ಬೆಳಗಾವಿ: ಮೀಸಲಾತಿ ಕಿಚ್ಚಿಗೆ ನೆರೆಯ ಮಹಾರಾಷ್ಟ್ರದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಜಲ್ನಾ ಜಿಲ್ಲೆಯ ಅಂತರ್ವಾಲಿ ಸಾರಥಿ ಎಂಬಲ್ಲಿ ಮರಾಠಾ ಮೀಸಲಾತಿ ಹೋರಾಟ (Maratha Reservation) ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರಿಂದ ಉದ್ರಿಕ್ತರು ಕಲ್ಲು ತೂರಾಟ ನಡೆಸಿ, 6 ಬಸ್‌ಗಳಿಗೆ ಬೆಂಕಿ ಹಚ್ಚಿದ್ದಾರೆ. ಈ ವೇಳೆ 38ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪ್ರತಿಭಟನೆ ವೇಳೆ ರಾಜ್ಯದ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಬೆಂಕಿ ಹಚ್ಚಲಾಗಿದ್ದು, ಅದೃಷ್ಟವಶಾತ್ 45 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಳೆದ ನಾಲ್ಕು ದಿನಗಳಿಂದ ಶಾಂತಿಯುತವಾಗಿ ನಡೆಯುತ್ತಿದ್ದ ಹೋರಾಟ ಶುಕ್ರವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆ ನಿಯಂತ್ರಿಸಲು ಪೊಲೀಸರು ಟಿಯರ್ ಗ್ಯಾಸ್ ಪ್ರಯೋಗಿಸಿ, ಲಾಠಿ ಚಾರ್ಚ್ ನಡೆಸಿದ್ದರಿಂದ ಉದ್ರಿಕ್ತರು ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ 18 ಮಂದಿ ಪೊಲೀಸರು ಹಾಗೂ 20 ಮಂದಿ ಪ್ರತಿಭಟನಾಕಾರರು ಸೇರಿ 38ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.
ಇದನ್ನೂ ಓದಿ | Cauvery Water Dispute: ಕಾವೇರಿ ನೀರು ಹಂಚಿಕೆ ಪ್ರಕರಣದ ವಿಚಾರಣೆ ಸೆ.6ಕ್ಕೆ ಮುಂದೂಡಿಕೆ, ನೀರು ನಿಲ್ಲಸಲಾಗಲ್ಲ ಎಂದ ಡಿಕೆಶಿ!
ನಂತರ ಜಲ್ನಾ ಜಿಲ್ಲೆಯ ಶಹಘಡ ಬಳಿ ಧುಳೆ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ತಡೆದು ಉದ್ರಿಕ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಹೆದ್ದಾರಿಯಲ್ಲಿ ಸಾಗುತ್ತಿದ್ದ ರಾಜ್ಯದ 2 ಕೆಎಸ್‌ಆರ್‌ಟಿಸಿ ಬಸ್ ಸೇರಿ 6 ಬಸ್‌ಗಳಿಗೆ ಬೆಂಕಿ ಇಡಲಾಗಿದೆ. ಔರಾಂಗಾಬಾದ್‌ನಿಂದ ಹುಬ್ಬಳ್ಳಿಗೆ ಬರುತ್ತಿದ್ದ ರಾಜ್ಯದ ಸಾರಿಗೆ ಬಸ್‌ನಲ್ಲಿ 45 ಪ್ರಯಾಣಿಕರು ಇದ್ದರು. ಈ ವೇಳೆ ಬಸ್‌ಗೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದ್ದಾರೆ. ಇದರಿಂದ ಮಹಾರಾಷ್ಟ್ರರ ಹಲವು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
#WATCH | Maharashtra | A clash broke out between Police and protesters demanding Maratha Reservation, in Jalna earlier today. Police resorted to lathi charge to disperse the protesters. Injuries reported. pic.twitter.com/tZ9uHAkF6B
— ANI (@ANI) September 1, 2023