Site icon Vistara News

Suspicious Death : ಗೃಹಿಣಿಯ ಕುತ್ತಿಗೆಯಲ್ಲಿತ್ತು ರಕ್ತ ಹೆಪ್ಪುಗಟ್ಟಿರುವ ಕಲೆ; ಈ ಸಾವು ಕೊಲೆಯೋ, ಆತ್ಮಹತ್ಯೆಯೋ

Suspicious Death in Mandya

ಮಂಡ್ಯ: ಮಂಡ್ಯದ (Mandya News) ನಾಗಮಂಗಲ ತಾಲೂಕಿನ ಹೊಣಕೆರೆ ಗ್ರಾಮದಲ್ಲಿ ಗೃಹಿಣಿ ಅನುಮಾನಾಸ್ಪದವಾಗಿ (Suspicious Death) ಮೃತಪಟ್ಟಿದ್ದಾರೆ. ರಮ್ಯ (28) ಮೃತ ದುರ್ದೈವಿ.

ಮೂಲತಃ ಕೆ.ಆರ್.ಪೇಟೆ ತಾಲೂಕಿನ ರಾಯಸಮುದ್ರ ಗ್ರಾಮದ ರಮ್ಯ, 9 ವರ್ಷಗಳ ಹಿಂದೆ ಹೊಣಕೆರೆಯ ಧನಂಜಯ ಎಂಬಾತನನ್ನು ಪ್ರೀತಿಸಿ ವಿವಾಹವಾಗಿದ್ದರು. ರಮ್ಯ-ಧನಂಜಯ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.

ಕೌಟುಂಬಿಕ ಕಲಹಕ್ಕೆ (Family Dispute) ರಮ್ಯ ಬಲಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಪತಿ ಮನೆಯವರೇ ಕೊಲೆ ಮಾಡಿದ್ದಾರೆಂದು ರಮ್ಯ ಕುಟುಂಬಸ್ಥರು ಆರೋಪಿಸಿದ್ದಾರೆ. ರಮ್ಯಳ ಕುತ್ತಿಗೆಯಲ್ಲಿ ರಕ್ತ ಹೆಪ್ಪುಗಟ್ಟಿರುವ ಕಲೆ ಇದ್ದು, ಕೊಲೆ ಮಾಡಿರಬಹುದೆಂದು ಶಂಕಿಸಲಾಗಿದೆ. ಸದ್ಯ ಮೃತ ರಮ್ಯಳ ಸಹೋದರ ರವಿ ಎಂಬುವವರು ಪೊಲೀಸರಿಗೆ ದೂರು ನೀಡಿದ್ದಾರೆ.

ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ರಮ್ಯಳ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಲಾಗಿದೆ. ಮರಣೋತ್ತರ ವರದಿ ಬಂದ ಬಳಿಕ ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದು ತಿಳಿಯಲಿದ್ದು, ನಂತರ ತನಿಖೆಯನ್ನು ಮುಂದುವರಿಸಲಿದ್ದಾರೆ.

ಇದನ್ನೂ ಓದಿ: Hassan Pen Drive Case: ಹೊಳೆನರಸೀಪುರದ ಮನೆ ಬಾಗಿಲಿಗೆ ನೊಟೀಸ್‌ ಅಂಟಿಸಿ ಎಸ್‌ಐಟಿ ವಾಪಸ್!‌

ನನ್ನ ಪ್ರೇಯಸಿಗೆ ಮೆಸೇಜ್ ಮಾಡ್ತೀಯಾ ಎಂದು ಬೆರಳು ಕಟ್!

