Road Accident : ಮಂಡ್ಯದ ಉಮ್ಮಡಹಳ್ಳಿ ಗೇಟ್‌ನಲ್ಲಿ ನೋಡನೋಡುತ್ತಿದ್ದಂತೆ ಪಲ್ಟಿ ಹೊಡೆದ ಕೆಎಸ್‌ಆರ್‌ಟಿಸಿ ಬಸ್‌ - Vistara News

ಮಂಡ್ಯ

Road Accident : ಮಂಡ್ಯದ ಉಮ್ಮಡಹಳ್ಳಿ ಗೇಟ್‌ನಲ್ಲಿ ನೋಡನೋಡುತ್ತಿದ್ದಂತೆ ಪಲ್ಟಿ ಹೊಡೆದ ಕೆಎಸ್‌ಆರ್‌ಟಿಸಿ ಬಸ್‌

Road Accident : ಮಂಡ್ಯದ ಉಮ್ಮಡಹಳ್ಳಿ ಗೇಟ್‌ನಲ್ಲಿ ನೋಡನೋಡುತ್ತಿದ್ದಂತೆ ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿ ಹೊಡೆದಿದೆ. ಚಿತ್ರದುರ್ಗದಲ್ಲಿ ಬಸ್‌ವೊಂದು ಗುಂಡಿಗೆ ಉರುಳಿ ಬಿದ್ದಿದೆ.

VISTARANEWS.COM


on

Road Accident
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಡ್ಯ: ಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ (Road Accident) ಸಂಭವಿಸಿದೆ. ಮಂಡ್ಯದ ಉಮ್ಮಡಹಳ್ಳಿ ಗೇಟ್ ಬಳಿ ಘಟನೆ ನಡೆದಿದೆ. ಹೆದ್ದಾರಿಯಲ್ಲಿ ನಿಂತಿದ್ದ ಬಸ್‌ಗೆ ಡಿಕ್ಕಿ ಹೊಡೆದ ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿ ಹೊಡೆದಿದೆ. ಘಟನೆಯಲ್ಲಿ ಬಸ್‌ನಲ್ಲಿದ್ದ ಹಲವರಿಗೆ ಗಾಯವಾಗಿದೆ. ಬಸ್ ಪಲ್ಟಿ ಹೊಡೆಯುತ್ತಿದ್ದಂತೆ ತಕ್ಷಣ ಸಹಾಯಕ್ಕೆ ಧಾವಿಸಿದ ಸಾರ್ವಜನಿಕರು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ. ಗಾಯಾಳುಗಳನ್ನು ಹತ್ತಿರವೇ ಇದ್ದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ‌ ಕೊಡಿಸಲಾಗಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಚಿತ್ರದುರ್ಗದಲ್ಲಿ ಗುಂಡಿಗೆ ಉರುಳಿ ಬಿದ್ದ ಕೆಎಸ್‌ಆರ್‌ಟಿಸಿ ಬಸ್‌

ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ವೊಂದು ಗುಂಡಿಗೆ ಉರುಳಿ ಬಿದ್ದಿದೆ. 10ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯವಾಗಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಓಬಳಾಪುರ ತಾಂಡ ಬಳಿ ಅಪಘಾತ ನಡೆದಿದೆ. ಅದೃಷ್ಟವಶಾತ್ ಬಾರಿ ದುರಂತ ತಪ್ಪಿದೆ.

ಘಟನೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೂ ಗಾಯವಾಗಿದೆ. ಓಬಳಾಪುರ ತಾಂಡದಿಂದ ಜವನಗೊಂಡನಹಳ್ಳಿ ಕಡೆ ಬರುತ್ತಿದ್ದ ಸಾರಿಗೆ ಬಸ್ ಪಲ್ಟಿ ಹೊಡೆದಿದೆ. ಚಾಲಕನ ಅಜಾಗರೂಕತೆಯಿಂದ ಅಪಘಾತ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣೆ ಸಿಪಿಐ ಕಾಳಿಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನ ಹಿರಿಯೂರಿನಲ್ಲಿ ಸಾರ್ವಜನಿಕರ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Murder Case : ಪಿತೃಪಕ್ಷ ಪೂಜೆ ಬಳಿಕ ಎಣ್ಣೆ ಪಾರ್ಟಿಯಲ್ಲಿ ಸ್ನೇಹಿತನ ಬಗೆದು ಕೊಂದ ಪಾಪಿ!

