Site icon Vistara News

Road Accident : ಪ್ರತ್ಯೇಕ ಕಡೆಗಳಲ್ಲಿ ಅಪಘಾತ; ಓವರ್‌ ಸ್ಪೀಡ್‌ ಯಡವಟ್ಟು, ಪ್ರಾಣಕ್ಕೆ ತಂತು ಕುತ್ತು

road Accident

ಮಂಡ್ಯ: ಕೆಎಸ್‌ಆರ್‌ಟಿಸಿ ಹಾಗೂ ಕಾರಿನ ನಡುವೆ (Road Accident) ಡಿಕ್ಕಿಯಾಗಿದ್ದು, ಐವರು ಗಾಯಗೊಂಡಿದ್ದಾರೆ. ಕಾರು ಸಂಪೂರ್ಣ ಜಖಂಗೊಂಡಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣ ಹಾನಿಯಾಗಿಲ್ಲ. ಮಂಡ್ಯದ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯ ಮದ್ದೂರು-ಮಳವಳ್ಳಿ ರಸ್ತೆಯಲ್ಲಿ ಘಟನೆ ನಡೆದಿದೆ.

ಓವರ್‌ ಟೇಕ್‌ ಮಾಡುವ ವೇಳೆ ಕಾರಿಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದಿದೆ. ಬೆಂಗಳೂರಿನ ಕಡೆಗೆ ಹೋಗುತ್ತಿದ್ದ ಸಿಪ್ಟ್ ಕಾರಿಗೆ ಹಿಂಬದಿಯಿಂದ ಬಂದ ಬಸ್‌ ಡಿಕ್ಕಿ ಹೊಡೆದಿದೆ. ಮಳವಳ್ಳಿ ತಾಲ್ಲೂಕಿನ ಬೆಳಕವಾಡಿ ಗ್ರಾಮದ ಕುಟುಂಬವೊಂದು ಬೆಂಗಳೂರಿಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ಕಾರಿನಲ್ಲಿದ್ದ ಐದು ಜನರಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದ್ದು ನಾಲ್ವರಿಗೆ ಸಣ್ಣಪುಟ್ಟ ಗಾಯವಾಗಿದೆ. ಗಾಯಾಳನ್ನು ಕೆ.ಎಂ.ದೊಡ್ಡಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೆ.ಎಂ.ದೊಡ್ಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Physical Abuse : ಶಾಲಾ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಕಾಮುಕನನ್ನು ಥಳಿಸಿದ ಸಾರ್ವಜನಿಕರು

ಬೆಂಗಳೂರಿನಲ್ಲಿ ಕಾರುಗಳ ಅಪಘಾತ

ಕುಡಿದ ಅಮಲಿನಲ್ಲಿ ಅಡ್ಡಾದಿಡ್ಡಿ ವಾಹನ ಚಾಲನೆ ಮಾಡಿದ ಪರಿಣಾಮ ಎರಡು ಕಾರುಗಳಿಗೆ ಡಿಕ್ಕಿಯಾಗಿದೆ. ಸರ್ಕಾರಿ ವಾಹನದಲ್ಲಿ ಬಂದ ಚಾಲಕ ಎರಡು ವಾಹನಗಳಿಗೆ ಗುದ್ದಿದ್ದಾನೆ. ಬೆಂಗಳೂರಿನ ಸಹಕಾರ ನಗರ ಬಳಿಯ ಕೊಡಿಗೇಹಳ್ಳಿ ಗೇಟ್ ಬಳಿ ಘಟನೆ ನಡೆದಿದೆ.

ಬೆಂ-ಮೈ ಬಳಿ ಭೀಕರ ಅಪಘಾತ

ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಭಾರಿ ಅನಾಹುತ ತಪ್ಪಿದೆ. ಓರ್ವ ಮಹಿಳೆ ಸೇರಿದಂತೆ ಇಬ್ಬರು ಮಕ್ಕಳಿಗೆ ಗಂಭೀರ ಗಾಯವಾಗಿದೆ. ಬೆಂ-ಮೈ ಹೆದ್ದಾರಿಯ ಕೆಂಗಲ್ ಬಳಿ ಘಟನೆ ನಡೆದಿದೆ.

ಮಾರುತಿ ಫ್ರಾಂಕ್ಸ್ ಕಾರು ಅಪಘಾತಕ್ಕೀಡಾಗಿದೆ. ಬೆಂಗಳೂರಿನ ವಿಜಯನಗರದ ನಿವಾಸಿಗಳು ಬೆಂಗಳೂರಿನಿಂದ ಮಂಡ್ಯದ ಉಕ್ಕಡ ಮಾರಮ್ಮ ದೇವಾಲಯಕ್ಕೆ ಹೋಗುತ್ತಿದ್ದರು. ಈ ವೇಳೆ ಓವರ್ ಸ್ಪೀಡ್‌ ಆಗಿ ಬಂದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಪಕ್ಕದ ರಸ್ತೆಗೆ ಹೋಗಿ ಕಾರು ಬಿದ್ದಿದೆ. ಗಾಯಾಳುಗಳನ್ನು ಚನ್ನಪಟ್ಟಣ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version