Site icon Vistara News

ಸಿರಿಧಾನ್ಯಕ್ಕೆ ಮೋದಿ ಒತ್ತು | ಬೆಂಗಳೂರಿನಲ್ಲಿ 3 ದಿನಗಳ ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳ: ದಿನಾಂಕ ಘೋಷಣೆ

organic and millets fair in bengaluru

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ರಾಸಾಯನಿಕ ಬಳಕೆಯಿಂದ ಹೆಚ್ಚುತ್ತಿರುವ ಆರೋಗ್ಯ ಸಮಸ್ಯೆಗಳನ್ನು ಹೋಗಲಾಡಿಸಲು ಸಿರಿಧಾನ್ಯಗಳ ಬಳಕೆಯನ್ನು ಪ್ರಧಾನಿ ನರೇಂದ್ರ ಮೋದಿ ಉತ್ತೇಜಿಸಿದ ಬೆನ್ನಿಗೇ ಬೆಂಗಳೂರಿನಲ್ಲಿ ಮೂರು ದಿನಗಳ ಅಂತಾರಾಷ್ಟ್ರೀಯ ಅಂತಾರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯಗಳ ವಾಣಿಜ್ಯ ಮೇಳ ಆಯೋಜನೆ ಮಾಡಲಾಗುತ್ತಿದೆ.

ರಾಜ್ಯದ ಸಾವಯವ ಮತ್ತು ಸಿರಿಧಾನ್ಯಗಳಿಗೆ ಮಾರುಕಟ್ಟೆ ಸಂಪರ್ಕ ಕಲ್ಪಿಸುವ ಹಾಗೂ ಗ್ರಾಹಕರಲ್ಲಿ ಅರಿವು ಮೂಡಿಸುವ ಸಲುವಾಗಿ ಬೆಂಗಳೂರು ಅರಮನೆ ಮೈದಾನದಲ್ಲಿ ಜನವರಿ 20 ರಿಂದ 22ರ ವರೆಗೆ ಮೂರು – ದಿನಗಳ ಅಂತಾರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯಗಳ ವಾಣಿಜ್ಯ ಮೇಳವನ್ನು ರಾಜ್ಯ ಕೃಷಿ ಇಲಾಖೆ ಆಯೋಜಿಸಲಿದೆ.

ಗುಣಮಟ್ಟದ ವಸ್ತು ಪ್ರದರ್ಶನ ಮಳಿಗೆಗಳು, ರಾಷ್ಟ್ರೀಯ ಸಮ್ಮೇಳನಗಳು, ಉತ್ಪಾದಕರ ಮತ್ತು ಮಾರುಕಟ್ಟೆದಾರರ ಸಭೆಗಳು, ರೈತರ ಕಾರ್ಯಾಗಾರಗಳು, ಸಾವಯವ ಆಹಾರ ಮಳಿಗೆಗಳು, ಬಳಕೆದಾರರೊಂದಿಗೆ ಸಂಪರ್ಕ ಒಳಗೊಂಡಂತೆ ಸಾವಯವ ಕೃಷಿ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಕಾರ್ಯಕ್ರಮಗಳು ಈ ಮೇಳದಲ್ಲಿ ಇರುತ್ತವೆ.

ಈ ಹಿಂದೆ ಮನ್‌ ಕಿ ಬಾತ್‌ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, ಸಿರಿಧಾನ್ಯಗಳನ್ನು ಹೆಚ್ಚೆಚ್ಚು ಬೆಳೆಯಬೇಕು ಎಂದು ಕರೆ ನೀಡಿದ್ದರು. ಇದರಿಂದ ಆರೋಗ್ಯ ಉತ್ತಮವಾಗುತ್ತದೆ ಹಾಗೂ ಹೆಚ್ಚು ಬೇಡಿಕೆ ಇರುವುದರಿಂದ ರೈತರ ಆದಾಯವೂ ಹೆಚ್ಚುತ್ತದೆ ಎಂದಿದ್ದರು.

ಇತ್ತೀಚೆಗೆ ಇಂಡೋನೇಷ್ಯಾದ ಬಾಲಿಯಲ್ಲಿ ನಡೆದಿದ್ದ ಜಿ20 ಸಭೆಯಲ್ಲಿ ಮಾತನಾಡಿದ್ದ ಮೋದಿ, ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷ ಆಚರಣೆಗೆ ಕರೆ ನೀಡಿದ್ದರು.

ಇದನ್ನೂ ಓದಿ | G20 Summit | ಜಿ20 ಶೃಂಗಸಭೆಯಲ್ಲಿ ಸಿರಿಧಾನ್ಯಗಳ ಮಹತ್ವ ಹೇಳಿದ ಪ್ರಧಾನಿ ಮೋದಿ; ಉಕ್ರೇನ್​ ಕದನ ವಿರಾಮಕ್ಕೆ ಕರೆ

Exit mobile version