Site icon Vistara News

Mild Earthquake : ಸೇಡಂ ತಾಲೂಕಿನ ಕೆಲವು ಕಡೆ ಲಘು ಭೂಕಂಪನ; ಸ್ಥಳೀಯರಲ್ಲಿ ಹೆಚ್ಚಿದ ಆತಂಕ

Earthquake In Karnataka 

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ಸೇಡಂ ತಾಲೂಕಿನಲ್ಲಿ ಲಘು ಭೂ ಕಂಪನದ (Mild Earthquake) ಅನುಭವವಾಗಿದ್ದು, ರಿಕ್ಟರ್ ಮಾಪಕದಲ್ಲಿ 3.4ರಷ್ಟು ತೀವ್ರತೆ ದಾಖಲಾಗಿದೆ.

ಬೆಳಗ್ಗೆ 9.48ರ ಸಮಯಕ್ಕೆ ಭೂಮಿ ಕಂಪಿಸಿದ ಅನುಭವವಾಗಿದೆ. ಸುಮಾರು ಐದು ಸೆಕೆಂಡ್‌ಗಳ ಕಾಲ ಕಂಪನದ ಅನುಭವವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಒಮ್ಮೆ ಏನಾಗುತ್ತಿದೆ ಎಂಬುದೇ ಗೊತ್ತಾಗಲಿಲ್ಲ. ಇದ್ದ ಸ್ಥಳವು ಕಂಪಿಸಿದ ಅನುಭವವಾಯಿತು. ನಾವು ಹೊರಗಡೆ ಓಡಿಬಂದೆವು ಎಂದು ಕೆಲವು ಸ್ಥಳೀಯರು ಅನುಭವವನ್ನು ಹಂಚಿಕೊಂಡಿದ್ದಾರೆ.

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಬೆನಕನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಂಪನದ ಅನುಭವವಾಗಿದ್ದು, ಇದು ಸಾರ್ವಜನಿಕರನ್ನು ಆತಂಕಕ್ಕೆ ದೂಡಿದೆ. ಇನ್ನೂ ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ. ಹೀಗಾಗಿ ಅವರು ಭೇಟಿ ನೀಡಿ ಅಧ್ಯಯನ ಮಾಡಲಿ, ಯಾವ ಕಾರಣಕ್ಕೆ ಹೀಗಾಗಿ ಎಂಬ ವಿಚಾರ ಗೊತ್ತಾಗಲಿ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಇದನ್ನೂ ಓದಿ | Black Magic : ಕೊಡಗಿನ ದಟ್ಟಾರಣ್ಯದ ಮಧ್ಯೆ ವಾಮಾಚಾರ; ಬೆಟ್ಟತ್ತೂರು ಗ್ರಾಮದಲ್ಲಿ ಕೋಳಿ ಬಲಿ, ಗ್ರಾಮಸ್ಥರಲ್ಲಿ ಆತಂಕ

Exit mobile version