ಉಡುಪಿ
ಮಣಿಪಾಲದ ಫರ್ನೀಚರ್ ಅಂಗಡಿಯಲ್ಲಿ ಅಗ್ನಿ ಅವಘಡ!
ಸುಧಾ ಪರ್ನೀಚರ್ಸ್ ಅಂಗಡಿಯಲ್ಲಿ ಭಾರಿ ಪ್ರಮಾಣದ ಅಗ್ನಿ ಅವಘಡ ಸಂಭವಿಸಿದ್ದು, ದೊಡ್ಡ ಮಟ್ಟದ ಹಾನಿ ಉಂಂಟಾಗಿದೆ. ಯಾವುದೇ ಜೀವಹಾನಿ ಉಂಟಾಗದಿರುವುದು ಸಮಅಧಾನಕರ ಸಂಗತಿ.
ಉಡುಪಿ: ಉಡುಪಿಯಿಂದ ಮಣಿಪಾಲಕ್ಕೆ ಪ್ರಯಾಣಿಸುವ ರಸ್ತೆಯಲ್ಲಿ ಭಾರಿ ಪ್ರಮಾಣದ ಅಗ್ನಿ ದುರಂತ ಸಂಭವಿಸಿದೆ. ಮಣಿಪಾಲದ ಲಕ್ಷ್ಮೀನಗರ ಬಳಿ ಇರುವ ಸುಧಾ ಫರ್ನೀಚರ್ಸ್ ಅಂಗಡಿಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ಸದ್ಯ ಯಾವುದೇ ಜೀವಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.
ಶಾರ್ಟ್ ಸರ್ಕ್ಯೂಟ್ ಮೂಲಕ ಬೆಂಕಿ ತಗುಲಿರುವ ಸಾಧ್ಯತೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಸುಧಾ ಫರ್ನೀಚರ್ ಪಕ್ಕದಲ್ಲೇ ಇದ್ದ ಹೋಟೆಲ್ ಕೂಡ ಬೆಂಕಿಗೆ ಆಹುತಿಯಾಗಿದೆ. ಈ ದುರಂತದಲ್ಲಿ ಭಾರಿ ಮೌಲ್ಯದ ಫರ್ನೀಚರಗಳು ಹಾಗೂ ಕಚ್ಚಾ ವಸ್ತಗಳು ಬೆಂಕಿಯಲ್ಲಿ ಸುಟ್ಟು ಬೂದಿಯಾಗಿವೆ. 40 ಲಕ್ಷಕ್ಕೂ ಮೇಲ್ಪಟ್ಟು ನಷ್ಟ ಸಂಭವಿಸಿರುವ ಸಾಧ್ಯತೆಯಿದೆ. ಸುಧಾ ಫರ್ನೀಚರ್ ಹಾಗೂ ಹೋಟೆಲ್ ಮಾಲೀಕರು ನಷ್ಟ ಅನುಭವಿಸಿ ದುಃಖಿಸಿದ್ದಾರೆ.
ಸ್ಥಳೀಯ ಅಗ್ನಿಶಾಮಕದಳ ಸಿಬ್ಬಂದಿ ಘಟನೆ ಸಂಭವಿಸಿದ ಸ್ಥಳಕ್ಕೆ ಕೂಡಲೇ ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವವಿಯಾದರು.
ಹೆಚ್ಚಿನ ಓದಿಗಾಗಿ: ಸೆಲ್ಫಿ ತೆಗೆಯಲು ಹೋದ ಕಾಲೇಜು ವಿದ್ಯಾರ್ಥಿಗಳಿಬ್ಬರು ನೀರುಪಾಲು
ಉಡುಪಿ
Weather Report: ಕರಾವಳಿ, ಮಲೆನಾಡಿಗೆ ಜೂ. 7ರವರೆಗೆ ಮಳೆ ಅಲರ್ಟ್
Weather Report: ಮುಂದಿನ 24 ಗಂಟೆಯಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Weather Update) ನೀಡಿದೆ.
