ಬೆಂಗಳೂರು: ಸೋಮವಾರ ಬೆಳಗಿನ ಜಾವವೇ ಇ.ಡಿ ಅಧಿಕಾರಿಗಳು ಸರ್ಚ್ ವಾರಂಟ್ ಪಡೆದು ಸುಶೀಲ್ ಪಾಂಡುರಂಗ ಅವರಿಗೆ ಸಂಬಂಧಿಸಿದ 10 ಕಡೆಯಲ್ಲಿ ಇ.ಡಿ ಅಧಿಕಾರಿಗಳು ದಾಳಿ ನಡೆಸಿ ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ ಸುಶೀಲ್ ಅವರ ಕಚೇರಿ, ನಿವೇಶನ, ವಂಚನೆ ನಡೆದಿದೆ ಎಂದು ಹೇಳಲಾಗಿರುವ ನಿರ್ಮಾಣಗೊಂಡಿರುವ ಕಟ್ಟಡಗಳಿಗೂ ಇ.ಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಹಣಕಾಸು ಅಕ್ರಮಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಸುಶೀಲ್ ಪಾಂಡುರಂಗ ಮಂತ್ರಿ ಅವರಿಗೆ ಜೂನ್ 25ರಂದು ಇ.ಡಿ. ಸಮನ್ಸ್ ನೀಡಿತ್ತು. ದಕ್ಷಿಣ ಭಾರತದ ಅತಿ ದೊಡ್ಡ ರಿಯಲ್ ಎಸ್ಟೇಟ್ ಸಂಸ್ಥೆಯಾದ ಮಂತ್ರಿ ಗ್ರೂಪ್ ಮೇಲೆ ಕಳೆದ ವರ್ಷ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಅಕ್ರಮ ಹಣ ಸಂಪಾದನೆ ಆರೋಪದಲ್ಲಿ ಪ್ರತಿಷ್ಠಿತ ಮಂತ್ರಿ ಸಮೂಹ ಸಂಸ್ಥೆಯ ಸಿಎಂಡಿ ಸುಶೀಲ್ ಪಾಂಡುರಂಗ ಮಂತ್ರಿ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಶುಕ್ರವಾರವೇ ವಶಕ್ಕೆ ಪಡೆದಿತ್ತು.
ಇದನ್ನೂ ಓದಿ: ಮಂತ್ರಿ ಗ್ರೂಪ್ ಸಿಎಂಡಿಗೆ ಇಡಿಯಿಂದ ಸಮನ್ಸ್ ಜಾರಿ
ಸುಶೀಲ್ ಮನೆ ಮೇಲೆ ಕಳೆದ ವರ್ಷ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದಾಗ ಆದಾಯ ತೆರಿಗೆಯಲ್ಲಿ ವ್ಯತ್ಯಯವಾಗಿರುವುದಲ್ಲದೆ ಮಿತಿಗಿಂತ ಹೆಚ್ಚು ಹಣ ಕಂಡುಬಂದಿತ್ತು. ಹೀಗಾಗಿ ಆದಾಯ ತೆರಿಗೆ ಅಧಿಕಾರಿಗಳು ಜಾರಿ ನಿರ್ದೇಶನಾಲಯಕ್ಕೆ ಪತ್ರ ಬರೆದಿದ್ದರು. ಒಂದಷ್ಟು ಮಾಹಿತಿ ಕಲೆ ಹಾಕಿದ ಇಡಿ ಅಧಿಕಾರಿಗಳು ಅಕ್ರಮ ಹಣಕಾಸು ವ್ಯವಹಾರ ಪ್ರಕರಣ ದಾಖಲಿಸಿಕೊಂಡಿದ್ದರು. ನಂತರ ಶುಕ್ರವಾರ ವಿಚಾರಣೆಗೆ ಕರೆಸಲಾಗಿತ್ತು. ಮರು ದಿನ ಇ.ಡಿ ಅಧಿಕಾರಿಗಳು ಬಂಧಿಸಿದ್ದರು.
ನ್ನು ಸುಶೀಲ್ ಮೇಲೆ ಹಲವು ಆರೋಪಗಳೂ ಕೂಡ ಕೇಳಿ ಬಂದಿದ್ದವು. ಫ್ಲಾಟ್ ನೀಡುವುದಾಗಿ ಹೇಳಿ ಹಲವರಿಂದ ಹಣ ಪಡೆದು, ಪ್ಲಾಟ್ ಕೊಡದೆ ಹಣವನ್ನ ವಾಪಸ್ ನೀಡದೆ ವಂಚಿಸಿದ್ದಾರೆಂದು ಆರೋಪಿಸಲಾಗಿದೆ. ಇನ್ನು ಬಹುತೇಕ ವ್ಯವಹಾರಗಳು ಬ್ಯಾಂಕ್ ಮುಖಾಂತರ ನಡೆಸದೇ ನಗದು ರೂಪದಲ್ಲಿ ನಡೆದಿದೆ ಎನ್ನಲಾಗಿದೆ. ಹೀಗಾಗಿ ಹವಾಲ ಹಣ ವರ್ಗಾವಣೆಯಾಗಿರುವ ಸಾಧ್ಯತೆಗಳು ಹೆಚ್ಚಿರುವ ಕಾರಣ ಸುಶೀಲ್ ಅವರನ್ನು ಮೊದಲು ವಿಚಾರಣೆ ನಡೆಸಿ ನಂತರ ಬಂಧನ ಮಾಡಲಾಗಿದೆ.
ಇದನ್ನೂ ಓದಿ: ʼಮಂತ್ರಿʼ ಗ್ರೂಪ್ ಸಿಎಂಡಿ ಸುಶೀಲ್ ಪಾಂಡುರಂಗ ಮಂತ್ರಿ ಇ.ಡಿ. ವಶಕ್ಕೆ