ವೇಗವಾಗಿ ಬಂದ ಆಟೋ ಪಲ್ಟಿ; ಚಾಲಕ ಸಾವು

ಚಾಲಕನ ನಿಯಂತ್ರಣ ತಪ್ಪಿ ಆಟೋವೊಂದು ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಧಾರವಾಡದ ಯಾಲಕ್ಕಿ ಶೆಟ್ಟರ್ ಕಾಲೋನಿ ಬಳಿ ಘಟನೆ ನಡೆದಿದೆ. ವೇಗವಾಗಿ ಬಂದ ಆಟೋ ನಿಯಂತ್ರಣ ತಪ್ಪಿದ ಪರಿಣಾಮ ಪಲ್ಟಿಯಾಗಿದೆ. ಪಲ್ಟಿಯ ರಭಸಕ್ಕೆ ಚಾಲಕ ಸಂಜೀವ್ ಶಿಂಧೆ (48) ಎಂಬಾತ ಮೃತಪಟ್ಟಿದ್ದಾರೆ. ಸಂಜೀವ್ ಧಾರವಾಡದ ಮೈಲಾರಲಿಂಗ ನಗರದ ನಿವಾಸಿಯಾಗಿದ್ದಾರೆ. ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ಯಾಂಟರ್ ಮತ್ತು ಬೈಕ್ ನಡುವೆ ಅಪಘಾತ; ಟೆಕ್ಕಿ ಸಾವು

ಆನೇಕಲ್‌ನ ಬನ್ನೇರುಘಟ್ಟ- ಜಿಗಣಿ ಮುಖ್ಯರಸ್ತೆಯ ಹರಪನಹಳ್ಳಿ ತಿರುವಿನಲ್ಲಿ ಕ್ಯಾಂಟರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಟಿಕ್ಕಿ ದಾರುಣವಾಗಿ ಮೃತಪಟ್ಟಿದ್ದಾರೆ. ನರೇಶ್(33) ಅಪಘಾತದಲ್ಲಿ ಮೃತಪಟ್ಟವರು. ಮೂಲತಃ ಆಂಧ್ರ ಮೂಲದ ಚಿತ್ತೂರಿನ ನರೇಶ್‌ ಕೆಲ ವರ್ಷಗಳ ಹಿಂದೆ ಬೆಂಗಳೂರಿನ ಜಿಗಣಿಗೆ ಬಂದು ವಾಸವಾಗಿದ್ದರು. ಐಟಿ ಕಂಪನಿಯಲ್ಲಿ ಸಾಫ್ಟ್‌ವೇರ್ ಉದ್ಯೋಗಿ ಆಗಿದ್ದ ನರೇಶ್ ನಿನ್ನೆ ಚಿಕ್ಕಪ್ಪನ ಮನೆಗೆ ಹೋಗಿ ಬೆಳಗ್ಗೆ ಜಿಗಣಿಗೆ ವಾಪಸ್ ಆಗುತ್ತಿದ್ದರು. ಹರಪನಹಳ್ಳಿ ಬಳಿ ಏಕಾಏಕಿ ಚಾಲಕ ತಿರುವು ಪಡೆದುಕೊಂಡಿದ್ದರಿಂದ ಕ್ಯಾಂಟರ್ ಮುಂಬದಿಗೆ ಬೈಕ್ ಡಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಜಿಗಣಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಪ್ರಮುಖ ಸುದ್ದಿ