ಬೆಂಗಳೂರು: ತನ್ನ ಪ್ರಿಯತಮೆ (Lover) ಜೊತೆ ಗೆಳೆತನ‌ (Friendship) ಬೆಳೆಸಿದ್ದಕ್ಕೆ ಯುವಕನ ಮೇಲೆ ಮಾಜಿ ಪ್ರಿಯಕರ ಲಾಂಗು ಮಚ್ಚುಗಳಿಂದ ಹಲ್ಲೆ ನಡೆಸಿ (Assault Case) ಯುವಕನೊಬ್ಬನ ಬೆರಳುಗಳನ್ನೇ ಕತ್ತರಿಸಿ (Finger cut) ಹಾಕಿದ್ದಾನೆ. ಬಸವನಗುಡಿ ಬುಲ್ ಟೆಂಬಲ್ ರಸ್ತೆಯಲ್ಲಿರುವ ಪುಲ್ವಾಡಿ ಫ್ಲವರ್ ಶಾಪ್‌ನಲ್ಲಿ ಏಪ್ರಿಲ್ 28ರಂದು ರಾತ್ರಿ 8.30ಕ್ಕೆ ಈ ಘಟನೆ (Crime news) ನಡೆದಿದೆ.

ಫ್ಲವರ್‌ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಹರ್ಷಿತ್ ಎಂಬ ಯುವಕನ ಮೇಲೆ ಹಲ್ಲೆ ನಡೆಸಲಾಗಿದ್ದು, ಶಶಾಂಕ್ ಹಾಗೂ ಹಾಗೂ ಚಂದನ್ ಎಂಬವರು ಲಾಂಗ್‌ ಬೀಸಿದ್ದಾರೆ. ಲಾಂಗು- ಮಚ್ಚಿನಿಂದ ಹಲ್ಲೆ ನಡೆಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದರೂ ಹರ್ಷಿತ್‌ನ ಬಲಗೈನ ಹೆಬ್ಬೆರಳು ಕಟ್ ಆಗಿದೆ. ಎಡಗೈನ ಮುಂಗೈಯನ್ನು ಎರಡು ತುಂಡು ಮಾಡಿದ್ದಾರೆ.

ಪ್ರಕರಣದ ಹಿನ್ನೆಲೆ ಹೀಗಿದೆ: ಬಿಕಾಂ ಮುಗಿಸಿದ್ದ ಹರ್ಷಿತ್ ತಂದೆಯ ಫ್ಲವರ್ ಡೆಕೊರೇಷನ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಅದೇ ಕಟ್ಟಡದಲ್ಲಿ ಒಂದು ಡಯೋಗ್ನಾಸ್ಟಿಕ್ ಸೆಂಟರ್ ಇದೆ. ಡಯೋಗ್ನಾಸ್ಟಿಕ್ ಸೆಂಟರ್‌ನಲ್ಲಿ ಯುವತಿ ಕೆಲಸ ಮಾಡುತ್ತಿದ್ದಳು. ಚಿಲ್ಲರೆ ಕೇಳಲು ಹೋಗಿ‌ ಬಂದಾಗ ಯುವತಿ ಮತ್ತು ಹರ್ಷಿತ್ ಮಧ್ಯೆ ಗೆಳೆತನ ಬೆಳೆದಿದೆ. ಅದೇ ಗೆಳೆತನ ನಂಬರ್ ಎಕ್ಸ್‌ಚೇಂಜ್ ಆಗಿ ಚಾಟ್ ಮಾಡುವ ಹಂತಕ್ಕೆ ಬಂದಿತ್ತು.

