Site icon Vistara News

Crime News : ಡೆತ್‌ನೋಟ್‌ ಬರೆದಿಟ್ಟು ನೇಣು ಬಿಗಿದುಕೊಂಡ ಯುವತಿ; ಆತ್ಮಹತ್ಯೆಗೆ ಕಾರಣ ಏನು?

Girl no more

ಉಡುಪಿ/ಬೆಂಗಳೂರು: ಉಡುಪಿಯ ಬೈಂದೂರಿನ ಕಾಲ್ತೋಡು ಗ್ರಾಮದಲ್ಲಿ ಯುವತಿಯೊಬ್ಬಳು (Crime News) ನೇಣಿಗೆ ಶರಣಾಗಿದ್ದಾಳೆ. ಗೌತಮಿ (22) ಮೃತ ದುರ್ದೈವಿ.

ಗೌತಮಿ ಉಡುಪಿಯ ಖಾಸಗಿ ಕಾಲೇಜಿನಲ್ಲಿ ಎಂ.ಕಾಂ ಪದವಿ ಮುಗಿಸಿದ್ದರು. ಬ್ಯಾಂಕಿಂಗ್ ಪರೀಕ್ಷೆ ಸೇರಿದಂತೆ ಇತರೆ ಕಂಪನಿಗಳ ನೇಮಕಾತಿ ಪರೀಕ್ಷೆ ಬರೆದಿದ್ದರು. ಅರ್ಹತೆ ಇದ್ದರೂ ಉದ್ಯೋಗ ಸಿಗದ ಹಿನ್ನೆಲೆಯಲ್ಲಿ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಲಾಗಿದೆ.

ಇತ್ತೀಚೆಗೆ ಹೆಚ್ಚು ಒಬ್ಬಂಟಿಯಾಗಿ ಇರುತ್ತಿದ್ದ ಗೌತಮಿ, ಡೆತ್ ನೋಟ್ ಬರೆದಿಟ್ಟು ಮನೆಯ ಮೊದಲ ಮಹಡಿಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಉದ್ಯೋಗ ಪಡೆಯುವಲ್ಲಿ ತಾನು ವಿಫಲವಾಗುತ್ತಿರುವ ಬಗ್ಗೆ ಅವರು ಡೆತ್‌ ನೋಟ್‌ನಲ್ಲಿ ವಿವರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬೈಂದೂರು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫ್ಯಾನಿಗೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಬೆಂಗಳೂರಿನ ಚೆನ್ನಮ್ಮನ ಕೆರೆ ಅಚ್ಚುಕಟ್ಟು(ಸಿಕೆ ಅಚ್ಚುಕಟ್ಟು) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದಕೊಂಡಿದ್ದಾರೆ. ಶಿವರುದ್ರ (40) ಆತ್ಮಹತ್ಯೆಗೆ ಶರಣಾದ ದುರ್ದೈವಿ.

ಮಂಡ್ಯದ ನಾಗಮಂಗಲ ಮೂಲದ ಶಿವರುದ್ರ, ಬೆಂಗಳೂರಿನ ಇಟ್ಟಮಡುವಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಕೆಟರಿಂಗ್ ಕೆಲಸ ಮಾಡಿಕೊಂಡಿದ್ದ ಶಿವರುದ್ರ, ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಸಾಲಬಾಧೆ ತಾಳದೆ ಇಬ್ಬರು ರೈತರ ಆತ್ಮಹತ್ಯೆ

ಮೈಸೂರು ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೆ ಒಂದೇ ದಿನ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಣಸೂರು ತಾಲ್ಲೂಕು ಶ್ಯಾನಭೋಗನಹಳ್ಳಿಯಲ್ಲಿ ಸುರೇಶ್ (58) ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎರಡು ಎಕರೆ ಜಮೀನು ಹೊಂದಿದ್ದ ರೈತರಾಗಿದ್ದ ಇವರು ಬ್ಯಾಂಕ್, ಸೊಸೈಟಿ ಸೇರಿ 7 ಲಕ್ಷ ರೂ. ಸಾಲ ಮಾಡಿದ್ದರು. ಬೆಳೆ ಕೈ ಕೊಟ್ಟ ಹಿನ್ನೆಲೆ‌ ಜಮೀನಿನಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: BBMP anti encroachment drive : ಅನಧಿಕೃತ ಅಂಗಡಿ-ಮುಂಗಟ್ಟು ನೆಲಸಮ ಮಾಡಿದ ಬಿಬಿಎಂಪಿ

ಹುಣಸೂರು ತಾಲ್ಲೂಕಿನ ಕರ್ಣಕುಪ್ಪೆ ಗ್ರಾಮದ ರಾಜಶೆಟ್ಟಿ (78) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 5 ಎಕರೆ ಜಮೀನು ಹೊಂದಿದ್ದ ರಾಜಶೆಟ್ಟಿ ತಂಬಾಕು, ರಾಗಿ ಬೆಳೆ ಬೆಳೆದಿದ್ದರು. ಬ್ಯಾಂಕ್, ಸೊಸೈಟಿ, ಮಹಿಳಾ ಸಂಘ, ಕೈ ಸಾಲ ಸೇರಿ ಸುಮಾರು 8 ಲಕ್ಷ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲಾಗದೆ ಹೆಚ್ಚಾಗಿದ್ದ ಬಡ್ಡಿ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version