Karnataka Weather : ಮಲೆನಾಡಿನಲ್ಲಿ ಅಬ್ಬರಿಸುವ ಮಳೆ; ಮಂಡ್ಯ, ಮೈಸೂರು ಸೇರಿ 9 ಜಿಲ್ಲೆಗಳಿಗೆ ಅಲರ್ಟ್‌

Karnataka Weather Forecast : ಮಲೆನಾಡಿನಲ್ಲಿ ಮಳೆ ಅಬ್ಬರಿಸಲಿದ್ದು, ಮಂಡ್ಯ, ಮೈಸೂರು ಸೇರಿ 9 ಜಿಲ್ಲೆಗಳಿಗೆ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಪ್ರತ್ಯೇಕವಾಗಿ ಅತಿ ಹೆಚ್ಚು ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ ಭಾರೀ ಮಳೆಯಾಗಲಿದೆ. ತಕ್ಕಮಟ್ಟಿಗೆ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲೂ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ವಿಜಯನಗರ, ಕೊಪ್ಪಳ, ಗದಗ, ವಿಜಯಪುರ, ಬಾಗಲಕೋಟೆ ಮತ್ತು ಹಾವೇರಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಂಭವವಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾದರೆ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಅತಿ ಹಗುರದಿಂದ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಂಭವವಿದೆ. ಬೆಂಗಳೂರಿನಲ್ಲಿ ಚದುರಿದಂತೆ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 20 ಡಿ.ಸೆ ಇರಲಿದೆ.

ಆರೆಂಜ್‌ ಅಲರ್ಟ್‌

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದ್ದು, ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಗದಗ, ಹಾವೇರಿ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

Continue Reading

ಪ್ರಮುಖ ಸುದ್ದಿ

Karnataka Weather : ರಾಜ್ಯಾದ್ಯಂತ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ

Karnataka Weather : ರಾಜ್ಯಾದ್ಯಂತ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಮಳೆಯಾರ್ಭಟ (Rain News) ಜೋರಾಗಿ ಇರಲಿದೆ.. ದಕ್ಷಿಣ ಒಳನಾಡಿನಲ್ಲಿ ಲಘುವಾಗಿ ಸಾಧಾರಣ ಮಳೆಯೊಂದಿಗೆ ವ್ಯಾಪಕವಾಗಿ ಚದುರಿದಂತೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಗಾಳಿ ವೇಗದೊಂದಿಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast ) ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ಮಂಡ್ಯ, ಚಾಮರಾಜನಗರ, ಮೈಸೂರು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ತಕ್ಕಮಟ್ಟಿಗೆ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುತ್ತದೆ. ಉತ್ತರ ಒಳನಾಡಿನಲ್ಲಿ ಸುತ್ತಮುತ್ತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಚದುರಿದಂತೆ ಅಲ್ಲಲ್ಲಿ ತುಂಬಾ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಅಲ್ಲಲ್ಲಿ ಅತಿ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ಸುತ್ತಮುತ್ತ ಗುಡುಗು ಸಹಿತ ಲಘುವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕರಾವಳಿ ಸೇರಿ ಉತ್ತರ ಒಳನಾಡಿನ ಈ ಭಾಗದಲ್ಲಿ ಭರ್ಜರಿ ಮಳೆ; ಯೆಲ್ಲೊ ಅಲರ್ಟ್‌ ಘೋಷಣೆ

Karnataka Weather Forecast : ಕರಾವಳಿ ಸೇರಿ ಉತ್ತರ ಒಳನಾಡಿನ ಈ ಭಾಗದಲ್ಲಿ ಭರ್ಜರಿ ಮಳೆಯಾಗಲಿದ್ದು, ಯೆಲ್ಲೊ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಕರ್ನಾಟಕದ ಕರಾವಳಿ ಭಾಗದಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ಮಲೆನಾಡು ಮತ್ತು ಉತ್ತರ ಒಳನಾಡಿನದಲ್ಲಿ ಸಾಧಾರಣವಾಗಿರಲಿದೆ. ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಮುನ್ಸುಚನೆಯನ್ನು ಹವಾಮಾನ ಇಲಾಖೆ (Karnataka weather Forecast) ನೀಡಿದೆ.

ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಪ್ರದೇಶದಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೀದರ್ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯಲ್ಲಿ ವ್ಯಾಪಕ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸಾಧ್ಯತೆ ಇದೆ. ಬೆಂಗಳೂರು ಸುತ್ತಮುತ್ತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಗಾಳಿ ಸಹಿತ ಭಾರಿ ಮಳೆ

ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿ ವೇಗವು ಗಂಟೆಗೆ 30-40 ಕಿ.ಮೀ ಬೀಸಲಿದೆ. ಹೀಗಾಗಿ ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಭಾರಿ ಮಳೆಯಲ್ಲಿ ಎತ್ತಿನ ಬಂಡಿ ಸಮೇತ ನದಿಯಲ್ಲಿ ಕೊಚ್ಚಿಕೊಂಡು ಹೋದ ರೈತ

ಕಲಬುರಗಿ‌ ಜಿಲ್ಲೆಯಾದ್ಯಂತ ವರುಣನ‌ ಆರ್ಭಟ ಜೋರಾಗಿದೆ. ಕಲಬುರಗಿ ಜಿಲ್ಲೆಯ ಚಿಂಚೊಳ್ಳಿ ತಾಲೂಕಿನ ಇರಗಪಳ್ಳಿ ಬಳಿಯ ಭೋಗಾವತಿ ನದಿಯಲ್ಲಿ ಎತ್ತಿನ ಬಂಡಿ ಸಮೇತ ರೈತ ಕೊಚ್ಚಿಕೊಂಡು ಹೋಗಿದ್ದಾರೆ. ನದಿಯಿಂದ ನೀರು ತರಲು ಹೋಗಿದ್ದ ರೈತ ಅಮೃತ್ ನೀರಿನ‌ ರಭಸಕ್ಕೆ ಕೊಚ್ಚಿ‌ಹೋಗುತ್ತಿದ್ದ ವೇಳೆ ಡ್ರಮ್ ಮೂಲಕ ಹೊರ ಬಂದಿದ್ದಾರೆ. ಅದೃಷ್ಟವಶಾತ್ ರೈತ ಅಮೃತ್ ಬಚಾವ್ ಆದರೆ, ಎರಡು ಎತ್ತುಗಳು ನೀರಿನಲ್ಲಿ ಕೊಚ್ಚಿ ಹೋಗಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಾಜ್ಯಾದ್ಯಂತ ವ್ಯಾಪಕ ಮಳೆ ; ಉಡುಪಿ, ಉತ್ತರ ಕನ್ನಡಕ್ಕೆ ರೆಡ್‌ ಅಲರ್ಟ್‌

Karnataka Weather Forecast : ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದ್ದು, ಉಡುಪಿ, ಉತ್ತರ ಕನ್ನಡ ಜಿಲ್ಲೆಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಬುಧವಾರದಂದು (ಸೆ.25) ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ಮಲೆನಾಡು ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯೊಂದಿಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಸುತ್ತಮುತ್ತ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ಪ್ರತ್ಯೇಕವಾಗಿ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡು ಭಾಗದ ಹಾಸನ, ಕೊಡಗು ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದೆ. ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ.

ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ

ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕೆಲವೊಮ್ಮೆ ಮೋಡ ಕವಿದ ವಾತಾವರಣ ಇರಲಿದೆ.

ರೆಡ್‌ ಅಲರ್ಟ್‌ ಘೋಷಣೆ

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಾಳಿ ವೇಗವು 30-40 ಕಿ.ಮೀ ಇರಲಿದೆ. ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಧಾರವಾಡ, ಗದಗ, ಹಾವೇರಿ, ವಿಜಯಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ನೀಡಲಾಗಿದೆ.

