Site icon Vistara News

Physical Abuse: ಒಂಟಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದವನ ಬಂಧನ

physical abuse

ಮಂಡ್ಯ: ಬೈಕ್‌ನಲ್ಲಿ ಬಂದು ಒಂಟಿ ಮಹಿಳೆಯರಿಗೆ ರಸ್ತೆಯಲ್ಲಿ ಲೈಂಗಿಕ ಕಿರುಕುಳ (Physical Abuse) ನೀಡಿ ಪರಾರಿಯಾಗುತ್ತಿದ್ದ ವಿಕೃತ ಆರೋಪಿಯನ್ನು ಬಂಧಿಸಲಾಗಿದೆ.

ಕೆರಗೋಡು ಗ್ರಾಮದ ಚಂದ್ರಶೇಖರ್ ಆರಾಧ್ಯ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಈತ ಮಂಡ್ಯ ನಗರದ ಹಲವೆಡೆ ಬೈಕ್‌ನಲ್ಲಿ ಓಡಾಡುತ್ತಾ ಒಂಟಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಮುಖ ಕಾಣದಂತೆ ಬೈಕ್‌ನಲ್ಲಿ ಹೆಲ್ಮೆಟ್ ಧರಿಸಿಕೊಂಡು ಬಂದು ಒಂಟಿ ಮಹಿಳೆಯರನ್ನು ಚಿವುಟುವುದು, ಸವರುವುದು ಮಾಡುತ್ತಿದ್ದ.

ಕೃತ್ಯ ನಡೆದಲ್ಲಿನ ಸಿಸಿಟಿವಿ ಫೂಟೇಜ್‌ಗಳನ್ನು ಆಧರಿಸಿ ಆರೋಪಿಯ ಬೆನ್ನು ಹತ್ತಲಾಗಿತ್ತು. ನಿನ್ನೆ ಸಂಜೆ ಕೂಡ ಆರೋಪಿ ಒಂಟಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿ ಪರಾರಿಗೆ ಯತ್ನಿಸಿದ್ದ. ಈ ವೇಳೆ ಆರೋಪಿಯ ಬಗ್ಗೆ ಸ್ಥಳೀಯರಿಂದ ಪೊಲೀಸರಿಗೆ ಮಾಹಿತಿ ದೊರೆತಿತ್ತು. ಸಾರ್ವಜನಿಕರಿಂದ ಮಾಹಿತಿ ಪಡೆದ ಪೊಲೀಸರಿಂದ ಮಂಡ್ಯದಲ್ಲಿ ಆರೋಪಿಯ ಬಂಧನವಾಗಿದೆ. ಮಂಡ್ಯ ಪೂರ್ವ ಪೊಲೀಸ್ ಠಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ನಕಲಿ ವೈದ್ಯನ ಕ್ಲಿನಿಕ್‌ಗೆ ದಾಳಿ, ಬಂಧನ

ವಿಜಯನಗರ: ನಕಲಿ ವೈದ್ಯರ ಕ್ಲಿನಿಕ್‌ಗಳ ಮೇಲೆ ಆರೋಗ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಜಂಟಿ ದಾಳಿ ನಡೆಸಿವೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಶಿವಪುರ ಗ್ರಾಮದಲ್ಲಿ ದಾಳಿ ನಡೆಸಲಾಗಿದ್ದು, ಮಹಮ್ಮದ್ ರಫಿ (50) ಎಂಬ ನಕಲಿ ವೈದ್ಯನನ್ನು ಬಂಧಿಸಲಾಗಿದೆ.

ಶಿವಪುರ ಗ್ರಾಮದ ತನ್ನ ಮನೆಯಲ್ಲಿ ನಕಲಿ ವೈದ್ಯ ಮಹಮ್ಮದ್ ರಫಿ ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಿದ್ದ. ವಿಜಯನಗರ DHO ಡಾ. ಶಂಕರ್ ನಾಯ್ಕ್, ಕೂಡ್ಲಿಗಿ ಸಿಪಿಐ ಸುರೇಶ್ ತಳವಾರ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ದಾಳಿಯ ವೇಳೆ ಅನೇಕ ಸಿರಿಂಜ್‌ಗಳು, ಮಾತ್ರೆಗಳು, ಸ್ಟೆತೋಸ್ಕೋಪ್ ಸೇರಿದಂತೆ ಇತರೆ ವೈದ್ಯಕೀಯ ಪರಿಕರಗಳನ್ನು ವಶಕ್ಕೆ ಪಡೆಯಲಾಗಿದೆ.

ಮೊಹಮದ್ ರಫಿ ಮೇಲೆ ಹಲವು ದೂರುಗಳು ಬಂದಿದ್ದವು. ದೂರಿನ ಆಧಾರ ಮೇಲೆ ಆರೋಗ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ದಾಳಿ ನಡೆಸಿವೆ. ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Physical Abuse : ನೀಚ ಕೃತ್ಯ; ನರ್ಸರಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಸ್ಕೂಲ್ ವ್ಯಾನ್ ಡ್ರೈವರ್​

Exit mobile version