ಆದರೆ ಆ ಯುವತಿಯನ್ನು ಪ್ರೀತಿ ಮಾಡುತ್ತಿದ್ದ ಆರೋಪಿ ಶಶಾಂಕ್‌ಗೆ, ಇವರಿಬ್ಬರ ಮಧ್ಯೆ ಏನೋ ನಡೆಯುತ್ತಿದೆ ಅನ್ನುವ ಅನುಮಾನ ಮೂಡಿತ್ತು. ಯುವತಿಯ ಮೊಬೈಲ್ ಪರಿಶೀಲನೆ ವೇಳೆ ಚಾಟ್ ಮಾಡಿರುವುದು ಕಂಡಿದೆ. ಇದರಿಂದ ಶಶಾಂಕ್ ಕೋಪದಿಂದ ಕುದ್ದು ಹೋಗಿದ್ದ. ಕೇವಲ ಸ್ನೇಹಿತರ ನಡುವಿನ ರೀತಿಯ ಮೆಸೇಜ್‌ಗಳಿದ್ದರೂ ಕೋಪದಿಂದ ಕುರುಡಾಗಿದ್ದ ಶಶಾಂಕ್‌ ಅದನ್ನು‌ ಸಹಿಸಿಕೊಳ್ಳಲು ಸಿದ್ಧವಿರಲಿಲ್ಲ. ಹರ್ಷಿತ್‌ಗೆ ಒಂದು ಗತಿ ಕಾಣಿಸಬೇಕು ಎಂದು ನಿರ್ಧರಿಸಿದ್ದ.

ಏಪ್ರಿಲ್ 28ರಂದು ಸ್ನೇಹಿತ ಚಂದನ್‌ನನ್ನು ಕರೆಸಿಕೊಂಡಿದ್ದ. ಇಬ್ಬರೂ ಬಾರ್‌ನಲ್ಲಿ ಕುಡಿದು ಲಾಂಗ್ ಜೊತೆಗೆ ಹರ್ಷಿತ್ ಅಂಗಡಿಗೆ ಬಂದಿದ್ದಾರೆ. ಬಂದವರೇ ಹರ್ಷಿತ್ ಮೇಲೆ ಯದ್ವಾತದ್ವಾ ಲಾಂಗ್‌ ಬೀಸಿ ಪರಾರಿ ಆಗಿದ್ದಾರೆ. ಕೈಯಿಂದ ರಕ್ತ ಸೋರುತ್ತಿದ್ದರೂ‌ ಹರ್ಷಿತ್‌ ಫುಟ್‌ಪಾತ್ ಮೇಲೆ ಬಂದು ನಿಂತಿದ್ದಾನೆ. ಕೆಲವೇ ಹೊತ್ತಲ್ಲಿ ಫುಟ್‌ಪಾತ್ ರಕ್ತದ ಕೋಡಿಯಾಗಿದೆ. ತುಂಡಾದ ಬೆರಳನ್ನು ಬಟ್ಟೆಯಲ್ಲಿ ಸುತ್ತಿಕೊಂಡು ಹರ್ಷಿತ್‌ ಆಸ್ಪತ್ರೆಗೆ ಹೋಗಿದ್ದಾನೆ.

ಹರ್ಷಿತ್‌ನನ್ನು ಪಕ್ಕದಲ್ಲೇ ಇರುವ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಗಳನ್ನು ಶಂಕರಪುರ ಠಾಣೆ ಪೊಲೀಸರು ಹೆಡೆಮುರಿ ಕಟ್ಟಿ ವಿಚಾರಿಸಿಕೊಳ್ಳುತ್ತಿದ್ದಾರೆ.

Physical Abuse: ಲೈಂಗಿಕ ಕಿರುಕುಳ, ಹೆಂಡತಿಯನ್ನು ಕಳಿಸುವಂತೆ ಗಂಡನಿಗೆ ಒತ್ತಡ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರು ಹೆಣ್ಮಕ್ಕಳಿಗೆ ಎಷ್ಟು ಸೇಫ್ ಎಂಬ ಪ್ರಶ್ನೆ ಮತ್ತೆ ಮತ್ತೆ ಎದುರಾಗುತ್ತಲೇ ಇದೆ. ಇಂಥ ಕರಾಳ ಪ್ರಕರಣಗಳು ಘಟಿಸುತ್ತಲೇ ಇವೆ. ನಿನ್ನೆ ರಾತ್ರಿ ಬಿಹಾರ ಮೂಲದ ದಂಪತಿಗೆ ಕರಾಳ ಅನುಭವ ಆಗಿದ್ದು, ಅದರಿಂದ ಪಾರಾಗಲು ಇಬ್ಬರೂ ಒದ್ದಾಡಿದ್ದಾರೆ.

