ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮವು (BMRCL) ಜುಲೈ 2ರಂದು (ಭಾನುವಾರ) ಟ್ರಿನಿಟಿ ಮತ್ತು ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ನೇರಳೆ ಮಾರ್ಗದಲ್ಲಿ (Purple line) ನಿರ್ವಹಣೆ (Metro Work) ಕಾಮಗಾರಿಯನ್ನು (Maintenance wokrs) ಕೈಗೊಳ್ಳುತ್ತಿದೆ.
ಈ ಕಾಮಗಾರಿಯನ್ನು ನಿರ್ವಹಿಸಲು ನೇರಳೆ ಮಾರ್ಗದ ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ವಾಣಿಜ್ಯ ಸೇವೆಯನ್ನು ಬಂದ್ ಮಾಡಲಾಗುತ್ತಿದೆ. ಭಾನುವಾರ ಬೆಳಗ್ಗೆ 07.00 ಗಂಟೆಯಿಂದ 9.00 ಗಂಟೆಯವರೆಗೆ (ಎರಡು ಗಂಟೆಗಳ ಅವಧಿಗೆ) ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ.
ಇದನ್ನೂ ಓದಿ: Cylinder Blast: ಬೆಂಗಳೂರಿನಲ್ಲಿ ಆಕ್ಸಿಜನ್ ಸಿಲಿಂಡರ್ ಬ್ಲಾಸ್ಟ್; ಪ್ರಾಣಬಿಟ್ಟ ಕಾರ್ಮಿಕ
ಕೆಂಗೇರಿ ಮತ್ತು ಎಂ.ಜಿ ರಸ್ತೆ, ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ, ಕೃಷ್ಣರಾಜಪುರ ಮತ್ತು ವೈಟ್ ಫೀಲ್ಡ್ (ಕಾಡುಗೋಡಿ) ವಿಭಾಗಗಳ ರೈಲುಗಳ ಸೇವೆಯು ಆಯಾ ಟರ್ಮಿನಲ್ ನಿಲ್ದಾಣಗಳಿಂದ ಬೆಳಗ್ಗೆ 07.00 ಗಂಟೆಗೆ ವೇಳಾಪಟ್ಟಿಯ ಪ್ರಕಾರ ಸಂಚರಿಸಲಿದೆ. ಹೀಗಾಗಿ ಮೆಟ್ರೋ ಪಯಾಣಿಕರು ಬದಲಾವಣೆಯನ್ನು ಗಮನಿಸಬೇಕೆಂದು ನಿಗಮ ಕೋರಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