ಬೆಂಗಳೂರು: ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಇನ್ನೆರಡು ದಿನಗಳು ಮಳೆ (Rain News) ಮುಂದುವರಿಯಲಿದೆ. ಈ ಸಂಬಂಧ ಹವಾಮಾನ ಇಲಾಖೆ (weather Report) ಮುನ್ಸೂಚನೆಯನ್ನು ನೀಡಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಹಾವೇರಿ, ಧಾರವಾಡ ಮತ್ತು ಬೆಳಗಾವಿಯ ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ವಿಜಯನಗರ, ಬಳ್ಳಾರಿ, ಗದಗ, ಕೊಪ್ಪಳ ಮತ್ತು ಬಾಗಲಕೋಟೆಯಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು, ತುಮಕೂರು ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಹಾಸನ, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಜಿಟಿ ಜಿಟಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಗುಡುಗು, ಸಿಡಿಲಿನ ಅಬ್ಬರ
ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಸಾಧ್ಯತೆ ಇದೆ. ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಗುಡುಗು ಮಿಂಚಿನ ಸಹಿತ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ.
ಸಮುದ್ರಕ್ಕೆ ಇಳಿಯದಂತೆ ಸೂಚನೆ
ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಇದನ್ನೂ ಓದಿ: Manja Thread: ಬೈಕ್ ಸವಾರರ ಕಂಠಕ್ಕೆ ಕಂಟಕವಾಯ್ತು ಗಾಳಿಪಟ ದಾರ; ರಸ್ತೆಯಲ್ಲಿ ತಪ್ಪದ ಸಂಚಕಾರ
ಕಾದ ಕಾವಲಿಯಾದ ಕಲಬುರಗಿ
ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶ 41.6 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ದಾಖಲಾಗಿದೆ. ಉಳಿದಂತೆ ವಿಜಯಪುರದ ತಾಳಿಕೋಟೆ, ಬೈಲಹೊಂಗಲದಲ್ಲಿ ತಲಾ 4ಸೆಂ.ಮೀ ಮಳೆಯಾಗಿದೆ. ಬಿ ಬಾಗೇವಾಡಿಯಲ್ಲಿ 3 ಸೆಂ.ಮೀ ಹಾಗೂ ಶಿರಾಳಿ, ಮುನಿರಾಬಾದ್, ಬೀದರ್ ನಗರ, ಬೀದರ್ ವೀಕ್ಷಣಾಲಯದಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಉಳಿದಂತೆ ಕಾರವಾರ, ಸಿದ್ದಾಪುರ, ನಿಟ್ಟೂರು, ರಾಜೇಶ್ವರ್, ಸೇಡಂ, ನರಗುಂದ, ವೈ ಎನ್ ಹೊಸಕೋಟೆಯಲ್ಲಿ ತಲಾ 1 ಸೆಂ.ಮೀ ಮಳೆ ಸುರಿದಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಉಡುಪಿ
Weather report: ಗಳಿಗೆಗೊಂದು ವಾತಾವರಣ; ಏರಲಿದೆ ತಾಪಮಾನ, ಇರಲಿದೆ ಗುಡುಗು ಮಳೆ
Weather Report: ರಾಜ್ಯದ ಕೆಲವೆಡೆ ಸೋಮವಾರವೂ (ಜೂ.5) ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಜತೆಗೆ ತಾಪಮಾನ ಏರಿಕೆಯ ಎಚ್ಚರಿಕೆಯನ್ನೂ ಹವಾಮಾನ ಇಲಾಖೆ ನೀಡಿದೆ.
ಬೆಂಗಳೂರು: ಬೆಳಗ್ಗೆ ಬಿಸಿಲಿದ್ದರೆ, ಮಧ್ಯಾಹ್ನದ ಹೊತ್ತಿಗೆ ಮೋಡ ಕವಿದ ವಾತಾವರಣ, ಸಂಜೆಯಾದರೆ ಹಿಡಿದುಕೊಳ್ಳುವ ಮಳೆ. ಹೀಗೆ ಗಳಿಗೆಗೊಂದು ವಾತಾವರಣಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಸೋಮವಾರವೂ ವಿವಿಧ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗುವ (Weather report) ಸಾಧ್ಯತೆ ಇದೆ.
ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗುಡುಗು, ಮಿಂಚಿನೊಂದಿಗೆ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಕರಾವಳಿ ತೀರದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಈ ಸಮಯದಲ್ಲಿ ಗಾಳಿ ವೇಗವೂ ಗಂಟೆಗೆ 30-40 ಕಿ.ಮೀ ಬೀಸಲಿದೆ. ಹೀಗಾಗಿ ಇಂತಹ ವಾತಾವರಣದಲ್ಲಿ ಮೀನುಗಾರಿಕೆಗೆ ಇಳಿಯುವುದರಿಂದ ಅಪಾಯ ಜಾಸ್ತಿ ಇರಲಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಉತ್ತರ ಕನ್ನಡ ಮಂದಿಗೆ ಸೋಮವಾರ ಬೆಳಗ್ಗೆ ಹೊನ್ನಾವರ, ಕುಮಟಾ, ಭಟ್ಕಳ, ಕಾರವಾರ ಭಾಗದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ.
ಇತ್ತ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಜಿಲ್ಲಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದ್ದರೆ, ಗರಿಷ್ಠ ಉಷ್ಣಾಂಶವು ಏರಿಕೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಕರಾವಳಿಯ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3-4 ಡಿಗ್ರಿ ಸೆಲ್ಸಿಯಸ್ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.
ಕಳೆದೊಂದು ವಾರದಿಂದ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ತಾಪಮಾನ ಏರಿಕೆ ಕಂಡಿದೆ. ಈ ತೀವ್ರವಾದ ಬಿಸಿಲಿಗೆ ಹೆಚ್ಚು ಸಮಯ ಮೈ ಒಡ್ಡಿದ್ದರೆ ಅಪಾಯ ಕಟ್ಟಿಟ್ಟಬುತ್ತಿ ಎಂದು ವೈದ್ಯರು ಸೂಚಿಸಿದ್ದಾರೆ. ಮುಂಬರುವ ದಿನಗಳಲ್ಲಿ ತಾಪಮಾನ ಇನ್ನಷ್ಟು ಏರಿಕೆ ಆಗುವ ಸಾಧ್ಯತೆ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೊರಗೆ ಹೋಗಲು ಯಾವುದು ಬೆಸ್ಟ್ ಟೈಂ?
ಗಳಿಗೆಗೊಂದು ವಾತಾವರಣ ಇರುವುದರಿಂದ ನೋಡಿಕೊಂಡು ಹೊರಗೆ ಓಡಾಡಿ. ಸುಡು ಬಿಸಿಲಿನ ಕಾರಣಕ್ಕೆ ಬೆಳಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆ ತನಕ ಹೊರಗೆ ಹೋಗಬೇಡಿ. ಇದು ಇನ್ನಷ್ಟು ದೇಹವನ್ನು ಆಯಾಸಕ್ಕೆ ದೂಡುತ್ತದೆ. ಏನೇ ಕೆಲಸ ಇದ್ದರೂ ಬೆಳಗ್ಗೆ 11 ಗಂಟೆಯೊಳಗೆ, 4 ಗಂಟೆ ನಂತರ ಮಾಡಿಕೊಳ್ಳುವುದು ಉತ್ತಮ. ಒಂದು ವೇಳೆ ಹೋಗಲೇಬೇಕಾದ ಪರಿಸ್ಥಿತಿ ಇದ್ದರೆ, ತಲೆಗೆ ಟೋಪಿ ಅಥವಾ ಕೊಡೆ ಹಿಡಿದು ಬಿಸಿಲಿನಿಂದ ರಕ್ಷಣೆ ಪಡೆಯಬಹುದು. ಮಳೆ ಇದ್ದರೂ ಕೂಡ ಧಗೆ ಮಾತ್ರ ಹೆಚ್ಚಾಗಿ ಇರಲಿದೆ. ದೇಹವನ್ನು ನಿರ್ಜಲಿಕರಣ ಆಗದಂತೆ ನೋಡಿಕೊಳ್ಳಲು ನೀರು, ಮಜ್ಜಿಗೆ, ಎಳನೀರು, ಹಣ್ಣಿನ ಜ್ಯೂಸ್ ಕುಡಿಯುವುದು ಒಳಿತು.
ಇದನ್ನೂ ಓದಿ: Mansoon Health Tips : ಮಳೆಗಾಲದಲ್ಲಿ ವೈರಲ್ ಸೋಂಕು ತಡೆಯುವುದು ಹೇಗೆ?
