Road Accident | ಸ್ವಿಫ್ಟ್, ಇನ್ನೋವಾ ನಡುವೆ ಭೀಕರ ಅಪಘಾತ; ಐವರ ಸಾವು - Vistara News

ಕ್ರೈಂ

Road Accident | ಸ್ವಿಫ್ಟ್, ಇನ್ನೋವಾ ನಡುವೆ ಭೀಕರ ಅಪಘಾತ; ಐವರ ಸಾವು

ಮಂಡ್ಯ ಜಿಲ್ಲೆಯ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಇನ್ನೋವಾ ಕಾರು ಡಿವೈಡರ್‌ ದಾಟಿ ಸ್ವಿಫ್ಟ್‌ ಕಾರಿಗೆ ಡಿಕ್ಕಿ ಹೊಡೆದಿದ್ದರಿಂದ ದುರಂತ ಸಂಭವಿಸಿದೆ.

VISTARANEWS.COM


on

Road Accident
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಡ್ಯ: ಜಿಲ್ಲೆಯ ನಾಗಮಂಗಲ ತಾಲೂಕಿನ ಎ.ನಾಗತಿಹಳ್ಳಿ ಬಳಿಯ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಸ್ವಿಫ್ಟ್ ಹಾಗೂ ಇನ್ನೋವಾ ಕಾರ್‌ಗಳ ನಡುವೆ ಭಾನುವಾರ ರಾತ್ರಿ ನಡೆದ ಭೀಕರ ಅಪಘಾತದಲ್ಲಿ (Road Accident) ಐದು ಮಂದಿ ಮೃತಪಟ್ಟಿದ್ದಾರೆ.

ಬೆಂಗಳೂರಿನಿಂದ ಹಾಸನದ ಕಡೆಗೆ ಹೋಗುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಹಾಸನದಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ತಮಿಳುನಾಡು ನೋಂದಣಿಯ ಸ್ವಿಫ್ಟ್ ಕಾರಿಗೆ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಒಬ್ಬ ಮಹಿಳೆ ಹಾಗೂ ನಾಲ್ವರು ಪುರುಷರು ಸೇರಿ ಐವರು ಮೃತಪಟ್ಟಿದ್ದಾರೆ. ಬಿಂಡಗನವಿಲೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಪಘಾತದಲ್ಲಿ ಎರಡೂ ಕಾರುಗಳು ಭಾಗಶಃ ನಜ್ಜುಗುಜ್ಜಾಗಿವೆ. ಅಪಘಾತ ನಡೆದ ವೇಳೆ ಕೆಲ ಹೊತ್ತು ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಯಿತು. ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿ ವಾಹನಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಇದನ್ನೂ ಓದಿ | Teens drowned | ಕಾರಂಜಾ ಜಲಾಶಯ ಕಾಲುವೆಗೆ ಈಜಲು ಹೋದ ಇಬ್ಬರು ತರುಣರು ನೀರುಪಾಲು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Ankola landslide Case: ಅಂಕೋಲಾ ಗುಡ್ಡ ಕುಸಿತ ಪ್ರಕರಣ; ಮೃತರ ಕುಟುಂಬಗಳಿಗೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Ankola landslide Case: ಅಂಕೋಲಾ ಗುಡ್ಡ ಕುಸಿತ ಪ್ರಕರಣ. ಅತ್ಯಂತ ದುರದೃಷ್ಟಕರ ಘಟನೆ. ಮೃತ ದುರ್ದೈವಿಗಳ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಘಟನೆಯಲ್ಲಿ ಮೃತಪಟ್ಟವರಿಗೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

VISTARANEWS.COM


on

Ankola landslide Case
Koo

ಕಾರವಾರ: ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಗುಡ್ಡ ಕುಸಿತ ಪ್ರಕರಣದಲ್ಲಿ (Ankola landslide Case) ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಅವರು, ಅಂಕೋಲಾ ಗುಡ್ಡ ಕುಸಿತ ಪ್ರಕರಣದಲ್ಲಿ ಏಳು ಮಂದಿ ಮಣ್ಣಿನ ಅಡಿ ಸಿಲುಕಿ ಮೃತಪಟ್ಟಿರುವ ಸಾಧ್ಯತೆ ಇದ್ದು, ಈಗಾಗಲೇ 4 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇದು ಅತ್ಯಂತ ದುರದೃಷ್ಟಕರ ಘಟನೆ. ಮೃತ ದುರ್ದೈವಿಗಳ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಘಟನೆಯಲ್ಲಿ ಮೃತಪಟ್ಟವರಿಗೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ನಿರಂತರ ಮಳೆಯ ನಡುವೆಯೂ ರಕ್ಷಣಾ ಕಾರ್ಯಾಚರಣೆಯನ್ನೂ ಮುಂದುವರೆಸಲಾಗುತ್ತಿದ್ದು, ಉಳಿದ ಮೂವರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Viral Video: ಚಾಕೋಲೇಟ್ ತಿನ್ನುವ ಆಸೆಯಾಗಿ ಅಂಗಡಿಗೆ ಹೋಗಿದ್ದ ಬಾಲಕ ಶವವಾಗಿ ಮನೆಗೆ ಬಂದ; ಆಗಿದ್ದೇನು? ವಿಡಿಯೊ ನೋಡಿ

ಏನಿದು ಘಟನೆ?

