Site icon Vistara News

Ganesh Chaturthi | ಅಂಬೇಡ್ಕರ್‌ರನ್ನೇ ಹೋಲುವ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಭಾರಿ ಆಕ್ಷೇಪ

Ambedkar Photo

ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿಯ ಅಂಬೇಡ್ಕರ್‌ ನಗರದಲ್ಲಿ ಗಣೇಶ ಚತುರ್ಥಿ (Ganesh Chaturthi) ಹಿನ್ನೆಲೆಯಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರನ್ನೇ ಹೋಲುವ ಗಣೇಶನ ಮೂರ್ತಿ ಪ್ರತಿಷ್ಠಾಪನೆ ಮಾಡಿದ ಕಾರಣ ದಲಿತ ಸಮುದಾಯದ ಯುವಕ ಮಂಡಳಿ ಸದಸ್ಯರ ವಿರುದ್ಧ ದಲಿತ ಸಮುದಾಯದ ಮುಖಂಡರೇ ವಿರೋಧ ವ್ಯಕ್ತಪಡಿಸಿದ್ದಾರೆ.

ಯುವಕ ಮಂಡಳಿಯಿಂದ ಅಂಬೇಡ್ಕರ್‌ ಅವರಿಗೆ ಅವಮಾನ ಮಾಡಲಾಗಿದೆ ಎಂದು ಮೂರ್ತಿ ಪ್ರತಿಷ್ಠಾಪನಾ ಸ್ಥಳದಲ್ಲಿ ದಲಿತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಬಿಗುವಿನ ವಾತಾವರಣ ನಿರ್ಮಾಣವಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಪೊಲೀಸರು ಆಗಮಿಸಿದರು. ಪೊಲೀಸರು ಹಾಗೂ ದಲಿತ ಮುಖಂಡರ ಮಧ್ಯೆಯೂ ವಾಗ್ವಾದ ನಡೆಯಿತು.

ಅಂಬೇಡ್ಕರ್‌ ಅವರನ್ನೇ ಹೋಲುವ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಿದರೆ, ಅಂಬೇಡ್ಕರ್‌ ಅವರನ್ನೇ ವಿಸರ್ಜನೆ ಮಾಡಿದಂತಾಗುತ್ತದೆ. ಹಾಗಾಗಿ, ಮೂರ್ತಿ ತಯಾರಿಸಿದವರು ಹಾಗೂ ಪ್ರತಿಷ್ಠಾಪಿಸಿದವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕು ಎಂದು ಪೊಲೀಸರಿಗೆ ಒತ್ತಾಯಿಸಿದರು.

ಇದನ್ನೂ ಓದಿ | ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ, ಪೂಜೆ ಪ್ರಾರಂಭ

Exit mobile version