ಸ್ಮರಣೆ | ಕನ್ನಡದ ಕಣ್ವ ಬಿ.ಎಂ ಶ್ರೀಕಂಠಯ್ಯ - Vistara News

ಕರ್ನಾಟಕ

ಸ್ಮರಣೆ | ಕನ್ನಡದ ಕಣ್ವ ಬಿ.ಎಂ ಶ್ರೀಕಂಠಯ್ಯ

ಬಿ.ಎಂ.ಶ್ರೀಕಂಠಯ್ಯನವರು ಕನ್ನಡ ಭಾಷೆ ಮತ್ತು ಸಾಹಿತ್ಯದ ಬೆಳವಣಿಗೆಗಾಗಿ ಅವಿಶ್ರಾಂತವಾಗಿ ದುಡಿದರು. ಮಾಸ್ತಿ, ಕುವೆಂಪು, ತೀನಂಶ್ರೀ, ರಾಜರತ್ನಂ, ಡಿ.ಎಲ್.ಎನ್ ಮುಂತಾದವ‌ರನ್ನು ರೂಪಿಸಿದರು.

VISTARANEWS.COM


on

b m sri
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
dc ramachandra

| ಡಾ. ಡಿ.ಸಿ. ರಾಮಚಂದ್ರ

‘ಕನ್ನಡ ನಾಡಿಗೆ ಕನ್ನಡವೇ ಗತಿ, ಅನ್ಯಥಾ ಶರಣಂ ನಾಸ್ತಿ’ ಎಂದು ಗುಣಗಾನ ಮಾಡಿ ಕನ್ನಡ ಭಾಷೆಯ ಘನತೆ ತೋರಿಸಿಕೊಟ್ಟ ಕವಿಕುಲೋತ್ತಮ ಬಿಎಂಶ್ರೀ. ಬೆಳ್ಳೂರು ಮೈಲಾರಯ್ಯ ಶ್ರೀಕಂಠಯ್ಯನವರು 20ನೇ ಶತಮಾನದ ಆದಿಭಾಗದಲ್ಲಿ ಕನ್ನಡ ಸಾಹಿತ್ಯಕ್ಕೆ ಹೊಸ ಆಯಾಮವನ್ನು ನೀಡಿದ ಕವಿ ಮತ್ತು ಸಾಹಿತಿ.

ಬಿ.ಎಂ.ಶ್ರೀಯವರು ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಸಂಪಿಗೆ ಎಂಬ ಗ್ರಾಮದಲ್ಲಿ ಮೈಲಾರಯ್ಯ ಮತ್ತು ಭಾಗೀರಥಮ್ಮನವರ ಸುಪುತ್ರರಾಗಿ 1884ನೇ ಜನವರಿ 03ರಂದು ಜನಿಸಿದರು. ಇದು ತಾಯಿಯ ತವರೂರು. ತಂದೆಯ ಊರು ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಬೆಳ್ಳೂರು.

ಸುಮಾರು ಎಪ್ಪತ್ತು ವರ್ಷಗಳ ಹಿಂದೆ ಕನ್ನಡಿಗರು ಕನ್ನಡ ಮಾತನಾಡಲು ಸಂಕೋಚಪಡುತ್ತಿದ್ದ ಕಾಲ. ಆಗ ಎಲ್ಲಾ ಕಾರ್ಯವು ಇಂಗ್ಲೀಷ್‍ನಲ್ಲೇ ನಡೆಯುತ್ತಿತ್ತು. ಕನ್ನಡಕ್ಕೆ ಯಾವುದೇ ಉನ್ನತ ಸ್ಥಾನ ಮಾನಗಳಿರಲಿಲ್ಲ. ಅಂತಹ ಸಮಯದಲ್ಲಿ ಕನ್ನಡಕ್ಕೆ ಅದಕ್ಕಿರುವ ಒಂದು ನ್ಯಾಯವಾದ ಸ್ಥಾನವನ್ನು ದೊರಕಿಸಿಕೊಡಲೇಬೇಕು ಎಂದು ಆಶಿಸಿ, ತಮ್ಮ ಜೀವನವನ್ನು ಕನ್ನಡಕ್ಕಾಗಿ ಮುಡಿಪಾಗಿಟ್ಟವರು ಬಿ.ಎಂ.ಶ್ರೀಕಂಠಯ್ಯನವರು.

ಶ್ರೀಕಂಠಯ್ಯನವರು ತಮ್ಮ ಬಾಲ್ಯದ ಶಿಕ್ಷಣವನ್ನು ಬೆಳ್ಳೂರಿನಲ್ಲಿ ಕಲಿತರು. ನಂತರದಲ್ಲಿ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಬಿ.ಎ ಪದವಿಯನ್ನು, ಮದರಾಸು ವಿಶ್ವವಿದ್ಯಾಲಯದಿಂದ ಬಿ.ಎಲ್. ಪದವಿಯನ್ನು ಪಡೆದು, 1909ರಲ್ಲಿ ಎಂ.ಎ. ಪದವಿ ಪಡೆದರು. ಅದೇ ವರ್ಷ ಮೈಸೂರು ಕಾಲೇಜಿನಲ್ಲಿ ಇಂಗ್ಲೀಷ್ ಅಧ್ಯಾಪಕರಾಗಿ ಸೇರಿಕೊಂಡರು. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ 25 ವರ್ಷ ಸೇವೆ ಸಲ್ಲಿಸಿ, 1930ರಲ್ಲಿ ಬೆಂಗಳೂರಿನ ಸೆಂಟ್ರಲ್ ಕಾಲೇಜಿಗೆ ವರ್ಗವಾಗಿ 1942ರವರೆಗೆ ಕಾಲೇಜಿನ ಸರ್ವತೋಮುಖ ಬೆಳವಣಿಗೆಗಾಗಿ ಅವಿರತವಾಗಿ ಶ್ರಮಿಸಿದರು. 1944ರಲ್ಲಿ ಧಾರವಾಡದ ಕೆ.ಇ.ಬೋರ್ಡ್‍ನ ಮುಖ್ಯಸ್ಥರಾಗಿ ನೇಮಕಗೊಂಡು ಅವರು ಆರ್ಟ್ಸ್ ಕಾಲೇಜಿನ ಪ್ರಾಂಶುಪಾಲರಾಗಿ ಕೊನೆಯವರೆಗೆ ಅಲ್ಲಿಯೇ ಕೆಲಸ ಮಾಡಿದರು. ‌

ಬಿ.ಎಂ.ಶ್ರೀಕಂಠಯ್ಯನವರು ಕನ್ನಡ ಭಾಷೆ ಮತ್ತು ಸಾಹಿತ್ಯದ ಬೆಳವಣಿಗೆಗಾಗಿ ಅವಿಶ್ರಾಂತವಾಗಿ ದುಡಿದರು. ಹಾಗೂ ಅವರ ಪ್ರೀತಿಯ ವಿದ್ಯಾರ್ಥಿಗಳಾದ ಮಾಸ್ತಿ, ಕುವೆಂಪು, ಎಸ್.ವಿ.ರಂಗಣ್ಣ, ತೀ.ನಂ.ಶ್ರೀಕಂಠಯ್ಯ, ಜಿ.ಪಿ.ರಾಜರತ್ನಂ, ಡಿ.ಎಲ್.ನರಸಿಂಹಾಚಾರ್ ಮುಂತಾದವರಿಗೆ ಕನ್ನಡದಲ್ಲಿ ಸಾಹಿತ್ಯ ರಚನೆ ಮಾಡಲು ಪ್ರೋತ್ಸಾಹಿಸಿದರು.