ನಗರದಲ್ಲಿ ಪದೇ ಪದೆ ಬೆಳಕಿಗೆ ಬರುತ್ತಿರುವ ಹೆಣ್ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಇದೂ ಒಂದು ಸೇರ್ಪಡೆ. ರಾತ್ರಿ ಸಮಯದಲ್ಲಿ ಯುವತಿಯೊಬ್ಬಳಿಗೆ ಪುಂಡರು ಲೈಂಗಿಕ ಕಿರುಕುಳ ನೀಡಿದ್ದಾರೆ. ನಡು ರಸ್ತೆಯಲ್ಲೇ ಯುವತಿಗೆ ಲೈಂಗಿಕ ಕಿರುಕುಳ ಮಾಡಿದ್ದಾರೆ ಎಂದು ಯುವತಿ ಹಾಗೂ ಆಕೆಯ ಪತಿ ಆರೋಪಿಸಿದ್ದಾರೆ. ಕೊಡಿಗೆಹಳ್ಳಿಯ ವಿರೂಪಾಕ್ಷಪುರದಲ್ಲಿ ನಿನ್ನೆ ರಾತ್ರಿ 10:30ರ ಸುಮಾರಿಗೆ ನಡೆದ ಘಟನೆ ಇದು.

ಇದನ್ನೂ ಓದಿ: Physical Abuse: ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಅತ್ಯಾಚಾರ ಎಸಗಿದವನಿಗೆ 106 ವರ್ಷ ಜೈಲು ಶಿಕ್ಷೆ

ಜೊತೆಗಿದ್ದ ದಂಪತಿಯ ಬಳಿ ಬಂದ ಮೂರ್ನಾಲ್ಕು ಪುಂಡರು, ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಯುವತಿಗೆ ಒತ್ತಾಯ ಮಾಡಿದ್ದಾರೆ. ಒಪ್ಪದಿದ್ದಾಗ ಕಿಡ್ನ್ಯಾಪ್ ಮಾಡುವ ಬೆದರಿಕೆ ಹಾಕಿದ್ದಾರೆ. ಈ ದಂಪತಿ ಬಿಹಾರ ಮೂಲದವರಾಗಿದ್ದು, ಈ ದಂಪತಿಗೆ ನಿನ್ನೆ ರಾತ್ರಿ ಕರಾಳ ಅನುಭವವಾಗಿದೆ. ಹೆಂಡತಿಯನ್ನು ಕಳಿಸುವಂತೆ ಪುಂಡರು ಗಂಡನಿಗೆ ಬೆದರಿಕೆ ಹಾಕಿದ್ದಾರೆ. ಗಂಡನ ಸ್ನೇಹಿತನಿಂದಲೇ ಕೃತ್ಯ ನಡೆದಿದೆ.

ಇದರಿಂದ ಭಯಭೀತರಾದ ದಂಪತಿ ಸಹಾಯ ಕೋರಿ ಬೆಂಗಳೂರು ಪೋಲಿಸರಿಗೆ ಫೋನ್ ಮಾಡಿದರೂ ಸರಿಯಾದ ರೆಸ್ಪಾನ್ಸ್ ಸಿಕ್ಕಿಲ್ಲ. ಕಿರುಕುಳದ ಬಗ್ಗೆ ಬೆಂಗಳೂರು ಪೋಲಿಸ್ ಸಹಾಯವಾಣಿಗೆ ಕರೆ ಮಾಡಿದ್ದರು. ಬೆಂಗಳೂರು ಪೋಲಿಸರು ಸ್ಪಂದಿಸದಿದ್ದುದರಿಂದ ಬಿಹಾರ ಪೋಲಿಸರಿಗೆ ದಂಪತಿ ಫೋನ್ ಮಾಡಿದ್ದಾರೆ. ಕೊಡಿಗೆಹಳ್ಳಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version