗ್ರಾಮದ ನಿವಾಸಿಯಾದ ಪ್ರೇಮ ಸಾಗರ್‌ 8ನೇ ತರಗತಿ ಓದುತ್ತಿದ್ದ. ಆದರೆ, ಕೊಠಡಿಯಲ್ಲಿ ಸೋಮವಾರ ನೇಣಿಗೆ ಶರಣಾಗಿದ್ದಾನೆ. ಸೀನಿಯರ್ ವಿದ್ಯಾರ್ಥಿಗಳು ರೇಗಿಸುತ್ತಿದ್ದರು ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಪ್ರೇಮ ಸಾಗರ್ ಮೃತದೇಹವನ್ನು ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ | Chennai Police commissioner : ಬಿಎಸ್‌‌ಪಿ ರಾಜ್ಯಾಧ್ಯಕ್ಷನ ಹತ್ಯೆ ಎಫೆಕ್ಟ್; ಚೆನ್ನೈ ಪೊಲೀಸ್ ಕಮಿಷನರ್ ಎತ್ತಂಗಡಿ

ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ದೇಶ

Tamil Nadu Violence: NDA ಮಿತ್ರಪಕ್ಷದ ಮುಖಂಡನ ಮೇಲೆ ಡೆಡ್ಲಿ ಅಟ್ಯಾಕ್‌

Tamil Nadu Violence:ಪಿಎಂಕೆ ನಾಯಕ ಶಿವಶಂಕರ್‌ ಮೇಲೆ ಈ ಮಾರಣಾಂತಿಕ ಹಲ್ಲೆ ನಡೆದಿದ್ದು, ಗಂಭೀಕರವಾಗಿ ಗಾಯಗೊಂಡಿರುವ ಅವರು ಜೋವನ್ಮರಣದ ನಡುವೆ ಹೋರಾಡುತ್ತಿದ್ದಾರೆ. ಮೂಲತಃ ಕೇಬಲ್‌ ಟಿವಿ ಆಪರೇಟರ್‌ ಆಗಿರುವ ಶಿವಶಂಕರ್‌, ತಿರುಪಾಪುಲಿಯೂರ್‌ನಲ್ಲಿರುವ ತಮ್ಮ ಮನೆಯ ಮುಂದೆ ನಿಂತಿದ್ದಾಗ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಅವರ ಮೇಲೆ ಕತ್ತಿಯಿಂದ ಹಲ್ಲೆಗೆ ಶುರು ಮಾಡಿದ್ದಾರೆ. ಶಿವಶಂಕರ್‌ ಓಡಲು ಶುರು ಮಾಡಿದಾಗ ದುಷ್ಕರ್ಮಿಗಳು ಅವರನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ ನಡೆಸಿದ್ದಾರೆ. ಇನ್ನು ಘಟನೆ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

VISTARANEWS.COM


on

Tamil Nadu violence
Koo

ಚೆನ್ನೈ: ಬಹುಜನ ಸಮಾಜ ಪಕ್ಷದ (BSP President) ತಮಿಳುನಾಡು ಘಟಕದ ಅಧ್ಯಕ್ಷ ಆರ್ಮ್‌ಸ್ಟ್ರಾಂಗ್‌ (Armstrong) ಅವರನ್ನು ಹತ್ಯೆ ಬೆನ್ನಲ್ಲೇ ತಮಿಳುನಾಡಿನಲ್ಲಿ ಮತ್ತೊರ್ವ ರಾಜಕೀಯ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ(Tamil nadu Violence) ನಡೆದಿದೆ. ಕಡಲೂರಿನಲ್ಲಿ ಈ ಘಟನೆ ನಡೆದಿದ್ದು, ಎನ್‌ಡಿಎ ಮಿತ್ರಪಕ್ಷ, ಅನ್ಬುಮಣಿ ರಾಮದಾಸ್‌ ನೇತೃತ್ವದ ಪಟ್ಟಲ್ಲಿ ಮಕ್ಕಳ ಕಚ್ಚಿ(PMK) ಪಕ್ಷದ ಮುಖಂಡನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಭೀಕರ ಹಲ್ಲೆ ನಡೆಸಿದ್ದಾರೆ.