‘ಕನ್ನಡ ನಾಡಿಗೆ ಕನ್ನಡವೇ ಗತಿ, ಅನ್ಯಥಾ ಶರಣಂ ನಾಸ್ತಿ’, ಇಂಗ್ಲಿಷಲ್ಲ, ಹಿಂದಿಯಲ್ಲ. ಈ ಕನ್ನಡ ಸಾವಿರಾರು ವರ್ಷಗಳಿಂದಲೂ ಬೆಳೆದುಕೊಂಡು ಬಂದಿರುವ ಭಾಷೆ. ಕನ್ನಡ ಭಾಷೆಗೆ ಯಾವ ರೀತಿಯಲ್ಲೂ ಅಪಾಯ ತಟ್ಟದ ಹಾಗೆ, ಕನ್ನಡ ನಾಡಿನಲ್ಲಿ ಅದಕ್ಕೆ ಪ್ರಧಾನ ಸ್ಥಾನವನ್ನು ಕೊಟ್ಟು, ಭಗವಂತನು ನಮಗೆ ಕೊಟ್ಟಿರುವ ಧನ ಬಲವನ್ನು ಮತ್ತು ಬುದ್ಧಿ ಬಲವನ್ನು ಅದಕ್ಕಾಗಿ ವಿನಿಯೋಗಿಸುವುದು ಕನ್ನಡಿಗರ ಕರ್ತವ್ಯ ಎಂದು 1928ರ ಕಲ್ಬುರ್ಗಿಯಲ್ಲಿ ನಡೆದ 14ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಾಡಿದ ಮಾತುಗಳನ್ನು ಕನ್ನಡಿಗರಾದ ನಾವೆಲ್ಲರೂ ಅರ್ಥ ಮಾಡಿಕೊಂಡು ಮುನ್ನಡೆಯಬೇಕು.

ಇದನ್ನೂ ಓದಿ | ಕುವೆಂಪು ಜಯಂತಿ | ನಾಡಿನ ಕವಿಯಾದ ಕಾಡಿನ ಕವಿ

ಬಿ.ಎಂ.ಶ್ರೀಯವರ ‘ಹೊಂಗನಸು’, ‘ಇಂಗ್ಲೀಷ್ ಗೀತೆಗಳು’ ಎಂಬ ಕವನ ಸಂಕಲನ 1921ರಲ್ಲಿ ಪ್ರಕಟಗೊಂಡಿತು. ನ್ಯೂಮನ್ ಕವಿ ಬರೆದ Lead Kindly Light ಎಂಬ ಕವಿತೆಯನ್ನು ಕನ್ನಡದಲ್ಲಿ ಅನುವಾದ ಮಾಡಿದ ‘ಕರುಣಾಳು ಬಾ ಬೆಳಕೆ’ ತುಂಬಾ ಜನಪ್ರಸಿದ್ಧವಾಯಿತು.

ಕರುಣಾಳು ಬಾ ಬೆಳಕೆ
ಮುಸುಕಿದೀ ಮಬ್ಬಿನಲಿ
ಕೈ ಹಿಡಿದು ನಡೆಸೆನ್ನನು
ಇರುಳು ಕತ್ತಲೆಯ ಗವಿ
ಮನೆ ದೂರ ಕನಿಕರಿಸಿ
ಕೈ ಹಿಡಿದು ನಡೆಸೆನ್ನನು.

ಈ ಕವಿತೆಯನ್ನು ಕೇಳಿದರೆ ದಾಸರ ಪದಗಳು ಕಣ್ಮುಂದೆ ಬಂದು ನುಡಿಸಿದಂತಾಗುತ್ತದೆ.

Lord Ullin’s daughter ಕವಿತೆಯು ಕನ್ನಡದಲ್ಲಿ

ಪಡುವ ದಿಬ್ಬದ ಗೌಡನೊಬ್ಬನು
ಬಿಡದೆ ತೊರೆಯನ ಕೂಗಿಕೊಂಡನು
ತಡೆಯದೀಗಲೆ ಗಡುವ ಹಾಯಿಸು
ಕೊಡುವೆ ಕೇಳಿದ ಹೊನ್ನನು !

ಇಂಥ ಸಾಲುಗಳಿಂದ ಕೂಡಿರುವ ಕವಿತೆಯಲ್ಲಿ ಗ್ರಾಮೀಣ ಸೊಗಡಿದೆ.

ನಾಟಕಕಾರ

ಬಿ.ಎಂ.ಶ್ರೀ.ಯವರು ಕನ್ನಡದಲ್ಲಿ ಬರೆದ ಗದಾಯುದ್ಧ, ಅಶ್ವತ್ಥಾಮ, ಪಾರಸಿಕರು ನಾಟಕಗಳು ಬಹಳ ಪ್ರಸಿದ್ಧವಾದವು. ಬಿ.ಎಂ.ಶ್ರೀಯವರು ಕನ್ನಡ ಭಾಷೆಯ ಉಳಿವಿಗಾಗಿ ಸಲ್ಲಿಸಿದ ಸೇವೆಗೆ ಮೈಸೂರಿನ ಮಹಾರಾಜರು 1938ರಲ್ಲಿ ರಾಜಸೇವಾಸಕ್ತ ಎಂಬ ಬಿರುದನ್ನು ನೀಡಿ ಗೌರವಿಸಿದರು. 1928ರಲ್ಲಿ ಗುಲ್ಬರ್ಗಾದಲ್ಲಿ ನಡೆದ 14ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷರಾಗಿ ಅದರ ಏಳಿಗೆಗಾಗಿ ಶ್ರಮಿಸಿದರು.

ಬಿ.ಎಂ.ಶ್ರೀ. ತಮ್ಮ ಜೀವಿತದ ಕಾಲವನ್ನು ಕನ್ನಡ ಸಾಹಿತ್ಯಕ್ಕಾಗಿ ಮೀಸಲಿಟ್ಟ ಕನ್ನಡದ ಕಣ್ವ. ಇವರು 1946ರ ಜನವರಿ 05ರಂದು ಧಾರವಾಡದಲ್ಲಿ ಕೆಲಸ ಮಾಡುತ್ತಿರುವ ಸಮಯದಲ್ಲೇ ಇಹಲೋಕ ತ್ಯಜಿಸಿದರು.
ಬಿ.ಎಂ.ಶ್ರೀ ಕನ್ನಡ ಸಾಹಿತ್ಯದ ದಿಗ್ಗಜರಾಗಿ ಸಾರಸ್ವತಲೋಕ ಎಂದೂ ಮರೆಯದಂತಹ ವಿಪುಲವಾದ ಸಾಹಿತ್ಯ ಕೃಷಿಯನ್ನು ನಡೆಸಿದವರು.

