ಮಂಡ್ಯ: ದಲಿತ ಕುಟುಂಬದ ಮೇಲೆ ಮುಸ್ಲಿಂ ಪುಂಡರು ಹಲ್ಲೆ ನಡೆಸಿದ್ದರೂ ಪೊಲೀಸರು ಅಪರಾಧಿಗಳನ್ನು ಬಂಧಿಸಿಲ್ಲ ಎಂದು ಆರೋಪಿಸಿ, ಪೊಲೀಸರ ನಡೆ ಖಂಡಿಸಿ ಇಂದು ಶ್ರೀರಂಗಪಟ್ಟಣ ಬಂದ್‌ಗೆ ಕರೆ ನೀಡಲಾಗಿದ್ದು, ಬಂದ್‌ಗೆ ಬೆಂಬಲ ವ್ಯಕ್ತವಾಗಿದೆ.
ಭಜರಂಗ ದಳ, ವಿಹೆಚ್‌ಪಿ ಸೇರಿದಂತೆ ಹಲವು ಹಿಂದೂಪರ ಸಂಘಟನೆಗಳು ಇಂದು ಶ್ರೀರಂಗಪಟ್ಟಣ ಬಂದ್‌ಗೆ ಕರೆ ನೀಡಿದ್ದವು. ಬೆಳಿಗ್ಗೆಯಿಂದ ಸಂಜೆವರೆಗೂ ಅಂಗಡಿ ಮುಂಗಟ್ಟು ಮುಚ್ಚಿ ಬಂದ್ ಬೆಂಬಲಿಸಲು ಸಂಘಟನೆಗಳು ಮನವಿ ಮಾಡಿದ್ದವು. ಸಂಘಟನೆಗಳ ಮನವಿಗೆ ಸ್ಪಂದಿಸಿ ವರ್ತಕರು ಅಂಗಡಿ ಬಾಗಿಲು ಮುಚ್ಚಿ ಬಂದ್‌ಗೆ ಬೆಂಬಲ ಸೂಚಿಸಿದ್ದಾರೆ. ಬಂದ್ ಪರಿಣಾಮ ಶ್ರೀರಂಗಪಟ್ಟಣದ ಮುಖ್ಯರಸ್ತೆ ಬಿಕೋ ಎನ್ನುತ್ತಿದ್ದು, 10 ಗಂಟೆಗೆ ಮುಖ್ಯ ರಸ್ತೆಯಲ್ಲಿ ಜಾಥಾ ನಡೆಸಿ ಪೊಲೀಸ್ ಠಾಣೆ ಮುಂದೆ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಲಿವೆ.
ಕಳೆದ ವಾರ ಕೆ.ಆರ್.ಎಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಲಿತ ಕುಟುಂಬವೊಂದರ ಮೇಲೆ ಮುಸ್ಲಿಂ ಪುಂಡರು ಹಲ್ಲೆ ನಡೆಸಿದ್ದರು.
ಸಿಡಿಲು ಬಡಿದು ರೈತ ಸಾವು
ಕಲಬುರಗಿ: ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟಿದ್ದಾರೆ. ಅಫಜಲಪುರ ತಾಲೂಕಿನ ಬಿಲ್ವಾಡ (ಬಿ) ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಭೋಗಪ್ಪ ಬಿನ್ ಯಲ್ಲಪ್ಪ ಆಲೆನವರ (60) ಸಾವಿಗೀಡಾದ ರೈತರು. ಜಮೀನಿನಲ್ಲಿ ಕೆಲಸ ಮಾಡುತ್ತಿರುವಾಗ ಸಿಡಿಲು ಬಡಿದಿದೆ. ಅಫಜಲಪುರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ದಾಖಲಾಗಿದೆ.