ಮಂಡ್ಯ: ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC Result 2024) ಪ್ರಕಟಗೊಂಡಿದೆ. ಮಂಡ್ಯದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯೊಬ್ಬ ಪರೀಕ್ಷೆಯಲ್ಲಿ ಫೇಲ್ ಆದ ಹಿನ್ನೆಲೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಇದನ್ನೂ ಓದಿ: SSLC Result 2024: ಪಾಸ್ ಆಗಿದ್ದರೂ ಫೇಲ್ ಎಂದು ತಿಳಿದು ನೇಣಿಗೆ ಶರಣಾದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ
ನಿಖಿಲ್ (16) ನೇಣಿಗೆ ಶರಣಾದ ವಿದ್ಯಾರ್ಥಿ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ತಗ್ಗಹಳ್ಳಿ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ನಿಖಿಲ್, ಫಲಿತಾಂಶ ನೋಡಿ 3 ವಿಷಯದಲ್ಲಿ ಫೇಲ್ ಆದ ಹಿನ್ನೆಲೆಯಲ್ಲಿ ಹೊಲಕ್ಕೆ ತೆರಳಿ ಮರವೊಂದಕ್ಕೆ ನೇಣಿಗೆ ಶರಣಾಗಿದ್ದಾನೆ. ಈ ಕುರಿತು ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಫೇಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ
ಬೆಳಗಾವಿ: ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತಿರ್ಣಗೊಂಡ ವಿದ್ಯಾರ್ಥಿನಿಯೋರ್ವಳು ಮನನೊಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಗ್ರಾಮದಲ್ಲಿ ಜರುಗಿದೆ.
ಇದನ್ನೂ ಓದಿ: Self Harming: ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಸಾವು
ಸೃಷ್ಟಿ ಕಲ್ಲಪ್ಪ ಚೌವ್ಹಾಣ್ (16) ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿಯಾಗಿದ್ದಾಳೆ. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಪೋಷಕರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದೆ. ಸದಲಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.