ಇದನ್ನೂ ಓದಿ | ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ನಟ ಡಾ.ರಮೇಶ್ ಅರವಿಂದ್ ಆಯ್ಕೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶಿಕ್ಷಣ

CET 2024 exam: ದಾಖಲೆ ಸಂಖ್ಯೆಯಲ್ಲಿ ಸಿಇಟಿ ಬರೆದ ವಿದ್ಯಾರ್ಥಿಗಳು; ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ

CET 2024 Exam: ಎಂಜಿನಿಯರಿಂಗ್‌, ಕೃಷಿ ವಿಜ್ಞಾನ, ವೆಟರಿನರಿ ಸೇರಿದಂತೆ ಹಲವು ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ಇಂದಿನಿಂದ ಸಿಇಟಿ ಪರೀಕ್ಷೆ ಆರಂಭವಾಗಿದೆ. ಇಂದು ಜೀವಶಾಸ್ತ್ರ, ಗಣಿತ ವಿಷಯಕ್ಕೆ ಪರೀಕ್ಷೆ ನಡೆದಿದ್ದು, ಈ ವರ್ಷ 3,49,637 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ಇಷ್ಟು ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದಾರೆ. ಆದರೆ, ಔಟ್‌ ಆಫ್‌ ಸಿಲಬಸ್‌ ಕೇಳಲಾಗಿದೆ. ಹೀಗಾಗಿ ಮತ್ತೆ ಪರೀಕ್ಷೆ ನಡೆಸಬೇಕು ಎಂದು ವಿದ್ಯಾರ್ಥಿಗಳು ಹಾಗೂ ಪೋಷಕರು ಆಗ್ರಹಿಸಿದ್ದಾರೆ.

VISTARANEWS.COM


on

Record number of students wrote CET 2024 exam Outrage over out of syllabus question
Koo

ಬೆಂಗಳೂರು: ರಾಜ್ಯಾದ್ಯಂತ ಸಿಇಟಿ-2024 ಪರೀಕ್ಷೆ (CET 2024 exam) ಆರಂಭವಾಗಿದೆ. ಈ ವರ್ಷ ದಾಖಲೆಯ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಶುಕ್ರವಾರ (ಏಪ್ರಿಲ್‌ 19) ಸಿಇಟಿ ಎರಡನೇ ದಿನದ ಪರೀಕ್ಷೆ ನಡೆಯಲಿದ್ದು, ಕೆಇಎ ಬೋರ್ಡ್‌ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಂಡಿದೆ‌. ಆದರೂ ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಕೇಳಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಗುರುವಾರ (ಏಪ್ರಿಲ್‌ 18) ಗಣಿತ ಹಾಗೂ ಜೀವಶಾಸ್ತ್ರ ವಿಷಯಗಳ ಪರೀಕ್ಷೆ ನಡೆದಿದೆ. ಗಣಿತ ಪ್ರಶ್ನೆ ಪತ್ರಿಕೆಯಲ್ಲಿ 18 ಪ್ರಶ್ನೆಗಳನ್ನು ಔಟ್ ಆಫ್ ಸಿಲಬಸ್ ಕೇಳಲಾಗಿದೆ ಎಂದು ವಿದ್ಯಾರ್ಥಿಗಳು ಆರೋಪ ಮಾಡಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ವಿರುದ್ಧ ವಿದ್ಯಾರ್ಥಿಗಳು ಮತ್ತು ಪೋಷಕರು ತೀವ್ರ ಅಸಮಾಧಾನವನ್ನು ಹೊರ ಹಾಕಿದ್ದಾರೆ.

ಡಿಲಿಟ್ ಮಾಡಲಾದ ಸಿಲಬಸ್‌ನಲ್ಲಿದ್ದ ಅಂಶಗಳನ್ನು ಕೇಳಲಾಗಿದೆ. ಗಣಿತ ಪತ್ರಿಕೆಯ 60 ಪ್ರಶ್ನೆಗಳಲ್ಲಿ 18 ಔಟ್ ಆಫ್ ಸಿಲಬಸ್ ಇದ್ದು, ಇನ್ನು 12 ಅತಿ ಕಠಿಣ ಪ್ರಶ್ನೆಗಳಾಗಿವೆ. ಇನ್ನು ಜೀವಶಾಸ್ತ್ರ ಪ್ರಶ್ನೆಪತ್ರಿಕೆಯಲ್ಲೂ 12 ಪ್ರಶ್ನೆಗಳು ಔಟ್ ಆಫ್ ಸಿಲಬಸ್ ಎಂದು ಆರೋಪ ಮಾಡಿದ್ದಾರೆ. ಹೀಗಾಗಿ ಪರೀಕ್ಷೆ ಮತ್ತೆ ನಡೆಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಒತ್ತಾಯ ಮಾಡಲಾಗಿದೆ.

ಇನ್ನು ಕಳೆದ ವರ್ಷಕ್ಕಿಂತ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಬಾರಿ ಸಿಇಟಿ ಪರೀಕ್ಷೆಯನ್ನು ಬರೆದಿದ್ದಾರೆ. ಈ ಹಿಂದೆ ಯಾವತ್ತೂ ಇಷ್ಟು ಪ್ರಮಾಣದಲ್ಲಿ ವಿದ್ಯಾರ್ಥಿಗಳು ನೋಂದಣಿ ಮಾಡಿರಲಿಲ್ಲ. ರಾಜ್ಯದಲ್ಲಿ 737 ಪರೀಕ್ಷಾ ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನಲ್ಲಿ 167 ಕೇಂದ್ರಗಳಲ್ಲಿ ಮೊದಲ ದಿನದ ಪರೀಕ್ಷೆಯನ್ನು ನಡೆಸಲಾಗಿದೆ. ಬೆಳಗ್ಗೆ 10.30ರಿಂದ 11.50ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30ರಿಂದ 3.50 ರವರೆಗೆ ಗಣಿತ ಪರೀಕ್ಷೆಯನ್ನು ನಡೆಸಲಾಗಿದೆ.

ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಭೇಟಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಅವರು ಮಲ್ಲೇಶ್ವರಂ ಪಿಯು ಕಾಲೇಜಿನಲ್ಲಿ ಸಿಇಟಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶುಕ್ರವಾರ ನಡೆಯುವ ಪರೀಕ್ಷೆಗೂ ಬಿಗಿ ಭದ್ರತೆ ಇರಲಿದೆ ಎಂದು ಹೇಳಿದ್ದಾರೆ.

