ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ಸಿಟಿ ಆಸ್ಪತ್ರೆಯ ನರ್ಸಿಂಗ್ ಕಾಲೇಜಿನ ಹಾಸ್ಟೆಲ್‌ನಲ್ಲಿ ಏಕಾಏಕಿ ಅಸ್ವಸ್ಥಗೊಂಡಿದ್ದರಿಂದ 89ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಫುಡ್ ಪಾಯಿಸನ್ ಆಗಿದ್ದರಿಂದ ವಿದ್ಯಾರ್ಥಿಗಳು ಅನಾರೋಗ್ಯಕ್ಕೀಡಾಗಿದ್ದಾರೆ ಎನ್ನಲಾಗಿದೆ.
ಮಂಗಳೂರು ಹೊರವಲಯದ ಶಕ್ತಿ ನಗರದಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ಹಾಸ್ಟೆಲ್ ಇದೆ. ಸೋಮವಾರ ಮುಂಜಾನೆಯಿಂದ ವಿದ್ಯಾರ್ಥಿಗಳು ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅಸ್ವಸ್ಥಗೊಂಡ 89ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಮಂಗಳೂರಿನ ಸಿಟಿ ಆಸ್ಪತ್ರೆ, ಎ.ಜೆ. ಹಾಸ್ಪಿಟಲ್ ಹಾಗೂ ಕೆ.ಎಂ.ಸಿ ಆಸ್ಪತ್ರೆಗಳಿಗೆ ದಾಖಲಾಗಿಸಲಾಗಿದೆ.
ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕಾಲೇಜು ಆಡಳಿತ ಮಂಡಳಿ ನಿರ್ಲಕ್ಷ್ಯದಿಂದ ಘಟನೆ ಸಂಭವಿಸಿದೆ ಎಂಬ ಆರೋಪ ಕೇಳಿಬಂದಿದೆ. ಆಸ್ಪತ್ರೆಗಳಿಗೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ | Fire Accident: ತುಮಕೂರು ವಿವಿ ಹಾಸ್ಟೆಲ್‌ನಲ್ಲಿ ಶಾರ್ಟ್ ಸರ್ಕ್ಯೂಟ್; ಧಗಧಗನೆ ಹೊತ್ತಿ ಉರಿದ ಹಾಸಿಗೆಗಳು