ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ವರುಣನ ಆರ್ಭಟಕ್ಕೆ ಜನಜೀವನ ದುಸ್ತರವಾದ ಬೆನ್ನಲ್ಲೇ ಮಂಗಳವಾರ ಬೆಳಗ್ಗೆಯೂ ಭಾರಿ ಮಳೆಯಾಗಲಿದೆ (Rain News) ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಹಾಗೇಯೇ, ಆಯಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು ಹೆಚ್ಚಿನ ನಿಗಾ ವಹಿಸಬೇಕು ಎಂದೂ ಸೂಚಿಸಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ದಾವಣಗೆರೆ, ಉಡುಪಿ, ಚಿಕ್ಕಮಗಳೂರು, ಹಾಸನ ಕೊಡಗು, ರಾಮನಗರ ಸೇರಿ ಹಲವು ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.
ಕರ್ನಾಟಕದ ಬಹುತೇಕ ಭಾಗದಲ್ಲಿ ಮಳೆಯಾಗುತ್ತಿದ್ದು, ನದಿಗಳು ತುಂಬಿ ಹರಿಯುತ್ತಿವೆ. ದಿನೇದಿನೆ ವರುಣನ ಆರ್ಭಟ ಜಾಸ್ತಿಯಾಗುತ್ತಿರುವ ಕಾರಣ ನದಿ ತೀರದ ಜನರಿಗೆ ಪ್ರವಾಹದ ಭೀತಿ ಎದುರಾಗಿದೆ. ರಾಜಧಾನಿ ಬೆಂಗಳೂರಿನಲ್ಲಂತೂ ಜನಜೀವನ ದುಸ್ತರವಾಗಿದೆ. ಹಾಗಾಗಿ, ಮಂಗಳವಾರ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.