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಗೆ (Karnataka Rain Effect) ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಬಳಿ ಭಾರೀ ಗುಡ್ಡಕುಸಿತ (Karnataka Rain) ಉಂಟಾಗಿತ್ತು. ಗುಡ್ಡದ ಮಣ್ಣಿನಡಿ 7 ಮಂದಿ ಸಿಲುಕಿ ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಐವರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಗುಡ್ಡ ಕುಸಿದ ರಭಸಕ್ಕೆ ನದಿಗೆ 2 ಗ್ಯಾಸ್ ಟ್ಯಾಂಕರ್‌ಗಳು ಕೊಚ್ಚಿ ಹೋಗಿದ್ದವು. ಗುಡ್ಡದ ಕೆಳಗಿದ್ದ ಲಾರಿ, ಮತ್ತೊಂದು ಟ್ಯಾಂಕರ್‌ ಹಾಗೂ ಚಾಲಕರು ಪಾರಾಗಿದ್ದರು. ತುರ್ತು ಕಾರ್ಯಾಚರಣೆಗೆ ಪೊಲೀಸರು ಧಾವಿಸಿದ್ದು. ಸ್ಥಳದ ಪರಿಸ್ಥಿತಿ ಭೀಕರವಾಗಿದ್ದು, ಹೆದ್ದಾರಿ ಸಂಪೂರ್ಣ ಕತ್ತರಿಸಿಹೋಗಿ ಈ ರಸ್ತೆಯಲ್ಲಿ ವಾಹನ ಸಂಚಾರ ನಿಂತೇ ಹೋಗಿದೆ, ಇದನ್ನು ಸರಿಪಡಿಸಲು ವಾರವಾದರೂ ಬೇಕು ಎಂದು ಕಾರ್ಯಾಚರಣೆ ನಿರತರ ಅಭಿಪ್ರಾಯ. ಎಡೆಬಿಡದೆ ಸುರಿಯುತ್ತಿರುವ ಮಳೆ, ತೆರವು ಕಾರ್ಯಾಚರಣೆಯನ್ನು ಇನ್ನಷ್ಟು ಕಷ್ಟಗೊಳಿಸಿದೆ.

ಗುಡ್ಡದ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕಾರ್ಯಾಚರಣೆಗೆ ಅಡಚಣೆಯಾಗಿದೆ. ಇನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ 66 (ಗೋವಾ-ಮಂಗಳೂರು) ಹೆದ್ದಾರಿ ಸಂಪರ್ಕ ಸ್ಥಗಿತ ಹಿನ್ನೆಲೆ‌ಯಲ್ಲಿ ಲಾರಿಗಳು ಐದಾರು ಕಿ.ಮೀ ದೂರದಷ್ಟು ನಿಂತಲ್ಲೇ ನಿಂತಿವೆ. ಇದರಿಂದ ದೂರದ ರಾಜ್ಯಗಳಿಂದ ಬಂದ ಲಾರಿ ಚಾಲಕರು ಊಟ, ನೀರು ಸಿಗದೇ ಪರದಾಡುತ್ತಿದ್ದಾರೆ.

ಮನೆ ಕುಸಿದು ಮೃತಪಟ್ಟ ವೃದ್ಧನ ಕುಟುಂಬಸ್ಥರಿಗೆ ಪರಿಹಾರ

ಕಾರವಾರದ ಕಿನ್ನರ ಗ್ರಾಮದಲ್ಲಿ ಮನೆ ಕುಸಿದು ವೃದ್ಧ ಸಾವು ಪ್ರಕರಣದ ಹಿನ್ನೆಲೆಯಲ್ಲಿ ಮೃತರ ಕುಟುಂಬಸ್ಥರಿಗೆ ಸಚಿವ ಮಂಕಾಳು ವೈದ್ಯ ಅವರು ಪರಿಹಾರದ ಆದೇಶ ಪತ್ರ ವಿತರಿಸಿದರು.

ನಿನ್ನೆ ಸುರಿದ ಧಾರಾಕಾರ ಮಳೆಗೆ ಕಿನ್ನರ ಗ್ರಾಮದಲ್ಲಿ ಗುಡ್ಡ ಕುಸಿದು ಮನೆಗೆ ಹಾನಿಯಾಗಿತ್ತು. ಮನೆಯಲ್ಲಿದ್ದ ವೃದ್ಧ ತಿಕರ್ಸ್ ಗುರವ(60) ಗೋಡೆಯಡಿ ಸಿಲುಕಿ ಮೃತಪಟ್ಟಿದ್ದರು. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹ ಹೊರತೆಗೆದಿದ್ದರು. ಇಂದು ಕಾರವಾರಕ್ಕೆ ಆಗಮಿಸಿದ ವೇಳೆ ಪರಿಹಾರದ ಆದೇಶಪತ್ರವನ್ನು ಸಚಿವರು ಹಸ್ತಾಂತರಿಸಿದರು.

