Site icon Vistara News

Mangalore Drugs | ಇನ್ನಷ್ಟು ಆಸ್ಪತ್ರೆಗೆ ಹಬ್ಬಿದ ಡ್ರಗ್ಸ್‌ ಜಾಲ: ಇಬ್ಬರು ವೈದ್ಯರು, 7 ವೈದ್ಯ ವಿದ್ಯಾರ್ಥಿಗಳ ಬಂಧನ

Mangalore drugs case

ಮಂಗಳೂರು: ಕರಾವಳಿಯ ವೈದ್ಯಕೀಯ ಲೋಕವನ್ನು ಆಕ್ರಮಿಸಿಕೊಂಡಿರುವ ಡ್ರಗ್ಸ್‌ ಜಾಲದ (Mangalore Drugs) ಇನ್ನಷ್ಟು ಭಯಾನಕ ಚಿತ್ರಗಳು ಹೊರಬರುತ್ತಿವೆ. ಮಂಗಳೂರು ಮತ್ತು ಮಣಿಪಾಲ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದು ವೈದ್ಯರು ಹಾಗೂ ವೈದ್ಯ ವಿದ್ಯಾರ್ಥಿಗಳನ್ನು ಗಾಂಜಾ ಸೇವನೆ ಮತ್ತು ಮಾರಾಟದ ಪ್ರಕರಣದಲ್ಲಿ ಈ ಹಿಂದೆ ಬಂಧಿಸಲಾಗಿತ್ತು.

ಮಂಗಳೂರು ಪೊಲೀಸರು ತನಿಖೆಯನ್ನು ಇನ್ನಷ್ಟು ವಿಸ್ತರಣೆಗೊಳಿಸಿದ್ದರಿಂದ ಇನ್ನೂ ಹಲವು ಮಿಕಗಳು ಬಲೆಗೆ ಬಿದ್ದಿವೆ. ಇದೀಗ ಇನ್ನೂ ಒಂಬತ್ತು ಮಂದಿಯನ್ನು ಬಂಧಿಸಲಾಗಿದ್ದು, ಇವರಲ್ಲಿ ಇಬ್ಬರು ವೈದ್ಯರು ‌ಮತ್ತು ಏಳು ಮಂದಿ ವೈದ್ಯ ವಿದ್ಯಾರ್ಥಿಗಳು ಸೇರಿದ್ದಾರೆ.

ಶ್ರೀನಿವಾಸ ಆಸ್ಪತ್ರೆಯ ವೈದ್ಯ ರಾಜ್ಯದವರೇ ಆದ ಸಿದ್ದಾರ್ಥ್ ಪವಸ್ಕರ್(29) ಮತ್ತು ದುರ್ಗಾ ಸಂಜೀವಿನಿ ಆಸ್ಪತ್ರೆಯ ವೈದ್ಯ ಕರ್ನಾಟಕದ ಡಾ.ಸುಧೀಂದ್ರ(34) ಬಂಧಿತ ಡಾಕ್ಟರ್‌ಗಳು.

ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳನ್ನು ಬಂಧಿಸಿ ಕರೆತರುತ್ತಿರುವುದು

ಮಂಗಳೂರಿನ ಕೆ.ಎಂ.ಸಿ ಮೆಡಿಕಲ್ ಕಾಲೇಜಿನ ಏಳು ಮಂದಿ ವಿದ್ಯಾರ್ಥಿಗಳೂ ಸೆರೆಗೆ ಸಿಲುಕಿದ್ದಾರೆ. ಉತ್ತರ ಪ್ರದೇಶದ ವಿದುಶ್ ಕುಮಾರ್(27), ದೆಹಲಿಯ ಶರಣ್ಯ(23), ಕೇರಳದ ಸೂರ್ಯಜಿತ್ ದೇವ್(20), ಕೇರಳದ ಆಯೇಷಾ ಮಹಮ್ಮದ್(23), ತೆಲಂಗಾಣದ ಪ್ರಣಯ್ ನಟರಾಜ್(24), ತೆಲಂಗಾಣದ ಚೈತನ್ಯಾ(23), ಉತ್ತರ ಪ್ರದೇಶದ ಇಶ್ ಮಿದ್ದ(24) ಬಂಧಿತ ವಿದ್ಯಾರ್ಥಿಗಳು. ಈವರೆಗೆ ಡಾಕ್ಟರ್ಸ್ ಗಾಂಜಾ ಕೇಸ್ ನಲ್ಲಿ ಬಂಧಿತರ ಸಂಖ್ಯೆ 24ಕ್ಕೆ ಏರಿಕೆಯಾದಂತಾಗಿದೆ.

ಇದನ್ನೂ ಓದಿ | Mangalore drugs case : ಡ್ರಗ್ಸ್‌ ಜಾಲದಲ್ಲಿ ಸಿಲುಕಿದ ಇಬ್ಬರು ವೈದ್ಯರು ಸೇವೆಯಿಂದ ವಜಾ, ಏಳು ಮೆಡಿಕಲ್‌ ವಿದ್ಯಾರ್ಥಿಗಳು ಸಸ್ಪೆಂಡ್‌

Exit mobile version