ಮಂಗಳೂರು: ಮಂಗಳೂರು ಹೋಮ್ ಸ್ಟೇ ದಾಳಿ ಪ್ರಕರಣದ (Mangalore Homestay case) ಎಲ್ಲಾ ಆರೋಪಿಗಳು ಖುಲಾಸೆಗೊಂಡಿದ್ದಾರೆ. ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಕಾಂತರಾಜು ಮಹತ್ವದ ತೀರ್ಪು ನೀಡಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದ ಆರೋಪಿಗಳು ದೋಷಮುಕ್ತರಾಗಿದ್ದಾರೆ.
ಒಟ್ಟು 44 ಆರೋಪಿಗಳ ಪೈಕಿ ಮೂವರು ಸಾವನ್ನಪ್ಪಿದ್ದರು. ಪತ್ರಕರ್ತ ನವೀನ್ ಸೂರಿಂಜೆ ಪ್ರಕರಣವನ್ನು ನ್ಯಾಯಾಲಯ ಈ ಹಿಂದೆಯೇ ಕೈಬಿಟ್ಟಿತ್ತು. ಇಂದು ಉಳಿದ 40 ಆರೋಪಿಗಳನ್ನು ಕೋರ್ಟ್ ದೋಷ ಮುಕ್ತಗೊಳಿಸಿದೆ. ವಕೀಲರಾದ ಶಂಭುಶರ್ಮಾ, ಕಿಶೋರ್ ಕುಮಾರ್ ಅವರ ತಂಡ ಆರೋಪಿಗಳ ಪರ ವಾದ ಮಂಡಿಸಿದೆ.
ಏನಿದು ಪ್ರಕರಣ?
2012ರ ಜುಲೈ 28 ರಂದು ಹಿಂದು ಸಂಘಟನೆಯ ಕಾರ್ಯಕರ್ತರು ಪಡೀಲ್ ಹೋಂ ಸ್ಟೇ ಮೇಲೆ ದಾಳಿ ಮಾಡಿದ್ದರು. ಯುವಕ ಯುವತಿಯರು ಹೋಂ ಸ್ಟೇಯಲ್ಲಿ ತಂಗಿದ್ದು, ಬರ್ತ್ ಡೇ ಪಾರ್ಟಿ ಮಾಡುತ್ತಿದ್ದಾಗ ಅವರ ಮೇಲೆ ಹಿಂದು ಸಂಘಟನೆ ಕಾರ್ಯಕರ್ತರು ದಾಳಿ ನಡೆಸಿ ತೀವ್ರ ಹಲ್ಲೆ ನಡೆಸಿದ್ದರು. ಈ ಬಗ್ಗೆ ಸಂತ್ರಸ್ತರು ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂತಿಮವಾಗಿ ಪೊಲೀಸರು 44 ಮಂದಿಯ ಮೇಲೆ ಆರೋಪ ಪಟ್ಟಿ ದಾಖಲಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಘಟನೆ ನಡೆದು ಸುದೀರ್ಘ 12 ವರ್ಷ ವಿಚಾರಣೆ ಬಳಿಕ ಮಂಗಳವಾರ ಅಂತಿಮ ತೀರ್ಪು ಹೊರಬಿದ್ದಿದೆ.
ಇದನ್ನೂ ಓದಿ | Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ
Gadag News : ಮಕ್ಕಳ ಕೂದಲು ಕಟ್ ಮಾಡಿದ ಕಂಪ್ಯೂಟರ್ ಶಿಕ್ಷಕನಿಗೆ ಧರ್ಮದೇಟು!
ಗದಗ: ಮಕ್ಕಳ ಕೂದಲು ಕಟ್ ಮಾಡಿದ್ದಕ್ಕೆ ಕಂಪ್ಯೂಟರ್ ಶಿಕ್ಷಕನಿಗೆ ಧರ್ಮದೇಟು ಬಿದ್ದಿದೆ. ಗದಗ (Gadag News) ಬೆಟಗೇರಿ ಸೇಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೈಡ್ರಾಮಾವೇ ನಡೆದಿದೆ. ಶಿಕ್ಷಕ ಬೆನೋಯ್ ಎಂಬಾತ ಶಾಲೆಯ ಆರು ಮಕ್ಕಳಿಗೆ ಹೇರ್ ಕಟ್ ಮಾಡಿದ್ದಾರೆ.
ಕೂದಲು ಕಟ್ ಮಾಡುವ ವೇಳೆ ವಿದ್ಯಾರ್ಥಿ ಹಣೆಗೆ ಗಾಯವಾಗಿದೆ. ಏಳನೇ ತರಗತಿ ವಿದ್ಯಾರ್ಥಿಗೆ ಬೆನೋಯ್ ಕತ್ತರಿಯಿಂದ ಗಾಯ ಮಾಡಿದ್ದಾರೆ. ಶಿಕ್ಷಕ ಬೆನೋಯ್ ವರ್ತನೆಗೆ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಸ್ಥಳಕ್ಕೆ ಆಗಮಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಆರ್ ಎಸ್ ಬುರಡಿ ಎದುರೇ ಪೋಷಕರು ಧರ್ಮದೇಟು ನೀಡಿದ್ದಾರೆ.
ಇದನ್ನೂ ಓದಿ: Self Harming: ಹೊಸದುರ್ಗದಲ್ಲಿ ಬ್ಯಾಂಕ್ ಆಫೀಸರ್ ಸೂಸೈಡ್; ರೈಲಿಗೆ ಸಿಲುಕಿ ಮತ್ತಿಬ್ಬರು ಸಾವು
ಬಳಿಕ ಬೆನೋಯ್‌ನ್ನು ವಜಾಗೊಳಿಸುವಂತೆ ಪಾಲಕರು ಆಗ್ರಹಿಸಿದ್ದಾರೆ. ದುರ್ವರ್ತನೆ ತೋರಿದ ಶಿಕ್ಷಕನ ಬಗ್ಗೆ ಬಿಇಒ ಅಧಿಕಾರಿ ವರದಿ ಪಡೆದಿದ್ದಾರೆ. ಮೇಲಾಧಿಕಾರಿಗಳಿಗೆ ವರದಿ ನೀಡಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಗದಗ ಶಹರ ಬಿಇಒ ಆರ್‌ಎಸ್ ಬುರಡಿ ಮಾಹಿತಿ ನೀಡಿದ್ದಾರೆ.