ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆ, ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಗುತ್ತಿಗೆ ನೌಕರರಿಗೂ ಮತೃತ್ವ ರಜೆ ಸೌಲಭ್ಯವನ್ನು ಒದಗಿಸುವ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದ್ದು, ಈ ಸಂಬಂಧ ಆದೇಶ ಹೊರಡಿಸಿದೆ.
ಸರ್ಕಾರದ ವಿವಿಧ ಇಲಾಖೆಗಳಲ್ಲಿ, ಅಂಗ ಸಂಸ್ಥೆಗಳಾದ ನಿಗಮ/ಮಂಡಳಿ/ ಸ್ವಾಯತ್ತ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಆಧಾರಿತ ಮಹಿಳಾ ನೌಕರರು ಈ ರಜೆಯ ಪ್ರಯೋಜನ ಪಡೆಯಬಹುದಾಗಿದೆ. ಈ ಆದೇಶವನ್ನು ಕಳೆದ ಏಪ್ರಿಲ್ ೧ ರಿಂದಲೇ ಅನ್ವಯಿಸಲಾಗುತ್ತದೆ
ರಜೆಯು ಪ್ರಾರಂಭದ ದಿನಾಂಕದಿಂದ ಗರಿಷ್ಠ ೧೮೦ ದಿನಗಳವರೆಗೆ ಈ ರಜೆ ಮಂಜೂರು ಮಾಡಲಾಗುತ್ತದೆ. ಗರ್ಭಸ್ರಾವ ಅಥವಾ ಗರ್ಭಪಾತದಿಂದ ಗರ್ಭಧಾರಣೆಯು ಪರ್ಯಾವಸಾನಗೊಂಡಲ್ಲಿ, ಆರು ವಾರಗಳಿಗೆ ಈ ರಜೆಯನ್ನು ಇಳಿಸಬೇಕೆಂದು ಸೂಚಿಸಲಾಗಿದೆ.
ಸರ್ಕಾರದ ಆದೇಶ ಹೀಗಿದೆ;
ಮಾತೃತ್ವ ರಜೆಯ ಮೇಲೆ ತೆರಳುವ ನೌಕರರು ರಜೆ ಪಡೆಯುವುದಕ್ಕಿಂತ ಮೊದಲು ಪಡೆಯುತ್ತಿದ್ದಷ್ಟೇ ವೇತನವನ್ನು ರಜೆಯಲ್ಲಿಯೂ ಪಡೆಯಲಿದ್ದಾರೆ. ಎರಡು ಅಥವಾ ಹೆಚ್ಚು ಮಕ್ಕಳನ್ನು ಹೊಂದಿರುವ ಮಹಿಳಾ ಗುತ್ತಿಗೆ ನೌಕರರಿಗೆ ಈ ಮಾತೃತ್ವ ರಜೆಯನ್ನು ನೀಡಲಾಗುವುದಿಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ಇದನ್ನೂ ಓದಿ| ಸರ್ಕಾರದ ಹೊರಗುತ್ತಿಗೆ ಹುದ್ದೆಗಳಲ್ಲಿಯೂ ಮಹಿಳೆಯರಿಗೆ ಶೇ.33 ಮೀಸಲು ಜಾರಿ