ಸಿಇಟಿಗೆ ಹೆಚ್ಚು ಅಂಕಗಳ ಪಟ್ಟಿ ಪರಿಗಣನೆ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಗುಡ್‌ನ್ಯೂಸ್‌ ನೀಡಿದೆ. ದ್ವಿತೀಯ ಪಿಯುಸಿಯ ಮೂರು ಪರೀಕ್ಷೆಗಳನ್ನು ಬರೆಯುವ ವಿದ್ಯಾರ್ಥಿಗಳು ಯಾವುದರಲ್ಲಿ ಹೆಚ್ಚು ಅಂಕ ಪಡೆದಿರುತ್ತಾರೋ ಅದನ್ನೇ ಸಿಇಟಿ (CET 2024)ಗೆ ಪರಿಗಣಿಸಲು ಕೆಇಎ ಸಮ್ಮತಿ ಸೂಚಿಸಿದೆ. ಇದರಿಂದ ನೂರಾರು ವಿದ್ಯಾರ್ಥಿಗಳು ನಿರಾಳವಾಗಿದ್ದಾರೆ. ಎಂಜಿನಿಯರ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕೆಇಎ ಪ್ರತಿವರ್ಷ ಸಿಇಟಿ ನಡೆಸುತ್ತದೆ.

ಸಿಇಟಿ ಜತೆಗೆ ದ್ವಿತೀಯ ಪಿಯುಸಿಯಲ್ಲಿ ಗಳಿಸಿದ ಅಂಕವನ್ನೂ ರ‍್ಯಾಂಕಿಂಗ್​ಗೆ ಪರಿಗಣಿಸಲಾಗುತ್ತದೆ. ಇದುವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲಾದರೆ ಪೂರಕ ಪರೀಕ್ಷೆ ಬರೆದು ತೇರ್ಗಡೆಯಾಗಬೇಕಿತ್ತು. ಮುಖ್ಯ ಪರೀಕ್ಷೆ ಮತ್ತು ಪೂರಕ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಕ್ರೂಡೀಕರಿಸಿ ಅಂಕಪಟ್ಟಿ ನೀಡಲಾಗುತ್ತಿತ್ತು.

ನಿಯಮದಲ್ಲಿ ಬದಲಾವಣೆ

ಈ ಬಾರಿ ಈ ನಿಯಮದಲ್ಲಿ ಕೊಂಚ ಬದಲಾವಣೆ ತರಲಾಗಿದೆ. ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಅನುಕೂಲದ ದೃಷ್ಟಿಯಿಂದ ಮೂರು ಪರೀಕ್ಷೆಗಳನ್ನು ಪರಿಚಯಿಸಲಾಗಿದೆ. ಒಂದು ವೇಳೆ ಕಡಿಮೆ ಅಂಕ ಬಂದಿದ್ದರೆ ಅದನ್ನು ಉತ್ತಮಪಡಿಸಿಕೊಳ್ಳಲು ವಿದ್ಯಾರ್ಥಿಗಳು ಇನ್ನು ಉಳಿದ ಎರಡು ಪರೀಕ್ಷೆಗಳನ್ನೂ ಬರೆಯಬಹುದು. ಹೆಚ್ಚು ಅಂಕ ಬಂದಿರುವುದನ್ನೇ ಪರಿಗಣಿಸಿ ಅಂತಿಮ ಅಂಕಪಟ್ಟಿ ನೀಡಲಾಗುತ್ತದೆ.

ಇದೀಗ ಆ ಹೆಚ್ಚುವರಿ ಅಂಕವನ್ನೇ ಸಿಇಟಿ ರ‍್ಯಾಂಕಿಂಗ್‌ಗೂ ಪರಿಣಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಈ ಬಗ್ಗೆ ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್‌.ರಮ್ಯಾ ಮಾತನಾಡಿ, ʼʼಹೆಚ್ಚು ಅಂಕ ಬಂದಿರುವ ಅಂತಿಮ ಅಂಕ ಪಟ್ಟಿಯನ್ನು ಸಿಇಟಿ ಅಂಕಗಳ ಜತೆ ರ‍್ಯಾಂಕಿಂಗ್‌ ಪಟ್ಟಿ ಸಿದ್ಧಪಡಿಸಲು ಪರೀಕ್ಷಾ ಪ್ರಾಧಿಕಾರ ಪರಿಗಣಿಸಲಿದೆʼʼ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Murder Case: ಬೆಂಗಳೂರಲ್ಲಿ ಜೋಡಿ ಕೊಲೆ: ಅನೈತಿಕ ಸಂಬಂಧ ಸಾಕು ಎಂದವಳ ಕೊಂದ; ತಲೆ ಒಡೆದು ಸಾಯಿಸಿದ ಹುಡುಗಿ ಅಮ್ಮ!

ಪಿಯುಸಿ ಪರೀಕ್ಷೆ 2

ದ್ವಿತೀಯ ಪಿಯುಸಿ ಪರೀಕ್ಷೆ 2 ಬರೆಯಲು ಇಚ್ಛಿಸುವವರು ಏಪ್ರಿಲ್ 10ರಿಂದ 16 ರವರೆಗೆ ಅರ್ಜಿ ಸಲ್ಲಿಸಬಹುದು. ಕಾಲೇಜಿನಲ್ಲಿ ಪ್ರಾಂಶುಪಾಲರ ಸಹಾಯದೊಂದಿಗೆ ಅಥವಾ ವೆಬ್‌ಸೈಟ್‌ನಲ್ಲಿ ನೇರವಾಗಿ ಪರೀಕ್ಷೆ 2ಕ್ಕೆ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಇದು ದಂಡ ರಹಿತ ಅವಕಾಶವಾಗಿದೆ. ಇನ್ನು ಇದರ ನಂತರ ದಂಡ ಸಹಿತವಾಗಿ ಏಪ್ರಿಲ್‌ 17 ಮತ್ತು 18ಕ್ಕೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ದ್ವಿತೀಯ ಪಿಯು ಪರೀಕ್ಷೆ 2 ಬರೆಯಲು ಇಚ್ಛಿಸುವವರು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದರೆ ಅದರ ಫಲಿತಾಂಶಕ್ಕಾಗಿ ಕಾಯಬೇಕಿಲ್ಲ. ಕೂಡಲೇ ಅರ್ಜಿ ಸಲ್ಲಿಸಲು ಅವಕಾಶ ಇದೆ. ಪರೀಕ್ಷೆ 2 ಅನ್ನು ಬರೆಯುವವರಿಗೆ ಒಂದು ವಿಷಯಕ್ಕೆ 140 ರೂಪಾಯಿ ಶುಲ್ಕವನ್ನು ನಿಗದಿ ಮಾಡಿದ್ದರೆ, ಎರಡು ವಿಷಯಕ್ಕೆ 270 ರೂ., ಮೂರು ಅಥವಾ ಹೆಚ್ಚಿನ ವಿಷಯಕ್ಕೆ 400 ರೂಪಾಯಿ ಶುಲ್ಕವನ್ನು ವಿಧಿಸಲಾಗಿದೆ.

