ಬಳ್ಳಾರಿ: ತಾಲೂಕಿನ ಮಿಂಚೇರಿ ಗ್ರಾಮದ ಬಿಜೆಪಿ ಪಕ್ಷದ ಹಲವು ಮುಖಂಡರು (Many BJP leaders) ಪಕ್ಷವನ್ನು ತೊರೆದು, ಗ್ರಾಮೀಣ ಶಾಸಕ ಬಿ.ನಾಗೇಂದ್ರ ಅವರ ನೇತೃತ್ವದಲ್ಲಿ ಕಾಂಗ್ರೆಸ್ (Congress) ಪಕ್ಷಕ್ಕೆ ಸೇರ್ಪಡೆಯಾದರು.
ಬಳ್ಳಾರಿ ಗ್ರಾಮೀಣ ಕ್ಷೇತ್ರದ ಮಿಂಚೇರಿ ಮಾಜಿ ಗ್ರಾಮ ಪಂಚಾಯಿತಿ ಸದಸ್ಯರಾದ ಚಾಂದಾ ಬಾಷಾ, ಕಂಪ್ಲಿ ಮಾಬುಸಾಬ್, ಬಿಜೆಪಿ ಮುಖಂಡರುಗಳಾದ ಸಿದ್ದಾಪುರ ಬಕ್ಷಿ ಸಾಬ್, ಜಾನಿ ಸಾಬ್, ದಾಜಿವಾಲ ಗೈಬು ಸಾಬ್, ಹೊಸಮನೆ ಮೌಲಾ ಸಾಬ್, ಗುತ್ತಿ ಸರ್ವರ್ ಸಾಬ್, ಶಬ್ಬಶಾ, ನೂರಾಗೌಬಾ, ಗೆಣೆಕೆಹಾಳ್ ಬಕ್ಷಿ ಸಾಬ್, ಪೆಟ್ಲ ಮೌಲಸಾಬ್, ಗೋವಿಂದ, ಗುತ್ತಿ ಶಫೀ, ಮೆಹಬೂಬಾ ಸಾಬ್, ಚುಡಿಮಾಬು ಸಾಬ್, ಟಿಪ್ಪು, ಜಾನೂರ ಮಹಮ್ಮದ್ ಸೇರಿದಂತೆ ಬಿಜೆಪಿ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಇದನ್ನೂ ಓದಿ: The Kerala Story Review : ಲವ್ ಜಿಹಾದ್, ಭಯೋತ್ಪಾದನೆಯ ಕ್ರೂರ ಮುಖದ ಮನಮುಟ್ಟುವ ಚಿತ್ರಣ
ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಮುಖಂಡರನ್ನು ಬಳ್ಳಾರಿ ಗ್ರಾಮೀಣ ಶಾಸಕ ಬಿ. ನಾಗೇಂದ್ರ ಸ್ವಾಗತಿಸಿದರು.
ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ ನಂಬಿ ಪಕ್ಷಕ್ಕೆ ಸೇರ್ಪಡೆ
ನಂತರ ಮಾತನಾಡಿದ ಶಾಸಕ ಬಿ.ನಾಗೇಂದ್ರ, ಮಿಂಚೇರಿ ಗ್ರಾಮದ ಅಲ್ಪಸಂಖ್ಯಾತ ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತವನ್ನು ನಂಬಿ ಪಕ್ಷ ಸೇರ್ಪಡೆಗೊಂಡಿದ್ದಾರೆ. ಅವರನ್ನು ಪ್ರೀತಿಯಿಂದ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು ಎಂದರು.
ಇನ್ನು ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಬಹಳಷ್ಟು ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಬರುವವರಿದ್ದಾರೆ. ಜನರ ಸೇವೆ ಮಾಡಲು ಆಸಕ್ತಿ ಇರುವವರು ಯಾರು ಬೇಕಾದರೂ ಕಾಂಗ್ರೆಸ್ ಪಕ್ಷಕ್ಕೆ ಬರಬಹುದು ಎಂದು ಕರೆ ನೀಡಿದರು.
ಇದನ್ನೂ ಓದಿ: SCO Meeting: ಪಾಕಿಸ್ತಾನ ಸಚಿವನಿಗೆ ಕೈ ಕುಲುಕದ ಭಾರತದ ವಿದೇಶಾಂಗ ಇಲಾಖೆ ಸಚಿವ; ಭಯೋತ್ಪಾದನೆ ವಿರುದ್ಧ ಕಟು ಮಾತು
ಪ್ರತಿಯೊಬ್ಬರೂ ಕಾಂಗ್ರೆಸ್ ಬೆಂಬಲಿಸಿ
ಪ್ರತಿಯೊಬ್ಬರೂ ಕಾಂಗ್ರೆಸ್ ಬೆಂಬಲಿಸಿ ಆಶೀರ್ವದಿಸಬೇಕು ಎಂದು ಶಾಸಕ ಬಿ.ನಾಗೇಂದ್ರ ಮನವಿ ಮಾಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಇತರರು ಪಾಲ್ಗೊಂಡಿದ್ದರು.