ಇದನ್ನೂ ಓದಿ | Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಮಾಜಿ ಸಚಿವ ನಾಗೇಂದ್ರ ಪತ್ನಿಯನ್ನು ವಶಕ್ಕೆ ಪಡೆದ ಇಡಿ

ಮನೆ ಹಾನಿಗೆ 1.5 ಲಕ್ಷ, ಜೀವಹಾನಿಗೆ 5 ಲಕ್ಷ ಸೇರಿ ಒಟ್ಟು 6.5 ಲಕ್ಷ ಪರಿಹಾರ ಆದೇಶ ಪತ್ರ ನೀಡಲಾಗಿದೆ. ಈ ವೇಳೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ.ಕೆ, ಶಾಸಕ ಸತೀಶ ಸೈಲ್ ಉಪಸ್ಥಿತರಿದ್ದರು.

Continue Reading

ಕರ್ನಾಟಕ

Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಮಾಜಿ ಸಚಿವ ನಾಗೇಂದ್ರ ಪತ್ನಿಯನ್ನು ವಶಕ್ಕೆ ಪಡೆದ ಇಡಿ

Valmiki Corporation Scam: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿ ಮಾಜಿ ಸಚಿವ ಬಿ.ನಾಗೇಂದ್ರ ಅವರ ಪತ್ನಿ ಮಂಜುಳಾ ಅವರನ್ನೂ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅವ್ಯವಹಾರ ನಡೆದ ಸಮಯದಲ್ಲಿ ಮಂಜುಳಾ ಅವರ ಬ್ಯಾಂಕ್ ಖಾತೆಗಳಿಗೂ ಹಣ ಬಂದಿರುವ ಹಿನ್ನಲೆಯಲ್ಲಿ ಇಡಿ ಅಧಿಕಾರಿಗಳು ಇದರ ಮೂಲವನ್ನು ಪ್ರಶ್ನಿಸಲಿದ್ದಾರೆ.

VISTARANEWS.COM


on

Valmiki Corporation Scam
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ (Valmiki Corporation Scam) ಸಂಬಂಧಿಸಿ ಮಾಜಿ ಸಚಿವ ಬಿ.ನಾಗೇಂದ್ರ (Ex minister B Nagendra) ಸದ್ಯ ಇಡಿ ಅಧಿಕಾರಿಗಳ (ED Officers) ವಶದಲ್ಲಿದ್ದಾರೆ. ಇದೀಗ ಅವರ ಪತ್ನಿ ಮಂಜುಳಾ ಅವರನ್ನೂ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಡಾಲರ್ಸ್ ಕಾಲೋನಿ ನಿವಾಸದಿಂದ ವಶಕ್ಕೆ ಪಡೆದ ಅಧಿಕಾರಿಗಳು ಅವರನ್ನು ಇಡಿ ಕಚೇರಿ ಕರೆ ತಂದಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಮಂಜುಳಾ ಅವರಿಂದ ಮಾಹಿತಿ ಕಲೆ ಹಾಕಲಿದ್ದಾರೆ. ಮಂಜುಳಾ ಅವರ ಹೆಸರಲ್ಲಿ ಹಣದ ವಹಿವಾಟು ನಡೆದಿರುವ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಅವ್ಯವಹಾರ ನಡೆದ ಸಮಯದಲ್ಲಿ ಮಂಜುಳಾ ಅವರ ಬ್ಯಾಂಕ್ ಖಾತೆಗಳಿಗೂ ಹಣ ಬಂದಿರುವ ಹಿನ್ನಲೆಯಲ್ಲಿ ಇಡಿ ಅಧಿಕಾರಿಗಳು ಇದರ ಮೂಲವನ್ನು ಪ್ರಶ್ನಿಸಲಿದ್ದಾರೆ.

ಜುಲೈ 13ರಂದು ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಬಳಿಕ ಯಲಹಂಕದಲ್ಲಿರುವ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರ ಮನೆಗೆ ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು 5 ದಿನಗಳ ಕಾಲ ಕಸ್ಟಡಿಗೆ ನೀಡಿದ್ದರು. 18ನೇ ತಾರೀಖಿನಂದು ಬೆಳಿಗ್ಗೆ 11ಕ್ಕೆ ಮತ್ತೆ ಹಾಜರುಪಡಿಸುವಂತೆ ಸೂಚನೆ ನೀಡಿದ್ದರು.

ಏನಿದು ಪ್ರಕರಣ?

ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಎಂಬಾತ ಮೇ 26ರಂದು ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಗಮದ 187 ಕೋಟಿ ರೂ.ಗಳನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಲಾಗಿದೆ, ಇದರಲ್ಲಿ 88 ಕೋಟಿ ಹಣ ದುರುಪಯೋಗವಾಗಿದೆ ಎಂದು ಅವರು ಡೆತ್‌ನೋಟ್‌ನಲ್ಲಿ ಬರೆದಿದ್ದರು. ಹೀಗಾಗಿ ನಿಗಮದ ಎಂಡಿ ಮತ್ತು ಲೆಕ್ಕಾಧಿಕಾರಿಯನ್ನು ಅಮಾನತು ಮಾಡಲಾಗಿತ್ತು. ನಂತರ ಅಧಿಕಾರಿಗಳ ಬಂಧನವಾಗಿತ್ತು.

ಚಂದ್ರಶೇಖರ್‌ ಬರೆದಿರುವ ಡೆತ್ ನೋಟ್‌ನಲ್ಲಿ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ ಹಾಗೂ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಸುಚಿಸ್ಮಿತಾ ಅವರೇ ನನ್ನ ಸಾವಿಗೆ ಕಾರಣ ಎಂದು ಬರೆದಿಟ್ಟಿದ್ದರು. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿತ್ತು. ವಾಲ್ಮೀಕಿ ನಿಗಮಕ್ಕೆ ಪ್ರಭಾರ ವ್ಯವಸ್ಥಾಪಕ ನಿರ್ದೇಶಕರಾಗಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಕೆ. ಆರ್. ರಾಜ್ ಕುಮಾರ್ ಅವರನ್ನು ನೇಮಿಸಿತ್ತು.

ಪ್ರಕರಣದಲ್ಲಿ ಸರ್ಕಾರದ ಪೂರ್ವ ಅನುಮತಿ ಪಡೆದು ಬ್ಯಾಂಕ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿತ್ತು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಂ.ಡಿ & ಸಿಇಒ ಹಾಗೂ ಎಲ್ಲಾ ನಿರ್ದೇಶಕರು ಸೇರಿ 6 ಬ್ಯಾಂಕ್ ಅಧಿಕಾರಿಗಳ ಮೇಲೆ ಎಫ್‌ಐಆರ್‌ ದಾಖಲಿಸಲಾಗಿತ್ತು. ಇನ್ನು 88 ಕೋಟಿ ದುರುಪಯೋಗ ಹಣವನ್ನು ಈಗಾಗಲೇ ಮುಖ್ಯ ಖಾತೆಗೆ ಅಧಿಕಾರಿಗಳು ವಾಪಸ್ ಪಡೆದಿದ್ದರು. ಬಳಿಕ ಹಗರಣದಲ್ಲಿ ಸಚಿವ ನಾಗೇಂದ್ರ ಹೆಸರು ಕೇಳಿ ಬಂದ ಹಿನ್ನೆಲೆ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ನಾಯಕರು ರಾಜಭವನ ಚಲೋ ನಡೆಸಿದ್ದರು. 

ಇದನ್ನೂ ಓದಿ: Wakf Board Scam: ವಾಲ್ಮೀಕಿ ನಿಗಮದ ಬಳಿಕ ವಕ್ಫ್ ಬೋರ್ಡ್‌ನಲ್ಲಿ ಹಗರಣ ಬೆಳಕಿಗೆ; ಮಾಜಿ ಸಿಇಒ ವಿರುದ್ಧ ಎಫ್‌ಐಆರ್!

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಕೇಸ್‌ಗೆ ಸಂಬಂಧಿಸಿ ಮತ್ತೊಬ್ಬನನ್ನು ಎಸ್ಐಟಿ ಬಂಧಿಸಿದೆ. ಆಂಧ್ರ ಮೂಲದ ಶ್ರೀನಿವಾಸ್ ರಾವ್ ಬಂಧಿತ ಆರೋಪಿ. ಈತ ಹಗರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ ಎನ್ನಲಾಗಿದೆ.

Continue Reading

ಸ್ಯಾಂಡಲ್ ವುಡ್

Director Arrest: ಕೊಲೆ ಕೇಸ್​​ನಲ್ಲಿ 20 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಸ್ಯಾಂಡಲ್​ವುಡ್ ನಿರ್ದೇಶಕ ಅರೆಸ್ಟ್​!

Director Arrest: 2004ರಲ್ಲಿ ಬೆಂಗಳೂರಿನ ವಿಲ್ಸನ್ ಗಾರ್ಡನ್​ನಲ್ಲಿ ರೌಡಿ ಶೀಟರ್ ಕೊತ್ತರವಿ ಕೊಲೆಯಾಗಿತ್ತು. ಕೊಲೆ ಕೇಸ್​ನಲ್ಲಿ ಬಂಧಿತನಾಗಿದ್ದ ಗಜೇಂದ್ರಗೆ ಕೋರ್ಟ್ 1 ವರ್ಷ ಶಿಕ್ಷೆ ಕೂಡ ವಿಧಿಸಿತ್ತು. ಒಂದು ವರ್ಷ ಜೈಲುವಾಸ ಅನುಭವಿಸಿದ ಗಜೇಂದ್ರ ಬಳಿಕ ಜಾಮೀನು ಪಡೆದು ಹೊರಬಂದಿದ್ದ.

