ಬೆಂಗಳೂರು: ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗೆ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿ ಮಾಡಲು ಮುಂದಾಗಿರುವ ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಇತರ ಕೆಲವು ಕಾನೂನು (ತಿದ್ದುಪಡಿ) ವಿಧೇಯಕ – 2024ಕ್ಕೆ (Medical Registration Bill) ರಾಜ್ಯಪಾಲರು ಅಂಕಿತ ಹಾಕಿದ್ದು, ಕಾಯ್ದೆ ಜಾರಿ ಸಂಬಂಧಿಸಿ ಇದೀಗ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಮಳೆಗಾಲದ ಅಧಿವೇಶನದಲ್ಲಿ ಜುಲೈ 25ರಂದು ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಇತರ ಕೆಲವು ಕಾನೂನು (ತಿದ್ದುಪಡಿ) ವಿಧೇಯಕ – 2024ಕ್ಕೆ ವಿಧಾನಪರಿಷತ್‌ನಲ್ಲಿ ಅಂಗೀಕಾರ ಸಿಕ್ಕಿತ್ತು. ಇದೀಗ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.
ಈ ಕಾಯ್ದೆ ಪ್ರಕಾರ ಉದ್ದೇಶಪೂರ್ವಕವಾಗಿ ವೈದರ ಮೇಲೆ ಹಲ್ಲೆ, ನಿಂದನೆ, ಅವಮಾನಿಸುವುದನ್ನು ನಿಷೇಧಿಸಲಾಗಿದೆ. ವೈದ್ಯರ ಮೇಲಿನ ಹಲ್ಲೆಗೆ 3 ವರ್ಷದಿಂದ 7 ವರ್ಷದ ತನಕ ಜೈಲು ಶಿಕ್ಷೆ ಹಾಗೂ 25 ಸಾವಿರದಿಂದ 2 ಲಕ್ಷದವರೆಗೆ ದಂಡ ವಿಧಿಸಲು ಅವಕಾಶವಿದೆ. ಇನ್ನು ನಕಲಿ ವೈದ್ಯರ ಮೇಲಿನ ದಂಡ 10 ಸಾವಿರದಿಂದ 1 ಲಕ್ಷದವರೆಗೆ ಏರಿಕೆ ಮಾಡಲಾಗಿದೆ.
ಇನ್ನು ವೈದ್ಯಕೀಯ ಪರಿಷತ್‌ನ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರನ್ನು ಹೊರತುಪಡಿಸಿ ಇತರೆ ಸದಸ್ಯರು, ನಾಮನಿರ್ದೇಶಿತರ ಅವಧಿಯನ್ನು 5 ವರ್ಷಕ್ಕೆ ನಿಗದಿಪಡಿಸಲಾಗಿದೆ. ಎರಡು ಅವಧಿಗೆ ಅಧ್ಯಕ್ಷ ಅಥವಾ ಉಪಾಧ್ಯಕ್ಷರಾಗಿದ್ದವರು ಮತ್ತೆ ಅದೇ ಸ್ಥಾನಕ್ಕೆ ಚುನಾಯಿತರಾಗಲು ಅವಕಾಶವಿರುವುದಿಲ್ಲ. ಪರಿಷತ್‌ಗೆ 3 ವರ್ಷಗಳ ಅವಧಿಗೆ ಒಬ್ಬ ರಿಜಿಸ್ಟ್ರಾರ್ ಮತ್ತು ಉಪ ರಿಜಿಸ್ಟ್ರಾರ್ ನೇಮಕ ಮಾಡಲಾಗುತ್ತದೆ.
ಈ ಕಾಯ್ದೆ ಪ್ರಕಾರ ವೈದ್ಯರು ವೃತ್ತಿಯಲ್ಲಿ ಕಾರ್ಯ ನಿರ್ವಹಿಸಬೇಕಾದರೆ, ವೈದ್ಯಕೀಯ ಪರಿಷತ್ತಿನಲ್ಲಿ ಕಡ್ಡಾಯವಾಗಿ ನೋಂದಣಿಯಾಗಿರಬೇಕು. ಒಂದು ವೇಳೆ ನೋಂದಣಿಯಾಗದೆ ವೃತ್ತಿ ಅಭ್ಯಾಸ ಮಾಡುತ್ತಿದ್ದರೆ, ಅಂತಹವರ ವಿರುದ್ಧ ಪರಿಷತ್ ಕ್ರಮ ತೆಗೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಪರಿಷತ್ತಿನಲ್ಲಿ ನೋಂದಣಿಯಾಗದವರು ವೈದ್ಯ ವೃತ್ತಿ ನಿರ್ವಹಿಸುವಂತಿಲ್ಲ. ನಕಲಿ ವೈದ್ಯರ ವಿರುದ್ಧ ಪರಿಷತ್ ಸ್ವಯಂಪ್ರೇರಣೆಯಿಂದ ದೂರು ಸಲ್ಲಿಸಬಹುದಾಗಿದೆ.