ಪ್ರಮುಖ ನಗರಗಳಲ್ಲಿನ ಇಂದಿನ ಹವಾಮಾನ ಹೀಗಿದೆ
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಕಲಬುರಗಿ: 42 ಡಿ.ಸೆ – 28 ಡಿ.ಸೆ
ಗದಗ: 37 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 35 ಡಿ.ಸೆ – 23 ಡಿ.ಸೆ
ಬೆಳಗಾವಿ: 36 ಡಿ.ಸೆ – 21 ಡಿ.ಸೆ
ಕಾರವಾರ: 36 ಡಿ.ಸೆ – 27 ಡಿ.ಸೆ
ಮಂಗಳೂರು: 35 ಡಿ.ಸೆ – 26 ಡಿ.ಸೆ
ಹೊನ್ನಾವರ: 34 ಡಿ.ಸೆ- 25 ಡಿ.ಸೆ
ಬೆಂಗಳೂರು ನಗರ: 33 ಡಿ.ಸೆ – 22 ಡಿ.ಸೆ
ರಾಜ್ಯದ ಪ್ರಮುಖ ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಉಡುಪಿ
Karnataka Politics: ಸೂಲಿಬೆಲೆಯನ್ನು ಬಂಧಿಸಿದರೆ ಕೈಕಟ್ಟಿ ಕೂರಲ್ಲ: ಕೋಟ ಶ್ರೀನಿವಾಸ ಪೂಜಾರಿ
Karnataka Politics: ಚಕ್ರವರ್ತಿ ಸೂಲಿಬೆಲೆ ಅವರೇನೂ ಭಯೋತ್ಪಾದಕರಲ್ಲ. ಅವರನ್ನು ಬಂಧಿಸಿದರೆ ಬಿಜೆಪಿ ಕೈಕಟ್ಟಿ ಕೂರಲ್ಲ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಉಡುಪಿ: ವಾಗ್ಮಿ, ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರ ಬಗ್ಗೆ ಎಂ.ಬಿ. ಪಾಟೀಲ್ ಅವರು ಆಡಿದ ಮಾತುಗಳು ನನಗೆ ಆಶ್ಚರ್ಯ ಮೂಡಿಸಿದೆ (Karnataka Politics). ಜೈಲಿಗಟ್ಟಲು ಅವರೇನೂ ಭಯೋತ್ಪಾದಕರಲ್ಲ. ರಾಷ್ಟ್ರೀಯವಾದಿಯೊಬ್ಬರನ್ನು ಬಂಧಿಸಿದರೆ ಬಿಜೆಪಿ ಕೈಕಟ್ಟಿ ಕೂರಲ್ಲ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಚಕ್ರವರ್ತಿ ಸೂಲಿಬೆಲೆಗೆ ಜೈಲು ಗ್ಯಾರಂಟಿ ಎಂಬ ಸಚಿವ ಎಂ.ಬಿ.ಪಾಟೀಲ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ಸುಮ್ಮನೆ ಇದ್ದರೆ ಆಯ್ತು, ಇಲ್ಲವಾದರೆ ಜೈಲಿಗಟ್ಟುತ್ತೇನೆ ಏಂಬ ಸಚಿವರ ಮಾತು ಕೇಳಿ ನನಗೆ ದಿಗ್ಭ್ರಮೆಯಾಗಿದೆ. ಚಕ್ರವರ್ತಿ ಸೂಲಿಬೆಲೆ ಭಯೋತ್ಪಾದಕ ಅಲ್ಲ, ಒಬ್ಬ ರಾಷ್ಟ್ರಭಕ್ತ, ರಾಷ್ಟ್ರೀಯವಾದಿ ವಿಚಾರಗಳನ್ನು ಜನಮಾನಸದಲ್ಲಿ ಬಿತ್ತುವ ಭಾಷಣಕಾರ, ಉತ್ತಮ ಸಂಘಟಕ. ಅಪರಾಧವಲ್ಲದಂತಹ ರಾಷ್ಟ್ರೀಯವಾದಿ ನಿಲುವುಗಳನ್ನು ಜನರ ಮುಂದಿಡುವವರು. ಹೀಗಾಗಿ ಮಂತ್ರಿಗಳು ತಮ್ಮ ಇತಿಮತಿಯೊಳಗೆ ಮಾತನಾಡಬೇಕು ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ | Karnataka Politics: ಹಿಟ್ಲರ್ ಗಿಟ್ಲರ್ ಅಂದ್ರೆ ಜೈಲು ಗ್ಯಾರಂಟಿ: ಇದು ಚಕ್ರವರ್ತಿ ಸೂಲಿಬೆಲೆಗೆ ಎಂ.ಬಿ. ಪಾಟೀಲ್ ಎಚ್ಚರಿಕೆ ಧಾಟಿ!