VISTARANEWS.COM


on

Director Arrest gajendra in murder case
Koo

ಬೆಂಗಳೂರು: ಕೊಲೆ ಕೇಸ್‌ನಲ್ಲಿ 20 ವರ್ಷಗಳಿಂದ ತಲೆ ಮರೆಸಿಕೊಂಡು, ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ (Director Arrest) ಸಿನಿಮಾ ನಿರ್ದೇಶಕನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಿಸಿಬಿ ಪೊಲೀಸರು (CCB Police) ಗಜೇಂದ್ರ ಅಲಿಯಾಸ್ ಗಜನನ್ನು ಅರೆಸ್ಟ್‌ ಮಾಡಿದ್ದಾರೆ. ಗಜೇಂದ್ರ ಕನ್ನಡ ಚಿತ್ರರಂಗದಲ್ಲಿ (Kannada Film Industry) ಮಾತ್ರವಲ್ಲದೆ ಕಾಲಿವುಡ್ (Kollywood) ಇಂಡಸ್ಟ್ರಿಯಲ್ಲೂ ಒಂದೆರಡು ಸಿನಿಮಾ ಮಾಡಿದ್ದ. 2004ರಲ್ಲಿ ಬೆಂಗಳೂರಿನ ವಿಲ್ಸನ್ ಗಾರ್ಡನ್​ನಲ್ಲಿ ರೌಡಿ ಶೀಟರ್ ಕೊತ್ತರವಿ ಕೊಲೆಯಾಗಿತ್ತು. ಈ ಕೊಲೆ ಕೇಸ್​​ನಲ್ಲಿ ಚಂದ್ರಪ್ಪ, ಅಲ್ಯೂಮಿನಿಯಂ ಬಾಬು ಜೊತೆಗೆ ನಿರ್ದೇಶಕ ಗಜೇಂದ್ರ ಎಂಟನೇ ಆರೋಪಿಯಾಗಿದ್ದ.

2004ರಲ್ಲಿ ಬೆಂಗಳೂರಿನ ವಿಲ್ಸನ್ ಗಾರ್ಡನ್​ನಲ್ಲಿ ರೌಡಿ ಶೀಟರ್ ಕೊತ್ತರವಿ ಕೊಲೆಯಾಗಿತ್ತು. ಕೊಲೆ ಕೇಸ್​ನಲ್ಲಿ ಬಂಧಿತನಾಗಿದ್ದ ಗಜೇಂದ್ರಗೆ ಕೋರ್ಟ್ 1 ವರ್ಷ ಶಿಕ್ಷೆ ಕೂಡ ವಿಧಿಸಿತ್ತು. ಒಂದು ವರ್ಷ ಜೈಲುವಾಸ ಅನುಭವಿಸಿದ ಗಜೇಂದ್ರ ಬಳಿಕ ಜಾಮೀನು ಪಡೆದು ಹೊರಬಂದಿದ್ದ.

ಇದನ್ನೂ ಓದಿ: Kannada New Movie: ಸೆಟ್ಟೇರಿತು ‘ಆಕಾಶ್’, ‘ಅರಸು’ ಚಿತ್ರಗಳ ಡೈರೆಕ್ಟರ್ ಹೊಸ ಸಿನಿಮಾ; ಕಿರುತೆರೆಯ ಈ ಪ್ರತಿಭೆ ನಾಯಕ

ಜಾಮೀನು ಪಡೆದ ಬಳಿಕ ಹಲವು ವರ್ಷಗಳಿಂದ ಕೋರ್ಟ್​ಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ. 20 ವರ್ಷಗಳಿಂದ ಪೊಲೀಸರ ಕೈಗೆ ಸಿಕ್ಕಿಲ್ಲ. ಈ ಹಿಂದೆ ಪುಟಾಣಿ ಪವರ್ ಹಾಗೂ ರುದ್ರ ಎಂಬ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ. ಅಷ್ಟೇ ಅಲ್ಲದೇ ತಮಿಳಿನಲ್ಲಿ ಒಂದೆರಡು ಸಿನಿಮಾ ಮಾಡಿರೋದಾಗಿ ಹೇಳಿಕೊಂಡಿದ್ದಾನೆ. ಸದ್ಯ ಸಿಸಿಬಿ ಪೊಲೀಸರು ಇದೀಗ ಗಜೇಂದ್ರನನ್ನು ಬಂಧಿಸಿ ಕೋರ್ಟ್‌ಗೆ ಹಾಜರು ಪಡಿಸಿದ್ದಾರೆ.

