Site icon Vistara News

Rain News | ರಾಜ್ಯದಲ್ಲಿ ನಾಳೆ ಭಾರಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

Rain News

ಬೆಂಗಳೂರು: ರಾಜ್ಯಾದ್ಯಂತ ಅ.16ರಂದು ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ನೀಡಿದ್ದರೆ, ಇನ್ನು ಕೆಲವೆಡೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ರಾಯಚೂರು, ಕೊಪ್ಪಳ, ವಿಜಯಪುರ, ಕಲಬುರಗಿ, ಹಾವೇರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಹಾಗೆಯೇ ದಕ್ಷಿಣ ಒಳನಾಡಿನಲ್ಲಿ ಶನಿವಾರ ಬಳ್ಳಾರಿ, ಬೆಂ.ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಚಾಮರಾಜನಗರದಲ್ಲಿ ಶನಿವಾರ, ಭಾನುವಾರ ಆರೆಂಜ್ ಅಲರ್ಟ್‌ ಇದ್ದರೆ, ಮಂಡ್ಯ, ಮೈಸೂರಿಗೆ ಶನಿವಾರ ಆರೆಂಜ್, ಭಾನುವಾರ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಿಗೆ ಭಾನುವಾರ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಈ ಸಂದರ್ಭದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ | Rain News | ಒಡೆದ ಬೂದನೂರು ಕೆರೆ ಕೋಡಿ; ಮೈಸೂರು- ಬೆಂಗಳೂರು ಹೆದ್ದಾರಿ ಮಾರ್ಗ ಬದಲಾವಣೆ

Exit mobile version