ನಿಮಗೆ ರಾಜ್ಯದ ಹೊಣೆಗಾರಿಕೆ ಇದೆ, ಇಂತಹ ವಿಚಾರಗಳಲ್ಲಿ ಮಾತನಾಡುವುದು ಸರಿಯಲ್ಲ. ನೀವು ನಿಮ್ಮ ಹೇಳಿಕೆ ಹಿಂಪಡೆಯುವುದು ಉತ್ತಮ. ಚಕ್ರವರ್ತಿ ಸೂಲಿಬೆಲೆಯವರಿಗೆ ವಿನಾಕಾರಣ ತೊಂದರೆ ಕೊಟ್ಟಲ್ಲಿ ಬಿಜೆಪಿ ಸುಮ್ಮನಿರಲ್ಲ. ನಮಗೂ ನ್ಯಾಯ ಕೇಳುವ ಹಕ್ಕಿದೆ. ಯಾವ ರೀತಿ ಪ್ರತಿಕ್ರಿಯಿಸಬೇಕೋ, ಅದೇ ರೀತಿ ಪ್ರತಿಕ್ರಿಯಿಸುತ್ತೇವೆ ಎಂದು ತಿಳಿಸಿದ್ದಾರೆ.
ಉಡುಪಿ
Weather report: 13 ಜಿಲ್ಲೆಗಳಲ್ಲಿ ಆರ್ಭಟಿಸಲಿದ್ದಾನೆ ವರುಣ; ಇರಲಿದೆ ಗುಡುಗು, ಸಿಡಿಲು, ಬೀಸಲಿದೆ ಬಿರುಗಾಳಿ
Weather Update: ರಾಜ್ಯದ ಹಲವೆಡೆ ಮಳೆ ಅಬ್ಬರಿಸುತ್ತಿದ್ದರೂ ವಾತಾವರಣದಲ್ಲಿ ತಾಪಮಾನ ಏರಿಕೆ ಆಗುತ್ತಿದೆ. ಜೂನ್ 5-6ರಂದು ಗುಡುಗು ಸಹಿತ ಮಳೆಯಾಗುವ (Rain alert) ಸಾಧ್ಯತೆ ಇದ್ದು, ಉಷ್ಣಾಂಶದ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Weather Update) ನೀಡಿದೆ.
ಬೆಂಗಳೂರು: ಮುಂದಿನ 24 ಗಂಟೆಯಲ್ಲಿ (Weather report) ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ (Rain alert) ಸಾಧ್ಯತೆ ಇದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವೊಮ್ಮೆ ಬಿಸಲು ಇದ್ದರೆ, ಮೋಡ ಕವಿಯಲಿದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಜಿಟಿಜಿಟಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಮೈಸೂರು ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಇನ್ನು ಚಿಕ್ಕಮಗಳೂರು ಮತ್ತು ಹಾಸನದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಕೊಡಗು ಮತ್ತು ಶಿವಮೊಗ್ಗದಲ್ಲೂ ಮಳೆಯ ಅಬ್ಬರ ಇರಲಿದೆ. ಉಳಿದಂತೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಬಿರುಗಾಳಿ, ಗುಡುಗು ಮುನ್ನೆಚ್ಚರಿಕೆ
ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದ್ದು, ಒಳನಾಡಿನಲ್ಲಿ ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆ ಇದೆ. ಮಳೆ ನಡುವೆಯೂ ಗರಿಷ್ಠ ಉಷ್ಣಾಂಶವು ಏರಿಕೆ ಆಗಲಿದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಕರಾವಳಿಯ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3-4 ಡಿಗ್ರಿ ಸೆಲ್ಸಿಯಸ್ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ
ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ಯಿಂದ 55 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಜತೆಗೆ ಪ್ರವಾಸಿಗರು ಸಮುದ್ರ ತೀರಕ್ಕೆ ಹೋಗದಂತೆ ಎಚ್ಚರಿಸಲಾಗಿದೆ.
