ಕಲಬುರಗಿ: ಅನ್ನ ಭಾಗ್ಯ ಅಕ್ಕಿ ಕಳವು ಪ್ರಕರಣದಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ನನ್ನು ನಗರದಲ್ಲಿ ಶಹಾಪುರ ಪೊಲೀಸರು ಬಂಧಿಸಿದ್ದಾರೆ. ಯಾದಗಿರಿ ಜಿಲ್ಲೆಯ ಶಹಾಪುರದ ಟಿಎಪಿಸಿಎಂಸಿ ಗೋದಾಮಿನಲ್ಲಿ ಅನ್ನ ಭಾಗ್ಯ ಅಕ್ಕಿ ಕಳವಾಗಿತ್ತು. ಈ ಬಗ್ಗೆ ಶಹಾಪುರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದಕ್ಕೆ ಸಂಬಂಧಿಸಿ ಬಿಜೆಪಿ ಮುಖಂಡನನ್ನು (Manikanta Rathod) ಪೊಲೀಸರು ಬಂಧಿಸಿದ್ದಾರೆ.
ಅಂದಾಜು 2.6 ಕೋಟಿ ಮೌಲ್ಯದ 6077 ಕ್ವಿಂಟಾಲ್ ಅಕ್ಕಿ ನಾಪತ್ತೆಯಾಗಿತ್ತು. ನವೆಂಬರ್ ತಿಂಗಳಲ್ಲಿ ಆಹಾರ ಇಲಾಖೆ ಉಪ ನಿರ್ದೇಶಕ ಭೀಮರಾಯ ಮಸಾಲಿ ಅವರು ನಾಪತ್ತೆಯಾದ ಬಗ್ಗೆ ಶಹಾಪುರ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಮಣಿಕಂಠ ರಾಠೋಡ ಸಹೋದರ ರಾಜು ರಾಠೋಡಗೆ ಸೇರಿದ ಗುರುಮಠಕಲ್ ಪಟ್ಟಣದ ಹೊರಭಾಗದ ಶ್ರೀ ಲಕ್ಷ್ಮಿ ತಿಮ್ಮಪ್ಪ ರೈಸ್ ಮೀಲ್ ಮೇಲೆ ಶಹಾಪುರ ಪೊಲೀಸರು ದಾಳಿ ಮಾಡಿ 700 ಕ್ವಿಂಟಾಲ್ ಅಕ್ಕಿ ಜಪ್ತಿ ಮಾಡಿದ್ದರು. ನವೆಂಬರ್ ತಿಂಗಳಲ್ಲಿ ಕೇಸ್ ದಾಖಲಿಸಿಕೊಂಡು ಅಕ್ಕಿ ನಾಪತ್ತೆ ಬಗ್ಗೆ ತನಿಖೆ ನಡೆಸುತ್ತಿದ್ದ ಪೊಲೀಸರು, ವಿಚಾರಣೆಗೆ ಹಾಜರಾಗುವಂತೆ ಮಣಿಕಂಠ ರಾಠೋಡ್‌ಗೆ ನೋಟಿಸ್ ನೀಡಿದ್ದರು. ಆದರೆ, ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಮಣಿಕಂಠ ರಾಠೋಡ್‌ನ ಬಂಧಿಸಲಾಗಿದೆ.
ಇದನ್ನೂ ಓದಿ | Delhi Liquor Policy Case: ತಿಹಾರ್ ಜೈಲಿನಲ್ಲಿರುವ ಕೆ.ಕವಿತಾ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು
ಅರಸು ಟ್ರಕ್ ಟರ್ಮಿನಲ್ ಹಗರಣ; ಡಿ.ಎಸ್.ವೀರಯ್ಯಗೆ ಜು.30ರವರೆಗೆ ನ್ಯಾಯಾಂಗ ಬಂಧನ
ಬೆಂಗಳೂರು: ದೇವರಾಜ ಅರಸು ಟ್ರಕ್ ಟರ್ಮಿನಲ್ ಹಗರಣದಲ್ಲಿ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಎಂಎಲ್‌ಸಿ ಡಿ.ಎಸ್. ವೀರಯ್ಯ (D. S. Veeraiah) ಅವರಿಗೆ ಜುಲೈ 30ರವರೆಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ. 47 ಕೋಟಿ ರೂ. ಹಗರಣ ಆರೋಪದಲ್ಲಿ ಬಂಧನವಾಗಿದ್ದ ವೀರಯ್ಯರನ್ನು ಸಿಐಡಿ ಅಧಿಕಾರಿಗಳು ನಗರದ 42ನೇ ಎಸಿಎಂಎಂ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿರುವ ಕೋರ್ಟ್ ನ್ಯಾಯಾಧೀಶರು, ವೀರಯ್ಯರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಆದೇಶ ನೀಡಿದ್ದಾರೆ. ಮತ್ತೊಂದೆಡೆ ವೀರಯ್ಯ ಪರ ವಕೀಲ ವಕೀಲ ಶ್ಯಾಮಸುಂದರ್ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ.
