Site icon Vistara News

Medical negligence : ಜ್ವರ, ಮೈಕೈ ನೋವು ಎಂದು ಆಸ್ಪತ್ರೆ ಸೇರಿದ್ದ ಯುವಕ ಸಾವು; ವೈದ್ಯರ ವಿರುದ್ಧ ಕುಟುಂಬಸ್ಥರ ಪ್ರತಿಭಟನೆ

anekal medical issue ವೈದ್ಯರ ನಿರ್ಲಕ್ಷ್ಯಕ್ಕೆ ಯುವಕ ಬಲಿ

ಆನೇಕಲ್: ಜ್ವರ, ಕೈ-ಕಾಲು ನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದ ಯುವಕನೊಬ್ಬ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ (Medical negligence) ತಮ್ಮ ಮಗನ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆಸ್ಪತ್ರೆ ಎದುರು ಪ್ರತಿಭಟನೆ ಮಾಡಿದ್ದಾರೆ. ಅಲ್ಲದೆ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

anekal medical issue ವೈದ್ಯರ ನಿರ್ಲಕ್ಷ್ಯಕ್ಕೆ ಯುವಕ ಬಲಿ Medical negligence

ಮುತ್ತಾನಲ್ಲೂರು ಗ್ರಾಮದ ಕೊಮ್ಮಸಂದ್ರದ ನಿವಾಸಿ ದೀಪಕ್ (೧೭) ಮೃತ ಯುವಕ. ಆನೇಕಲ್ ತಾಲೂಕಿನ ಸರ್ಜಾಪುರ ಸಮೀಪದ ಸೋಂಪುರದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಡಿಪ್ಲೊಮಾ ವಿದ್ಯಾರ್ಥಿಯಾಗಿರುವ ದೀಪಕ್‌ಗೆ ಜ್ವರ ಹಾಗೂ ಮೈಕೈ ನೋವು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಬರುವಾಗ ನಡೆದುಕೊಂಡೇ ಆಸ್ಪತ್ರೆಗೆ ಬಂದಿದ್ದು, ಈಗ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ ಎಂಬುದು ಪೋಷಕರ ಆಕ್ರೋಶಕ್ಕೆ ಕಾರಣವಾಗಿತ್ತು,

anekal medical issue ವೈದ್ಯರ ನಿರ್ಲಕ್ಷ್ಯಕ್ಕೆ ಯುವಕ ಬಲಿ Medical negligence

21 ದಿನಗಳಿಂದ ಸೋಂಪುರದ ಸ್ಪಂದನ ಆಸ್ಪತ್ರೆಯಲ್ಲಿ ಜ್ವರಕ್ಕೆ ಚಿಕಿತ್ಸೆ ನೀಡಲಾಗುತ್ತಿತ್ತು. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದ ವೈದ್ಯರು, ಗುಣಪಡಿಸುವ ಭರವಸೆ ನೀಡಿದ್ದರು. ಆದರೆ, ಬುಧವಾರ ರಾತ್ರಿ ಆಸ್ಪತ್ರೆಯಲ್ಲಿ ದೀಪಕ್ ಮೃತಪಟ್ಟಿದ್ದಾನೆಂದು ವೈದ್ಯರು ತಿಳಿಸಿದ್ದಾರೆ. ಓವರ್ ಡೋಸ್ ನೀಡಿ ನಮ್ಮ ಮಗನನ್ನು ಸಾಯಿಸಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಆಸ್ಪತ್ರೆಯ ಹೊರಗೆ ಸಮಯ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಸ್ಥಳಕ್ಕೆ ಸರ್ಜಾಪುರ ಪೊಲೀಸರ ದೌಡಾಯಿಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಶ್ರಮಿಸಿದ್ದಾರೆ. ಆಸ್ಪತ್ರೆ ಆವರಣದಲ್ಲಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಜಮಾಯಿಸಿ ತಪ್ಪಿತಸ್ಥ ವೈದ್ಯರ ಮೇಲೆ ಕ್ರಮವಹಿಸಲು ಆಗ್ರಹಿಸಿದ್ದಾರೆ.

ಇದನ್ನೂ ಓದಿ | Karnataka Election : ತುಮಕೂರಲ್ಲಿ ಹೊಸ ಟ್ರೆಂಡ್;‌ ರಾಜಕೀಯ ನಾಯಕರ ಫೋಟೊ ಹಿಡಿದು ಶಬರಿಮಲೆಯತ್ತ ಕಾರ್ಯಕರ್ತರು

Exit mobile version