Site icon Vistara News

Ind vs Aus: ಬೆಂಗಳೂರಿನಲ್ಲಿ ಟಿ20 ಮ್ಯಾಚ್‌; ಡಿ. 3 ರಂದು ಮೆಟ್ರೋ ರೈಲು ಸೇವೆ ವಿಸ್ತರಣೆ

India vs Australia T20

ಬೆಂಗಳೂರು: ಕ್ರಿಕೆಟ್‌ ಪ್ರೇಮಿಗಳಿಗೆ ನಮ್ಮ ಮೆಟ್ರೋ ಗುಡ್‌ ನ್ಯೂಸ್‌ ನೀಡಿದೆ. ಡಿ. 3ರಂದು ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಟಿ20 ಪಂದ್ಯದ (Ind vs Aus) ಹಿನ್ನೆಲೆಯಲ್ಲಿ ಕ್ರಿಕೆಟ್‌ ಅಭಿಮಾನಿಗಳಿಗೆ ಅನುಕೂಲವಾಗಲು ಮೆಟ್ರೋ ರೈಲು ಸೇವೆಗಳನ್ನು (Namma Metro) ಅಂದು ರಾತ್ರಿ 11.45 ರವರೆಗೆ ವಿಸ್ತರಣೆ ಮಾಡಲಾಗಿದೆ. ಜತೆಗೆ ಜನದಟ್ಟಣೆ ನಿಯಂತ್ರಿಸಲು ವಿಶೇಷ ಪೇಪರ್‌ ಟಿಕೆಟ್‌ ವ್ಯವಸ್ಥೆ ಮಾಡಲಾಗಿದ್ದು, ಶೇ. 5 ರಿಯಾಯಿತಿ ಕೂಡ ನೀಡಲಾಗಿದೆ.

ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಟಿ20 ಸರಣಿಯ 5ನೇ ಪಂದ್ಯವು ಡಿಸೆಂಬರ್‌ 3ರಂದು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಹೀಗಾಗಿ ಮೆಟ್ರೋ ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿರುವ ನಾಲ್ಕು ಟರ್ಮಿನಲ್‌ ಮೆಟ್ರೋ ನಿಲ್ದಾಣಗಳಿಂದ ಹೊರಡುವ ರೈಲು ಸೇವೆಗಳನ್ನು ರಾತ್ರಿ 11.45 ರವರೆಗೆ ಬಿಎಂಆರ್‌ಸಿಎಲ್‌ ವಿಸ್ತರಿಸಿದೆ. ಅಲ್ಲದೆ, ರಿಟರ್ನ್ ಜರ್ನಿ ಪೇಪರ್ ಟಿಕೆಟ್ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ಮಾರಾಟಕ್ಕೆ ಲಭ್ಯವಿರುತ್ತದೆ.

ಪೇಪರ್ ಟಿಕೆಟ್‌ಗಳು ರಾತ್ರಿ 8 ಗಂಟೆಯಿಂದ, ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣದಿಂದ ಯಾವುದೇ ಇತರ ಮೆಟ್ರೋ ನಿಲ್ದಾಣಕ್ಕೆ ದಿನದ ವಿಸ್ತ್ರತ ಅವಧಿಯಲ್ಲಿ ಒಂದು ಪ್ರಯಾಣಕ್ಕೆ ಮಾತ್ರ ಸೀಮಿತ ವಾಗಿರುತ್ತದೆ.

ಪೇಪರ್ ಟಿಕೆಟ್ ದರ ರೂ. ಜೊತೆಗೆ, ಕ್ಯೂಆರ್ ಕೋಡ್ ಟಿಕೆಟ್‌ಗಳು ಸಾಮಾನ್ಯ ದರದ ಶೇ. 5 ರಿಯಾಯಿತಿಯೊಂದಿಗೆ ಪಂದ್ಯದ ದಿನದಂದು ಖರೀದಿಸಿದರೆ ಇಡೀ ದಿನಕ್ಕೆ ಮಾನ್ಯವಾಗಿರುತ್ತದೆ. ಅನುಕೂಲಕರ ಪ್ರಯಾಣಕ್ಕೆ, ಕ್ರಿಕೆಟ್ ಪಂದ್ಯದ ಪ್ರಾರಂಭದ ಮೊದಲು ವ್ಯಾಟ್ಸ್ ಆ್ಯಪ್‌, ನಮ್ಮ ಮೆಟ್ರೋ ಆ್ಯಪ್‌, ಪೇ ಟಿಎಂ ಆ್ಯಪ್‌ನಲ್ಲಿ ಕ್ಯೂಆರ್ ಟಿಕೆಟ್‌ಗಳನ್ನು ಖರೀದಿಸಲು ಪ್ರಯಾಣಿಕರಿಗೆ ಸೂಚಿಸಲಾಗಿದೆ. ಸ್ಮಾರ್ಟ್ ಕಾರ್ಡ್ ಮತ್ತು NCMC ಕಾರ್ಡ್‌ಗಳನ್ನು ಸಹ ಎಂದಿನಂತೆ ಬಳಸಬಹುದು.

ಇದನ್ನೂ ಓದಿ | IPL 2024 : ಐಪಿಎಲ್ ಹರಾಜಿಗೆ ನೋಂದಣಿ ಮಾಡಿದ್ದಾರೆ ಸಾವಿರಕ್ಕೂ ಅಧಿಕ ಕ್ರಿಕೆಟಿಗರು!

ವಿಸ್ತ್ರತ ಸಮಯದಲ್ಲಿ ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳಲ್ಲಿ ಕ್ಯೂಆರ್ ಟಿಕೆಟ್‌ಗಳು, ಸ್ಮಾರ್ಟ್ ಕಾರ್ಡ್‌ಗಳು, ಮತ್ತು ಪೇಪರ್ ಟಿಕೆಟ್‌ಗಳನ್ನು ಮಾತ್ರ ಅನುಮತಿಸಲಾಗಿದೆ. ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳಲ್ಲಿ ಟಿಕೆಟ್ ಕೌಂಟರ್‌ಗಳಲ್ಲಿ ಟಿಕೆಟ್ ಖರೀದಿ ಜನಸಂದಣಿಯನ್ನು ತಪ್ಪಿಸಲು, ಪ್ರಯಾಣಿಕರು ಮೇಲಿನ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಬಿಎಂಆರ್‌ಸಿಎಲ್‌ ಕೋರಿದೆ.

Exit mobile version