Site icon Vistara News

ಮಂಗಳೂರು ಸ್ಫೋಟ | ಶಾರಿಕ್‌ ವಿಚಾರಣೆಗೆ ಕಾಯುತ್ತಿದೆ ಎನ್‌ಐಎ ತಂಡ, ಚಾಲಕ ಪುರುಷೋತ್ತಮ್‌ ಆರೋಗ್ಯದಲ್ಲಿ ಚೇತರಿಕೆ

Mangalore blast cooker

ಮಂಗಳೂರು: ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟದ (ಮಂಗಳೂರು ಸ್ಫೋಟ) ಹಿಂದಿರುವುದು ಶಂಕಿತ ಉಗ್ರ ಶಾರಿಕ್‌ ಎನ್ನುವುದು ತಿಳಿಯುತ್ತಿದ್ದಂತೆಯೇ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ಫುಲ್‌ ಅಲರ್ಟ್‌ ಆಗಿದ್ದಾರೆ. ಶನಿವಾರ ಸಂಜೆ ಸ್ಫೋಟ ಸಂಭವಿಸಿದ ಕ್ಷಣದಿಂದಲೇ ಅಲರ್ಟ್‌ ಅಗಿರುವ ಎನ್‌ಐಎ ಅಧಿಕಾರಿಗಳು ಭಾನುವಾರ ಮೂರು ಬಾರಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ಸೋಮವಾರ ಮುಂಜಾನೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವನು ಹಿಂದಿನ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಶಾರಿಕ್‌ ಎಂದು ಬಹಿರಂಗಗೊಳ್ಳುತ್ತಿದ್ದಂತೆಯೇ ನಾಲ್ವರು ಅಧಿಕಾರಿಗಳು ಮತ್ತೆ ಆಸ್ಪತ್ರೆಗೆ ಧಾವಿಸಿದ್ದಾರೆ. ಆದರೆ, ಆತನನ್ನು ಈಗ ವಿಚಾರಣೆ ಮಾಡುವ ಸ್ಥಿತಿ ಇಲ್ಲ.

ಇಬ್ಬರೂ ಚೇತರಿಸಿಕೊಳ್ಳುತ್ತಿದ್ದಾರೆ
ಮಂಗಳೂರಿನ ಫಾ. ಮುಲ್ಲರ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಂಕಿತ ಉಗ್ರ ಶಾರಿಕ್‌ ಮತ್ತು ಗಾಯಗೊಂಡಿರುವ ರಿಕ್ಷಾ ಚಾಲಕ ಪುರುಷೋತ್ತಮ್‌ ಅವರ ಅವರಿಬ್ಬರಿಗೂ ಚಿಕಿತ್ಸೆ ಮುಂದುವರಿದಿದೆ. ಇಬ್ಬರಿಗೂ ಸುಟ್ಟ ಗಾಯಗಳಾಗಿವೆ. ಪುರುಷೋತ್ತಮ ಮಾತನಾಡುವ ಸ್ಥಿತಿಯಲ್ಲಿದ್ದಾರೆ, ಶಾರಿಕ್‌ ಮಾತನಾಡುವ ಸ್ಥಿತಿಯಲ್ಲಿ ಇಲ್ಲ ಎಂದು ಇಬ್ಬರನ್ನೂ ಭೇಟಿಯಾಗಿ ಬಂದ ಮಂಗಳೂರು ಕಮಿಷನರ್‌ ಶಶಿಕುಮಾರ್‌ ತಿಳಿಸಿದರು.

ʻʻಶಾರಿಕ್‌ಗೂ ಚಿಕಿತ್ಸೆ ಮುಂದುವರಿದಿದೆ. ಆದರೆ ಪ್ರಶ್ನೆ ಮಾಡೋದಕ್ಕೆ ಸಾಧ್ಯವಾಗಿಲ್ಲ. ಬೆಳಗ್ಗೆ ಕುಟುಂಬ ಸದಸ್ಯರು ಆತನ ಗುರುತು ಪತ್ತೆ ಮಾಡಿದ್ದಾರೆ. ಆತನ ಆರೋಗ್ಯ ಹೀಗೆಯೆ ಆಗುತ್ತೆ ಎಂಬ ಬಗ್ಗೆ ವೈದ್ಯರು ಸ್ಪಷ್ಟನೆ ನೀಡಿಲ್ಲ. ಆತನಲ್ಲಿ ಸಾಕಷ್ಟು ಮಾಹಿತಿಯಿದೆ. ಆತನಿಗೆ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಶ್ನೆಗೆ ಉತ್ತರ ನೀಡಲು ಯಾವಾಗ ಅರ್ಹನಾಗುತ್ತಾನೆ ಎಂಬುದನ್ನು ಗಮನಿಸಿ ವಶಕ್ಕೆ ಪಡೆಯುತ್ತೇವೆ. ನಮ್ಮ ಒಬ್ಬರು ಅಧಿಕಾರಿಯನ್ನು ಆಸ್ಪತ್ರೆಯಲ್ಲಿ ನೇಮಕ ಮಾಡಲಾಗಿದೆ. ಆರೋಗ್ಯದ ಬಗ್ಗೆ ಅಪ್ಡೇಟ್ ಏರುಪೇರು ಬಗ್ಗೆ ಕುಟುಂಬಕ್ಕೆ ಮಾಹಿತಿ ನೀಡುತ್ತಾರೆ. ಆಸ್ಪತ್ರೆಯಿಂದ ಸೂಕ್ತ ಚಿಕಿತ್ಸೆ ಕೊಡಲು ನೇಮಕ ಮಾಡಲಾಗಿದೆʼʼ ಎಂದು ಶಶಿಕುಮಾರ್‌ ತಿಳಿಸಿದರು.

ಕಿಡ್ನಿಗೆ ಸ್ವಲ್ಪ ಪರಿಣಾಮ ಆಗಿದೆ
ಈ ನಡುವೆ ಪುರುಷೋತ್ತಮ ಅವರ ಕುಟುಂಬಕ್ಕೆ ಆರೋಗ್ಯ ಸ್ಥಿತಿ ಬಗ್ಗೆ ಮಾಹಿತಿ ನೀಡಿರುವ ವೈದ್ಯರು, ಪುರುಷೋತ್ತಮ್ ಆರೋಗ್ಯದಲ್ಲಿ ಚೇತರಿಕೆ ಕಾಣಿಸಿಕೊಂಡಿದೆ. ಅವರ ಕಿಡ್ನಿ ಮೇಲೆ ಕೊಂಚ ಎಫೆಕ್ಟ್ ಆಗಿದೆʼʼ ಎಂದು ಹೇಳಿದ್ದಾರೆ. ಆದರೆ, ಕಳೆದೆರಡು ದಿನಕ್ಕಿಂತ ಸೋಮವಾರ ಆರೋಗ್ಯದಲ್ಲಿ ಚೇತರಿಕೆ ಇದೆ. ಕನಿಷ್ಠ ಐದು ದಿನ ಟ್ರೀಟ್ಮೆಂಟ್ ಕೊಡಬೇಕಾಗುತ್ತದೆʼʼ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | ಮಂಗಳೂರು ಸ್ಫೋಟ | ಶಾರಿಕ್‌ನ ಹಿಂದಿದ್ದಾನೆ ಮತ್ತೊಬ್ಬ ಮೇನ್‌ ಹ್ಯಾಂಡ್ಲರ್‌ ತೀರ್ಥಹಳ್ಳಿಯ ಅಬ್ದುಲ್ ‌ಮತೀನ್ ತಾಹಾ

Exit mobile version