ನಾಳೆ ಯಾವ ಪರೀಕ್ಷೆ?

ಸಿಇಟಿ 2024ರ ಪರೀಕ್ಷೆಗಳು ಏಪ್ರಿಲ್‌ 18ರಿಂದ ಆರಂಭವಾಗಿದ್ದು, ಏಪ್ರಿಲ್ 19ರವರೆಗೆ ನಡೆಯಲಿದೆ. ಏಪ್ರಿಲ್ 19ರ ಬೆಳಿಗ್ಗೆ 10.30ರಿಂದ ಭೌತಶಾಸ್ತ್ರ , ಮಧ್ಯಾಹ್ನ ರಸಾಯನ ಶಾಸ್ತ್ರ, ಏಪ್ರಿಲ್ 20 – ಹೊರನಾಡು ಮತ್ತು ಗಡಿನಾಡ ಕನ್ನಡಿಗರಿಗೆ ಭಾಷಾ ಪರೀಕ್ಷೆಯನ್ನು ಆಯೋಜಿಸಲಾಗಿದೆ.

Continue Reading

ಬೆಂಗಳೂರು ಗ್ರಾಮಾಂತರ

Lok Sabha Election 2024: ಬಿಜೆಪಿ ಕೈಗೊಂಬೆ ಐಟಿ ಅಧಿಕಾರಿಗಳಿಂದ ಕಾರ್ಯಕರ್ತರ ಮೇಲೆ ದೌರ್ಜನ್ಯ: ಡಿ.ಕೆ. ಸುರೇಶ್

Lok Sabha Election 2024: ಬಿಜೆಪಿ ಹಾಗೂ ಮಾಜಿ ಪ್ರಧಾನಿಗಳ ಕೈಗೊಂಬೆಯಾಗಿರುವ ಐಟಿ ಅಧಿಕಾರಿಗಳು ನಮ್ಮ ಕಾರ್ಯಕರ್ತರ ಮನೆಯಲ್ಲಿ ಯುವಕರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಸಂಸದ ಡಿ.ಕೆ. ಸುರೇಶ್ ಆರೋಪಿಸಿದ್ದಾರೆ.

VISTARANEWS.COM


on

MP D K Suresh latest statement In Anekal
Koo

ಆನೇಕಲ್: ಬಿಜೆಪಿ (BJP) ಹಾಗೂ ಮಾಜಿ ಪ್ರಧಾನಿಗಳ ಕೈಗೊಂಬೆಯಾಗಿರುವ ಐಟಿ ಅಧಿಕಾರಿಗಳು ನಮ್ಮ ಕಾರ್ಯಕರ್ತರ ಮನೆಯಲ್ಲಿ ಯುವಕರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಸಂಸದ ಡಿ.ಕೆ. ಸುರೇಶ್ (Lok Sabha Election 2024) ಆರೋಪಿಸಿದ್ದಾರೆ.

ಆನೇಕಲ್‌ನಲ್ಲಿ ಗುರುವಾರ ಚುನಾವಣಾ ಪ್ರಚಾರದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸೋಲಿನ ಭೀತಿಯಿಂದ ಐಟಿ, ಇಡಿ ಮೂಲಕ ನಮ್ಮ ಕಾರ್ಯಕರ್ತರನ್ನು ಬೆದರಿಸುವ ಪ್ರಯತ್ನ ನಡೆಯುತ್ತಿದೆ. ನಿನ್ನೆ ಕೆಲವು ಅಧಿಕಾರಿಗಳು ಬಂದು ನಮ್ಮ ಕಾರ್ಯಕರ್ತರನ್ನು, ಅವರ ಕುಟುಂಬದ ಹೆಣ್ಣುಮಕ್ಕಳನ್ನು ಬೆದರಿಸಿದ್ದಾರೆ ಎಂದು ಆರೋಪಿಸಿದ ಅವರು, ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ಬರೆಯುತ್ತಿದ್ದು, ಐಟಿ ಇಲಾಖೆ ಮುಖ್ಯಸ್ಥರ ಗಮನಕ್ಕೆ ತರುತ್ತೇನೆ. ಅವರ ಕೆಲಸ ಕೇವಲ ಪರಿಶೀಲನೆ ಮಾಡುವುದು ಮಾತ್ರ. ಅದನ್ನು ಬಿಟ್ಟು ಬಿಜೆಪಿ ಪರ ಪ್ರಚಾರ ಮಾಡುವುದು ಸರಿಯಲ್ಲ. ಇದು ಅಕ್ಷಮ್ಯ ಅಪರಾಧ. ಹೀಗೆ ಮುಂದುವರಿದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಏ. 24ರಂದು ಭಾಷಾ ಉತ್ಸವ

ನನ್ನ ಚಾಲಕರ ಮನೆಯಲ್ಲಿ ಅವರ ಕುಟುಂಬದವರನ್ನು ಎಳೆದಾಡಿದ್ದಾರೆ. ಮಹಿಳೆಯರನ್ನು ತೀಕ್ಷ್ಣವಾಗಿ ಕಂಡು, ಯುವಕರನ್ನು ಒಂಟಿ ಕಾಲಲ್ಲಿ ನಿಲ್ಲಿಸಿದ್ದಾರೆ. ಮಾಜಿ ಪ್ರಧಾನಮಂತ್ರಿಗಳು ಹಾಗೂ ಬಿಜೆಪಿಯವರ ಕೈಗೊಂಬೆಯಾಗಿ ಐಟಿ ಅಧಿಕಾರಿಗಳ ದೌರ್ಜನ್ಯ, ದಬ್ಬಾಳಿಕೆ ಹೆಚ್ಚಾಗಿದೆ. ಅವರು ಚುನಾವಣೆಯಲ್ಲಿ ಜನರ ಮುಂದೆ ಹೋಗಿ ಹೋರಾಟ ಮಾಡಬೇಕು. ಅದನ್ನು ಬಿಟ್ಟು ಈ ರೀತಿ ಅಧಿಕಾರಿಗಳ ದುರ್ಬಳಕೆ, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಚುನಾವಣೆ ನಿಷ್ಪಕ್ಷಪಾತ ಚುನಾವಣೆ ಮಾಡಬೇಕು. ನಾನು ನನ್ನ ಕೆಲಸದ ಆಧಾರದ ಮೇಲೆ ಮತ ಕೇಳುತ್ತಿದ್ದೇನೆ ಹೊರತು, ನನಗೆ ಯಾರನ್ನು ಬೆದರಿಸುವ ಅಗತ್ಯವಿಲ್ಲ ಎಂದು ಸಂಸದ ಡಿ.ಕೆ ಸುರೇಶ್‌ ತಿಳಿಸಿದ್ದಾರೆ.