ಪಿಎಂಕೆ ನಾಯಕ ಶಿವಶಂಕರ್‌ ಮೇಲೆ ಈ ಮಾರಣಾಂತಿಕ ಹಲ್ಲೆ ನಡೆದಿದ್ದು, ಗಂಭೀಕರವಾಗಿ ಗಾಯಗೊಂಡಿರುವ ಅವರು ಜೋವನ್ಮರಣದ ನಡುವೆ ಹೋರಾಡುತ್ತಿದ್ದಾರೆ. ಮೂಲತಃ ಕೇಬಲ್‌ ಟಿವಿ ಆಪರೇಟರ್‌ ಆಗಿರುವ ಶಿವಶಂಕರ್‌, ತಿರುಪಾಪುಲಿಯೂರ್‌ನಲ್ಲಿರುವ ತಮ್ಮ ಮನೆಯ ಮುಂದೆ ನಿಂತಿದ್ದಾಗ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಅವರ ಮೇಲೆ ಕತ್ತಿಯಿಂದ ಹಲ್ಲೆಗೆ ಶುರು ಮಾಡಿದ್ದಾರೆ. ಶಿವಶಂಕರ್‌ ಓಡಲು ಶುರು ಮಾಡಿದಾಗ ದುಷ್ಕರ್ಮಿಗಳು ಅವರನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ ನಡೆಸಿದ್ದಾರೆ. ಇನ್ನು ಘಟನೆ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಮಾರಣಾಂತಿಕ ಹಲ್ಲೆಯಲ್ಲಿ ಶಿವಶಂಕರ್‌ ಕುತ್ತಿಗೆ ಬಾಯಿ ಮತ್ತು ಭುಜಕ್ಕೆ ಭಾರೀ ಗಾಯಗಳಾಗಿವೆ. ತಕ್ಷಣ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಆತನ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಇನ್ನು ಘಟನೆಗೆ ಅನ್ಬುಮಣಿ ರಾಮದಾಸ್‌ ಖಂಡನೆ ವ್ಯಕ್ತಪಡಿಸಿದ್ದಾರೆ. ರಾಜ್ಯ ಪೊಲೀಸರ ನಿರ್ಲಕ್ಷ್ಯವೇ ಇಂತಹ ದುರ್ಘಟನೆಗೆ ಕಾರಣ. ಶಂಕರನ ಸಹೋದರ ಪ್ರಭು ಮೂರು ವರ್ಷಗಳ ಹಿಂದೆ ಬರ್ಬರವಾಗಿ ಕೊಲೆಯಾಗಿದ್ದ. ಕೊಲೆಯ ಪ್ರಮುಖ ಸಾಕ್ಷಿಯಾಗಿದ್ದ ಶಂಕರ್‌ಗೆ ತಂಡವೊಂದು ನ್ಯಾಯಾಲಯಕ್ಕೆ ಹಾಜರಾಗದಂತೆ ಬೆದರಿಕೆ ಹಾಕಿತ್ತು. ಆದರೆ ಆ ನಂತರವೂ ಬೆದರಿಕೆ ಹಾಕಿದವರ ವಿರುದ್ಧ ಕ್ರಮ ಕೈಗೊಂಡಿಲ್ಲ, ಶಂಕರ್‌ಗೆ ರಕ್ಷಣೆಯನ್ನೂ ನೀಡಿಲ್ಲ. ಇದು ಕ್ರೂರ ಕೊಲೆ ಯತ್ನಕ್ಕೆ ಕಾರಣವಾಯಿತು. ಇದು ಪೊಲೀಸರ ಆಲಸ್ಯ ಮತ್ತು ಅಸಮರ್ಥತೆಯನ್ನು ತೋರಿಸುತ್ತದೆ ಎಂದು ದೂರಿದ್ದಾರೆ. ಘಟನೆಗೆ ಬಿಜೆಪಿ ನಾಯಕರು ಕೂಡ ಖಂಡನೆ ವ್ಯಕ್ತಪಡಿಸಿದ್ದಾರೆ.

ರಾಜಕೀಯ ಹತ್ಯೆ, ಹಿಂಸಾಚಾರ, ಬೇರೆ ರಾಜಕೀಯ ಪಕ್ಷದ ನಾಯಕರ ಮೇಲೆ ಹಲ್ಲೆಗಳು ಕೇರಳ ಹಾಗೂ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಲೇ ಇರುತ್ತವೆ. ಈಗ ಇಂತಹ ರಾಜಕೀಯ ದ್ವೇಷದ ಹತ್ಯೆಗಳು ತಮಿಳುನಾಡಿಗೂ ಕಾಲಿಟ್ಟಿವೆ. ಇದಕ್ಕೆ ನಿದರ್ಶನ ಎಂಬಂತೆ, ಕೆಲವು ದಿನಗಳ ಹಿಂದೆಯಷ್ಟೇ ಬಹುಜನ ಸಮಾಜ ಪಕ್ಷದ (BSP President) ತಮಿಳುನಾಡು ಘಟಕದ ಅಧ್ಯಕ್ಷ ಆರ್ಮ್‌ಸ್ಟ್ರಾಂಗ್‌ (Armstrong) ಅವರನ್ನು ಹತ್ಯೆ ಮಾಡಲಾಗಿತ್ತು. ಚೆನ್ನೈನಲ್ಲಿರುವ (Chennai) ಅವರ ನಿವಾಸದ ಬಳಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿತ್ತು.