ಇದನ್ನೂ ಓದಿ: MLA Muniratna: ಅತ್ಯಾಚಾರ ಕೇಸ್‌; ಶಾಸಕ ಮುನಿರತ್ನಗೆ 12 ದಿನ ಎಸ್‌ಐಟಿ ಕಸ್ಟಡಿಗೆ ನೀಡಿ ಕೋರ್ಟ್‌ ಆದೇಶ

ದಾವಣಗೆರೆಯಲ್ಲಿ ಮನೆಗಳಿಗೆ ನುಗ್ಗಿದ ನೀರು

ದಾವಣಗೆರೆಯಲ್ಲೂ ಮಂಗಳವಾರ ಸತತ ಒಂದು ಗಂಟೆಗೂ ಹೆಚ್ಚು ಮಳೆ ಸುರಿದಿತ್ತು. ಪಿ ಬಿ ರಸ್ತೆ, ಪಿಜೆ ಬಡಾವಣೆ, ಗಾಂಧಿ ವೃತ್ತ ಸೇರಿದಂತೆ ಹಲವೆಡೆ ಮಳೆಯಿಂದ ವಾಹನ ಸವಾರರು ಪರದಾಡಿದರು. ದಾವಣಗೆರೆ, ಮಾಯಕೊಂಡ, ಹರಿಹರ ಸೇರಿದಂತೆ ರಸ್ತೆಯ ಮೇಲೆ ನೀರು ಹರಿದಿತ್ತು. ವಾಹನ ಸವಾರಿಗೆ ತೊಂದರೆ ಉಂಟಾಗಿತ್ತು. ಕಳೆದ ಮೂರು ದಿನಗಳಿಂದ ಸಂಜೆ ವೇಳೆ ವರುಣನ ಆಗಮಿಸುತ್ತಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ರೈತರು ಬೆಳೆದ ಬೆಳೆಗಳಿಗೆ ಮಳೆಯಿಂದ ಅನುಕೂಲವಾಗಲಿದೆ.

ಕೊಡಗಿನಲ್ಲೂ ಜಿಟಿ ಜಿಟಿ ಮಳೆ

ಬಂಗಾಳಕೊಲ್ಲಿಯಲ್ಲಿ ವಾಯುವಭಾರ ಕುಸಿತ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ವಿವಿಧೆಡೆ ಜಿಟಿ ಜಿಟಿ ಮಳೆಯಾಗಿತ್ತು. ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಮಳೆಯ ವಾತವರಣದಿಂದಾಗಿ ವಿದ್ಯಾರ್ಥಿಗಳು ಹಾಗೂ ಬೈಕ್ ಸವಾರರು ಕಿರಿಕಿರಿ ಅನುಭವಿಸಿದರು. ಇನ್ನು ಎರಡು ಮೂರು ದಿನ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಮೈಸೂರಿನಲ್ಲೂ ಸಾಧಾರಣ ಮಳೆಯಾಗಿದೆ. ಸುಮಾರು ಅರ್ಧ ಗಂಟೆಗೂ ಸುರಿದ ವರ್ಷಧಾರೆಗೆ ವಾಹನ ಸಂಚಾರಕ್ಕೆ ಅಡ್ಡಿ ಆಯಿತು.