Continue Reading

ಉತ್ತರ ಕನ್ನಡ

Uttara Kannada Landslide: ಭೂಕುಸಿತದ ಜಾಗದ ಬಳಿಯೇ ʼಸುನಾಮಿʼ ಎಫೆಕ್ಟ್‌; ನೀರಿನ ರಭಸಕ್ಕೆ ಕೊಚ್ಚಿಹೋದ ಮಹಿಳೆ

Uttara Kannada Landslide: ನೀರು ನುಗ್ಗಿದ ರಭಸದಿಂದ ಮೂರು ಮನೆಗಳು ನೆಲಸಮವಾಗಿವೆ. ಮನೆಯಲ್ಲಿದ್ದ ಸೀಥಿಗೌಡ (65) ಎನ್ನುವ ವೃದ್ಧೆ ನಾಪತ್ತೆಯಾಗಿದ್ದಾರೆ. 14 ಜನರಿಗೆ ಗಾಯವಾಗಿದ್ದು, ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿದೆ. ಎನ್‌ಡಿಆರ್‌ಎಫ್ ಹಾಗೂ ತಾಲೂಕು ಆಡಳಿತದಿಂದ ಮಹಿಳೆಗಾಗಿ ಶೋಧಕಾರ್ಯ ಆರಂಭವಾಗಿದೆ.

VISTARANEWS.COM


on

uttara kannada landslide shirur
Koo

ಕಾರವಾರ: ಅಂಕೋಲಾ- ಶಿರೂರು ಹೆದ್ದಾರಿಯಲ್ಲಿ (Ankola Shiruru Lanslide) ಗುಡ್ಡ ಕುಸಿದ (Uttara Kannada Landslide) ಪ್ರಕರಣದಲ್ಲಿ ಇನ್ನೊಂದು ಅವಾಂತರ ಉಂಟಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಗುಡ್ಡ ಕುಸಿತದಿಂದ ಭಾರಿ ಪ್ರಮಾಣದ ಮಣ್ಣು ಗಂಗಾವಳಿ ನದಿಗೆ (Gangavali River) ಬಿದ್ದ ಪರಿಣಾಮ ನದಿ ಬದಿಯ ಉಳುವರೆ ಗ್ರಾಮಕ್ಕೂ ಡ್ಯಾಮೇಜ್ ಆಗಿದೆ. ಸುನಾಮಿ ಅಲೆಯ ರೀತಿ ಗ್ರಾಮಕ್ಕೆ ನೀರು ನುಗ್ಗಿದ್ದು, ನೀರಿನ ರಭಸಕ್ಕೆ ಮೂರು ಮನೆಗಳು ನಾಶವಾಗಿ (homes collapse) ಮಹಿಳೆಯೊಬ್ಬರು (Woman swept) ಕೊಚ್ಚಿಹೋಗಿದ್ದಾರೆ.

ನೀರು ನುಗ್ಗಿದ ರಭಸದಿಂದ ಮೂರು ಮನೆಗಳು ನೆಲಸಮವಾಗಿವೆ. ಮನೆಯಲ್ಲಿದ್ದ ಸೀಥಿಗೌಡ (65) ಎನ್ನುವ ವೃದ್ಧೆ ನಾಪತ್ತೆಯಾಗಿದ್ದಾರೆ. 14 ಜನರಿಗೆ ಗಾಯವಾಗಿದ್ದು, ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿದೆ. ಎನ್‌ಡಿಆರ್‌ಎಫ್ ಹಾಗೂ ತಾಲೂಕು ಆಡಳಿತದಿಂದ ಮಹಿಳೆಗಾಗಿ ಶೋಧಕಾರ್ಯ ಆರಂಭವಾಗಿದೆ.

ಕುಮಟ ತಾಲ್ಲೂಕು ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗಿದೆ. ಉಳುವರೆ ಗ್ರಾಮದ ಗಣಪತಿ ಬೊಮ್ಮಾ ಗೌಡ, ಸಾವಿತ್ರಿ ನೀಲಾ ಗೌಡ, ದಿವ್ಯಾ ನೀಲಾ ಗೌಡ, ಆಶಾ ಮಂಗೇಶ ಗೌಡ, ಹರ್ಶಿತಾ ಗಣಪತಿ ಗೌಡ, ದಿಕ್ಷಾ ವಿನಾಯಕ ಗೌಡ, ದೀಪಾ ಹೂವಾ ಗೌಡ, ಧನ್ಯ ಹೂವಾ ಗೌಡ, ಹೂವಾ ಸೋಮಾ ಗೌಡ, ಸೋಮಾ ಅನಂತ ಗೌಡ, ಮಂಗೇಶ ಮಾಣಿ ಗೌಡ, ನೀಲಾ ಮುದ್ದು ಗೌಡ, ನಾಗೀ ಬೊಮ್ಮಾ ಗೌಡ, ತಮ್ಮಣ್ಣಿ ಅನಂತ ಗೌಡ ಗಾಯಗೊಂಡವರು.

