Site icon Vistara News

MLC Election: ಕಾಂಗ್ರೆಸ್‌ ಸರ್ಕಾರಕ್ಕೆ 3ನೇ ಸವಾಲು: 3 ಪರಿಷತ್‌ ಸ್ಥಾನಕ್ಕೆ 19 ಆಕಾಂಕ್ಷಿಗಳು, ನಾಲ್ಕೈದು ಬಣಗಳು!

many aspirants from congress for mlc election

#image_title

ಬೆಂಗಳೂರು: ಈಗಷ್ಟೆ ಸಂಪುಟ ಸರ್ಕಸ್‌ ಮುಗಿಸಿ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಮುಂದಾಗಿರುವ ಕಾಂಗ್ರೆಸ್‌ ಸರ್ಕಾರಕ್ಕೆ ಮೂರನೇ ಸವಾಲು ಎದುರಾಗಿದೆ. ವಿಧಾನಸಭೆಯಿಂದ ಆಯ್ಕೆ ಮಾಡಬೇಕಾದ ಮೂರು ವಿಧಾನ ಪರಿಷತ್‌ ಸ್ಥಾನಗಳನ್ನು ಭರ್ತಿ ಮಾಡಬೇಕಿದ್ದು, ಉಪಚುನಾವಣೆಗೆ ಈಗಾಗಲೆ ಆಕಾಂಕ್ಷಿಗಳ ಸಂಖ್ಯೆ ಬೆಳೆಯುತ್ತಲೇ ಸಾಗಿದೆ.

ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿಯ ಅನೇಕ ವಿಧಾನ ಪರಿಷತ್‌ ಸದಸ್ಯರು ರಾಜೀನಾಮೆ ನೀಡಿದ್ದರು. ಇದರಲ್ಲಿ, ವಿಧಾನ ಸಭೆಯಿಂದ ಆಯ್ಕೆ ಮಾಡಲಾಗಿದ್ದ ಲಕ್ಷ್ಮಣ ಸವದಿ, ಆರ್ ಶಂಕರ್, ಬಾಬುರಾವ್ ಚಿಂಚನಸೂರು ರಾಜೀನಾಮೆ ನೀಡಿದ್ದರು. ಲಕ್ಷ್ಮಣ ಸವದಿ ಹಾಗೂ ಬಾಬುರಾವ್‌ ಚಿಂಚನಸೂರು ಕಾಂಗ್ರೆಸ್‌ನಿಂದ ಸ್ಪರ್ಧಿಸಿದರೆ ಶಂಕರ್‌ ಪಕ್ಷೇತರರಾಗಿದ್ದರು. ಲಕ್ಷ್ಮಣ ಸವದಿ ಹೊರತುಪಡಿಸಿ ಇಬ್ಬರೂ ಸೋಲುಂಡರು. ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಗಳಿಗೆ ಜೂನ್‌ 30ರಂದು ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ಪ್ರಕಟಿಸಿದೆ.

ಮೂರೂ ಚುನಾವಣೆಗಳು ಒಟ್ಟಾಗಿ ನಡೆಯುತ್ತಿದೆಯಾದರೂ ಅವುಗಳು ಬೇರೆಬೇರೆ ಅವಧಿಯಲ್ಲಿ ಮುಕ್ತಾಯವಾಗುವ ಸ್ಥಾನಗಳಾದ್ಧರಿಂದ ಪ್ರತ್ಯೇಕ ಚುನಾವಣೆ ಎಂದೇ ಪರಿಗಣಿಸಲಾಗುತ್ತದೆ. ಹಾಗಾಗಿ ಮೂರಕ್ಕೆ ಮೂರೂ ಸ್ಥಾನಗಳು ಕಾಂಗ್ರೆಸ್‌ಗೇ ಸಿಗಲಿವೆ. ಈ ಮೂರು ಸ್ಥಾನಗಳಿಗೆ ಈಗಾಗಲೆ ಪೈಪೋಟಿ ಆರಂಭವಾಗಿದೆ. ಆದರೆ ಮೂರರಲ್ಲಿ ಒಂದು ಸ್ಥಾನ ಈಗಾಗಲೆ ನಿಗದಿಯಾಗಿರುವುದು ಮತ್ತಷ್ಟು ಒತ್ತಡ ಹೆಚ್ಚಿಸಿದೆ.