ಯಾದಗಿರಿಯಲ್ಲಿ ಮುಂದುವರಿದ ಮಳೆ ಅಬ್ಬರ

ಯಾದಗಿರಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಮಳೆ ಅರ್ಭಟಕ್ಕೆ ಭತ್ತದ ಜಮೀನಿಗೆ ನೀರು ನುಗ್ಗಿದೆ. ಭೀಮಾನದಿ ತೀರದ ರೈತರ ಜಮೀನಿಗೆ ಮಳೆ ನೀರು ನುಗ್ಗಿ, ಭತ್ತದ ಬೆಳೆ ಜಲಾವೃತಗೊಂಡಿತ್ತು. ಯಾದಗಿರಿ ಜಿಲ್ಲೆಯ ವಡಗೇರಾ ಜೋಳದಡಗಿ ಗ್ರಾಮದಲ್ಲಿ ಘಟನೆ ನಡೆದಿದೆ. ಗೇಟ್ ಎತ್ತದೆ ಕೆಬಿಜೆಎನ್‌ಎಲ್ ಅಧಿಕಾರಿಗಳು ನಿರ್ಲಕ್ಷ್ಯ ಮಾಡಿದ್ದಾರೆ. ಜೋಳದಡಗಿ ಗ್ರಾಮದ ಭೀಮಾನದಿಗೆ ಅಡ್ಡಲಾಗಿರುವ ಬ್ರಿಡ್ಜ್ ಕಂ ಬ್ಯಾರೇಜ್‌ನ ಗೇಟ್ ಎತ್ತದೇ ನಿರ್ಲಕ್ಷ್ಯ ವಹಿಸಿದ್ದಾರೆ. ಭಾರಿ ಮಳೆಯಿಂದ ಭೀಮಾನದಿಗೆ ನೀರಿನ ಒಳಹರಿವು ಹೆಚ್ಚಳವಾಗಿತ್ತು. ಆದರೆ, ಗೇಟ್ ಎತ್ತದಕ್ಕೆ ಭೀಮಾನದಿಯ ನೀರು ಜಮೀನಿಗೆ ನುಗ್ಗಿ ಅಪಾರಪ್ರಮಾಣದ ಬೆಳೆ ಹಾನಿಯಾಗಿದೆ ಎಂದು ರೈತರ ಕಂಗಾಲಾದರು.

ಜಮಖಂಡಿಯಲ್ಲಿ ಮಳೆ ಅವಾಂತರ

ಬಾಗಲಕೋಟೆಯ ಜಮಖಂಡಿಯಲ್ಲಿ ರಾತ್ರಿ ಸುರಿದ ಮಳೆಯು ಅವಾಂತರವೇ ಸೃಷ್ಟಿಯಾಗಿದೆ. ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರು ಪರದಾಡಿದರು. ಜಲಾವೃತವಾದ ಮನೆಗಳಿಗೆ ಮಾಜಿ ಶಾಸಕ ಆನಂದ್ ನ್ಯಾಮಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಲಕ್ಕನಕೇರೆ ಬೈಪಾಸ್ ರಸ್ತೆ ಅಕ್ಕಪಕ್ಕದ ಮನೆಗಳಿಗೆ ನೀರು ನುಗ್ಗಿತ್ತು. ನಿವಾಸಿಗಳಿಗೆ ಆದ ಹಾನಿ ಭರಿಸುವ ಭರವಸೆಯನ್ನು ಮಾಜಿ ಶಾಸಕ ಆನಂದ್ ನ್ಯಾಮಗೌಡ ನೀಡಿದರು. ಶಿಥಿಲಗೊಂಡ ಹಳೆ ಮನೆಯವರಿಗೆ ಸುರಕ್ಷಿತ ಸ್ಥಳದಲ್ಲಿ ವಾಸಿಸುವಂತೆ ಮನವಿ ಮಾಡಿದರು. ಜಮಖಂಡಿ ಎಸಿ ಶ್ವೇತಾ ಸಾಥ್‌ ನೀಡಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Bigg Boss season 11 The real game starts today
ಬೆಂಗಳೂರು2 ನಿಮಿಷಗಳು ago

Bigg Boss Kannada : ಸ್ವರ್ಗ- ನರಕಕ್ಕೆ ಎಂಟ್ರಿ ಕೊಟ್ಟ ಸ್ಪರ್ಧಿಗಳು; ಬಿಗ್‌‌ ಬಾಸ್‌ ಮನೆಯಲ್ಲಿ ದಚ್ಚು ಫಾಲೋವರ್ಸ್ ಕಿಕ್