ಇದನ್ನೂ ಓದಿ: Hubballi News: ಅಮ್ಮನ ಸೀರೆಯಲ್ಲಿ ನೇಣಿಗೆ ಕೊರಳೊಡ್ಡಿದ ಸಹೋದರಿಯರು
ರಾಜ್ಯದಲ್ಲಿ ಶನಿವಾರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದ್ದು, ಕರಾವಳಿಯಲ್ಲಿ ಒಣಹವೆ ಇತ್ತು. ಕೊಡಗಿನ ನಾಪೋಕ್ಲು 5 ಸೆಂ.ಮೀ, ಕೊಳ್ಳೇಗಾಲ, ಸರಗೂರು, ಕೊಟ್ಟಿಗೆಹಾರದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಅರಕಲಗೂಡು, ಮೂರ್ನಾಡಲ್ಲಿ ತಲಾ 2 ಸೆಂ.ಮೀ, ಬೀದರ್, ಟಿ ನರಸೀಪುರ, ಕಳಸ, ಮೂಡಿಗೆರೆ ಕೆವಿಕೆ, ಮೈಸೂರಿನಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಜತೆಗೆ ಗರಿಷ್ಠ ಉಷ್ಣಾಂಶ 42.0 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ದಾಖಲಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
-
ಕರ್ನಾಟಕ18 hours ago
Odisha Train Accident: ಒಡಿಶಾ ರೈಲು ದುರಂತಕ್ಕೆ ಕೋಮು ಬಣ್ಣ ನೀಡಿದ ಮಹಿಳೆ, ಒಡಿಶಾ ಪೊಲೀಸರಿಂದ ತನಿಖೆ
-
ಕರ್ನಾಟಕ16 hours ago
ವಿಶ್ವ ಪರಿಸರ ದಿನ: ಸಸಿ ನೆಡಿ, ಫೋಟೊ ಕಳುಹಿಸಿ; ವಿಸ್ತಾರ ನ್ಯೂಸ್ ಅಭಿಯಾನ
-
ಕರ್ನಾಟಕ9 hours ago
DK Shivakumar: ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ಮಾಡಿದ್ದಕ್ಕೆ ಜಾಡಿಸಿದ ಡಿಕೆಶಿ; ಅಧಿಕಾರಿಗಳ ಅಮಾನತಿಗೆ ಆದೇಶ
-
ಕರ್ನಾಟಕ13 hours ago
Murder Case: ಟೋಲ್ ವಿಚಾರಕ್ಕೆ ಕಿರಿಕ್; ಹಾಕಿ ಸ್ಟಿಕ್ನಿಂದ ಬಡಿದು ಕೊಂದೇಬಿಟ್ಟರು ದುರುಳರು
-
ದೇಶ14 hours ago
Odisha Train Accident: ಗಾಯದ ಮೇಲೆ ಬರೆ ಎಂದರೆ ಇದೇ; ಒಡಿಶಾದಲ್ಲಿ ಹಳಿ ತಪ್ಪಿದ ಮತ್ತೊಂದು ರೈಲು
-
ದೇಶ17 hours ago
world environment day : ಇಂದು ವಿಶ್ವ ಪರಿಸರ ದಿನ 2023: ಈ ದಿನದ ಮಹತ್ವ, ಇತಿಹಾಸ, ಥೀಮ್ ತಿಳಿಯಿರಿ
-
ಪರಿಸರ9 hours ago
ವಿಶ್ವ ಪರಿಸರ ದಿನ: ‘ಸಸಿ ನೆಡಿ, ಫೋಟೊ ಕಳುಹಿಸಿ’ ವಿಸ್ತಾರ ಅಭಿಯಾನ; ನಿಮ್ಮ ಮತ್ತಷ್ಟು ಫೋಟೊಗಳು ಇಲ್ಲಿವೆ
-
ಕರ್ನಾಟಕ16 hours ago
ಕಲಬುರಗಿಯಲ್ಲಿ ಚಂಡಿಕಾ ಹೋಮದ ಬೆಂಕಿಯಲ್ಲಿ ಕಾಣಿಸಿಕೊಂಡ ದುರ್ಗಾ ದೇವಿ!; ಇಲ್ಲಿದೆ ನೋಡಿ ಫೋಟೊ