ಮಂಡ್ಯ: ರಜೆಯಲ್ಲಿ ಬಂದಿದ್ದ ಯೋಧರೊಬ್ಬರು ಸ್ವಗ್ರಾಮದಲ್ಲಿ ಮೆಟ್ಟಿಲಿನಿಂದ ಬಿದ್ದು (Soldier Death) ಸಾವಿಗೀಡಾಗಿದ್ದಾರೆ. ಮಂಡ್ಯ (Mandya news) ಜಿಲ್ಲೆಯ ಮದ್ದೂರು ತಾಲೂಕಿನ ಚಾಮನಹಳ್ಳಿಯಲ್ಲಿ ಘಟನೆ ನಡೆದಿದೆ.
ಸಿ.ಕೆ. ಸಂದೀಪ್ ಕುಮಾರ್ (38) ಮೃತ ಯೋಧ. ಸಂದೀಪ್ ಹರಿಯಾಣದಲ್ಲಿ ಮಿಲಿಟರಿ ಸೇವೆಯಲ್ಲಿದ್ದರು. ರಜೆಯ ಮೇಲೆ ಗ್ರಾಮಕ್ಕೆ ಬಂದಿದ್ದ ಸಂದೀಪ್, ರಾತ್ರಿ ಮನೆ ಹತ್ತಿರ ಮೆಟ್ಟಿಲಿನಿಂದ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.
ಕೊಲೆ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು
ಆನೇಕಲ್: ಪುರಸಭೆ ಸದಸ್ಯನನ್ನು ಕೊಂದಿದ್ದ ಕುಖ್ಯಾತ ರೌಡಿ ಶೀಟರ್‌ನನ್ನು (Rowdy Sheeter) ಪೊಲೀಸರು ಬಂಧಿಸಿದ್ದಾರೆ. ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆ ನಡೆಸಲು (Assault) ಯತ್ನಿಸಿದ ಈತನ ಕಾಲಿಗೆ ಗುಂಡು ಹಾರಿಸಿ (Police Firing) ಬಂಧಿಸಲಾಗಿದೆ. ರೌಡಿ ಶೀಟರ್ ಕಾರ್ತಿಕ್ ಅಲಿಯಾಸ್ ಜೆಕೆ ಬಂಧಿತ ಕೊಲೆ ಆರೋಪಿ (Murder Culprit).
ಆನೇಕಲ್ ತಾಲ್ಲೂಕಿನ ಮೈಸೂರಮ್ಮನ ದೊಡ್ಡಿ ಬಳಿ ಫೈರಿಂಗ್ ನಡೆದಿದೆ. ಆನೇಕಲ್ ಭಾಗದ ಕುಖ್ಯಾತ ರೌಡಿ ಶೀಟರ್ ಆಗಿರುವ ಜೆಕೆ, ಮೈಸೂರಮ್ಮನ ದೊಡ್ಡಿಯಲ್ಲಿ ಅವಿತು ಕುಳಿತಿದ್ದ. ಪೊಲೀಸರು ಖಚಿತ ಮಾಹಿತಿ ಮೇರೆಗೆ ಆರೋಪಿ ಬಂಧನಕ್ಕೆ ತೆರಳಿದ್ದರು. ಸೆರೆಯಾಗುವಂತೆ ಆದೇಶಿಸಿ ಆನೇಕಲ್ ಇನ್‌ಸ್ಪೆಕ್ಟರ್ ತಿಪ್ಪೇಸ್ವಾಮಿ ಎರಡು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆಗ ಜೆಕೆ ಪೊಲೀಸ್ ಸಿಬ್ಬಂದಿ ಸುರೇಶ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ್ದಾನೆ. ಇನ್‌ಸ್ಪೆಕ್ಟರ್ ತಿಪ್ಪೇಸ್ವಾಮಿ ಆರೋಪಿ ಕಾಲಿಗೆ ಗುಂಡು ಹಾರಿಸಿ ಸೆರೆಹಿಡಿದಿದ್ದಾರೆ.
ಈತ ಪುರಸಭಾ ಸದಸ್ಯ ಸ್ಕ್ರಾಪ್ ರವಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ. ಕಳೆದ 24ನೇ ತಾರೀಕು ಬುಧವಾರ ಕೊಲೆ ನಡೆದಿತ್ತು. ಸ್ಕ್ರಾಪ್ ರವಿ ಕಚೇರಿಯಲ್ಲಿದ್ದಾಗ ರೌಡಿ ಶೀಟರ್ ಕಾರ್ತಿಕ್ ಅಲಿಯಾಸ್ ಜೆಕೆ ಗ್ಯಾಂಗ್ ಕಚೇರಿಗೆ ನುಗ್ಗಿ ಕೊಲೆ ಮಾಡಿತ್ತು. ಕಾರ್ತಿಕ್ ಅಲಿಯಾಸ್ ಜೆಕೆ, ಹರೀಶ್ ಅಲಿಯಾಸ್ ಹಂದಿ ಹರೀಶ್, ವಿನಯ್ ಅಲಿಯಾಸ್ ವಿನಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಗಳು.