Road Accident
ಮಂಡ್ಯ1 ಗಂಟೆ ago

Road Accident : ಮಂಡ್ಯದ ಉಮ್ಮಡಹಳ್ಳಿ ಗೇಟ್‌ನಲ್ಲಿ ನೋಡನೋಡುತ್ತಿದ್ದಂತೆ ಪಲ್ಟಿ ಹೊಡೆದ ಕೆಎಸ್‌ಆರ್‌ಟಿಸಿ ಬಸ್‌

Murder Case
ಬೆಂಗಳೂರು3 ಗಂಟೆಗಳು ago

Murder Case : ಪಿತೃಪಕ್ಷ ಪೂಜೆ ಬಳಿಕ ಎಣ್ಣೆ ಪಾರ್ಟಿಯಲ್ಲಿ ಸ್ನೇಹಿತನ ಬಗೆದು ಕೊಂದ ಪಾಪಿ!

Cheluvamba Hospital Doctor found dead in Mysuru
ಮೈಸೂರು4 ಗಂಟೆಗಳು ago

Suspicious Death : ಮೈಸೂರಿನ ಚೆಲುವಾಂಬ ಆಸ್ಪತ್ರೆಯ ವೈದ್ಯೆ ಅನುಮಾನಾಸ್ಪದ ಸಾವು; ಪತಿ ಕೈವಾಡ ಶಂಕೆ

Jigani police arrest one Pakistani national including four foreigners following ulfa militants arrest
ಬೆಂಗಳೂರು5 ಗಂಟೆಗಳು ago

Jigani Police: ಉಲ್ಫಾ ಉಗ್ರ ಬಂಧನ ಬೆನ್ನಲ್ಲೆ ನಾಲ್ವರು ವಿದೇಶಿಗರು ಸೇರಿ ‌ಓರ್ವ ಪಾಕಿಸ್ತಾನ ಪ್ರಜೆ ಬಂಧನ

Karnataka weather Forecast
ಪ್ರಮುಖ ಸುದ್ದಿ10 ಗಂಟೆಗಳು ago

Karnataka Weather : ಮಲೆನಾಡಿನಲ್ಲಿ ಅಬ್ಬರಿಸುವ ಮಳೆ; ಮಂಡ್ಯ, ಮೈಸೂರು ಸೇರಿ 9 ಜಿಲ್ಲೆಗಳಿಗೆ ಅಲರ್ಟ್‌

Dina Bhavishya
ಭವಿಷ್ಯ10 ಗಂಟೆಗಳು ago

Dina Bhavishya : ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಶುಭ ಸೂಚನೆ

Mallikarjun Kharge falls ill on stage while delivering his speech
ರಾಜಕೀಯ22 ಗಂಟೆಗಳು ago

Mallikarjun Kharge: ಭಾಷಣ ಮಾಡುತ್ತಲೇ ವೇದಿಕೆ ಮೇಲೆ ಅಸ್ವಸ್ಥಗೊಂಡ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ

Actor Darshan who spent 100 days in jail will get bail tomorrow
ಬೆಂಗಳೂರು23 ಗಂಟೆಗಳು ago

Actor Darshan :‌ ಜೈಲಿನಲ್ಲಿ ನೂರು ದಿನ ಕಳೆದ ನಟ ದರ್ಶನ್‌ಗೆ ನಾಳೆ‌ ಸಿಗುತ್ತಾ ಜಾಮೀನು

Union Minister Pralhad Joshi slams Lokayukta ADGP for using pig word against HD Kumaraswamy
ಕರ್ನಾಟಕ1 ದಿನ ago

Pralhad Joshi : ಎಚ್‌ಡಿಕೆ ಬಗ್ಗೆ ಹಂದಿ ಪದ ಬಳಸಿದ ಲೋಕಾಯುಕ್ತ ಎಡಿಜಿಪಿ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಗರಂ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್1 ತಿಂಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