ಇದನ್ನೂ ಓದಿ: Viral Video: ಹೃಷಿಕೇಶದ ಗಂಗಾ ಘಾಟ್‌ನಲ್ಲಿ ಬಿಕಿನಿ ಧರಿಸಿದ ವಿದೇಶಿಯರ ಮೋಜು ಮಸ್ತಿ!

Continue Reading

ಬೆಂಗಳೂರು

Ragging Case : ಬೆಂಗಳೂರಲ್ಲಿ ನಿಲ್ಲದ ವ್ಹೀಲಿಂಗ್‌ ಆ್ಯಂಡ್‌ ರ‍್ಯಾಗಿಂಗ್‌ ಹಾವಳಿ; ಮಹಿಳೆ ಹಿಂದೆ ಬಿದ್ದ ಪೋಲಿ ಹುಡುಗರು

Bike Wheeling: ರೋಡ್‌ನಲ್ಲಿ ಭಯಾನಕ ವ್ಹೀಲಿಂಗ್‌ ಮಾಡಿ ರಸ್ತೆಯಲ್ಲಿ ಓಡಾಡುವವರಿಗೆ ಹಾಗೂ ಸಹ ಸವಾರರಿಗೆ ಕಿರಿಕ್‌ ಮಾಡುವುದಲ್ಲದೇ, ಯುವತಿಯೊಬ್ಬಳಿಗೆ ಪುಂಡರು ಕೀಟಲೆ (Ragging Case) ಮಾಡಿದ್ದಾರೆ.

VISTARANEWS.COM


on

By

Ragging case in Bengaluru
Koo

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪುಂಡರ ಹಾವಳಿ (Ragging Case) ಮಿತಿಮೀರಿದೆ. ಮೀಸೆ ಚಿಗುರದ ಯುವಕರು ಓಡಿಸೋಕ್ಕೆ ಬೈಕ್‌ ಸಿಕ್ಕರೆ ಸಾಕು ರಸ್ತೆಯಲ್ಲಿ ವ್ಹೀಲಿಂಗ್‌ (bike wheeling) ಮಾಡುತ್ತಾ, ಹೆಣ್ಮಕ್ಕಳಿಗೆ ರ‍್ಯಾಗಿಂಗ್‌ ಮಾಡುವುದು ಹೆಚ್ಚಾಗುತ್ತಿದೆ. ಸದ್ಯ ಇಂತಹದ್ದೆ ಘಟನೆಯೊಂದು ನಾಗರಭಾವಿ ಔಟರ್ ರಿಂಗ್ ರೋಡ್ ಬಳಿ ನಡೆದಿದೆ.

ಕುಟುಂಬದವರ ಜತೆ ಹೋಗುತ್ತಿದ್ದ ಮಹಿಳೆಯ ಹಿಂದೆ ಬಿದ್ದ ಕೆಲ ಪೋಲಿ ಹುಡುಗರು, ವ್ಹೀಲಿಂಗ್ ಮಾಡಿ ಭಯ ಪಡಿಸಿದ್ದಲ್ಲದೇ ರ‍್ಯಾಗಿಂಗ್‌ ಮಾಡಿದ್ದಾರೆ. ನಿನ್ನೆ ಭಾನುವಾರ ರಾತ್ರಿ 11.40ರ ಸುಮಾರಿಗೆ ಘಟನೆ ನಡೆದಿದೆ. ನೀತು ಬಳೆಗಾರ್ ಎಂಬಾಕೆ ಪೊಲೀಸರಿಗೆ ದೂರು ನೀಡಿದ್ದಾರೆ.