ಇದನ್ನೂ ಓದಿ: Lok Sabha Election 2024: ಡಿ.ಕೆ. ಸುರೇಶ್ ಗೆಲುವಿಗಾಗಿ ಚಾಮುಂಡಿ ಬೆಟ್ಟ ಹತ್ತಿ ಪ್ರಾರ್ಥಿಸಿದ ಅಭಿಮಾನಿಗಳು

ಜನತಾದಳ ಹಾಗೂ ಜೆಡಿಎಸ್‌ನವರು ಕ್ಷುಲ್ಲಕ ರಾಜಕಾರಣ ಮಾಡುವುದರಲ್ಲಿ ಹೆಸರುವಾಸಿ. ಅವರು ಹಿರಿಯರಿದ್ದು, ಅವರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಅವರು ಮಾಡಿರುವ ಆರೋಪಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡುತ್ತೇವೆ ಎಂದ ಅವರು, ನಾನು ಹಾಗೂ ಶಿವಕುಮಾರ್ ಅವರಿಗೆ ಕಲ್ಲು ಹೊಡೆದಿದ್ದಾರೆ ಎಂದು ಹೇಳುತ್ತಾರಲ್ಲ, ಅವರ ಕುಟುಂಬದಲ್ಲಿ ಯಾರೆಲ್ಲಾ ಎಲ್ಲಿ ಕಲ್ಲು ಹೊಡೆದಿದ್ದಾರೆ ಎಂದು ನಾನು ತೋರಿಸುತ್ತೇನೆ. ಅವರು ಯಾರ ಜಮಿನುಗಳನ್ನು ಯಾರ ಹೆಸರಲ್ಲಿ ಹಾಕಿಕೊಂಡಿದ್ದಾರೆ ಎಂಬುದನ್ನು ತೋರಿಸಬಹುದು. ಆದರೆ ಅದರ ಅಗತ್ಯ ನಮಗಿಲ್ಲ ಎಂದು ತಿಳಿಸಿದ್ದಾರೆ.

Continue Reading

ಬಳ್ಳಾರಿ

Ballari News: ಬಳ್ಳಾರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿ ಉದ್ಘಾಟನೆ

Ballari News: ಬಳ್ಳಾರಿ ನಗರದ ಗಾಂಧಿನಗರ ಮಾರುಕಟ್ಟೆ ಸಮೀಪ ಗುರುವಾರ ನೂತನ ಜಿಲ್ಲಾ ಕಾಂಗ್ರೆಸ್ ಕಚೇರಿಯನ್ನು ಉದ್ಘಾಟಿಸಲಾಯಿತು.

VISTARANEWS.COM


on

New district congress office inaugurated in Ballari
Koo

ಬಳ್ಳಾರಿ: ನಗರದ ಗಾಂಧಿನಗರ ಮಾರುಕಟ್ಟೆ ಸಮೀಪ ಗುರುವಾರ ನೂತನ ಜಿಲ್ಲಾ ಕಾಂಗ್ರೆಸ್ ಕಚೇರಿಯನ್ನು (Ballari News) ಉದ್ಘಾಟಿಸಲಾಯಿತು.

ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಲ್ಲಂ ಪ್ರಶಾಂತ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ, ನಗರ ಶಾಸಕ ನಾರಾ ಭರತ್ ರೆಡ್ಡಿ ಸೇರಿ ಪಕ್ಷದ ಹಿರಿಯ ಮುಖಂಡರು ಪೂಜೆ ಸಲ್ಲಿಸುವ ಮೂಲಕ ಗುರುವಾರ ಉದ್ಘಾಟಿಸಿದರು.

ಇದನ್ನೂ ಓದಿ: Money Guide: ತುರ್ತು ಚಿಕಿತ್ಸೆಗ ಪಿಎಫ್​ನಿಂದ 1 ಲಕ್ಷ ರೂ. ಪಡೆಯಬಹುದು; ಹೇಗೆ ಗೊತ್ತಾ?

ಈ ವೇಳೆ ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಲ್ಲಂ ಪ್ರಶಾಂತ್ ಮಾತನಾಡಿ, ಈ ನೂತನ ಕಚೇರಿಯ ಸ್ಥಾಪನೆಯು ನಮ್ಮ ಕಾರ್ಯಕರ್ತರಲ್ಲಿ ಹೊಸ ಚೈತನ್ಯವನ್ನು ತಂದಿದೆ. ಈ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯ ಪರ ಎಲ್ಲಾ ಕಾರ್ಯಕರ್ತರು ಸಂಘಟಕರಾಗಿ ಕೆಲಸ ಮಾಡಲು ಅನುಕೂಲವಾಗುವಂತೆ ನಗರದ ಹೃದಯ ಭಾಗದಲ್ಲಿ ಕಚೇರಿಯನ್ನು ಸ್ಥಾಪಿಸಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಏ. 24ರಂದು ಭಾಷಾ ಉತ್ಸವ

ಈ ಸಂದರ್ಭದಲ್ಲಿ ಲಿಡ್ಕರ್ ಮಂಡಳಿ ಅಧ್ಯಕ್ಷ ಮುಂಡ್ರಿಗಿ ನಾಗರಾಜ್, ಬುಡಾ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಪಾಲಿಕೆಯ ಮೇಯರ್ ಬಿ. ಶ್ವೇತಾ ಸೋಮು, ಉಪಮೇಯರ್‌ ಬಿ.ಜಾನಕಮ್ಮ, ಪಾಲಿಕೆ ಸದಸ್ಯರಾದ ಎಂ. ಪ್ರಭಂಜನಕುಮಾರ್, ಪಿ. ಗಾದೆಪ್ಪ, ನಂದೀಶ್, ಮುಖಂಡರಾದ ಮುರಳಿ ಕೃಷ್ಣ, ವೆಂಕಟೇಶ್ ಹೆಗಡೆ, ಕಮಲಾ ಮರಿಸ್ವಾಮಿ, ಎಂ.ಎಸ್. ಮಂಜುಳಾ, ಬಿ. ರಾಮ್ ಪ್ರಸಾದ್, ವಿವೇಕ್, ಬೆಣಕಲ್ ಬಸವರಾಜ್ ಗೌಡ, ಮಿಂಚು ಶ್ರೀನಿವಾಸ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading

ಕರ್ನಾಟಕ

Murder Case: ಬೆಂಗಳೂರಲ್ಲಿ ಜೋಡಿ ಕೊಲೆ: ಅನೈತಿಕ ಸಂಬಂಧ ಸಾಕು ಎಂದವಳ ಕೊಂದ; ತಲೆ ಒಡೆದು ಸಾಯಿಸಿದ ಹುಡುಗಿ ಅಮ್ಮ!