ಆರೋಪಿಗಳ ಬಂಧನಕ್ಕೆ ಪೊಲೀಸರ ಎರಡು ತಂಡ ರಚಿಸಲಾಗಿತ್ತು. ಆನೇಕಲ್ ಉಪವಿಭಾಗದ ಡಿವೈಎಸ್ಪಿ ಮೋಹನ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಕೊಲೆ ಆರೋಪಿಗಳ ಪೈಕಿ ಹರೀಶ್ ಮತ್ತು ವಿನಯ್ ಕೋರ್ಟಿಗೆ ಶರಣಾಗಿದ್ದಾರೆ. ಪ್ರಮುಖ ಆರೋಪಿ ರೌಡಿ ಶೀಟರ್ ಜೆಕೆ ಕಾರ್ತಿಕ್ ತಲೆಮರೆಸಿಕೊಂಡಿದ್ದ.
ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಅರ್ಚಕ ಬಂಧನ
ಮಹಿಳೆ ಮೇಲೆ ಅತ್ಯಾಚಾರ (Physical abuse) ಆರೋಪದಡಿ ಹಾಸನದ ಪ್ರಸಿದ್ಧ ದೇವಾಲಯದ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಅರಸೀಕೆರೆಯ ಪುರದಮ್ಮ ದೇವಾಲಯದ ಪೂಜಾರಿ ದಯಾನಂದ್ (39) ಬಂಧಿತ ವ್ಯಕ್ತಿ.
ಬಾಗಲುಗುಂಟೆ ಠಾಣೆ ಪೊಲೀಸರಿಂದ ಆರೋಪಿ ಬಂಧನವಾಗಿದೆ. ಕೆಲ ದಿನಗಳ ಹಿಂದೆ ಮಹಿಳೆ ನೀಡಿದ ದೂರಿನನ್ವಯ ಬಾಗಲುಗುಂಟೆ ಠಾಣೆಯಲ್ಲಿ ಆತ್ಯಾಚಾರ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಆರೋಪಿ ದಯಾನಂದ್‌ನ ಪೊಲೀಸರು ಬಂಧಿಸಿದ್ದಾರೆ. ದೋಷ ನಿವಾರಣೆಗಾಗಿ ಪೂಜೆ ಮಾಡುತ್ತೇನೆಂದು ಹಣ ಪಡೆದಿದ್ದ ಪೂಜಾರಿ, ಬಳಿಕ ಮಹಿಳೆಯನ್ನು ಕರೆಸಿಕೊಂಡು ಆತ್ಯಾಚಾರ ಮಾಡಿರುವ ಆರೋಪ ಕೇಳಿಬಂದಿದೆ. ಹೀಗಾಗಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ದಯಾನಂದ್ ಅರಸೀಕೆರೆ ಬಳಿಯ ಗೊಲ್ಲರಹಳ್ಳಿ ಕುರುಗುಂದ ಗ್ರಾಮ ಪಂಚಾಯಿತಿಯ ಸದಸ್ಯನಾಗಿದ್ದಾನೆ. ಮಹಿಳೆ ಪುರದಮ್ಮ ದೇವಸ್ಥಾನಕ್ಕೆ ಹೋಗಿದ್ದಾಗ ಪರಿಚಯ ಮಾಡಿಕೊಂಡಿದ್ದ. ಶಾಸ್ತ್ರ ಹೇಳುತ್ತಿದ್ದ ಪೂಜಾರಿ ದಯಾನಂದ್‌ಗೆ ಮದುವೆಯಾಗಿ ಎರಡು ಮಕ್ಕಳಿದ್ದಾರೆ. ಮಹಿಳೆಗೆ ಕಂಟಕವಿದೆ ಹೇಳಿ ಆಗಾಗ ಹಣ ಪಡೆಯುತ್ತಿದ್ದ ಎನ್ನಲಾಗಿದೆ. ಒಂದು ಲಕ್ಷಕ್ಕಿಂತ ಹೆಚ್ಚು ಹಣ ಮಹಿಳೆಯಿಂದ ಪಡೆದಿದ್ದ ಎನ್ನಲಾಗಿದೆ.