ಮಂಗಳೂರು: ಮಂಗಳೂರಿನಲ್ಲಿ ಆಟೊ ರಿಕ್ಷಾದಲ್ಲಿ ಶನಿವಾರ ಸಂಭವಿಸಿರುವ ಸ್ಫೋಟ ಪ್ರಕರಣ ಅನಿರೀಕ್ಷಿತ ಘಟನೆ ಅಲ್ಲ. ಇದು ಭಯೋತ್ಪಾದಕ ಕೃತ್ಯವಾಗಿದೆ (Mangalore blast ) ಎಂದು ಡಿಜಿಪಿ ಪ್ರವೀಣ್ ಸೂದ್ ಅವರು ಟ್ವೀಟ್ ಮಾಡಿದ್ದಾರೆ.
ಉದ್ದೇಶಪೂರ್ವಕವಾಗಿ ಸಾವು ನೋವು ಹಾನಿ ಉಂಟು ಮಾಡಲು ಮಾಡಿದ್ದ ಭಯೋತ್ಪಾದನೆ ಕೃತ್ಯ ಎಂದು ಸ್ವತಃ ಡಿಜಿಪಿ ಪ್ರವೀಣ್ ಸೂದ್ ದೃಢಪಡಿಸಿದ್ದಾರೆ.
ಕೇಂದ್ರದ ತನಿಖಾ ಸಂಸ್ಥೆಗಳ ಜೊತೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದ್ದು, ಘಟನೆ ಗಂಭೀರ ಸ್ವರೂಪಕ್ಕೆ ತಿರುಗಿದೆ. ಆರಂಭದಲ್ಲಿ ಇದನ್ನು ಆಕಸ್ಮಿಕ ಸ್ಫೋಟ ಎಂದು ಭಾವಿಸಲಾಗಿತ್ತು. ಘಟನೆ ನಡೆದ ಸ್ಥಳಕ್ಕೆ ಉನ್ನತ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ರಾಜ್ಯ ಕಾನೂನು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್ ಕೂಡ ಡಿಜಿಪಿ ಪ್ರವೀಣ್ ಸೂದ್ ಅವರ ಟ್ವಿಟ್ ಅನ್ನು ರೀ ಟ್ವಿಟ್ ಮಾಡಿದ್ದಾರೆ.…
ಆಟೋ ಚಲಾಯಿಸುತ್ತಿದ್ದ ವ್ಯಕ್ತಿ ಯಾರು, ಆತನ ಹಿನ್ನಲೆ ಏನು, ಆತ ಯಾರ ಜತೆಗೆ ಸಂಪರ್ಕ ಹೊಂದಿದ್ದ ಎಂಬುದರ ಬಗ್ಗೆ ಪೊಲೀಸರಿಂದ ಪ್ರಾಥಮಿಕ ತನಿಖೆ ನಡೆದಿದೆ. ಆಟೋ ಚಾಲಕನ ಪೂರ್ವಪರ ಕಲೆ ಹಾಕಲು ಪೊಲೀಸರು ಮುಂದಾಗಿದ್ದಾರೆ.