Murder Case: ಸುರೇಶ್ ಮತ್ತು ಅನುಷಾ ಹಲವಾರು ವರ್ಷಗಳಿಂದ ಪರಿಚಿತರಾಗಿದ್ದರು. ಸುರೇಶ್‌ಗೆ ಮದುವೆಯಾಗಿತ್ತು. ಇಷ್ಟಿದ್ದರೂ ಸುರೇಶ್ ಹಾಗೂ ಅನುಷಾ ಇಬ್ಬರೂ ಅಕ್ರಮ ಸಂಬಂಧ ಹೊಂದಿದ್ದರು. ಸುರೇಶ್ ಗೊರಗುಂಟೆ ಪಾಳ್ಯ ನಿವಾಸಿಯಾಗಿದ್ದ. ಅನುಷಾ ಶಾಕಾಂಬರಿ ನಗರ ನಿವಾಸಿಯಾಗಿದ್ದಾಳೆ. ಆದರೆ, ಈ ಮಧ್ಯೆ ಅನುಷಾಗೆ ಸಂಬಂಧವನ್ನು ಮುಂದುವರಿಸುವುದು ಇಷ್ಟ ಇರಲಿಲ್ಲ. ಹೀಗಾಗಿ ಗುರುವಾರ ಭೇಟಿಯಾಗಿ ಸಂಬಂಧಕ್ಕೆ ಅಂತ್ಯ ಹಾಡಲು ತೀರ್ಮಾನವನ್ನು ಮಾಡಿದ್ದರು ಎನ್ನಲಾಗಿದೆ. ಆದರೆ, ಈ ಭೇಟಿಯೇ ಜೀವಕ್ಕೆ ಮುಳುವಾಗಿದೆ.

VISTARANEWS.COM


on

Murder case Double murder in Bengaluru
Koo

ಬೆಂಗಳೂರು: ಬೆಂಗಳೂರಿನಲ್ಲಿ ಅನೈತಿಕ ಸಂಬಂಧವೊಂದು 2 ಕೊಲೆಯಲ್ಲಿ (Murder Case) ಅಂತ್ಯವಾಗಿದೆ. ಕಳೆದ ಐದು ವರ್ಷಗಳಿಂದ ಅಕ್ರಮ ಸಂಬಂಧದಲ್ಲಿದ್ದ ಜೋಡಿ ಮಧ್ಯೆ ಬಿರುಕು ಬಂದಿತ್ತು. ಎರಡು ಮಕ್ಕಳ ತಂದೆ ಜತೆ ಸಂಬಂಧ ಇಟ್ಟುಕೊಂಡಿದ್ದ ಯುವತಿಯು ಇನ್ನು ಸಾಕು ದೂರ ಇರೋಣ ಎಂದಿದ್ದೇ ಕೊಲೆಗೆ ಕಾರಣವಾಗಿದೆ. ಇದರಿಂದ ರೊಚ್ಚಿಗೆದ್ದ ಆತ ಯುವತಿಯನ್ನು ಚಾಕುವಿನಿಂದ ಕೊಚ್ಚಿ ಕೊಚ್ಚಿ ಕೊಂದಿದ್ದಾನೆ. ಈ ವೇಳೆ ಮಗಳ ರಕ್ಷಣೆಗೆ ಧಾವಿಸಿದ ತಾಯಿಯು ಇಟ್ಟಿಗೆಯಿಂದ ಆತನ ತಲೆಗೆ ಜೋರಾಗಿ ಹೊಡೆದಿದ್ದಾಳೆ. ಹೀಗಾಗಿ ಆತನೂ ಸಹ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಸಾರಕ್ಕಿ ಮಾರ್ಕೆಟ್ ಬಳಿ ಈ ಘಟನೆ ನಡೆದಿದೆ. ಸುರೇಶ್ (46) ಹಾಗೂ ಅನುಷಾ (25) ಕೊಲೆಯಾದವರು. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಏನಿದು ದ್ವೇಷ?

ಸುರೇಶ್ ಮತ್ತು ಅನುಷಾ ಹಲವಾರು ವರ್ಷಗಳಿಂದ ಪರಿಚಿತರಾಗಿದ್ದರು. ಸುರೇಶ್‌ಗೆ ಮದುವೆಯಾಗಿತ್ತು. ಇಷ್ಟಿದ್ದರೂ ಸುರೇಶ್ ಹಾಗೂ ಅನುಷಾ ಇಬ್ಬರೂ ಅಕ್ರಮ ಸಂಬಂಧ ಹೊಂದಿದ್ದರು. ಸುರೇಶ್ ಗೊರಗುಂಟೆ ಪಾಳ್ಯ ನಿವಾಸಿಯಾಗಿದ್ದ. ಅನುಷಾ ಶಾಕಾಂಬರಿ ನಗರ ನಿವಾಸಿಯಾಗಿದ್ದಾಳೆ. ಆದರೆ, ಈ ಮಧ್ಯೆ ಅನುಷಾಗೆ ಸಂಬಂಧವನ್ನು ಮುಂದುವರಿಸುವುದು ಇಷ್ಟ ಇರಲಿಲ್ಲ. ಹೀಗಾಗಿ ಗುರುವಾರ ಭೇಟಿಯಾಗಿ ಸಂಬಂಧಕ್ಕೆ ಅಂತ್ಯ ಹಾಡಲು ತೀರ್ಮಾನವನ್ನು ಮಾಡಿದ್ದರು ಎನ್ನಲಾಗಿದೆ.

ಆದರೆ, ಅನುಷಾ ತನ್ನ ಕೈ ತಪ್ಪಿ ಹೋಗುತ್ತಾಳೆ ಎಂದು ಕೋಪಗೊಂಡಿದ್ದ ಸುರೇಶ್‌, ಸಂಬಂಧವನ್ನು ಬಿಡಬೇಡ ಎಂದು ಸಾಕಷ್ಟು ಬಾರಿ ಮನವಿ ಮಾಡಿದ್ದ. ಆಕೆ ತನ್ನ ಸಂಪರ್ಕ ನಿಲ್ಲಿಸುವ ಎಂದು ಹೇಳಿದ್ದರೂ ಕೇಳಲಿಲ್ಲ. ಈ ವೇಳೆ ಕೋಪಗೊಂಡ ಸುರೇಶ್‌ ಮೊದಲೇ ನಿರ್ಧರಿಸಿ ತಂದಿದ್ದ ಚಾಕುವನ್ನು ಹೊರಗೆ ತೆಗೆದಿದ್ದಾನೆ. ಕೊನೆಗೆ ಮಾತಿಗೆ ಮಾತು ಬೆಳೆದಿದ್ದರಿಂದ ಅನುಷಾ ಮೇಲೆ ಇರಿದಿದ್ದಾನೆ.

ನಡೆದು ಹೋಯಿತು ಎರಡು ಕೊಲೆ!

