ಮಂಡ್ಯ: ವಸತಿ ಶಾಲೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ.
ಪಾಂಡವಪುರ ತಾಲೂಕಿನ ಕಟ್ಟೇರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಟ್ಟೇರಿ ಗ್ರಾಮದ ಪ್ರೌಢಶಾಲೆ ಹಾಗೂ ಹೆಣ್ಣು ಮಕ್ಕಳ ವಸತಿ ಶಾಲೆಯ ಉಸ್ತುವಾರಿ ಚಿನ್ಮಯಾನಂದ ಬಂಧಿತ ಆರೋಪಿ ಶಿಕ್ಷಕ. ವಸತಿ ಶಾಲೆಯ ಹೆಣ್ಣು ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪ ಈತನ ಮೇಲಿದೆ.
ನಿನ್ನೆ ರಾತ್ರಿ ವಸತಿ ಶಾಲೆ ಬಂದು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ವೇಳೆ ವಿದ್ಯಾರ್ಥಿನೀಯರು ಕೂಗಿಕೊಂಡಿದ್ದು, ವಿದ್ಯಾರ್ಥಿನಿಯರ ಚೀರಾಟ ಕೇಳಿ ಗ್ರಾಮಸ್ಥರು ಸ್ಥಳಕ್ಕಾಗಮಿಸಿದ್ದಾರೆ. ಈ ವೇಳೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಶಿಕ್ಷಕನನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ. ಸ್ಥಳದಲ್ಲಿ ಜಮೆಯಾದ ಪೋಷಕರು, ಸ್ಥಳೀಯರು ಆರೋಪಿ ಶಿಕ್ಷಕನ ಅಮಾನತು ಮಾಡಲು ಒತ್ತಾಯಿಸಿದ್ದಾರೆ.
ಇದನ್ನೂ ಓದಿ | Murder case | ಕಾಲಿಗೆ ಹಗ್ಗ ಕಟ್ಟಿ ಕೆರೆಗೆ ಎಸೆದು ಯುವಕನ ಕೊಲೆ: ಮಾನವ ಹಕ್ಕು ಹೋರಾಟಗಾರನಾ?