ಸ್ಥಳಕ್ಕೆ ಅಂಕೋಲ ತಹಶೀಲ್ದಾರ್ ಅನಂತ ಶಂಕರ ಭೇಟಿ ನೀಡಿದ್ದಾರೆ. ಈಗಾಗಲೇ ನಾಲ್ಕು ಮೃತದೇಹ ಪತ್ತೆಯಾಗಿದೆ. ಇನ್ನಿಬ್ಬರಿಗಾಗಿ ಶೋಧ ನಡೆಯುತ್ತಿದೆ ಎಂದಿದ್ದಾರೆ. ಖಚಿತವಾಗಿ ಎಷ್ಟು ಜನ ಮಣ್ಣಿನಲ್ಲಿ ಸಿಲುಕಿದ್ದಾರೆ ಎಂಬ ಮಾಹಿತಿ ಇಲ್ಲ. ಎನ್‌ಡಿಆರ್‌ಎಫ್ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಮೃತದೇಹ ಹುಡುಕಾಟ ನಡೆಯುತ್ತಿದೆ‌. ನೀರಿನಲ್ಲಿ ಒಬ್ಬರ ಮೃತದೇಹ ಹೋಗಿರುವ ಶಂಕೆ ಇದೆ. ಮಣ್ಣಿನಲ್ಲಿ ಒಬ್ಬರು ಸಿಲುಕಿಕೊಂಡಿದ್ದಾರೆ ಎಂದಿದ್ದಾರೆ.

ತೆರವಾಗದ ಗುಡ್ಡದ ಮಣ್ಣು

ಶಿರಸಿ ತಾಲ್ಲೂಕಿನ ರಾಗಿಹೊಸಳ್ಳಿ ಬಳಿ ನಿನ್ನೆ ಗುಡ್ಡ ಜರಿದು ಅಪಾರ ಪ್ರಮಾಣದ ಮಣ್ಣು ಹೆದ್ದಾರಿಯ ಮೇಲೆ ಕೂತಿದ್ದು, ನಿನ್ನೆಯಿಂದ ಕಾರ್ಯಾಚರಣೆ ನಡೆಯುತ್ತಿದ್ದರೂ ತೆರವಾಗಿಲ್ಲ. ಇದರಿಂದ ಕುಮಟಾ- ಶಿರಸಿ ರಾಷ್ಟ್ರೀಯ ಹೆದ್ದಾರಿ 766EEಯಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ತೆರವು ಕಾರ್ಯಾಚರಣೆಗೆ ಹಿನ್ನಡೆಯಾಗಿದೆ. ಹೆದ್ದಾರಿಯ ಸುಮಾರು 100 ಮೀಟರ್ ವ್ಯಾಪ್ತಿಯಲ್ಲಿ ಮರ ಸಹಿತ ಗುಡ್ಡ ಕುಸಿದಿದ್ದು, ಶಿರಸಿ-ಕುಮಟಾ ಹೆದ್ದಾರಿ ನಿನ್ನೆಯಿಂದ ಬಂದ್ ಆಗಿದೆ. ರಸ್ತೆ ಅಗಲೀಕರಣ ಹಿನ್ನೆಲೆಯಲ್ಲಿ ಗುಡ್ಡ ಕೊರೆಯಲಾಗಿತ್ತು. ಜೆಸಿಬಿ ಮೂಲಕ ನಿನ್ನೆಯಿಂದ ಮಣ್ಣು ತೆರವು ನಡೆಯುತ್ತಿದ್ದು, ಇನ್ನೂ 50 ಮೀಟರ್‌ನಷ್ಟು ಮಣ್ಣು ತೆರವು ಬಾಕಿಯಿದೆ.

ಶೃಂಗೇರಿಯಲ್ಲಿ ನೆರೆ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಕೆರೆಕಟ್ಟೆ, ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶೃಂಗೇರಿಯಲ್ಲಿ ತುಂಗಾ ನದಿ ಆರ್ಭಟದಿಂದ ಹರಿಯುತ್ತಿದೆ. ತುಂಗಾ ನದಿ ಅಬ್ಬರಕ್ಕೆ ಭಾರತಿ ತೀರ್ಥ ರಸ್ತೆ ಜಲಾವೃತವಾಗಿದ್ದು, ಪಟ್ಟಣದ ಗಾಂಧಿ ಮೈದಾನ ಸಂಪೂರ್ಣ ಮುಳುಗಡೆಯಾಗಿದೆ. ನದಿ ಪಾತ್ರದ ಅಂಗಡಿ ಮುಂಗಟ್ಟು, ಮನೆಗಳು ಜಲಾವೃತವಾಗಿವೆ. ಶೃಂಗೇರಿಯಲ್ಲಿ ನಿನ್ನೆಯಿಂದಲೂ ನೆರೆ ಪರಿಸ್ಥಿತಿ ತಗ್ಗಿಲ್ಲ. ಭಾರತಿ ತೀರ್ಥ ರಸ್ತೆ ಮುಳುಗಡೆ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ವಾಹನ ಸಂಚಾರ ನಿಷೇಧಿಸಲಾಗಿದೆ.