ದೇವರಾಜ ಅರಸು ಟರ್ಮಿನಲ್ ಬಹುಕೋಟಿ ಹಗರಣಕ್ಕೆ (Devaraja Arasu truck terminal scam) ಸಂಬಂಧಿಸಿ ಬಿಜೆಪಿ ಮಾಜಿ ಎಂಎಲ್‌ಸಿ ಡಿ.ಎಸ್. ವೀರಯ್ಯಋನ್ನು ಜುಲೈ 12ರಂದು ಬಂಧಿಸಲಾಗಿತ್ತು. 47 ಕೋಟಿ ರೂ. ಹಗರಣದ ಆರೋಪದಲ್ಲಿ ಮೈಸೂರಿನಲ್ಲಿ ವೀರಯ್ಯರನ್ನು ಸಿಐಡಿ ಬಂಧಿಸಿತ್ತು. ಈ ಹಿಂದೆ ವಾರ್ತಾ ಇಲಾಖೆಯ ಶಂಕರಪ್ಪ ಬಂಧನವಾಗಿತ್ತು, ಇದಾದ ಬೆನ್ನಲ್ಲೇ ಮೈಸೂರಿನಲ್ಲಿ ಮುಡಾ ಅಕ್ರಮ ವಿರೋಧಿಸಿ ಪ್ರತಿಭಟನೆಗೆ ತೆರಳಿದ್ದಾಗ ವೀರಯ್ಯರನ್ನು ಬಂಧಿಸಲಾಗಿತ್ತು.
2021ರಿಂದ 2023ರವರೆಗೆ ಡಿ.ಎಸ್.ವೀರಯ್ಯ ಅವರು ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಗಮದ ಅಧ್ಯಕ್ಷರಾಗಿದ್ದಾಗ ನಡೆದಿದ್ದ ಸುಮಾರು 47 ಕೋಟಿ ರೂ. ಅಕ್ರಮದ ಬಗ್ಗೆ ಹಾಲಿ ವ್ಯವಸ್ಥಾಪಕ ನಿರ್ದೇಶಕ ಸಿಎನ್ ಶಿವಪ್ರಸಾದ್ ವಿಲ್ಸನ್ ಗಾರ್ಡ್ನ್ ಠಾಣೆಗೆ ದೂರು ನೀಡಿದ್ದರು. ತುಂಡು ಗುತ್ತಿದೆ ಆಧಾರದಲ್ಲಿ ಅಕ್ರಮ ನಡೆದಿದೆ ನೀಡಿದ್ದ ದೂರಿನ ಮೇರೆಗೆ 2023ರ ಸೆಪ್ಟೆಂಬರ್ 23ರಂದು ಎಫ್ಐಆರ್ ದಾಖಲಾಗಿತ್ತು. ಬಳಿಕ ವೀರಯ್ಯ ಅವರಿಗೆ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು.
ಇದನ್ನೂ ಓದಿ | Assembly Session: ಲೂಟಿಕೋರರ ಪಿತಾಮಹ ನೀನು: ಸದನದಲ್ಲಿ ಅಶ್ವತ್ಥ್ ನಾರಾಯಣ ವಿರುದ್ಧ ಗುಡುಗಿದ ಡಿಕೆಶಿ!
ಏನಿದು ಹಗರಣ?
2021ರ ಅಕ್ಟೋಬರ್ 25ರಂದು ದೇವರಾಜ ಅರಸು ಟ್ರಕ್ ಟರ್ಮಿನಲ್‌ನಲ್ಲಿ 194ನೇ ನಿರ್ದೇಶಕ ಮಂಡಳಿ ಸಭೆಯಲ್ಲಿ ಟ್ರಕ್ ಟರ್ಮಿನಲ್‌ಗಳ ದುರಸ್ತಿ ಹಾಗೂ ನಿರ್ವಹಣೆಗೆ 10 ಕೋಟಿ ರೂ.ಗಳವರೆಗೆ ತುಂಡು ಗುತ್ತಿಗೆ ನೀಡಲು ಅನುಮೋದನಾ ನಿರ್ಣಯ ಮಾಡಲಾಗಿತ್ತು. ಆನಂತರ ಕಾಮಗಾರಿ ನಡೆಸದೆ ನಕಲಿ ದಾಖಲೆ ಸೃಷ್ಟಿಸಿ ಹಣ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ನಿಗಮದ ಹಾಲಿ ಎಂಡಿ, ಬಳಿಕ ವಿಲ್ಸನ್ ಗಾರ್ಡನ್ ಠಾಣೆಗೆ ತುಂಡು ಗುತ್ತಿಗೆ ಕಾಮಗಾರಿಯಲ್ಲಿ 47.10 ಕೋಟಿ ಅಕ್ರಮ ನಡೆದಿದೆ ಎಂದು ಆರೋಪಿಸಿ ದೂರು ನೀಡಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶ ನೀಡಿತ್ತು.