ಈ ವೇಳೆ ಮಗಳ ವಿಷಯ ತಿಳಿದಿದ್ದ ಅನುಷಾ ತಾಯಿ ಗೀತಾ ಸಹ ಅಲ್ಲಿಗೆ ಬಂದಿದ್ದರು. ಸುರೇಶ್ ತನ್ನ ಮಗಳಿಗೆ ಚಾಕು ಹಾಕುತಿದ್ದಾಗ ತಡೆಯಲು ಅವರು ಬಂದಿದ್ದಾರೆ. ಆದರೆ, ಇದನ್ನು ಕೇಳದ ಸುರೇಶ್‌ ಚಾಕುವಿನಿಂದ ಇರಿಯುತ್ತಲೇ ಇದ್ದ. ಹೀಗಾಗಿ ಮಗಳನ್ನು ರಕ್ಷಣೆ ಮಾಡುವ ಸಲುವಾಗಿ ಗೀತಾ ಪಕ್ಕದಲ್ಲೇ ಇದ್ದ ಇಟ್ಟಿಗೆಯನ್ನು ತೆಗೆದುಕೊಂಡು ಸುರೇಶ್‌ ತಲೆ ಮೇಲೆ ಜೋರಾಗಿ ಹೊಡೆದಿದ್ದಾಳೆ. ಇದರಿಂದ ತೀವ್ರ ರಕ್ತಸ್ರಾವವಾಗಿ ಸುರೇಶ್‌ ಸಹ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅನುಷಾ ಸಹ ಅಲ್ಲಿಯೇ ಕೊನೆಯುಸಿರೆಳೆದಿದ್ದಾಳೆ. ಸದ್ಯ ಆರೋಪಿ ಗೀತಾಳನ್ನು ಜೆಪಿ‌ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸುರೇಶ್‌ಗೆ ಇಬ್ಬರು ಮಕ್ಕಳು

ಸುರೇಶ್‌ಗೆ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಅನುಷಾಗೆ ಇನ್ನು ಮದುವೆಯಾಗಿರಲಿಲ್ಲ. ಆದರೂ ಇಬ್ಬರ ನಡುವೆ ಐದು ವರ್ಷಗಳಿಂದ ಪ್ರೀತಿ ಇತ್ತು. ಇಬ್ಬರ ಪ್ರೇಮ ಪುರಾಣ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಇಂದು ಸಹ ಬೆಳಗ್ಗೆ ಪೊಲೀಸ್‌ ಠಾಣೆಯಲ್ಲಿ ರಾಜೀ ಪಂಚಾಯಿತಿ ನಡೆದಿತ್ತು. ಅದಾದ ಬಳಿಕವೂ ಸುರೇಶ್ ಹಾಗೂ ಅನುಷಾ ಪಾರ್ಕ್‌ನಲ್ಲಿ ಕೊನೇ ಭೇಟಿಗೆ ನಿಶ್ಚಯಿಸಿದ್ದರು. ಅಲ್ಲಿ ಇಬ್ಬರ ಕೊಲೆಯಲ್ಲಿ ಅಂತ್ಯವಾಗಿದೆ.

Continue Reading
Advertisement
Lok Sabah Election
ಪ್ರಮುಖ ಸುದ್ದಿ10 mins ago

Lok Sabah Election : ತಮಿಳುನಾಡಿನಲ್ಲಿ ಕತ್ತೆಗಳ ಮೂಲಕ ಹಳ್ಳಿಗಳಿಗೆ ಇವಿಎಂ ತಲುಪಿಸಿದ ಅಧಿಕಾರಿಗಳು!

DRDO
ತಂತ್ರಜ್ಞಾನ20 mins ago

DRDO Test: ದೇಶೀಯ ತಂತ್ರಜ್ಞಾನದ ಕ್ರೂಸ್‌ ಕ್ಷಿಪಣಿಯ ಯಶಸ್ವಿ ಪರೀಕ್ಷೆ

Iran Israel war
ಪ್ರಮುಖ ಸುದ್ದಿ30 mins ago

Israel Iran War : ಇಸ್ರೇಲ್​ ಮೇಲಿನ ದಾಳಿಗೆ ಪ್ರತಿಕಾರ; ಅಮೆರಿಕ, ಬ್ರಿಟನ್ ನಿಂದ ಇರಾನ್​​ಗೆ ಭಾರಿ ನಿರ್ಬಂಧ

Record number of students wrote CET 2024 exam Outrage over out of syllabus question
ಶಿಕ್ಷಣ33 mins ago

CET 2024 exam: ದಾಖಲೆ ಸಂಖ್ಯೆಯಲ್ಲಿ ಸಿಇಟಿ ಬರೆದ ವಿದ್ಯಾರ್ಥಿಗಳು; ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ

IPL 2024
ಕ್ರೀಡೆ1 hour ago

IPL 2024 : ಮದುವೆ ಆಮಂತ್ರಣಕ್ಕೆ ಸಿಎಸ್​ಕೆ ಥೀಮ್​, ಯುವ ಜೋಡಿಯ ಅಭಿಮಾನಕ್ಕೆ ಮೆಚ್ಚುಗೆ

MP D K Suresh latest statement In Anekal
ಬೆಂಗಳೂರು ಗ್ರಾಮಾಂತರ1 hour ago

Lok Sabha Election 2024: ಬಿಜೆಪಿ ಕೈಗೊಂಬೆ ಐಟಿ ಅಧಿಕಾರಿಗಳಿಂದ ಕಾರ್ಯಕರ್ತರ ಮೇಲೆ ದೌರ್ಜನ್ಯ: ಡಿ.ಕೆ. ಸುರೇಶ್

New district congress office inaugurated in Ballari
ಬಳ್ಳಾರಿ1 hour ago

Ballari News: ಬಳ್ಳಾರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿ ಉದ್ಘಾಟನೆ

Murder case Double murder in Bengaluru
ಕರ್ನಾಟಕ1 hour ago

Murder Case: ಬೆಂಗಳೂರಲ್ಲಿ ಜೋಡಿ ಕೊಲೆ: ಅನೈತಿಕ ಸಂಬಂಧ ಸಾಕು ಎಂದವಳ ಕೊಂದ; ತಲೆ ಒಡೆದು ಸಾಯಿಸಿದ ಹುಡುಗಿ ಅಮ್ಮ!

Make In India
ಪ್ರಮುಖ ಸುದ್ದಿ1 hour ago

ಜಗದ ಜನರ ಕೈಗಳಲ್ಲಿ ಮಿನುಗುವ ಮೊಬೈಲ್ ಫೋನುಗಳಲ್ಲೀಗ ಮೇಕ್ ಇನ್ ಇಂಡಿಯಾದ್ದೇ ಮೊಹರು!

Minister Santosh Lad statement in Sandur Taluk
ಬಳ್ಳಾರಿ1 hour ago

Lok Sabha Election 2024: ಬೆಲೆ ಏರಿಕೆ ಮಾಡಿದ್ದೇ ಕೇಂದ್ರದ ಬಿಜೆಪಿ ಸರ್ಕಾರದ ಸಾಧನೆ: ಸಂತೋಷ್‌ ಲಾಡ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ2 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ3 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20243 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20244 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ5 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ6 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ6 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ7 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ1 week ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

ಟ್ರೆಂಡಿಂಗ್‌