ಇದನ್ನೂ ಓದಿ: Landslide: ಶಿರೂರಿನಲ್ಲಿ ಕುಸಿದ ಗುಡ್ಡದಡಿ 5 ಶವ ಪತ್ತೆ, ಇನ್ನುಳಿದವರಿಗೆ ಹುಡುಕಾಟ; ಗೋಕರ್ಣದಲ್ಲೂ ಭೂಕುಸಿತ

Continue Reading
Advertisement
Viral Video
Latest3 mins ago

Viral Video: 600 ಲೋಡರ್‌ ಹುದ್ದೆಗಳಿಗೆ 25,000ಕ್ಕೂ ಹೆಚ್ಚು ಅಭ್ಯರ್ಥಿಗಳು! ಕಾಲ್ತುಳಿತದ ಸನ್ನಿವೇಶ

Ankola landslide Case
ಕರ್ನಾಟಕ16 mins ago

Ankola landslide Case: ಅಂಕೋಲಾ ಗುಡ್ಡ ಕುಸಿತ ಪ್ರಕರಣ; ಮೃತರ ಕುಟುಂಬಗಳಿಗೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Neenade Naa Serial Dileep R Shetty khushi will be marry in real life
ಕಿರುತೆರೆ21 mins ago

Neenade Naa Serial: ರಿಯಲ್‌ ಲೈಫಲ್ಲೂ ಒಂದಾಗ್ತಿದ್ದಾರಾ ವಿಕ್ರಂ-ವೇದಾ? ಮದುವೆ ಯಾವಾಗ?

cm siddaramaiah
ಪ್ರಮುಖ ಸುದ್ದಿ22 mins ago

CM Siddaramaiah: ಕನ್ನಡಿಗರಿಗೆ ಶೇ.100 ಉದ್ಯೋಗʼ ಟ್ವೀಟ್‌ ಡಿಲೀಟ್‌ ಮಾಡಿದ ಸಿಎಂ ಸಿದ್ದರಾಮಯ್ಯ; ಕಂಪನಿಗಳ ಜೊತೆ ಚರ್ಚೆ ಎಂದ ಎಂಬಿ ಪಾಟೀಲ್;‌ ಏನಿದು ಗೊಂದಲ?

Pooja Khedkar
ದೇಶ35 mins ago

Pooja Khedkar: ಅಂಗವೈಕಲ್ಯ ಪ್ರಮಾಣಪತ್ರಕ್ಕಾಗಿ ನಕಲಿ ವಿಳಾಸ ನೀಡಿದ್ದ ಪೂಜಾ ಖೇಡ್ಕರ್‌; ಮತ್ತೊಂದು ಕಳ್ಳಾಟ ಬಯಲು

Dhammika Niroshana
ಕ್ರೀಡೆ41 mins ago

Dhammika Niroshana: ಶ್ರೀಲಂಕಾದ ಮಾಜಿ ಕ್ರಿಕೆಟಿಗನನ್ನು ಗುಂಡಿಕ್ಕಿ ಕೊಲೆಗೈದ ಅಪರಿಚಿತ ವ್ಯಕ್ತಿ

Urfi Javed Steps Out Drunk For Third Time In A Month
ವೈರಲ್ ನ್ಯೂಸ್1 hour ago

Urfi Javed: ಮತ್ತೆ ಕುಡಿದು ತೇಲಾಡಿದ ಉರ್ಫಿ ಜಾವೇದ್; ವಿಡಿಯೊ ವೈರಲ್‌!

NMMS scholarship
ಕರ್ನಾಟಕ2 hours ago

NMMS Scholarship: ಎನ್‌ಎಂಎಂಎಸ್‌ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ; ಕೊನೆಯ ದಿನಾಂಕ ಯಾವಾಗ, ಅರ್ಜಿ ಸಲ್ಲಿಕೆ ಹೇಗೆ?

The Olympic Games
ಕ್ರೀಡೆ2 hours ago

The Olympic Games: 72ರ ಇಳಿ ವಯಸ್ಸಿನಲ್ಲೂ ಒಲಿಂಪಿಕ್ಸ್​ ಪದಕ ಗೆದ್ದಿದ್ದ ಶೂಟರ್‌; ಯಾರಿವರು?

jobs for kannadigas cm siddaramaiah
ಪ್ರಮುಖ ಸುದ್ದಿ2 hours ago

CM Siddaramaiah: ಖಾಸಗಿ ಕೈಗಾರಿಕೆಗಳ ಶೇ.100 ಉದ್ಯೋಗ ಕನ್ನಡಿಗರಿಗೆ: ಸಿದ್ದರಾಮಯ್ಯ ಕ್ಯಾಬಿನೆಟ್‌ ನಿರ್ಣಯ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ2 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ2 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ2 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ3 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ3 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ3 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ4 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