ನೀತು ಕುಟುಂಬಸ್ಥರ ಜತೆ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಪುಂಡರಿಬ್ಬರು ನಂಬರ್ ಪ್ಲೇಟ್ ಇಲ್ಲದ ಇರುವ ಡ್ಯೂಕ್ ಬೈಕ್‌ನಲ್ಲಿ ಬಂದು ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದಿದ್ದಾರೆ. ಇದನ್ನೂ ಪ್ರಶ್ನೆ ಮಾಡಿದ್ದಕ್ಕೆ ಮಹಿಳೆಯನ್ನು ನಿಂದಿಸಿದ್ದಾರೆ. ಹೀಗಾಗಿ ನೀತು ಫೋಟೋ ಸಮೇತ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಜತೆಗೆ ಸೋಶಿಯಲ್‌ ಮೀಡಿಯಾದಲ್ಲಿ ಟ್ಯಾಗ್‌ ಮಾಡಿ ಬೆಂಗಳೂರಿನಲ್ಲಿ ಸಾಮಾನ್ಯ ಜನರಿಗೆ ಸೇಫ್ಟಿ ಇಲ್ಲ. ದಯಮಾಡಿ ಇಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಬಾಲಕನನ್ನು ಥಳಿಸಿದ ಯುವಕರ ಗುಂಪು

ಹುಬ್ಬಳ್ಳಿಯಲ್ಲಿ ಕಿಡಿಗೇಡಿಗಳ ಗುಂಪೊಂದು ಶಾಲಾ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದೆ. ಹುಬ್ಬಳ್ಳಿಯ ವಿಶ್ವೇಶ್ವರ ನಗರದಲ್ಲಿ ಖಾಸಗಿ ಶಾಲೆಯ ವಿದ್ಯಾರ್ಥಿ ಹಿಡಿದ ಐದಾರು ಮಂದಿ ಹಲ್ಲೆ ನಡೆಸಿದ್ದಾರೆ. ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶಾಲೆಯ ಪ್ರಾಂಶುಪಾಲರಿಂದ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಿದ್ಯಾರ್ಥಿನಿ ಜತೆ ಮಾತನಾಡುತ್ತಿದ್ದ ಎಂಬ ಕಾರಣಕ್ಕೆ ಬಾಲಕನ ಮೇಲೆ ಹಲ್ಲೆ ನಡೆಸಲಾಗಿದೆ.
ಘಟನೆ ಸಂಬಂಧಪಟ್ಟಂತೆ ವಿವಿಧ ಕಾಲೇಜುಗಳ ಐವರು ಯುವಕರ ವಿರುದ್ಧ ಪ್ರಕರಣ‌ ದಾಖಲಾಗಿದೆ.

ಇದನ್ನೂ ಓದಿ: Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

ಕಾಲೇಜು ಯುವತಿಯವರಿಗೆ ಮರ್ಮಾಂಗ ತೋರಿಸಿ ಎಸ್ಕೇಪ್‌ ಆಗಿದ್ದ ದುಷ್ಟ ಅರೆಸ್ಟ್‌

ಬೆಂಗಳೂರು: ಕಾಲೇಜು ಯುವತಿಯರಿಗೆ ಮರ್ಮಾಂಗ ತೋರಿಸುವ ಮೂಲಕ ಅಸಭ್ಯವಾಗಿ ವರ್ತಿಸಿ (Indecent Behaviour) ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ನಗರದ ವಿವಿ ಪುರಂನಲ್ಲಿರುವ ಪ್ರತಿಷ್ಠಿತ ಖಾಸಗಿ ಕಾಲೇಜು ಬಳಿ ನಿಂತಿದ್ದ ಯುವತಿರ ಮುಂದೆ ಕಾಮುಕ ವ್ಯಕ್ತಿಯೊಬ್ಬ ಪ್ಯಾಂಟ್ ಜಿಪ್ ತೆಗೆದು ಮರ್ಮಾಂಗ ತೋರಿಸಿ ಪರಾರಿಯಾಗಿದ್ದ. ಆತನನ್ನು ಇದೀಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರೆಹಮಾನ್ (48) ಆರೋಪಿ. ಕಾಲೇಜು ಮುಂಭಾಗ ನಿಂತಿದ್ದ ಹುಡುಗಿಯರ ಗುಂಪಿನ ಬಳಿ ಸ್ಕೂಟರ್‌ನಲ್ಲಿ ಬಂದ ವ್ಯಕ್ತಿ, ಅಸಭ್ಯವಾಗಿ ವರ್ತಿಸಿದ್ದ. ಆ ದೃಶ್ಯವನ್ನು ಸ್ಥಳೀಯರೊಬ್ಬರು ಮೊಬೈಲ್‌ನಲ್ಲಿ ಚಿತ್ರೀಕರಿಸಿ, ಕ್ರಮ ಕೈಗೊಳ್ಳಲು ಪೊಲೀಸರಿಗೆ ಮನವಿ ಮಾಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಗಮನಿಸಿದ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Dina Bhavishya
ಭವಿಷ್ಯ5 mins ago