ಸದ್ಯ 34 ಸಚಿವರ ಪೈಕಿ ಬೋಸರಾಜು ಅವರು ವಿಧಾನಸಭೆ ಸದಸ್ಯರೂ ಅಲ್ಲ, ವಿಧಾನ ಪರಿಷತ್‌ ಸದಸ್ಯರೂ ಅಲ್ಲ. ಹಾಗಾಗಿ ಅವರನ್ನು ಆರು ತಿಂಗಳೊಳಗೆ ಕೆಳಮನೆ ಅಥವಾ ಮೇಲ್ಮನೆ ಸದಸ್ಯರನ್ನಾಗಿಸಬೇಕು. ಯಾವುದೇ ಸದಸ್ಯರನ್ನು ರಾಜೀನಾಮೆ ಕೊಡಿಸಿ ಉಪ ಚುನಾವಣೆಯಲ್ಲಿ ಗೆಲ್ಲಿಸಿಕೊಂಡು ಬರುವ ಸವಾಲನ್ನು ಕಾಂಗ್ರೆಸ್‌ ಪಕ್ಷ ತೆಗೆದುಕೊಳ್ಳುವುದು ಬಹುತೇಕ ಅಸಾಧ್ಯ. ಹಾಗಾಗು ಪರಿಷತ್‌ ಸದಸ್ಯರನ್ನಾಗಿ ನೇಮಿಸಬೇಕಾಗಿದೆ.

ಇನ್ನು ಎರಡು ಸ್ಥಾನಗಳಿಗೆ ಅನೇಕರು ಪ್ರಯತ್ನ ನಡೆಸಿದ್ದಾರೆ. ಇದರಲ್ಲಿಯೂ ಸಿದ್ದರಾಮಯ್ಯ ಬಣ, ಡಿ.ಕೆ. ಶಿವಕುಮಾರ್‌ ಬಣ, ಇನ್ನಿತರರ ಬಣ ಹಾಗೂ ಹೈಕಮಾಂಡ್‌ ಕೋಟಾ ಹೆಸರುಗಳು ಕೇಳಿಬರುತ್ತಿವೆ.

ಆಕಾಂಕ್ಷಿಗಳು ಹಾಗೂ ಕೋಟ
ಜಗದೀಶ್ ಶೆಟ್ಟರ್ – ಹೈಕಮಾಂಡ್
ಬಾಬುರಾವ್ ಚಿಂಚನಸೂರ – ಮಲ್ಲಿಕಾರ್ಜುನ ಖರ್ಗೆ
ಬಿಎಲ್ ಶಂಕರ್ – ಡಿ.ಕೆ. ಶಿವಕುಮಾರ್
ವಿ.ಆರ್ ಸುದರ್ಶನ್ – ಸಿದ್ದರಾಮಯ್ಯ
ವಿಜಯ್ ಮುಳಗುಂದ್ – ಡಿ.ಕೆ. ಶಿವಕುಮಾರ್
ವಿಶ್ವನಾಥ್ ಕನಕಪುರ – ಡಿ.ಕೆ. ಶಿವಕುಮಾರ್
ಉಮಾಶ್ರೀ – ಸಿದ್ದರಾಮಯ್ಯ
ರಾಮಪ್ಪ – ಸಿದ್ದರಾಮಯ್ಯ
ಕವಿತಾರೆಡ್ಡಿ – ಸಿದ್ದರಾಮಯ್ಯ
ನಾಗಲಕ್ಷ್ಕೀ ಚೌಧರಿ – ಸಿದ್ದರಾಮಯ್ಯ/ಪರಮೇಶ್ವರ್
ಅನಿಲ್ ಕುಮಾರ್ – ಲಿಂಗಾಯತ – ಎಂಬಿ ಪಾಟೀಲ್, ಈಶ್ವರ ಖಂಡ್ರೆ
ಪುಷ್ಪಲತಾ ಅಮರನಾಥ – ಸಿದ್ದರಾಮಯ್ಯ
ನಟರಾಜ ಗೌಡ – ಡಿ.ಕೆ. ಶಿವಕುಮಾರ್
ಐವನ್ ಡಿಸೋಜ – ಸಿದ್ದರಾಮಯ್ಯ
ಮೈಸೂರು ಲಕ್ಷ್ಮಣ್ – ಸಿದ್ದರಾಮಯ್ಯ
ಗಾಯಿತ್ರಿ ಶಾಂತೇಗೌಡ – ಸಿದ್ದರಾಮಯ್ಯ
ಮಂಜುಳ ಮಾನಸ – ಸಿದ್ದರಾಮಯ್ಯ
ಸಾದುಕೋಕಿಲಾ – ಡಿ.ಕೆ. ಶಿವಕುಮಾರ್

ಇದನ್ನೂ ಓದಿ: Congress Guarantee: ಇದು ಸರ್ಕಾರ, ಸರ್ಕಾರ ನಡೆಸೋದು ನಾವು: ಗ್ಯಾರಂಟಿ ಕಂಡೀಷನ್‌ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಉತ್ತರ

Exit mobile version