ವೈದ್ಯಕೀಯ ಪರಿಷತ್ತಿಗೆ ರಿಜಿಸ್ಟರ್ ಹಾಗೂ ಉಪ ರಿಜಿಸ್ಟರ್‌ಗಳನ್ನು ನೇಮಕ ಮಾಡುವ ವ್ಯವಸ್ಥೆಯಲ್ಲೂ ಬದಲಾವಣೆ ತರಲಾಗಿದೆ. ಪರಿಷತ್ತಿಗೆ ಸಭೆ ನಡೆಸುವ ವೇಳೆ, ಸ್ಥಳ ಹಾಗೂ ಕಾರ್ಯವಿಧಾನಗಳ ಬಗ್ಗೆಯೂ ವಿವರಿಸಲಾಗಿದೆ. ಅಧ್ಯಕ್ಷರ ಅನುಪಸ್ಥಿತಿಯಲ್ಲಿ ಉಪಾಧ್ಯಕ್ಷರು, ಒಂದು ವೇಳೆ ಇಬ್ಬರು ಲಭ್ಯವಿಲ್ಲದ ಸಂದರ್ಭದಲ್ಲಿ ಸದಸ್ಯರು ಸಭೆಯ ಅಧ್ಯಕ್ಷತೆ ವಹಿಸಬಹುದು ಎಂದು ತಿಳಿಸಲಾಗಿದೆ. ಪರಿಷತ್ತಿನ ರಿಜಿಸ್ಟ್ರಾರ್ ಅವರು ವೈದ್ಯಕೀಯ ವೃತ್ತಿಗರ ಪಟ್ಟಿಯನ್ನು ಪ್ರತಿದಿನ ಅಧಿಕೃತ ಜಾಲತಾಣದಲ್ಲಿ ನಿರ್ವಹಿಸಬೇಕು ಮತ್ತು ರಾಷ್ಟ್ರೀಯ ಆಯೋಗಕ್ಕೆ ತಿಳಿಸಬೇಕು ಎಂದು ಸೂಚಿಸಲಾಗಿದೆ.
ಇನ್ನು ಮುಂದೆ ವೈದ್ಯಕೀಯ ಸೇವಾ ಸಿಬ್ಬಂದಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ, ಆಡಿಯೊ-ವಿಡಿಯೊಗಳಲ್ಲಿ, ಆಸ್ಪತ್ರೆಗಳಲ್ಲಾಗಲಿ ಫೋಟೊ, ವಿಡಿಯೋ ತೆಗೆಯುವ ಮೂಲಕ ಅಗೌರವಿಸುವ, ದೌರ್ಜನ್ಯ ಎಸಗುವ ಕೃತ್ಯಗಳನ್ನು ನಡೆಸಿದರೆ ಅಂತಹ ಕೃತ್ಯಗಳೂ ದಂಡನಾರ್ಹವಾಗಲಿವೆ.
ಇದನ್ನೂ ಓದಿ | Hoax Bomb Threat: ವೈಟ್ ಫೀಲ್ಡ್‌ನ ಮಾಲ್ ಸೇರಿ ಬೆಂಗಳೂರಿನ ಹಲವು ಮಾಲ್‌ಗಳಿಗೆ ಬಾಂಬ್ ಬೆದರಿಕೆ!
ಆ.22ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯಪಾರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಲ್ಲಿ ತಲ್ಲಣ ಶುರುವಾಗಿದೆ. ಹೀಗಾಗಿ ಮುಂದಿನ ಕಾನೂನು ಹೋರಾಟದ ಬಗ್ಗೆ ಚರ್ಚೆ ನಡೆಸಲು ಸಿಎಂ ಸಿದ್ದರಾಮಯ್ಯ ಅವರು ಆ.28ರಂದು ಸಂಜೆ 4 ಗಂಟೆಗೆ ವಿಧಾನಸೌಧದ 3ನೇ ಮಹಡಿಯಲ್ಲಿರುವ ಕೊಠಡಿ ಸಂ. 334, ಸಮ್ಮೇಳನ ಸಭಾಂಗಣದಲ್ಲಿ ‘ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ’ (CLP Meeting)ಯನ್ನು ಕರೆದಿದ್ದಾರೆ.
ಇದನ್ನೂ ಓದಿ | ಇದನ್ನೂ ಓದಿ: CM Siddaramaiah: ಆ.23ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿಗೆ; ಕಾನೂನು ಹೋರಾಟಕ್ಕೆ ಹೈ ಕಮಾಂಡ್ ಬೆಂಬಲ ಕೋರಲು ಭೇಟಿ
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ಹಾಗೂ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಸಭೆಯ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಈ ಸಭೆಯಲ್ಲಿ ಕೆ.ಪಿ.ಸಿ.ಸಿ. ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು, ವಿಧಾನ ಪರಿಷತ್ತಿನ ಸಭಾ ನಾಯಕರಾದ ಎನ್.ಎಸ್. ಭೋಸರಾಜು ರವರು ಹಾಗೂ ಪಕ್ಷದ ಎಲ್ಲಾ ಕಾರ್ಯಾಧ್ಯಕ್ಷರುಗಳು ಉಪಸ್ಥಿತರಿರುತ್ತಾರೆ. ಆದ್ದರಿಂದ ಎಲ್ಲಾ ಸದಸ್ಯರು ತಪ್ಪದೇ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಬೇಕೆಂದು ಕಾರ್ಯದರ್ಶಿ ಅಲ್ಲಮಪ್ರಭು ಹೇಳಿದ್ದಾರೆ.