Dina Bhavishya : ಈ ರಾಶಿಯವರಿಗೆ ಈ ದಿನ ಆರ್ಥಿಕ ಚಟುವಟಿಕೆಗಳು ಗರಿಗೆದರಲಿವೆ

PM Modi Russia Visit
ವಿದೇಶ5 hours ago

PM Modi Russia Visit: ದೇಶ, ಜನರಿಗಾಗಿ ನಿಮ್ಮ ಜೀವನವೇ ಮುಡಿಪು ಎಂದು ಮೋದಿಯನ್ನು ಹೊಗಳಿದ ಪುಟಿನ್

LKG UKG
ಪ್ರಮುಖ ಸುದ್ದಿ6 hours ago

LKG, UKG: ಎಲ್‌ಕೆಜಿ, ಯುಕೆಜಿ, 1ನೇ ತರಗತಿ ಪ್ರವೇಶಾತಿಗೆ ಗರಿಷ್ಠ ವಯೋಮಿತಿ ನಿಗದಿ; ಇಲ್ಲಿದೆ ಹೊಸ ಅಪ್‌ಡೇಟ್

IND vs SL
ಕ್ರೀಡೆ6 hours ago

IND vs SL: ಶ್ರೀಲಂಕಾ ವಿರುದ್ಧದ ಸರಣಿಗೆ ರೋಹಿತ್​-ಕೊಹ್ಲಿಗೆ ವಿಶ್ರಾಂತಿ

Ramniwas Rawat
ದೇಶ7 hours ago

Ramniwas Rawat: 15 ನಿಮಿಷದಲ್ಲಿ 2 ಬಾರಿ ಸಚಿವನಾಗಿ ಬಿಜೆಪಿ ಶಾಸಕ ಪ್ರಮಾಣವಚನ; ಎಲ್ಲಾಯ್ತು ಎಡವಟ್ಟು?

Paris Olympics 2024
ಕ್ರೀಡೆ7 hours ago

Paris Olympics 2024: ಪ್ಯಾರಿಸ್ ಒಲಿಂಪಿಕ್ಸ್‌ಗೆ ಸಿಂಧು, ಶರತ್ ಕಮಲ್ ಭಾರತದ ಧ್ವಜಧಾರಿ

MLA Satish Sail visited the flood affected areas of Karwar taluk
ಉತ್ತರ ಕನ್ನಡ7 hours ago

Uttara Kannada News: ಕಾರವಾರ ತಾಲೂಕಿನ ನೆರೆ ಪೀಡಿತ ಪ್ರದೇಶಗಳಿಗೆ ಶಾಸಕ ಸತೀಶ ಕೆ. ಸೈಲ್ ಭೇಟಿ

Union Budget 2024
ದೇಶ8 hours ago

Union Budget 2024: ಕೇಂದ್ರ ಬಜೆಟ್;‌ 8ನೇ ವೇತನ ಆಯೋಗ ಸೇರಿ 7 ಬೇಡಿಕೆ ಇಟ್ಟ ಸರ್ಕಾರಿ ನೌಕರರು!

Dengue Cases
ಕರ್ನಾಟಕ8 hours ago

Dengue Cases: ರಾಜ್ಯದಲ್ಲಿ ಸೋಮವಾರ 197 ಡೆಂಗ್ಯೂ ಕೇಸ್‌ಗಳು ಪತ್ತೆ, ಒಬ್ಬರ ಸಾವು

ಕ್ರೀಡೆ8 hours ago

Kuldeep Yadav: ಕುಲ್​ದೀಪ್ ಯಾದವ್​ರನ್ನು​ ಅಭಿನಂದಿಸಿದ ಯೋಗಿ ಆದಿತ್ಯನಾಥ್

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Rain Effect
ಮಳೆ12 hours ago

Rain Effect : ಭಾರಿ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಪಾನ್‌ ಶಾಪ್‌, ಕಾರು! ಉಡುಪಿಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

Karnataka Rain Effect
ಮಳೆ14 hours ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain
ಮಳೆ16 hours ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ16 hours ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

Murder case
ಬೆಂಗಳೂರು18 hours ago

Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

karnataka weather Forecast
ಮಳೆ1 day ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ1 day ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ2 days ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ2 days ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

ಟ್ರೆಂಡಿಂಗ್‌